ದಿನದ ಸುದ್ದಿ
ಕೃಷಿ ಪಂಪ್ ಸೆಟ್ ಗಳಿಗೆ ಆಧಾರ ಲಿಂಕ್ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ : ಕೋಡಿಹಳ್ಳಿ ಚಂದ್ರಶೇಖರ್
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2024/08/Farmers_protest_Aadharlink_suddidina.jpg&description=ಕೃಷಿ ಪಂಪ್ ಸೆಟ್ ಗಳಿಗೆ ಆಧಾರ ಲಿಂಕ್ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ : ಕೋಡಿಹಳ್ಳಿ ಚಂದ್ರಶೇಖರ್', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2024/08/Farmers_protest_Aadharlink_suddidina.jpg&description=ಕೃಷಿ ಪಂಪ್ ಸೆಟ್ ಗಳಿಗೆ ಆಧಾರ ಲಿಂಕ್ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ : ಕೋಡಿಹಳ್ಳಿ ಚಂದ್ರಶೇಖರ್', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ಆಧಾರ ಲಿಂಕ್ ಖಂಡಿಸಿ ಸೆ. 4ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ವಿದ್ಯುತ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಭೂ ಸಂಬಂಧಿ ಕಾಯ್ದೆ ಜಾರಿ ಮಾಡಿತ್ತು. ಆಗ 11 ತಿಂಗಳ ಸತತ ಹೋರಾಟ ನಡೆದ ಪರಿಣಾಮ ಕೇಂದ್ರ ಕೈ ಬಿಟ್ಟಿತು. ಆದರೆ, ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಕಾಯ್ದೆ ಜಾರಿ ಮಾಡಿತು. ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಮುಂದಿನ ಚುನಾವಣೆ ವೇಳೆ ನಮ್ಮನ್ನು ಬೆಂಬಲಿಸಿ, ನಾವು ಕಾನೂನು ಹಿಂತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಈಗ 13 ತಿಂಗಳ ಕಳೆದರೂ ಇದುವರೆಗೆ ಅವರ ಭರವಸೆ ಈಡೇರಿಸಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ಕಾನೂನು ರದ್ದುಮಾಡಿ ಪರಿಷತ್ ನಲ್ಲಿ ಬಹುಮತ ಸಿಕ್ಕ ಬಳಿಕ ಸಂಪೂರ್ಣ ಹಿಂಪಡೆಯುವ ಕೆಲಸ ಮಾಡುವ ಕೆಲಸ ಮಾಡಬೇಕಿತ್ತು. ಆದರೆ, ಸಿದ್ದರಾಮಯ್ಯ ಸೋಗಲಾಡಿತನ ತೋರಿಸುತ್ತಿದ್ದಾರೆ ಎಂದು ಟೀಕಿಸಿದರು.
ಇಂದು ಎಲ್ಲ ರಾಜಕೀಯ ಪಕ್ಷಗಳು ಬಹುರಾಷ್ಟ್ರೀಯ ಕಂಪನಿಯ ಗುಲಾಮರಾಗಿದ್ದಾರೆ. ರೈತರ ಸಮ್ಮತಿ ಇಲ್ಲದೆ ಪಂಪ್ ಸೆಟ್ ಗೆ ಮೀಟರ್ ಅಳವಡಿಸಿದರೆ ಅದನ್ನು ಕಿತ್ತು ಬೀದಿ ಬೀದಿಗಳಲ್ಲಿ ಎಸೆಯುತ್ತೇವೆ ಎಂದರು.
ಮೊದಲು ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಬೆಲೆ ಕೊಡುವ ವ್ಯವಸ್ಥೆ ಮಾಡಿದ ಬಳಿಕ ಸರ್ಕಾರ ಮೀಟರ್ ಹಾಕಿ ಬಿಲ್ ಕೊಡಲಿ. ಅಲ್ಲಿಯವರೆಗೆ ಮೀಟರ್ ಅಳವಡಿಸುವ ಆಲೋಚನೆ ಕೈ ಬಿಡಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಎಸ್.ಬೇವಿನಾಳ ಮಹದೇವಿ ಮಠ, ಶತಕೋಟಿ ಬಸಪ್ಪ, ವೀರನಗೌಡ ಪಾಟೀಲ್, ಬೈರೇಗೌಡ, ವಿಶ್ವನಾಥ, ಖಲೀಂವುಲ್ಲ, ಕಾಳೇಶ್, ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.
ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.
ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.
ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
-
ದಿನದ ಸುದ್ದಿ7 days agoಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
-
ದಿನದ ಸುದ್ದಿ7 days agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
-
ದಿನದ ಸುದ್ದಿ4 days agoಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
-
ದಿನದ ಸುದ್ದಿ4 days agoಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

