Connect with us

ನಿತ್ಯ ಭವಿಷ್ಯ

ಯಾವ ರಾಶಿಗಳ ಜೊತೆ ಮದುವೆ ಹೊಂದಾಣಿಕೆ ಮಾಡಿಕೊಂಡರೆ ಶುಭ ಫಲಪ್ರದ

Published

on

ಯಾವ ರಾಶಿಗಳ ಜೊತೆ ಮದುವೆ ಹೊಂದಾಣಿಕೆ ಮಾಡಿಕೊಂಡರೆ ಶುಭ ಫಲಪ್ರದ…

ಜನ್ಮ ಕುಂಡಲಿಯಲ್ಲಿ ( ಜಾತಕ )ಯಾವ ಮನೆಯಲ್ಲಿ ಶನಿ ಸ್ವಾಮಿಇದ್ದರೆ ವಿವಾಹ ವಿಳಂಬಕ್ಕೆ ಕಾರಣ ವಾಗುತ್ತದೆ?

ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು ರಾಶಿಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ
ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ.
ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ.
ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ
ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನ್ನು ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು ಕಂಟಕನಾಗಿರುತ್ತಾನೆ.
ಶನಿ ಸ್ವಾಮಿಗೆ ತುಲಾ ರಾಶಿಯ ಉಚ್ಚ ಸ್ಥಾನವಾಗಿದ್ದು. ಮೇಷರಾಶಿ ನೀಚಸ್ಥಾನ ವಾಗಿರುತ್ತದೆ .ಇಲ್ಲಿ ಮೇಷ ರಾಶಿಗೆ ಅಧಿಪತಿ ಕುಜ.
ಕುಜ ಮತ್ತು ಶನಿ ಶತ್ರು ಗ್ರಹಗಳು. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಲಗ್ನದಿಂದ ಸಪ್ತಮ ಸ್ಥಾನ ಕಂಕಣಬಲ ಸೂಚಿಸುತ್ತದೆ. ಒಂದು ವೇಳೆ ಶನಿ ಸ್ವಾಮಿ ಸಪ್ತಮ ಸ್ಥಾನದಲ್ಲಿದ್ದರೆ ಮದುವೆ ವಿಳಂಬವಾಗುತ್ತದೆ. ಅಷ್ಟೇ ಅಲ್ಲ ಉದ್ಯೋಗದಲ್ಲಿ ಏರಿಳಿತ ಅನುಭವಿಸುವಿರಿ. ಶನಿ ಸ್ವಾಮಿಯು ನಮ್ಮ ದೇಹಕ್ಕೆ ಹೋಲಿಕೆ ಮಾಡಿದಾಗ ಕಾಲು ಮತ್ತು ಪಾದಗಳಿಗೆ ಸಂಬಂಧಪಟ್ಟ ಗ್ರಹವಾಗಿದೆ. ಆದ್ದರಿಂದ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ಕಾಲು ನೋವು ,ಮಂಡಿ ನೋವು, ಪಾದಗಳಲ್ಲಿ ಉರಿ, ವಾಯು, ಆಕಸ್ಮಿಕವಾಗಿ ಕಾಲುಗಳಿಗೆ ಪೆಟ್ಟು ,ನೋವು ಉಂಟಾಗುವ ಸಾಧ್ಯತೆ ಹೆಚ್ಚು.
ವ್ಯಾಪಾರದಲ್ಲಿ ತೀವ್ರ ಸಂಕಟ ಅನುಭವಿಸಬೇಕಾಗುತ್ತದೆ.

ಪರಿಹಾರಗಳು
1) ನಿಮ್ಮ ಲಗ್ನ ಕುಂಡಲಿಯಲ್ಲಿ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ “ವಿಷ್ಣುಸಹಸ್ರನಾಮ ಪಾರಾಯಣ “ಮಾಡುವುದು ಉತ್ತಮ.
2) ಪ್ರತಿ ಶನಿವಾರ ಎಳ್ಳೆಣ್ಣೆ ದೀಪ ಶನೇಶ್ವರ ಸ್ವಾಮಿಗೆ ಹಚ್ಚಿರಿ.
3) ಸ್ತೋತ್ರ ದಿನಾಲು ಪಠಾಣ ಮಾಡಿರಿ.
ನೀಲಾಂಜನಂ ಸಮಾಭಾಸಂ। ರವಿಪುತ್ರಂ ಯಮಾಗ್ರಜಂ। ಛಾಯಾ ಮಾರ್ತಂಡ। ಸಂಭೂತಂ ತಂ ನಮಾಮಿ ಶನೇಶ್ವರ ನಮಃ।।

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending