Connect with us

ದಿನದ ಸುದ್ದಿ

ಇಂದು ರಾತ್ರಿ ನರೇಂದ್ರ ಮೋದಿ ಪ್ರಮಾಣವಚನ; ರಾಷ್ಟ್ರಪತಿ ಭವನ ಸಜ್ಜು : ದೆಹಲಿಗೆ ಬಂದಿಳಿದ ವಿದೇಶಿ ಗಣ್ಯರು; ಎಲ್ಲೆಡೆ ಬಿಗಿ ಭದ್ರತೆ

Published

on

ಸುದ್ದಿದಿನಡೆಸ್ಕ್: ಎನ್‌ಡಿಎ ಮೈತ್ರಿಕೂಟದ ನಾಯಕ ನರೇಂದ್ರ ಮೋದಿ ಇಂದು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹೊಸ ಸರ್ಕಾರದ ಸಚಿವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಮತ್ತು ಅಧಿಕಾರದ ಗೌಪ್ಯತೆ ಬೋಧಿಸಲಿದ್ದಾರೆ. ಇದೇ 7 ರಂದು ನರೇಂದ್ರ ಮೋದಿ ಅವರು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು.

ಸಮಾರಂಭಕ್ಕೆ ನೆರೆಹೊರೆ ರಾಷ್ಟ್ರಗಳ ಹಲವು ನಾಯಕರನ್ನು ಆಹ್ವಾನಿಸಲಾಗಿದೆ. ಶ್ರೀಲಂಕಾದ ಅಧ್ಯಕ್ಷ ರಾಣಿಲ್ ವಿಕ್ರಮ ಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು, ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನ, ಮಾರಿಷಸ್ ಪ್ರಧಾನಿ ಪ್ರವೀಂದ್ ಕುಮಾರ್ ಜುಗ್ನೌತ್, ನೇಪಾಳದ ಪ್ರಧಾನಿ ಪುಷ್ಪಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಮತ್ತು ಪೂರ್ವ ಆಫ್ರಿಕಾದ ರಾಷ್ಟ್ರವಾದ ಸೀಶೆಲ್‌ನ ಉಪರಾಷ್ಟ್ರಪತಿ ಅಹ್ಮದ್ ಅಫೀಫ್ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಮಾಲ್ಡೀವ್ಸ್ ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು, ಮಾರಿಷಸ್ ಪ್ರಧಾನಿ ಪ್ರವೀಂದ್ ಕುಮಾರ್ ಜುಗ್ನೌತ್ ಹಾಗೂ ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಹಾಗೂ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನ ಮತ್ತು ಸೀಶೆಲ್‌ನ ಉಪರಾಷ್ಟ್ರಪತಿ ಅಹ್ಮದ್ ಅಫೀಫ್ ನವದೆಹಲಿಗೆ ಆಗಮಿಸಿದ್ದಾರೆ.

ನಿಯೋಜಿತ ಪ್ರಧಾನ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಇಂದು ಚಹಾ ಕೂಟ ಏರ್ಪಡಿಸಿದ್ದರು. ಈ ಸಭೆಯಲ್ಲಿ ಬಿಜೆಪಿ ನಾಯಕರಾದ ಶಿವರಾಜ್ ಸಿಂಗ್ ಚೌಹಾಣ್, ಜ್ಯೋತಿರಾಧಿತ್ಯ ಸಿಂಧಿಯಾ, ಅರ್ಜುನ್ ಮೇಘವಾಲ್, ಜಿ.ಕಿಶನ್ ರೆಡ್ಡಿ ಮೊದಲಾದವರು ಪಾಲ್ಗೊಂಡಿದ್ದರು.

ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ, ಇಂದು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿರುವ ವಿದೇಶಿ ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಔತಣಕೂಟ ಏರ್ಪಡಿಸಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೆಹಲಿ ಪೊಲೀಸರು ಬಿಗಿಬಂದೋಬಸ್ತ್ ಮಾಡಿದ್ದಾರೆ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಸುರಕ್ಷತೆ ಮತ್ತು ಭದ್ರತೆ ಕಾಯ್ದುಕೊಳ್ಳಲು ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending