Connect with us

ದಿನದ ಸುದ್ದಿ

ಇರಾನ್ ಅಧ್ಯಕ್ಷ ಹೆಲಿಕಾಪ್ಟರ್ ದುರಂತದಲ್ಲಿ ಸಾವು | ಅಘಾತಕಾರಿ ಸುದ್ದಿ ಕೇಳಿ ದುಃಖವಾಗಿದೆ : ಪ್ರಧಾನಿ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ನಿನ್ನೆ ಮಧ್ಯಾಹ್ನ ಸಂಭವಿಸಿದ ಹೆಲಿಕಾಫ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಸುದ್ದಿಸಂಸ್ಥೆ ವರದಿಮಾಡಿದೆ. ಅವರ ಹೆಲಿಕಾಪ್ಟರ್ ಪತನಗೊಂಡ ಗುಡ್ಡಗಾಡು ಪ್ರದೇಶದ ಸ್ಥಳವನ್ನು ಟರ್ಕಿಯ ಡ್ರೋನ್ ಅಕಿನ್ಸಿ ಪತ್ತೆ ಮಾಡಿದೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಮೃತಪಟ್ಟ ಅಘಾತಕಾರಿ ಸುದ್ದಿ ಕೇಳಿ ಅತೀವ ದುಃಖವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಅವರು, ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ರೈಸಿ ಅವರ ಕೊಡುಗೆ ಎಂದಿಗೂ ಸ್ಮರಣೀಯ. ಈ ದುಃಖದ ಸಮಯದಲ್ಲಿ ಭಾರತ, ಇರಾನ್‌ನೊಂದಿಗೆ ನಿಂತಿದೆ ಎಂದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇಬ್ರಾಹಿಂ ರೈಸಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಣ್ಣ ಸಿಐಡಿ ಕಸ್ಟಡಿಗೆ ; ತಮ್ಮ ಸೆಂಟ್ರಲ್‌ ಜೈಲಿಗೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆದಿದೆ. ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣನನ್ನು ಕೋರ್ಟ್​, 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ.

ಇನ್ನು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್​ ರೇವಣ್ಣಗೆ ಸಿಐಡಿ ಕಸ್ಟಡಿಯಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎರಡು ಪ್ರಕರಣಗಳ ಪ್ರತ್ಯೇಕವಾಗಿ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್‌ ಅವರು ಅರ್ಜಿ ವಿಚಾರಣೆ ನಡೆಸಿದರು. ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದರೆ, ಪ್ರಜ್ವಲ್​ಗೆ ಜುಲೈ 8ರ ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದರು.

ಸಲಿಂಗ ಕಾಮ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸೂರಜ್ ರೇವಣ್ಣನನ್ನು ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, ಕೋರ್ಟ್, 10 ದಿನ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಇಬ್ಬರು ಶಿಕ್ಷಕರ ಬಂಧನ

Published

on

ಸುದ್ದಿದಿನಡೆಸ್ಕ್:ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯ ಮೇರೆಗೆ ಸಂಜಯ್ ತುಕಾರಾಂ ಜಾಧವ್ ಮತ್ತು ಜಲೀಲ್ ಉಮರ್ ಖಾನ್ ಪಠಾಣ್ ಅವರನ್ನು ಮಹಾರಾಷ್ಟ್ರದ ನಾಂದೇಡ್ ಭಯೋತ್ಪಾದನಾ ನಿಗ್ರಹ ದಳ-ಎಟಿಎಸ್ ಬಂಧಿಸಿದೆ.

ಬಂಧಿತರಿಬ್ಬರೂ ಜಿಲ್ಲಾ ಪರಿಷತ್ ಶಾಲೆಗಳಲ್ಲಿ ಶಿಕ್ಷಕರಾಗಿದ್ದು, ಲಾತೂರ್‌ನಲ್ಲಿ ಖಾಸಗಿ ಕೋಚಿಂಗ್ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಮೂಲಗಳು ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯುವ ನಿಧಿ ಯೋಜನೆ ; ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

Published

on

ಸುದ್ದಿದಿನಡೆಸ್ಕ್:ಯುವ ನಿಧಿ ಯೋಜನೆ ಅಡಿ, ನಿರುದ್ಯೋಗ ಭತ್ಯೆ ಪಡೆಯುತ್ತಿರುವ, ಉದ್ಯೋಗಾಕಾಂಕ್ಷಿ ಯುವಜನತೆ, ಪ್ರತಿ ತಿಂಗಳು 25 ನೇ ತಾರೀಖಿನೊಳಗೆ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಿತ ಪ್ರಮಾಣ ಪತ್ರ ಸಲ್ಲಿಸಲು, ಆಯಾ ಜಿಲ್ಲೆಗಳ ಉದ್ಯೋಗಾಧಿಕಾರಿಗಳು ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending