Connect with us

ದಿನದ ಸುದ್ದಿ

ಪ್ರಜ್ವಲ್‌ ಪೋಲಿಸರಿಗೆ ಶರಣಾಗಿ ವಿಚಾರಣೆ ಎದುರಿಸಬೇಕು : ಮೊಮ್ಮಗನಿಗೆ ಮಾಜಿ ಪ್ರಧಾನಿ ದೇವೇಗೌಡ ಎಚ್ಚರಿಕೆ

Published

on

ಸುದ್ದಿದಿನ ಡೆಸ್ಕ್ : ಪ್ರಜ್ವಲ್‌ನು ಎಲ್ಲಿದ್ದರೂ ಬಂದು ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ತಮ್ಮ ಟ್ವಿಟರ್ ಖಾತೆ ಮೂಲಕ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆ ನೀಡಿದ್ದಾರೆ.

ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು ಎಂದಿದ್ದಾರೆ.

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ನುಡಿದಿದ್ದಾರೆ.

ದೇವೇಗೌಡ ಟ್ವೀಟ್ 👇

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಣ್ಣ ಸಿಐಡಿ ಕಸ್ಟಡಿಗೆ ; ತಮ್ಮ ಸೆಂಟ್ರಲ್‌ ಜೈಲಿಗೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆದಿದೆ. ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣನನ್ನು ಕೋರ್ಟ್​, 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ.

ಇನ್ನು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್​ ರೇವಣ್ಣಗೆ ಸಿಐಡಿ ಕಸ್ಟಡಿಯಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎರಡು ಪ್ರಕರಣಗಳ ಪ್ರತ್ಯೇಕವಾಗಿ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್‌ ಅವರು ಅರ್ಜಿ ವಿಚಾರಣೆ ನಡೆಸಿದರು. ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದರೆ, ಪ್ರಜ್ವಲ್​ಗೆ ಜುಲೈ 8ರ ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದರು.

ಸಲಿಂಗ ಕಾಮ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸೂರಜ್ ರೇವಣ್ಣನನ್ನು ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, ಕೋರ್ಟ್, 10 ದಿನ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಇಬ್ಬರು ಶಿಕ್ಷಕರ ಬಂಧನ

Published

on

ಸುದ್ದಿದಿನಡೆಸ್ಕ್:ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯ ಮೇರೆಗೆ ಸಂಜಯ್ ತುಕಾರಾಂ ಜಾಧವ್ ಮತ್ತು ಜಲೀಲ್ ಉಮರ್ ಖಾನ್ ಪಠಾಣ್ ಅವರನ್ನು ಮಹಾರಾಷ್ಟ್ರದ ನಾಂದೇಡ್ ಭಯೋತ್ಪಾದನಾ ನಿಗ್ರಹ ದಳ-ಎಟಿಎಸ್ ಬಂಧಿಸಿದೆ.

ಬಂಧಿತರಿಬ್ಬರೂ ಜಿಲ್ಲಾ ಪರಿಷತ್ ಶಾಲೆಗಳಲ್ಲಿ ಶಿಕ್ಷಕರಾಗಿದ್ದು, ಲಾತೂರ್‌ನಲ್ಲಿ ಖಾಸಗಿ ಕೋಚಿಂಗ್ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಮೂಲಗಳು ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯುವ ನಿಧಿ ಯೋಜನೆ ; ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

Published

on

ಸುದ್ದಿದಿನಡೆಸ್ಕ್:ಯುವ ನಿಧಿ ಯೋಜನೆ ಅಡಿ, ನಿರುದ್ಯೋಗ ಭತ್ಯೆ ಪಡೆಯುತ್ತಿರುವ, ಉದ್ಯೋಗಾಕಾಂಕ್ಷಿ ಯುವಜನತೆ, ಪ್ರತಿ ತಿಂಗಳು 25 ನೇ ತಾರೀಖಿನೊಳಗೆ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಿತ ಪ್ರಮಾಣ ಪತ್ರ ಸಲ್ಲಿಸಲು, ಆಯಾ ಜಿಲ್ಲೆಗಳ ಉದ್ಯೋಗಾಧಿಕಾರಿಗಳು ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending