ದಿನದ ಸುದ್ದಿ
ಆರೋಗ್ಯ ಸಚಿವ ಗುಂಡೂರಾವ್ ಚಿಗಟೇರಿ ಜಿಲ್ಲಾ ಆಸ್ಪತ್ರೆ ಭೇಟಿ ; 20 ಕೋಟಿ ವೆಚ್ಚದಲ್ಲಿ ನೂತನ ಬ್ಲಾಕ್ ನಿರ್ಮಾಣ
ಸುದ್ದಿದಿನ,ದಾವಣಗೆರೆ:ಚಿಗಟೇರಿ ಜಿಲ್ಲಾ ಆಸ್ಪತ್ರೆ 400 ಬೆಡ್ ಸಾಮಥ್ರ್ಯದ ಸಿಬ್ಬಂದಿ ಇದ್ದರೂ 930 ಬೆಡ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇಲ್ಲಿನ ಕಟ್ಟಡ ಹಳೆಯದಾಗುತ್ತಿದೆ. ಹಳೆ ಕಟ್ಟಡದ ಮಾದರಿಯಲ್ಲಿಯೇ ಶಿಥಿಲವಾದ ಕಟ್ಟಡ ತೆರವು ಮಾಡಿ ಹಂತ ಹಂತವಾಗಿ ಹೊಸ ಕಟ್ಟಡ ನಿರ್ಮಾಣ ಮಾಡಲು ಪ್ರಸ್ತುತ ದಕ್ಷಿಣ ಬ್ಲಾಕ್ ತೆರವು ಮಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ರೂ. 20 ಕೋಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.
ಅವರು ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಹಾಗೂ ಶಾಸಕರೊಂದಿಗೆ ಚಿಗಟೇರಿ ಆಸ್ಪತ್ತೆಗೆ ಭೇಟಿ ನೀಡಿ ಶಿಥಿಲಗೊಂಡಿರುವ ಕಟ್ಟಡ, ತುರ್ತು ಚಿಕಿತ್ಸಾ ಘಟಕ, ತೀವ್ರ ನಿಗಾ ಘಟಕ, ತುರ್ತು ಚಿಕಿತ್ಸಾ ವಿಭಾಗ, ಡಯಾಲಿಸೀಸ್ ಕೇಂದ್ರ, ಶಸ್ತ್ರ ಚಿಕಿತ್ಸಾ ಕೊಠಡಿ, ವಾರ್ಡ್‍ಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು.
ಈಗಿರುವ ಆಸ್ಪತ್ರೆಯ ಕಟ್ಟಡ ಹಳೆಯದಾಗಿದ್ದು ಅಲ್ಲಲ್ಲಿ ಶಿಥಿಲವಾಗುತ್ತಿದೆ, ಕಟ್ಟಡವನ್ನು ಬಹಳ ವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದು ಎಲ್ಲಾ ಕಟ್ಟಡ ತೆರವು ಮಾಡಿ ಹೊಸ ಕಟ್ಟಡ ನಿರ್ಮಾಣ ಮಾಡಲು ಅಂದಾಜು 100 ಕೋಟಿಗಿಂತಲೂ ಹೆಚ್ಚು ಅನುದಾನ ಬೇಕಾಗುತ್ತದೆ. ಆದ್ದರಿಂದ ಅಗತ್ಯವಿರುವ ಬ್ಲಾಕ್‍ಗಳನ್ನು ಹಂತ ಹಂತವಾಗಿ ತೆರವು ಮಾಡುವ ಮೂಲಕ ಇದೇ ಮಾದರಿಯಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಮೊದಲ ಹಂತವಾಗಿ ದಕ್ಷಿಣ ಭಾಗದಲ್ಲಿನ ಬ್ಲಾಕ್ ತೆರವು ಮಾಡಿ ಇದೇ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲು ರೂ.20 ಕೋಟಿ ಅನುದಾನ ನೀಡಲಾಗುತ್ತದೆ. ಇದರಲ್ಲಿ ಮಾದರಿ ಶಸ್ತ್ರ ಚಿಕಿತ್ಸಾ ಕೊಠಡಿಗಳು ಸೇರಲಿವೆ ಎಂದರು.
ಇಲ್ಲಿನ ಆಸ್ಪತ್ರೆಗೆ ಇತರೆ ಜಿಲ್ಲೆಗಳಿಂದಲೂ ರೆಫರಲ್ ಆಗಿ ಹೆರಿಗೆಗಾಗಿ ಬರುತ್ತಿದ್ದು ತಿಂಗಳಿಗೆ 600 ರಿಂದ 700 ರಷ್ಟು ಹೆರಿಗೆಯಾಗುತ್ತಿದೆ. ಮತ್ತು ನವಜಾತ ಶಿಶುಗಳು ಹಾಗೂ ಮಕ್ಕಳ ಚಿಕಿತ್ಸೆಗಾಗಿ ಹೆಚ್ಚು ಜನರು ಆಗಮಿಸುತ್ತಿರುವುದರಿಂದ ಈಗಿರುವ ಸ್ಥಳಾವಕಾಶ ಸಾಕಾಗುವುದಿಲ್ಲ. ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣವಾಗಿದ್ದು ಒಂದು ವಾರದಲ್ಲಿ ಅಲ್ಲಿಗೆ ಸ್ಥಳಾಂತರಿಸಲು ತಿಳಿಸಿ ವಾರದಲ್ಲಿ ಟ್ರಾಮಾ ಕೇರ್ ಸೆಂಟರ್ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ಮಾಡಲಾಗುತ್ತದೆ ಎಂದರು.
ಇಲ್ಲಿಗೆ ಎಂಆರ್‍ಐ ಸ್ಕ್ಯಾನ್ ಬೇಕೆಂದು ಬೇಡಿಕೆ ಇದ್ದು ಇನ್ನೆರಡು ತಿಂಗಳಲ್ಲಿ ನೀಡಲಾಗುತ್ತದೆ. ಶವಾಗಾರ ಸೇರಿದಂತೆ ಒಳಚರಂಡಿ, ಓವರ್‍ಹೆಡ್ ಟ್ಯಾಂಕ್, ಸೇರಿದಂತೆ ಮಕ್ಕಳ ನಿಗಾ ಘಟಕಕ್ಕೆ ವೆಂಟಿಲೇಟರ್, ಆರ್ಥೋ ವಿಭಾಗಕ್ಕೆ ಮಾದರಿ ಓಟಿ ಬೇಕೆಂದು ಸರ್ಜನ್ ಮನವಿ ಮಾಡಿದರು. ಆಸ್ಪತ್ರೆಯ ಬಳಕೆ ಅನುದಾನ ಮತ್ತು ಎಬಿಆರ್‍ಕೆ ಯಡಿ ಬರುವ ಅನುದಾನವನ್ನು ಆರೋಗ್ಯ ರಕ್ಷಾ ಸಮಿತಿಯಲ್ಲಿ ಅನುಮೋದನೆ ಪಡೆದು ಜಿಲ್ಲಾಧಿಕಾರಿಯವರಿಂದ ಮಂಜೂರಾತಿ ಪಡೆದು ಆಸ್ಪತ್ರೆಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ಸರ್ಜನ್ ತಿಳಿಸಿ ಯೂಸರ್ ಫಂಡ್ ಮತ್ತು ಎಬಿಆರ್‍ಕೆಯಡಿ 5 ಕೋಟಿಯಷ್ಟು ಅನುದಾನವಿದ್ದು ಇದನ್ನು ವೆಚ್ಚ ಮಾಡಿ ಜನರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ತಿಳಿಸಿದರು.
24 ಗಂಟೆ ಫಾರ್ಮಸಿ ಓಪನ್‍ಗೆ ಸೂಚನೆ:ಆಸ್ಪತ್ರೆಗೆ ಬೇಕಾದ ಔಷಧಗಳನ್ನು ಬಳಕೆ ಅನುದಾನ ಮತ್ತು ಎಬಿಆರ್‍ಕೆಯಡಿ ಖರೀದಿ ಜೊತೆಗೆ ಅರೋಗ್ಯ ಇಲಾಖೆ ಉಗ್ರಾಣದಿಂದಲೂ ಔಷಧ ಪೂರೈಕೆ ಮಾಡಲಾಗುತ್ತಿದೆ. ಆಸ್ಪತ್ರೆಯಲ್ಲಿನ ಫಾರ್ಮಸಿ ದಿನದ 24 ಗಂಟೆಯು ತೆರೆದಿರುವ ಮೂಲಕ ಹೊರಗಡೆ ಚೀಟಿ ಬರೆಯವುದನ್ನು ತಪ್ಪಿಸಬೇಕೆಂದು ಸೂಚನೆ ನೀಡಿದರು.
ಶಸ್ತ್ರ ಚಿಕಿತ್ಸೆ ಹೆಚ್ಚಿಸಿ, ಆದಾಯ ಹೆಚ್ಚಿಸಿ ಸೌಕರ್ಯ ಪಡೆಯಿರಿ:ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲಾ ವಿದವಾದ ತಜ್ಞ ವೈದ್ಯರ ಜೊತೆಗೆ ಮೆಡಿಕಲ್ ಕಾಲೇಜ್ ತಜ್ಞ ವೈದ್ಯರು ಲಭ್ಯವಾಗುವುದರಿಂದ ಇಲ್ಲಿ ವಿನೂತನವಾದ ಶಸ್ತ್ರ ಚಿಕಿತ್ಸೆಗಳನ್ನು ಕೈಗೊಳ್ಳುವ ಅವಕಾಶ ಇದೆ. ಆರ್ಥೋ ವಿಭಾಗದಲ್ಲಿ ಎಲ್ಲಾ ಬಗೆಯ ಶಸ್ತ್ರ ಚಿಕಿತ್ಸೆ ಮಾಡಬಹುದು ಮತ್ತು ನೇತ್ರ ಚಿಕಿತ್ಸಾ ವಿಭಾಗದಲ್ಲಿಯು ರೆಟಿನಾ ಶಸ್ತ್ರ ಚಿಕಿತ್ಸೆಯನ್ನು ಇಲ್ಲಿ ಕೈಗೊಳ್ಳುವಂತಾಗಬೇಕು. ಇದರಿಂದ ಎಬಿಆರ್‍ಕೆಯಡಿ ಹೆಚ್ಚು ಅನುದಾನ ಲಭ್ಯವಾಗುವುದರಿಂದ ಆಸ್ಪತ್ರೆಯ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿ ಆಸ್ಪತ್ರೆಗೆ ಬೇಕಾದ ಓವರ್‍ಹೆಡ್ ಟ್ಯಾಂಕ್ ಮತ್ತು ಆಸ್ಪತ್ರೆಯೊಳಗೆ ಪ್ರಮುಖ ರಸ್ತೆಗಳನ್ನು ಪಾಲಿಕೆ ಅಥವಾ ಇತರೆ ಸರ್ಕಾರದ ಯೋಜನೆಯಲ್ಲಿ ಕೈಗೊಳ್ಳಲಾಗುತ್ತದೆ. ಆಸ್ಪತ್ರೆಯ ಮೂಲಭೂತ ಸೌಕರ್ಯಕ್ಕಾಗಿ ಈಗಿರುವ 7 ಕೋಟಿಯನ್ನು ಇತರೆ ಸೌಲಭ್ಯಗಳಿಗಾಗಿ ಬಳಕೆ ಮಾಡಿಕೊಳ್ಳಲಾಗುತ್ತದೆ. ಚಿಗಟೇರಿ ಆಸ್ಪತ್ರೆ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ತಕ್ಷಣದ ಕ್ರಮವಾಗಿ ಅಂದಾಜು 50 ಕೋಟಿ ಅಗತ್ಯವಾಗಿದ್ದು ಈ ಅನುದಾನವನ್ನು ಸರ್ಕಾರದಿಂದ ತಂದು ದಾವಣಗೆರೆ ಜನರಿಗೆ ಆರೋಗ್ಯ ಸೌಕರ್ಯ ಕಲ್ಪಿಸಲಾಗುತ್ತದೆ ಎಂದರು.
ಇನ್ನೊಂದು ವಾರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟನೆ ಮಾಡುವ ಮೂಲಕ ಜನರಿಗೆ ಇನ್ನಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದರು.
ಸಭೆಯಲ್ಲಿ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಕೆ.ಎಸ್.ಬಸವಂತಪ್ಪ, ದೇವೇಂದ್ರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾದ ಡಾ; ರಂದೀಪ್, ಎನ್‍ಹೆಚ್‍ಎಂ ಯೋಜನಾ ನಿರ್ದೇಶಕರಾದ ಡಾ; ನವೀನ್ ಭಟ್ ಪೈ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ, ಜಿಲ್ಲಾ ಸರ್ಜನ್ ಡಾ; ನಾಗೇಂದ್ರಪ್ಪ ಹಾಗೂ ಚಿಗಟೇರಿ ಆಸ್ಪತ್ರೆ ವೈದ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


