ದಿನದ ಸುದ್ದಿ
ಶ್ರವಣದೋಷವುಳ್ಳ ವಿಶೇಷಚೇತನರ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಜಿಲ್ಲಾ ಪಂಚಾಯತ್ ಅನಿರ್ಬಂಧಿತ ಅನುದಾನದಡಿ ಶ್ರವಣದೋಷವುಳ್ಳ ವ್ಯಕ್ತಿಗಳು ಸ್ವಯಂ ಉದ್ಯೋಗ ನಡೆಸಲು ಹೊಲಿಗೆ ಯಂತ್ರ 80, ಟಾಕಿಂಗ್ ಲ್ಯಾಪ್‍ಟಾಪ್ 1, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ಮಾರ್ಟ್ ಫೆÇೀನ್ 2 ಮತ್ತು ಎಸ್.ಎಸ್.ಎಲ್.ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ನೀಡಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಹೊಲಿಗೆ ಯಂತ್ರ ಬಯಸುವವರು : ಟೈಲರಿಂಗ್ ವರ್ಗ ಪ್ರಮಾಣ ಪತ್ರ ಮತ್ತು ಸಾಕ್ಷರತೆ ಪ್ರಮಾಣ ಪತ್ರ, ವಿಕಲಚೇತನರ ಗುರುತಿನ ಚೀಟಿ (ಯು.ಡಿ.ಐ.ಡಿ) & ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ಸ್ವಯಂ ಘೋಷಣೆ ಪತ್ರ, ಉದ್ಯೋಗದಲ್ಲಿಲ್ಲದ ಬಗ್ಗೆ ಪ್ರಮಾಣ ಪತ್ರ, ಇತರೆ ಇಲಾಖೆ, ಸಂಸ್ಥಗಳಿಂದ ಹೊಲಿಗೆ ಯಂತ್ರ ಪಡೆದಿಲ್ಲದಿರುವ ಬಗ್ಗೆ ದೃಢೀಕರಣ ಪತ್ರ, ರೂ.20 ಸ್ಟಾಂಪ್ ಪೇಪರ್ ನಲ್ಲಿ ಹೊಲಿಗೆ ಯಂತ್ರ ಮಾರಾಟ ಮಾಡುವುದಿಲ್ಲ ಎಂದು ಸ್ವಯಂ ಘೋಷಣೆ ಪ್ರಮಾಣ ಪತ್ರ, ಪಾಸ್ ಪೋರ್ಟ್ ಗಾತ್ರದ ಭಾವಚಿತ್ರ,
ಲ್ಯಾಪ್‍ಟಾಪ್ : ವಿಕಲಚೇತನರ ಗುರುತಿನ ಚೀಟಿ ಯು.ಡಿ.ಐ.ಡಿ, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದ ಅಂಕಪಟ್ಟಿ (ಪ್ರಸ್ತುತ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿ, ಉತ್ತಿರ್ಣರಾದ ಅಂಕ ಪಟ್ಟಿ), ಸಕ್ಷಮ ಪ್ರಾಧಿಕಾರದಿಂದ ನೀಡಿದ ವಾಸಸ್ಥಳ ದೃಢೀಕರಣ ಪತ್ರ, ಇತರೆ ಇಲಾಖೆ, ಸಂಸ್ಥೆ, ವಿಶ್ವವಿದ್ಯಾಲಯಗಳಿಂದ ಟಾಕಿಂಗ್ ಲ್ಯಾಪ್‍ಟಾಪ್ ಪಡೆದಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ ಪತ್ರ, ಶಾಲೆ, ಕಾಲೇಜಿನಿಂದ ಶಿಫಾರಸ್ಸು ಪತ್ರ, ಲ್ಯಾಪ್‍ಟಾಪ್ ಪರಭಾರೆಯಾಗದಿರುವ ಬಗ್ಗೆ ಸ್ವಯಂ ಘೋಷಣೆ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಸೈಜ್ ಫೋಟೋ.
ಸ್ಮಾರ್ಟ್ ಫೋನ್ ; ವಿಕಲಚೇತನರ ಗುರುತಿನ ಚೀಟಿ ಯು.ಡಿ.ಐ.ಡಿ, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ವಾಸಸ್ಥಳ ದೃಢೀಕರಣ ಪತ್ರ, ಇತರೆ ಇಲಾಖೆ, ಸಂಸ್ಥೆ, ವಿಶ್ವವಿದ್ಯಾಲಯಗಳಿಂದ ಸ್ಮಾರ್ಟ್ ಫೋನ್ ಪಡೆದಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ ಪತ್ರ, ಪಾಸ್‍ಪೋರ್ಟ್ ಸೈಜ್ ಫೋಟೋದೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರಾದ ನಾಗರಾಜ್ ಡಿಳ್ಳೆಪ್ಪನರ್ 9901738353, ಶೈಲಜಾ ಕೆ.ಎಂ.9482158005 ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಹೊನ್ನಾಳಿ, ಕೆ ಸುಬ್ರಮಣ್ಯಂ 9945738141ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಚನ್ನಗಿರಿ,ಎಂ.ಕೆ.ಶಿವನಗೌಡ 9902105734 ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಜಗಳೂರು, ಶಶಿಕಲಾ ಟಿ. 9945458058, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಹರಿಹರ, ಚನ್ನಪ್ಪ.ಬಿ 9590829024 ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ದಾವಣಗೆರೆ ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಧಿಕಾರಿ ಕೆ.ಕೆ.ಪ್ರಕಾಶ್ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | 14 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಎ.ಬಿ.ರಾಮಚಂದ್ರಪ್ಪ ಆಯ್ಕೆ
ಸುದ್ದಿದಿನ,ದಾವಣಗೆರೆ:ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜಗಳೂರು ಪಟ್ಟಣದಲ್ಲಿ ದಿನಾಂಕ 11 ಮತ್ತು 12 ಜನವರಿ 2025 ರಂದು ನಡೆಯಲಿದೆ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು, ಲೇಖಕರು, ವಾಗ್ಮಿಗಳು ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ.ಎ.ಬಿ.ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.
ವೈಚಾರಿಕ ಹಾಗೂ ಸಾಂಸ್ಕೃತಿಕ ಚಿಂತಕ, ಜನಪರ ಹೋರಾಟಗಾರ ಪ್ರೊ.ಎ.ಬಿ.ರಾಮಚಂದ್ರಪ್ಪನವರು 3 ದಶಕಗಳಿಗೂ ಹೆಚ್ಚಿನ ಕಾಲ ಪದವಿ ಕಾಲೇಜು ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. “ಸ್ವಾತಂತ್ರ್ಯೋತ್ತರ ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್ ಚಿಂತನೆಗಳು” ವಿಷಯದಲ್ಲಿ ಸಂಶೋಧನಾ ಮಹಾಪ್ರಬಂಧ ಮಂಡನೆ ಮಾಡಿ ಪಿಎಚ್‌ಡಿ ಪದವಿ ಹೊಂದಿದ್ದಾರೆ. ಈವರೆಗೆ ಅವರ 19 ಕೃತಿಗಳು ಪ್ರಕಟಗೊಂಡಿವೆ. ಪ್ರಸ್ತುತ ಕರ್ನಾಟಕ ಸರಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದಾರೆ.
ಶನಿವಾರ ಕುವೆಂಪು ಕನ್ನಡ ಭವನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಮ್ಮೇಳನದ ಕುರಿತಾಗಿ ಕೂಲಂಕಷವಾಗಿ ಚರ್ಚೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ಭಾಗವಹಿಸಿದ ಬಹುತೇಕ ಕಾರ್ಯಕಾರಿ ಸಮಿತಿ ಸದಸ್ಯರು ಪ್ರೊ.ಎ.ಬಿ.ರಾಮಚಂದ್ರಪ್ಪನವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲು ಒಲವು ತೋರಿದ್ದರಿಂದ ಸರ್ವಾಧ್ಯಕ್ಷತೆಯ ಆಯ್ಕೆ ಸುಗಮವಾಗಿ ನಡೆಯಿತು ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.
ಜಗಳೂರಿನ ಶಾಸಕ ಚಿಮ್ಮನಕಟ್ಟಿ ಬಿ.ದೇವೇಂದ್ರಪ್ಪ ಅವರು ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹಾಗಾಗಿ ಜನವರಿ 11 ಮತ್ತು 12 ರಂದು ಅರ್ಥಪೂರ್ಣವಾಗಿ ಸಮ್ಮೇಳನ ನಡೆಸುವುದಾಗಿ ಬಿ.ವಾಮದೇವಪ್ಪ ತಿಳಿಸಿದರು.
ಇದೇ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಚುನಾಯಿತರಾದ ಹಾಗೂ ಜಿಲ್ಲಾ ಕಸಾಪ ಪದ ನಿಮಿತ್ತ ಸದಸ್ಯ ವೀರೇಶ್ ಎಸ್ ಒಡೇನಪುರ ಆವರನ್ನು ಜಿಲ್ಲಾ ಕಸಾಪ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಕಾರ್ಯಕಾರಿ ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ, ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ, ಸಂಘಟನಾ ಕಾರ್ಯದರ್ಶಿಗಳಾದ ಸಿ.ಜಿ.ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ದಾವಣಗೆರೆ ತಾಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಜಗಳೂರು ತಾಲೂಕು ಅಧ್ಯಕ್ಷೆ ಕೆ.ಸುಜಾತಮ್ಮ, ಹರಿಹರ ತಾಲೂಕು ಅಧ್ಯಕ್ಷ ಡಿ.ಎಂ.ಮಂಜುನಾಥಯ್ಯ, ಚನ್ನಗಿರಿ ತಾಲೂಕು ಅಧ್ಯಕ್ಷ ಎಲ್.ಜಿ.ಮಧುಕುಮಾರ್, ಹೊನ್ನಾಳಿ ತಾಲೂಕು ಅಧ್ಯಕ್ಷ ಜಿ.ಮುರಿಗೆಪ್ಪಗೌಡ, ನ್ಯಾಮತಿ ತಾಲೂಕು ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ವೀರೇಶ್ ಎಸ್ ಒಡೇನಪುರ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಸೋಮೇಶ್ವರ ಕೆ.ಎಂ.ಸುರೇಶ್, ಪ್ರಸಾದ್ ಬಂಗೇರ, ಎಸ್.ಎಂ.ಮಲ್ಲಮ್ಮ, ಬಿ.ಎಂ.ಭೈರವೇಶ್ವರ, ಸಿ.ಕೆ.ರುದ್ರಾಕ್ಷಿ ಬಾಯಿ, ಹೆಚ್.ಕೆ.ಸತ್ಯಭಾಮ ಮಂಜುನಾಥ್, ಎ.ರಿಯಾಜ್ ಅಹಮದ್, ಎಂ.ಎ.ಸುದರ್ಶನ್, ಕೆ.ಪಿ.ಮರಿಯಾಚಾರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ
- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್ ಇಂಡಿಯಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಪೇದೆ ಕೆ.ಆರ್ ಹುಲಿರಾಜ ತಿಳಿಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬೊಮ್ಮಗಟ್ಟ ಗ್ರಾಮದ ತಂದೆ ಕೆ.ರಮೇಶ್, ತಾಯಿ ಲಕ್ಷ್ಮೀ ಅವರ ಮೊದಲನೇ ಮಗ ಕೆ.ಆರ್ ಹುಲಿರಾಜ, ವೃತ್ತಿಯಲ್ಲಿ ಕೆ.ಎಸ್.ಆರ್.ಟಿ.ಸಿ ಪೇದೆ, ಪತ್ನಿ ಸವಿತಾ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗಿ, ಇಬ್ಬರು ಮಕ್ಕಳು ಇದ್ದಾರೆ.
ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆಗೆ ಖೋ-ಖೋ, ಓಟ, ವಾಲಿಬಾಲ್, ಕ್ರಿಕೆಟ್ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಜೊತೆಗೆ ಬಳ್ಳಾರಿ ಡಯಟ್ ನಲ್ಲಿ ಡಿ.ಎಡ್. ಪದವಿ ಪಡೆದು ನಂತರ ಬಿ.ಎ. ಪದವಿಯನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಳಿಸಿದ್ದಾರೆ.
ಪೇದೆಯಾಗಿ ಆಯ್ಕೆ
2014ನೇ ಮಾರ್ಚ್ 3ನೇ ತಾರೀಖು ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ.ಯಲ್ಲಿ ಪೇದೆಯಾಗಿ ಆಯ್ಕೆಯಾಗಿ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಎರಡು ವರ್ಷಗಳ ಕಾಲ ತರಬೇತಿ ಪೂರ್ಣಗೊಳಿಸಿದ್ದಾರೆ.
ಬೆಂಗಳೂರಿನಲ್ಲಿ 6 ವರ್ಷಗಳ ಕಾಲ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಪ್ರಸ್ತುತ ಚಿತ್ರದುರ್ಗ ಜಿಲ್ಲೆಯ ಚಳ್ಳಕೇರೆ ತಾಲೂಕಿನ ಡಿಪೋದಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
800,1500 ಮೀಟರ್ ಓಟದ ಸ್ಪರ್ಧೆ ಆಯ್ಕೆ
ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿ, ನಂತರ ರಾಜ್ಯ ಮಟ್ಟದಲ್ಲಿ 800 ಮೀಟರ್ ಹಾಗೂ 1500 ಮೀಟರ್ ಓಟದಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡು, 2024ನೇ ಸಾಲಿನ ಡಿಸೆಂಬರ್ 6, 7 ಹಾಗೂ 8 ರಂದು ನಡೆಯುವ ಆಲ್ ಇಂಡಿಯಾ ರೋಡ್ ಟ್ರಾನ್ಸ್‌ಪೋರ್ಟ್ ಕಾರ್ಪೋರೇಷನ್ ಲಿಮಿಟೆಡ್ ಅಥ್ಲೆಟಿಕ್ ಮೀಟ್, ಪಾರ್ಟ್ ಸೇಡಿಯಂ, ವಿಶಾಖಪಟ್ಟಣಂನಲ್ಲಿ ನಡೆಯುವ ಅಥ್ಲೆಟಿಕ್ಸ್ ಗೆ ಆಯ್ಕೆಯಾಗಿ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ.
ಇಲಾಖೆ ಪ್ರೋತ್ಸಾಹ
ASRTU ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವ ನಿಗಮದ ಆಟಗಾರರಿಗೆ ಅಭ್ಯಾಸ ಮಾಡಲು ವೇತನ ಸಹಿತ ರಜೆ ಹಾಗೂ ಕ್ರೀಡಾ ಸಾಮಗ್ರಿ ಕೊಟ್ಟಿದ್ದಾರೆ .ASRTU ವತಿಯಿಂದ ದೇಶದ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗಿದೆ. ರಾಜ್ಯದ ಹಾಗೂ ಜಿಲ್ಲೆಯ ಇಲಾಖೆಯ ಅಧಿಕಾರಿಗಳಿಗೆ ಪೇದೆ ಕೆ.ಆರ್. ಹುಲಿರಾಜ್ ರಿಗೆ ಧನ್ಯವಾದಗಳನ್ನು ತಿಳಿಸಿದರು.
ಒಟ್ಟಾರೆಯಾಗಿ ASRTU Athletics ಡಿಸೆಂಬರ್-2024 ಕ್ರೀಡಾಕೂಟವನ್ನು ಡಿಸೆಂಬರ್ 06 ರಿಂದ 8 ವರೆಗೆ ವಿಶಾಖಪಟ್ಟಣಂನಲ್ಲಿ ಆಯೋಜಿಸಿದೆ. ಅದರಲ್ಲಿ ಬಳ್ಳಾರಿ ಜಿಲ್ಲೆಯ ನಿವಾಸಿ ಪೇದೆ ಕೆ.ಆರ್ ಹುಲಿರಾಜ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಈ ಸಮಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ತಂದೆ ತಾಯಿ, ಪೋಷಕರು ಹಾಗೂ ಸ್ನೇಹಿತರು ಶುಭಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
-
ದಿನದ ಸುದ್ದಿ7 days ago
ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ
-
ದಿನದ ಸುದ್ದಿ3 days ago
ದಾವಣಗೆರೆ | 14 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಎ.ಬಿ.ರಾಮಚಂದ್ರಪ್ಪ ಆಯ್ಕೆ
-
ದಿನದ ಸುದ್ದಿ2 days ago
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ