Connect with us

ದಿನದ ಸುದ್ದಿ

ಜನಪರ ಮತ್ತು ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕಾರ್ಯ ನಿರ್ವಹಿಸಬೇಕು : ಕೆ.ವಿ.ಪ್ರಭಾಕರ್

Published

on

ಸುದ್ದಿದಿನ,ಶಿವಮೊಗ್ಗ:ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆ ಕಾಗೋಡು, ಗೇಣಿ, ದಲಿತ, ಸ್ವಾತಂತ್ರö್ಯ ಮುಂತಾದ ಹೋರಾಟಗಳ ತವರು. ಜಿಲ್ಲೆಯ ಪತ್ರಕರ್ತರು ರಾಜ್ಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ.

ಇತ್ತೀಚಿನ ದಿನಮಾನದಲ್ಲಿ ಬರವಣಿಗೆ ನಶಿಸುತ್ತಿದೆ. ಕ್ರಿಯಾತ್ಮಕತೆ ದಿನೇ ದಿನೇ ಕ್ಷೀಣಿಸುತ್ತಿದೆ. ಸುದ್ದಿಗಳಲ್ಲಿ ಸಮಾಜ ಪರತೆ ಕಡಿಮೆ ಆಗಿದೆ. ವೈಭವೀಕರಣ ಮತ್ತು ಪೀತ ಪತ್ರಿಕೋದ್ಯಮ ಹೆಚ್ಚುತ್ತಿದೆ. ಈ ಕುರಿತು ಪತ್ರಕರ್ತರು ಹಾಗೂ ವಿದ್ಯಾರ್ಥಿಗಳು ಚಿಂತನೆ ನಡೆಸಬೇಕು. ನಾವು ಯಾವ ರೀತಿಯ ಸುದ್ದಿಗಳನ್ನು ನೀಡಬೇಕೆಂದು ಆಲೋಚಿಸಿ, ಜನ ಮತ್ತು ಸಮಾಜಪರವಾಗಿ ಕೆಲಸ ಮಾಡುವ ತುರ್ತು ಇದೆ ಎಂದರು.

ಗ್ರಾಮೀಣ ಭಾಗದ ಪತ್ರಕರ್ತರ ಬಹುದಿನದ ಬೇಡಿಕೆಯಾಗಿದ್ದ ಉಚಿತ ಬಸ್ ಪಾಸ್ ಯೋಜನೆ ಶೀಘ್ರದಲ್ಲೇ ಜಾರಿಯಾಗಲಿದೆ. ಪತ್ರಕರ್ತರ ವೈದ್ಯಕೀಯ ಸಂಕಷ್ಟ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಆರೋಗ್ಯ ವಿಮೆ ಜಾರಿಗೆ ತರಲಿದ್ದು ಇದಕ್ಕೆ ಸುಮಾರು ರೂ.10 ಕೋಟಿ ಅವಶ್ಯಕತೆ ಇದೆ. ವಿಮೆ ಕುರಿತಾದ ಮಾರ್ಗಸೂಚಿಗಳನ್ನು ಸಿದ್ದಪಡಸಲಾಗುತ್ತಿದೆ ಎಂದ ಅವರು ಸದಾ ಸಮಾಜದ ಕುರಿತು ಚಿಂತನೆ ಮಾಡುವ ಪತ್ರಕರ್ತರು ತಮ್ಮ ಕುಟುಂಬದ ಬಗ್ಗೆಗೂ ಹೆಚ್ಚಿನ ಕಾಳಜಿ ವಹಿಸಬೇಕೆಂದು ಕಿವಿ ಮಾತು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಸಂಘ ಪತ್ರಕರ್ತರ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೆರವು ನೀಡುತ್ತಾ ಬಂದಿದೆ. ಪತ್ರಕರ್ತರ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ನೀಡಲಾಗುತ್ತಿದೆ. ಗ್ರಾಮೀಣ ಬಸ್ ಪಾಸ್ ಯೋಜನೆಗೆ ಅನುಮೋದನೆ ದೊರೆತಿದ್ದು, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾಧ್ಯಮ ಸಲಹೆಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಪ್ರಸ್ತುತ ಪತ್ರಿಕೋದ್ಯಮದಲ್ಲಿನ ಜೊಳ್ಳು ತೆಗೆಯುವ ಸಂಕ್ರಮಣದ ಕಾಲಘಟ್ಟದಲ್ಲಿ ನಾವಿದ್ದೇವೆ. ಸಾಮಾಜಿಕ ಮಾಧ್ಯಮಗಳ ಭರಾಟೆ ಹೆಚ್ಚಿದ್ದು, ಶೇ.30 ರಷ್ಟು ಮಾತ್ರ ವಿಶ್ವಾಸಾರ್ಹತೆ ಇದು ಹೊಂದಿದೆ. ವಿದ್ಯುನ್ಮಾನ ಮಾಧ್ಯಮ ಶೇ.50 ಮತ್ತು ಮುದ್ರಣ ಮಾಧ್ಯಮ ಶೇ.63 ವಿಶ್ವಾಸಾರ್ಹತೆ ಹೊಂದಿದ್ದು, ಮುದ್ರಣ ಮಾಧ್ಯಮ ಜನರ ವಿಶ್ವಾಸಕ್ಕೆ ಪಾತ್ರವಾಗಿದ್ದ, ವಿಶ್ವಾಸಾರ್ಹತೆಯನ್ನು ಪತ್ರಕರ್ತರೇ ಉತ್ತಮ ಸುದ್ದಿಗಳನ್ನು ನೀಡುವ ಮೂಲಕ ಸಂಪಾದನೆ ಮಾಡಬೇಕೆಂದರು.

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಎನ್ ಮಂಜುನಾಥ್ ಮಾತನಾಡಿ, ಆಂಧ್ರ ಪ್ರದೇಶ ಮಾದರಿಯಲ್ಲಿ ಎಲ್ಲ ಪತ್ರಕರ್ತರಿಗೆ ಆರೋಗ್ಯ ಸವಲತ್ತುಗಳು ದೊರಕುವಂತಾಗಬೇಕು. ಪತ್ರಕರ್ತರ ಕ್ಷೇಮ ನಿಧಿ ಒಂದು ಸಮಿತಿ ರಚನೆಯಾಗಬೇಕು. ನಿವೃತ್ತಿ ನಂತರ ಆರೋಗ್ಯ ವಿಮೆಯಂತಹ ಸೌಲಭ್ಯ ನೀಡಬೇಕು. ಪತ್ರಿಕೋದ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು ಪತ್ರಕರ್ತರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಉಳಿಯಬೇಕು ಎಂದರು.

ಹಿರಿಯ ಪತ್ರಕರ್ತರಾದ ಗೋಪಾಲ್ ಎಸ್ ಯಡಗೆರೆ ಮಾತನಾಡಿ, ಇತ್ತೀಚೆಗೆ ಪತ್ರಿಕೋದ್ಯಮಿಗಳು ಹಣಕಾಸು ನಿರ್ವಹಣೆ ತಿಳಿಯದೆ ಸಂಕಷ್ಟಗಳನ್ನು ಎದುರುಸುತ್ತಿರುವುದನ್ನು ಕಾಣುತ್ತಿದ್ದೇವೆ. ನೈತಿಕ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು. ಹಣಕಾಸು ನಿರ್ವಹಣೆ ಮತ್ತು ನೈತಿಕ ಮೌಲ್ಯಗಳ ಅಳವಡಿಕೆ ಬಗ್ಗೆ ತರಬೇತಿ ನೀಡುವಂತಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ವಿ.ಶಿವಕುಮಾರ್ ಮಾತನಾಡಿ, ಮಾಧ್ಯಮ ಸ್ವಾತಂತ್ರ್ಯ ಪೂರ್ವದಿಂದಲೂ ಕಾಲಕ್ಕೆ ತಕ್ಕಂತೆ ಬೆಳೆಯುತ್ತಾ ಬಂದಿದ್ದು, ಪತ್ರಿಕೋದ್ಯಮ ಅತ್ಯಂತ ಶಕ್ತಿಶಾಲಿ ಮಾಧ್ಯಮವಾಗಿದೆ. ಪ್ರಸ್ತುತ ಜನರ ವಿಶ್ವಾಸ ಕೆಳೆದುಕೊಳ್ಳುವಂತಹ ಕೆಲ ಬೆಳವಣಿಗೆ ಆಗುತ್ತಿದ್ದು, ಇದು ಬದಲಾಗಬೇಕು ಎಂದರು. ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಸೌಲಭ್ಯವನ್ನು ರಾಜ್ಯ ಮಟ್ಟಕ್ಕೆ ವಿಸ್ತರಿಸಬೇಕೆಂದು ಕೋರಿದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಸ್‌ಎಲ್ ಮತ್ತು ಪಿಯುಸಿಯಲ್ಲಿ ಶೇ.95 ಕ್ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಅಭಿನಂದಿಸಲಾಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ಏಷ್ಯನ್ ಮೀಡಿಯಾ ಕಲ್ಚರಲ್ ಅಸೋಸಿಯೇಷನ್‌ನ ಭಾರತದ ಸಂಚಾಲಕ ಹೆಚ್.ಬಿ.ಮದನಗೌಡ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕ ಗಿರೀಶ್ ಕೋಟೆ ಮಾತನಾಡಿದರು.

ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ರವಿಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಮಾರುತಿ ಆರ್, ರಾಷ್ಟೀಯ ಮಂಡಳಿ ಸದಸ್ಯರಾದ ಬಂಡಿಗಡಿ ನಂಜುಂಡಪ್ಪ, ಪತ್ರಿಕರ್ತರ ಸಂಘದ ಪದಾಧಿಕಾರಿಗಳು, ಪತ್ರಕರ್ತರು, ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending