Connect with us

ದಿನದ ಸುದ್ದಿ

ಚುನಾವಣೆ | ದಾವಣಗೆರೆ ಜಿಲ್ಲೆಯ ಕ್ಷೇತ್ರವಾರು ಕಂಪ್ಲೀಟ್ ಡೀಟೆಲ್ಸ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ7 ಕ್ಷೇತ್ರಗಳಿಂದ 6 ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಒಬ್ಬರು ಬಿಜೆಪಿಯಿಂದ ಜಯ ಗಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.

ಜಯಗಳಿಸಿದವರಲ್ಲಿ ಜಗಳೂರು ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ದೇವೇಂದ್ರಪ್ಪ, ಹರಿಹರ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ಪಿ.ಹರೀಶ್, ದಾವಣಗೆರೆ ಉತ್ತರ ಕಾಂಗ್ರೆಸ್ ಪಕ್ಷದ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ದಕ್ಷಿಣ ಕಾಂಗ್ರೆಸ್ ಪಕ್ಷದ ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಕಾಂಗ್ರೆಸ್ ಪಕ್ಷದ ಕೆ.ಎಸ್.ಬಸವಂತಪ್ಪ, ಚನ್ನಗಿರಿ ಕಾಂಗ್ರೆಸ್ ಪಕ್ಷದ ಬಸವರಾಜು ವಿ.ಶಿವಗಂಗ, ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಡಿ.ಜಿ.ಶಾಂತನಗೌಡ ಇವರು ಜಯಗಳಿಸಿದ್ದಾರೆ.

ಕ್ಷೇತ್ರವಾರು ವಿವರ ; ಜಗಳೂರು

ಮಲ್ಲಾಪುರ ದೇವರಾಜ ಜೆಡಿಎಸ್1972, ಬಿ.ದೇವೇಂದ್ರಪ್ಪ ಕಾಂಗ್ರೆಸ್50765, ಎಸ್.ವಿ.ರಾಮಚಂದ್ರ ಬಿಜೆಪಿ 49891, ಜಿ.ಸ್ವಾಮಿ ಸಮಾಜವಾದಿ ಪಾರ್ಟಿ 367, ಪಕ್ಷೇತರರಾದ ಪಿ.ಅಜ್ಜಯ್ಯ 149, ಡಿ.ತಿಪ್ಪೇಸ್ವಾಮಿ114, ದಿವಾಕರ ಓ 93, ನಾಗರಾಜ.ಎಂ 140, ಭೀಮಪ್ಪ ಜಿ.ಎನ್ 869, ರಾಘವೇಂದ್ರ ಕೆ.ಆರ್685ಹಾಗೂ ಹೆಚ್.ಪಿ.ರಾಜೇಶ್ 49442ಮತಗಳನ್ನು ಪಡೆದಿದ್ದು ಕಾಂಗ್ರೆಸ್ ಪಕ್ಷದ ಬಿ.ದೇವೇಂದ್ರಪ್ಪ ಜಯಗಳಿಸಿದ್ದು ಸಮೀಪದ ಸ್ಪರ್ಧಿ ಬಿ.ಜೆ.ಪಿ.ಯ ಎಸ್.ವಿ.ರಾಮಚಂದ್ರಗಿಂತ 874 ಮತಗಳನ್ನು ಹೆಚ್ಚಿಗೆ ಪಡೆದಿದ್ದಾರೆ.

ಹರಿಹರ

ಬಿ.ಪಿ.ಹರೀಶ್ ಬಿಜೆಪಿ 63924, ಶ್ರೀನಿವಾಸ್ ಎನ್.ಹೆಚ್. (ನಂದಿಗಾವಿ) ಕಾಂಗ್ರೆಸ್59620, ಹೆಚ್.ಎಸ್.ಶಿವಶಂಕರ್ ಜೆಡಿಎಸ್ 40580, ಗಣೇಶಪ್ಪ ಕೆ.ದುರ್ಗದ ಆಮ್ ಅದ್ಮಿ ಪಾರ್ಟಿ 1488, ಕೃಷ್ಣ.ಎಂ ಉತ್ತಮ ಪ್ರಜಾಕೀಯ ಪಾರ್ಟಿ 697 , ಡಿ.ಹನುಮಂತಪ್ಪ ಬಹುಜನ ಸಮಾಜ ಪಾರ್ಟಿ592 , ಪಕ್ಷೇತರರಾದ ಮೂರ್ತಿ ಹೆಚ್.ಕೆ. 360, ಪರಶುರಾಮ ಎಂ. 226, ಜಯಕುಮಾರ ಟಿ.ಹೆಚ್.191, ಬಿ.ಎಸ್. ಉಜ್ಜನಪ್ಪ 140, ಸಂಕೇತ್‌ರಾಜ್ ಎಸ್ 98 ಮತಗಳನ್ನು ಪಡೆದಿದ್ದಾರೆ. ಇದರಲ್ಲಿ ಬಿಜೆಪಿ ಬಿ.ಪಿ.ಹರೀಶ್ ಇವರು ಜಯಗಳಿಸಿದ್ದು ಸಮೀಪದ ಸ್ಪರ್ಧಿ ಕಾಂಗ್ರೆಸ್‌ನ ಶ್ರೀನಿವಾಸ್ ಎನ್.ಹೆಚ್. ಇವರಿಗಿಂತ 4304 ಮತಗಳ ಅಂತರದಲ್ಲಿ ಜಯಗಳಿಸಿರುವರು.

ದಾವಣಗೆರೆ ಉತ್ತರ

ಲೋಕಿಕೆರೆ ನಾಗರಾಜ್ ಬಿಜೆಪಿ 69547, ಎಸ್.ಎಸ್.ಮಲ್ಲಿಕಾರ್ಜುನ್ ಕಾಂಗ್ರೆಸ್ 94019, ಬಾತಿ ಶಂಕರ್ ಜೆಡಿಎಸ್ 935 , ಶೀಧರ್ ಪಾಟೀಲ್.ಸಿ ಆಮ್ ಆದ್ಮಿ ಪಾರ್ಟಿ 391,ಚಂದ್ರಶೇಖರ.ಬಿ ಉತ್ತಮ ಪ್ರಜಾಕೀಯ ಪಾರ್ಟಿ1143, ಕೆ.ಮಲ್ಲಣ್ಣ ಕರ್ನಾಟಕ ರಾಷ್ಟç ಸಮಿತಿ 139, ಸುರ್ಜಿತ್.ಜಿ ಸಂಯುಕ್ತ ವಿಕಾಸ್ ಪಾರ್ಟಿ49, ಪಕ್ಷೇತರರಾದ ಕೀರ್ತಿಕುಮಾರ್.ಕೆ.ಎಸ್68, ಮಲ್ಲಿಕಾರ್ಜುನಪ್ಪ.ಕೆ.ಎಂ 108, ಮಹಮ್ಮದ್ ಹಯಾತ್.ಎಮ್ 80, ಇಡ್ಲಿ ಮಂಜು125 , ರುದ್ರೇಶ್ ಗೌಡ 87, ಎಂ.ಜಿ.ಶ್ರೀಕಾಂತ್ 281 ಮತಗಳನ್ನು ಪಡೆದಿರುವರು. ಕಾಂಗ್ರೆಸ್ ಪಕ್ಷದ ಎಸ್.ಎಸ್.ಮಲ್ಲಿಕಾರ್ಜುನ್ ಇವರು ಸಮೀಪದ ಸ್ಪರ್ಧಿ ಬಿಜೆಪಿಯ ಲೋಕಿಕೆರೆ ನಾಗರಾಜ್‌ಗಿಂತ 24472ಮತಗಳನ್ನು ಹೆಚ್ಚಿಗೆ ಪಡೆದು ಜಯಗಳಿಸಿದ್ದಾರೆ.

ದಾವಣಗೆರೆ ದಕ್ಷಿಣ

ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ 84298, ಅಜಯ್ ಕುಮಾರ್ ಬಿ.ಜಿ. ಭಾರತೀಯ ಜನತಾ ಪಾರ್ಟಿ56410 , ಇಸ್ಮಾಯಿಲ್ ಜಬೀವುಲ್ಲಾ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ 1311, ಅಮಾನುಲ್ಲಾಖಾನ್. ಜೆ ಜೆಡಿಎಸ್ 1296, ಸಾಜಿದ್ ಆಮ್ ಆದ್ಮಿ ಪಾರ್ಟಿ 562, ಈಶ್ವರ ಉತ್ತಮ ಪ್ರಜಾಕೀಯ ಪಾರ್ಟಿ522 , ಮಹಮದ್ ಖಲೀಮ್ ಬಿಎಸ್‌ಪಿ 293, ಗೌಸ್‌ಪೀರ್ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 221, ಭಾರತಿ.ಕೆ ಸೋಷಿಯಲಿಸ್ ಯುನಿಟಿ ಸೆಂಟರ್ ಆಫ್ ಇಂಡಿಯಾ 121, ಹೆಚ್.ಕೆ.ದಾವಲ್ ಸಾಬ್ ಕರ್ನಾಟಕ ರಾಷ್ಟ್ರ ಸಮಿತಿ 57, ಪಕ್ಷೇತರರಾದ ಬಿ.ರಾಜಶೇಖರ್233 , ಶೇಕ್ ಅಹಮದ್ 164, ನೌಶಿನ್‌ತಾಜ್ 101, ಜಿ.ಆರ್.ಶಿವಕುಮಾರ ಸ್ವಾಮಿ 72, ಈರಣ್ಣ 66 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಮನೂರು ಶಿವಶಂಕರಪ್ಪ ಇವರು ಸಮೀಪದ ಸ್ಪರ್ಧಿ ಬಿಜೆಪಿಯ ಅಜಯ್ ಕುಮಾರ್ ಬಿಜಿ ಇವರಿಗಿಂತ 27888 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಮಾಯಕೊಂಡ

ಆನಂದಪ್ಪ.ಹೆಚ್ ಜೆಡಿಎಸ್12857, ಪ್ರೊ.ಧರ್ಮಾನಾಯ್ಕ ಎಸ್. ಆಮ್ ಆದ್ಮಿ ಪಾರ್ಟಿ 512, ಕೆ.ಎಸ್.ಬಸವಂತಪ್ಪ ಕಾಂಗ್ರೆಸ್ 70346 , ಎಂ.ಬಸವರಾಜ ನಾಯ್ಕ ಬಿಜೆಪಿ 34248, ಅಜ್ಜಪ್ಪ.ಎನ್ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯ 445, ಚೇತನ್‌ಕುಮಾರ್ ನಾಯ್ಕ.ಕೆ ಉತ್ತಮ ರಾಜಕೀಯ ಪಕ್ಷ 1226, ಎನ್.ಶಾಂತಬಾಯಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 223, ಸೋಮಶೇಖರ.ಬಿ ಅಡ್ವಕೇಟ್ ಕರ್ನಾಟಕ ರಾಷ್ಟ್ರ ಸಮಿತಿ 210, ಪಕ್ಷೇತರರಾದ ಎ.ಕೆ. ಗಣೇಶ್ 609, ಬಿ.ಎಂ.ಪುಷ್ಪ. ವಾಗೀಶಸ್ವಾಮಿ37431, ಮಂಜು ಮಾದಿಗ 192, ಲೋಕೇಶ್.ಪಿ.ಡಿ 586 , ಪಿ.ಆರ್.ಶ್ರೀನಿವಾಸ್ 438, ಸವಿತಾಬಾಯಿ ಮಲ್ಲೇಶನಾಯ್ಕ 532 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಕೆ.ಎಸ್.ಬಸವಂತಪ್ಪ ಇವರು ಸಮೀಪ ಸ್ಪರ್ಧಿ ಪಕ್ಷೇತರರಾದ ಬಿ.ಎಂ.ಪುಷ್ಪ ವಾಗೀಶಸ್ವಾಮಿ ಇವರಿಗಿಂತ 32915 ಹೆಚ್ಚಿನ ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಚನ್ನಗಿರಿ

ಆದಿಲ್ ಖಾನ್ ಎಸ್.ಕೆ. ಆಮ್ ಆದ್ಮಿ ಪಾರ್ಟಿ245 , ತೇಜಸ್ವಿ ವಿ.ಪಟೇಲ್ ಜೆಡಿಎಸ್ 1216, ಪ್ರವೀಣ.ಹೆಚ್ ಬಿಎಸ್‌ಪಿ 523, ಬಸವರಾಜು ವಿ.ಶಿವಗಂಗ ಕಾಂಗ್ರೆಸ್ 78263, ಹೆಚ್. ಎಸ್.ಶಿವಕುಮಾರ್ ಬಿಜೆಪಿ 21467, ಚಂದ್ರಶೇಖರ ಚನ್ನಗಿರಿ ಉತ್ತಮ ಪ್ರಜಾಕೀಯ ಪಾರ್ಟಿ1017 , ದೋಣಿಹಳ್ಳಿ ಮಂಜುನಾಥಗೌಡ್ರು ಕರ್ನಾಟಕ ರಾಷ್ಟç ಸಮಿತಿ 197, ಎಂ.ರೂಪ ಕಗತೂರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 183, ಪಕ್ಷೇತರರಾದ ಕುಬೇಂದ್ರಸ್ವಾಮಿ.ಟಿ 437, ಮಾಡಾಳು ಮಲ್ಲಿಕಾರ್ಜುನ 61828, ಹರೀಶ್ ಹಳ್ಳಿ 470 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಬಸವರಾಜು ವಿ.ಶಿವಗಂಗ ಇವರು ಸಮೀಪದ ಪಕ್ಷೇತರ ಅಭ್ಯರ್ಥಿ ಮಾಡಾಳು ಮಲ್ಲಿಕಾರ್ಜುನ್ ಇವರಿಗಿಂತ 16435 ಹೆಚ್ಚಿನ ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಹೊನ್ನಾಳಿ

ಡಿ.ಜಿ.ಶಾಂತನಗೌಡ ಕಾಂಗ್ರೆಸ್ 92392, ಎಂ.ಪಿ.ರೇಣುಕಾಚಾರ್ಯ ಬಿಜೆಪಿ 75832, ಗಣೇಶ ಬಿ.ಎ. ಉತ್ತಮ ಪ್ರಜಾಕೀಯ ಪಾರ್ಟಿ 945, ಕುಂಕೋವ ಕೃಷ್ಣಪ್ಪ ಬಿಎಸ್‌ಪಿ 349, ನರಸಿಂಹಪ್ಪ. ಕೆ ಆಮ್ ಆದ್ಮಿ 234, ಹನುಮಂತಪ್ಪ ಸೊರಟೂರು ಕರ್ನಾಟಕ ರಾಷ್ಟ್ರ ಸಮಿತಿ 146, ಪಕ್ಷೇತರರಾದ ವಾಸಪ್ಪ.ಎಂ 254, ದೊಡ್ಡೆತ್ತಿನಹಳ್ಳಿ ಚಂದ್ರಶೇಖರಪ್ಪ 236, ಲಕ್ಷ್ಮೀಕಾಂತ ಹೆಚ್.ಟಿ 176 ಮತಗಳನ್ನು ಪಡೆದಿರುವರು. ಕಾಂಗ್ರೆಸ್ ಪಕ್ಷದ ಡಿ.ಜಿ.ಶಾಂತನಗೌಡ ಇವರು ಸಮೀಪದ ಸ್ಪರ್ಧಿ ಬಿಜೆಪಿಯ ರೇಣುಕಾಚಾರ್ಯ ಇವರಿಗಿಂತ 17560 ಮತಗಳನ್ನು ಹೆಚ್ಚಿಗೆ ಪಡೆದು ಜಯಗಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending