ದಿನದ ಸುದ್ದಿ
ಜೀವನದ ಅಮೂಲ್ಯ ಸಮಯದ ಪರಿವೇ ಇಲ್ಲದೆ ಜಾಲತಾಣದಲ್ಲಿ ಮುಳುಗಿದ ಜನಸಾಮಾನ್ಯರು
- ಚಂದ್ರಿಕ ವಿ, ಪ್ರಥಮ ವರ್ಷದ ಸ್ನಾತಕೋತ್ತರ ಪದವಿ, ವಿದ್ಯಾರ್ಥಿನಿ,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಬೆಂಗಳೂರು ವಿಶ್ವವಿದ್ಯಾಲಯ
ಇತ್ತೀಚಿನ ದಿನಗಳಲ್ಲಿ ನಾವು ನೋಡುವ ಮನಸ್ಥಿತಿಗಳು ತುಂಬಾ ಭಯಾನಕವಾಗುತ್ತಿರುವ ಸಂಗತಿಗಳು ಇಂದು ನಾವು ನೋಡಬಹುದು. ಪ್ರಸ್ತುತ ದಿನಗಳಲ್ಲಿ ಮನುಷ್ಯ-ಮನುಷ್ಯನ ನಡುವೆ ಒಂದು ಉತ್ತಮ ಸಂಬಂಧ ಜೀವನದ ಒಂದು ಬೇರು ಈ ಸಂಬಂಧ ಎಂದು ಬದುಕುತ್ತಿದರು.
ಹಾಗೆಯೇ ಪ್ರತಿಯೊಬ್ಬರೂ ಕೂಡ ಒಬ್ಬರಿಗೊಬ್ಬರು ಸಹಾಯ, ಪ್ರೀತಿ, ಅಭಿಮಾನ, ವಿಶ್ವಾಸದಿಂದ ಬದುಕುತ್ತಿದ್ದರು. ಜನ ಕಾಲ ಕಳೆದಂತೆ ಅಗತ್ಯಕೆ ತಕ್ಕಂತೆ ಮನುಷ್ಯನು ಕೂಡ ಬದಲಾಗುತ್ತಿರುವುದನ್ನು ಕಾಣಬಹುದು, ಇದೇ ಅವಿಭಕ್ತ ಕುಟುಂಬ ಭಯಸುತ್ತಿದ್ದ ಕಾಲದಲ್ಲಿ ವಿಭಕ್ತ ಕುಟುಂಬಗಳು ಹೆಚ್ಚಾಗುತ್ತಿರುವುದು ನಮ್ಮ ಕಣ್ಣೆದುರು ನಡೆಯುತ್ತವೆ. ಇಂದು ಕುಟುಂಬಗಳು ಹೆಚ್ಚು ತಮ್ಮವರ ಜತೆ ಸಮಯವನ್ನು ಕಳೆಯುತಿರುತ್ತಿದ್ದರು.
ಆದರೆ, ಮೊಬೈಲ್ (ಜಂಗಮವಾಣಿ)
ಎಂಬ ಸಂಪರ್ಕಗಳು ಚಾಲ್ತಿಯಲ್ಲಿರುವ ಸಂದರ್ಭದಲ್ಲೂ ಕೂಡ ಕುಟುಂಬದ ಸಂಬಂಧಗಳು ಕಡಿಮೆಯಾಗುತ್ತಾ ಹೋಗುತ್ತಿವೆ, ಹೆಚ್ಚಿನ ಸಮಯವನ್ನು ಮೊಬೈಲ್ ಜಂಗಮ ವಾಣಿ) ಜತೆ ಕಳೆಯುವ ಜನ ತಾನು ತನ್ನವರ ಜತೆ ಕಳೆಯದಂತಾಗಿದೆ.
ಮೊಬೈಲ್ (ಜಂಗಮವಾಣಿ) ಎಂದಾಕ್ಷಣ ಕೇವಲ ಮಾತಾಡಲು ಬಳಸುವ ಸಂಪರ್ಕವಾಗದೇ, ಅದರಲ್ಲಿ ಹೆಚ್ಚಾಗುತ್ತಿರುವ ಸಾಮಾಜಿಕ ಜಾಲತಾಣಗಳು ಬಳಸುವುದು ತಮ್ಮ ಅಮೂಲ್ಯವಾದ ಸಮಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಳೆಯುವುದು ಇದರಿಂದ ತಮ್ಮ ವಯಕ್ತಿಕ ಜೀವನಕ್ಕೆ ಅದು ತೊಂದರೆಯೂ ಉಂಟಾಗುತ್ತದೆಂದು ಎಂಬುದು ಪರಿವೇ ಇಲ್ಲದೇ ವರ್ತಿಸುವಂಥವರು ಆಗಿದ್ದರೆ ಎನ್ನಬಹುದು.
ಏನೇ ಕೆಲಸಗಳು ಕೊಟ್ಟರು ನಾವು ಸಾಮಾಜಿಕ ಜಾಲತಾಣಕ್ಕೆ ಪ್ರವೇಶವನ್ನು ನೀಡುವುದು ಅಭ್ಯಾಸ ವಾಗಿರುವುದು ನಗ್ನ ಸತ್ಯ, ಇನ್ನು ಲ ಜೀವನವನ್ನು ನಾವು ಸರಿಯಾಗಿ ಅರ್ಥಮಾಡಿಕೊಡುವ ಸಮಯ ತುಂಬಾ ಹತ್ತಿರ ಬರುವಂತದ್ದು ಆಗಿದೆ. ಆ ಸಮಯಕ್ಕೆ ನಾವು ಜೀವನದ ಅಮೂಲ್ಯ ಸಮಯವನ್ನು ನಾವು ಹಾಳುಮಾಡಿ ಕೊಂಡಿರುತೇವೆ ಅದಕ್ಕಾಗಿ ನಾವು ಯಾವ ಸಮಯಕ್ಕೆ ಎಷ್ಟನ್ನು ಬಳಕೆ ಮಾಡಿಕೊಳ್ಳಬೇಕು ಎಂಬುದನ್ನು ತಿಳಿದು ಅದನ್ನು ಅರ್ಥಮಾಡಿಕೊಂಡು ಸಾಗಿದರೆ ಜೀವನವು ನಮ್ಮ ಹಿಡಿತದಲ್ಲಿ ಇರುತ್ತದೆ.
ಆಗ ಬದುಕಿಗೂ ಒಂದು ಅರ್ಥವು ಬರುತ್ತದೆ. ನಾವು ಮತ್ತು ನೀವುಗಳು ಪ್ರತಿಯೊಬ್ಬರೂ ಕೂಡ ಜೀವನದ ಮೌಲ್ಯಗಳನ್ನು ಅರ್ಥಮಾಡಿಕೊಂಡು ಬದುಕನ್ನು ಸಾಗಿಸಿ ನಾವು ಅವಶ್ಯಕತೆಗೆ ತಕ್ಕಂತಹ ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸುವುದರಿಂದ ಯಾವುದೇ ತೊಂದರೆಗಳು ಉಂಟಾಗುವುದಿಲ್ಲ. ಕೆಲವೊಮ್ಮೆ ಗೊತ್ತಿಲ್ಲದೆ ಸಾಮಾಜಿಕ ಜಾಲತಾಣಗಳಿಂದ ಜೀವನವೇ ಒಂದು ದುಸ್ಥಿತಿಗೆ ಬಂದು ತಲುಪುವ ಪರಿಸ್ಥಿತಿಗೆ ಬಂದು ಬಿಟ್ಟಿರುತ್ತದೆ.
ಹಾಗಾಗಿ ಪ್ರತಿಯೊಬ್ಬರೂ ಕೂಡ ಎಚ್ಚರದಿಂದ ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಬೇಕಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಮುಳಿಗಿದರೆ ತನ್ನನ್ನು ತಾನು ಸರಿಯಾದ ರೀತಿಯಲ್ಲಿ ಅರ್ಥವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬುದು ಭವಿಷ್ಯದ ಚಿಂತನೆಯು ಇರುವುದಿಲ್ಲ. ಸಂಬಂಧಗಳ ಅರಿವೇ ಇರುವುದಿಲ್ಲ ಎಂಬಂತೆ ಬದುಕು ಒಂದು ಸಾಮಾಜಿಕ ಜಾಲತಾಣದಿಂದ ಆಗುವಂತದು ಅದಕ್ಕಾಗಿ ತಂದೆ-ತಾಯಿ ಗುರು-ಹಿರಿಯರು ಸ್ನೇಹಿತರು ಇವರುಗಳು ನಮ್ಮ ಬದುಕಿಗೆ ಅತಿ ಮುಖ್ಯರಾಗುತ್ತಾರೆ. ಅದೇ ರೀತಿಯಲ್ಲಿ ಕಲಿತು ಕೊಂಡಷ್ಟು ಸಾಮಾಜಿಕ ಜಾಲತಾಣದಲ್ಲಿ ಕಲಿಯಲು ಸಾಧ್ಯವಿಲ್ಲ ಎಂಬುದು ಬದುಕಿಗೆ ಎಲ್ಲವೂ ಮುಖ್ಯವಾಗುತ್ತದೆ. ಊಟಕ್ಕೆ ಉಪ್ಪಿನ ಕಾಯಿ ಎಷ್ಟು ಮುಖ್ಯವೋ, ಬದುಕಿಗೆ ಮೊಬೈಲ್ (mobile) ಸಾಮಾಜಿಕ ತಾಣಗಳು ಅಷ್ಟೇ ಮುಖ್ಯ, ಇವುಗಳು ಅತಿಯಾದರೆ ಯಾವುದು ಶಾಶ್ವತವಾಗಿ ಉಳಿಯುವುದಿಲ್ಲ ಎಂಬ ಬದುಕು ಕೂಡ ನಶ್ವರವೆನಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.



