Connect with us

ದಿನದ ಸುದ್ದಿ

ವಯನಾಡ್ ಸಂಸದ ಸ್ಥಾನ ತ್ಯಜಿಸಲು ನಿರ್ಧರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ; ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ

Published

on

ಸುದ್ದಿದಿನಡೆಸ್ಕ್:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವು ಮಾಡಲಿದ್ದಾರೆ ಮತ್ತು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಖರ್ಗೆ ತಿಳಿಸಿದರು.

ರಾಹುಲ್ ಗಾಂಧಿ ಅವರು ವಯನಾಡ್ ಮತ್ತು ರಾಯ್ ಬರೇಲಿ ಲೋಕಸಭಾ ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದರು ಮತ್ತು ಜೂನ್ 4 ರಂದು ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾದ 14 ದಿನಗಳಲ್ಲಿ ಒಂದು ಸ್ಥಾನವನ್ನು ತೆರವು ಮಾಡಬೇಕಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಅವರು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ.

ವಯನಾಡ್ ಜನರಿಗೆ ತಮ್ಮ ಬಾಗಿಲು ಯಾವಾಗಲೂ ತೆರೆದಿರುತ್ತದೆ ಮತ್ತು ಕ್ಷೇತ್ರವು ತನ್ನ ಮತ್ತು ತಮ್ಮ ಸಹೋದರಿಯ ಮೂಲಕ ಪರಿಣಾಮಕಾರಿಯಾಗಿ ಇಬ್ಬರು ಸಂಸದರನ್ನು ಹೊಂದಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಮತ್ತು ಅವರು ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂದು ನನಗೆ ವಿಶ್ವಾಸವಿದೆ. ವಯನಾಡಿನ ಜನರು ತಮಗೆ ಇಬ್ಬರು ಸಂಸತ್ ಸದಸ್ಯರಿದ್ದಾರೆ ಎಂದು ಭಾವಿಸಬಹುದು ಎಂದು ರಾಹುಲ್ ಗಾಂಧಿ ತಿಳಿಸಿದರು.

ಈ ಘೋಷಣೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ, ಅಮೇಥಿ ಮತ್ತು ರಾಯ್ ಬರೇಲಿಯೊಂದಿಗಿನ ದೀರ್ಘಕಾಲದ ಸಂಬಂಧವು ಮುರಿಯಲಾಗದು ಎಂದು ಹೇಳಿದರು.

“ವಯನಾಡನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ ನಾನು ಕಷ್ಟಪಟ್ಟು ಕೆಲಸ ಮಾಡುತ್ತೇನೆ ಮತ್ತು ಉತ್ತಮ ಪ್ರತಿನಿಧಿಯಾಗಲು ಪ್ರಯತ್ನಿಸುತ್ತೇನೆ ಎಂದರು.

ವಯನಾಡ್ ಪ್ರತಿನಿಧಿಸಲು ಸಾಧ್ಯವಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ವಯನಾಡ್ ಜನತೆ ರಾಹುಲ್ ಅನುಪಸ್ಥಿತಿಯನ್ನು ಅನುಭವಿಸಲು ಬಿಡುವುದಿಲ್ಲ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

ರಾಯ್ ಬರೇಲಿಯಲ್ಲಿಯೂ ಉತ್ತಮ ಸಂಬಂಧವನ್ನು ಹೊಂದಿದ್ದೇನೆ ಏಕೆಂದರೆ. 20 ವರ್ಷಗಳಿಂದ ಅಲ್ಲಿ ಕೆಲಸ ಮಾಡಿದ್ದೇನೆ ಮತ್ತು ಆ ಸಂಬಂಧವು ಎಂದಿಗೂ ಮುರಿಯುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending