Connect with us

ದಿನದ ಸುದ್ದಿ

ಕೌಶಲ್ಯಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದಿಂದ 60 ದಿನಗಳ ಕಾಲ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರಿಗೆ ಸ್ವಾವಲಂಭಿ ಬದುಕು ಸಾಗಿಸಲು ವಿವಿಧ ಕೌಶಲ್ಯಭಿವೃದ್ಧಿ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ, ಜಿಲ್ಲಾಡಳಿತ ಭವನ, ಕರೂರು ಇಂಡಸ್ಟ್ರೀಯಲ್ ಏರಿಯಾ, ದಾವಣಗೆರೆ ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

Published

on

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ದೊರೆಯುವಂತಾಗಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

Published

on

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ ಸಾಧನವಾಗಿದೆ. ಇದರ ಜಾರಿಯ ಬಳಿಕ ಬಡವರು ಮತ್ತು ಜನಸಾಮಾನ್ಯರಿಗೆ ಗಮನಾರ್ಹ ಉಳಿತಾಯವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹೇಳಿದ್ದಾರೆ.

ಜಿಎಸ್‌ಟಿ ಜಾರಿಯಾದ ನಂತರ ಗೃಹಬಳಕೆಯ ವಸ್ತುಗಳು ಹೆಚ್ಚು ಅಗ್ಗವಾಗಿವೆ ಎಂದಿರುವ ಅವರು, ಜನರ ಜೀವನವನ್ನು ಪರಿವರ್ತಿಸುವ ಈ ಸುಧಾರಣೆಗಳ ಪ್ರಯಾಣವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹರಿಹರ | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಕೋರ್ಸ್‍ಗಳಾದ ಡಿಪ್ಲೊಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್, ಡಿಪ್ಲೊಮಾ ಇನ್ ಆಟೋಮೇಷನ್ ಮತ್ತು ರೊಬೊಟಿಕ್ಸ್. ಡಿಪ್ಲೊಮಾ ಇನ್ ಎಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಇನ್ ಪ್ರಿಸಿಷನ್ ಮ್ಯಾನ್ಯುಪ್ಯಾಕ್ಟರಿಂಗ್, ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಮತ್ತು ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ವಿದ್ಯಾರ್ಥಿಗಳು ಜಿಟಿಟಿಸಿ ಹರಿಹರ ಕೇಂದ್ರಕ್ಕೆ ನೇರವಾಗಿ ಸಂಪರ್ಕಿಸಿ ಆಪ್‍ಲೈನ್‍ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ:22 ಸಿ & ಡಿ ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ,ಕೆ ಎಸ್‍ ಆರ್ ಟಿ ಸಿ ಡಿಪೋ ಹತ್ತಿರ ಹರಿಹರ ದೂ.ಸಂ. 9845941245 / 8711913947

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending