ದಿನದ ಸುದ್ದಿ
ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು
- ರುದ್ರಪ್ಪ ಹನಗವಾಡಿ
ನಾನು ಮದುವೆಯಾದ ಮೇಲೆ ನಮ್ಮೂರಿನಲ್ಲಿಯೇ 3-4 ಅಂತರ್ಜಾತಿ ಮದುವೆಗಳಾದವು. ಮೈಸೂರಿನಲ್ಲಿ ನಮ್ಮ ಜೊತೆಗಿದ್ದ ಪ್ರೊ. ಗೊಟ್ಟಿಗೆರೆ ಶಿವರಾಜು ಚನ್ನರಾಯ ಪಟ್ಟಣದಲ್ಲಿ ರಾಜ್ಯಶಾಸ್ತçದ ಅಧ್ಯಾಪಕನಾಗಿದ್ದ. ಅವನ ಸಹೋದ್ಯೋಗಿಗಳಾಗಿದ್ದ ನರಸಿಂಹಾಚಾರ್ ಇಂಗ್ಲಿಷ್ ಅಧ್ಯಾಪಕ ಮತ್ತು ಪ್ರೊ. ಸುಮತಿ ಎನ್. ಗೌಡ ಅಧ್ಯಾಪಕರಾಗಿದ್ದ ಅವರು ಪರಸ್ಪರ ಪ್ರೀತಿಸುತ್ತಿದ್ದರು.
ಅವರನ್ನು ನೇರ ಬಿಆರ್‌ಪಿಗೆ ಕರೆತಂದು, ಮದುವೆಯ ಬಗ್ಗೆ ಪ್ರಸ್ತಾಪ ಮಾಡಿದನು. ನಾನು ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ ಕೃಷ್ಣಪ್ಪನವರಿಗೆ ಸುದ್ದಿ ಮುಟ್ಟಿಸಿ, ಮದುವೆಯ ಏರ್ಪಾಡು ಮಾಡಿದೆ. ಹುಡುಗಿ ಒಕ್ಕಲಿಗ ಜಾತಿ, ಹುಡುಗ ಬ್ರಾಹ್ಮಣನಾಗಿದ್ದ. ಸಹೋದ್ಯೋಗಿಗಳ ಪ್ರೀತಿಯ ಮದುವೆ ಮಾಡಿದ ಪ್ರೊ. ಜಿ.ಬಿ. ಶಿವರಾಜು ನಂತರ ದಿನಗಳಲ್ಲಿ ಗೌಡ ಜಾತಿಗೆ ಸೇರಿದ ಸಂಬಂಧಿಕರಿಂದ ಅನೇಕ ರೀತಿಯ ಕಿರುಕುಳಕ್ಕೂ ಒಳಗಾಗಬೇಕಾಯಿತು. ಆದರೆ ಈ ದಂಪತಿಗಳು ಶಿವರಾಜು ಪರ ಇರಬೇಕಾದವರು ನಂತರದ ದಿನಗಳಲ್ಲಿ ಇವರುಗಳಿಂದಲೇ ಕಿರುಕುಳ ಅನುಭವಿಸುವಂತೆ ಆದುದು ವಿಪರ್ಯಾಸವೇ ಸರಿ. ಮಾಡಿದ ಉಪಕಾರ ಸ್ಮರಣೆ ನಮ್ಮ ವ್ಯಕ್ತಿತ್ವದಲ್ಲಿ ಇರದಿದ್ದರೆ, ಮನುಷ್ಯನಿಂದ ಮತ್ತಿನ್ನೇನನ್ನು ಮಾಡಲು ಸಾಧ್ಯ?
ಈ ಸರಣಿಯಲ್ಲಿ ಇಲ್ಲಿಯೇ ಇನ್ನೊಬ್ಬನ ಕಥೆ ಹೇಳಿ ಮುಗಿಸುವೆ. ಬಳ್ಳಾರಿ ಮೂಲದ ಒಬ್ಬ ಡಾಕ್ಟರ್ ಮತ್ತು ಅವರ ಕೈಕೆಳಗೆ ಇದ್ದ ನರ್ಸ್ ಇಬ್ಬರೂ ಪ್ರೀತಿಸಿದ್ದು, ಮದುವೆಯಾಗುವ ತಯಾರಿಯಲ್ಲಿದ್ದರು. ಶಿವಮೊಗ್ಗದ ಕಡೆಯ ಗೆಳೆಯರೊಬ್ಬರ ಮೂಲಕ ನನ್ನಲ್ಲಿಗೆ ಬಂದರು. ಇಬ್ಬರೂ ಮದುವೆಗೆ ಅರ್ಹ ವಯಸ್ಸಿನವರಾಗಿದ್ದು, ಬೇರೆ ಬೇರೆ ಜಾತಿಯವರಾದ ಕಾರಣ, ಹುಡುಗಿಗೆ ನನ್ನದೇ ಮನೆ ವಿಳಾಸಕೊಟ್ಟು ಮದುವೆ ಮಾಡಿಸಿ ಕಳಿಸಿಕೊಟ್ಟೆವು. ನಾನಾಗ ಪ್ರೊಬೆಷನರಿ ತಹಸೀಲ್ದಾರ್‌ನಾಗಿ ತರೀಕೆರೆಯಲ್ಲಿದ್ದೆ. ಅಲ್ಲಿನ ಸಬ್ ರಿಜಿಸ್ಟ್ರಾರ್ ಚಳಗೇರಿ ಎನ್ನುವವರ ಜೊತೆ ಮಾತಾಡಿ ರಿಜಿಸ್ಟ್ರೇಷನ್ ಮುಗಿಸಿ ಕಳಿಸಿದೆ.
ಇದೆಲ್ಲ ಆಗಿ ಒಂದು ವಾರದಲ್ಲಿ ಹುಡುಗನ ಕಡೆಯ ನಿವೃತ್ತ ಸೇನಾ ಅಧಿಕಾರಿ ಬಂದು ಗಾಯತ್ರಿಯೊಬ್ಬಳೇ ಮನೆಯಲ್ಲಿದ್ದಾಗ ನನ್ನ ಬಗ್ಗೆ ಆಕ್ಷೇಪಿಸಿ ನಾನು ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ಸಂಬಂಧಿ, ನಿನ್ನ ಗಂಡನ ಕೆಲಸ ಕೂಡ ಕಳೆದುಕೊಳ್ಳುವಂತೆ ಮಾಡುತ್ತೇನೆ’ ಎಂದೆಲ್ಲ ಕೂಗಾಡಿ ಹೋಗಿದ್ದ. ನಾನು ತರೀಕೆರೆಯಿಂದ ಬಂದಾಕ್ಷಣ ಇವಳು ಆತಂಕದಿAದ `ನಾವೇನೋ ಮದುವೆಯಾಗಿದ್ದೇವೆ. ಬೇರೆಯವರ ಮದುವೆ ಮಾಡಲು ಹೋಗಿ ಯಾಕೆ ತೊಂದರೆಗೊಳಗಾಗಬೇಕೆಂದು’ ಅಲವತ್ತುಕೊಂಡಳು.
ನಾನು ಈ ರೀತಿ ಮದುವೆಗಳ ಬಗ್ಗೆ ಖಚಿತ ತಿಳುವಳಿಕೆಯುಳ್ಳವನಾಗಿದ್ದು, ಈ ಬಗ್ಗೆ ರಾಜ್ಯದಲ್ಲಿ ನಡೆದಿದ್ದ ಶಿವರಾಮ ಕಾರಂತ, ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ, ಕೆ. ರಾಮದಾಸ್, ಕೃಷ್ಣಪ್ಪ, ಪ್ರೊ. ಎಂ. ನಂಜುಂಡಸ್ವಾಮಿ, ಪ್ರೊ. ರವಿವರ್ಮಕುಮಾರ್, ಹೀಗೆ ಮದುವೆಯಾದವರ ಬಗ್ಗೆ ಸಾಲು ಸಾಲು ಹೆಸರುಗಳನ್ನು ತಿಳಿಸಿ ಗಾಯತ್ರಿಗೆ ಸಮಾಧಾನ ಮಾಡುತ್ತಿದ್ದೆ.
ನಾವು ಮದುವೆಯಾಗಿ ಆರು ತಿಂಗಳು ಆಗಿರಲಿಲ್ಲ, ನಮ್ಮ ವಿದ್ಯಾರ್ಥಿಯೊಬ್ಬರ ಅಕ್ಕ ಪ್ಲಾರಿ ಬಿಆರ್‌ಪಿ ಹತ್ತಿರವಿರುವ ಜಂಕ್ಷನ್‌ನಿಂದ ಭದ್ರಾವತಿಗೆ ಸ್ಟೆಫೆಂಡಿಯರಿ ಗ್ರಾಜ್ಯುಯೇಟ್ ಸ್ಕೀಂನಲ್ಲಿ ತಾಲ್ಲೂಕು ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಹುಡುಗ ಸಿದ್ದಯ್ಯ ಭದ್ರಾವತಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಆತ ಬಿಆರ್‌ಪಿ ಹತ್ತಿರದ ಶಾಂತಿನಗರದಿಂದ ದಿನವೂ ಬಸ್‌ನಲ್ಲಿ ಓಡಾಡುತ್ತಿರುವಾಗ ಪರಿಚಯವಾಗಿ ಪ್ರೀತಿಯ ಸೆಳೆತದಲ್ಲಿದ್ದರು. ಒಂದು ದಿನ ಬೆಳಗಿನ ಜಾವ ಹುಡುಗನ ಅಣ್ಣ ಬಂದು ಅವರಿಬ್ಬರ ಪ್ರೀತಿಗೆ ತಮ್ಮ ಒಪ್ಪಿಗೆ ಇದ್ದು ಹುಡುಗಿ ಕಡೆಯವರು ಒಪ್ಪುವುದಿಲ್ಲ, ಮದುವೆ ಮಾಡಿಸಬೇಕಾಗಿ ಕೋರಿದ.
ಹುಡುಗಿಯ ತಮ್ಮ ನನ್ನ ವಿಭಾಗದಲ್ಲಿಯೇ ನೇರ ವಿದ್ಯಾರ್ಥಿಯಾಗಿದ್ದ. ಈಗಾಗಲೇ ನಮ್ಮ ವಿಭಾಗದಲ್ಲಿ ಇವರು ಬರೀ ಇಂತದೇ ಕೆಲಸ ಮಾಡುತ್ತಿರುತ್ತಾನೆಂದು ಅಪಪ್ರಚಾರ ಬೇರೆ ಮಾಡುತ್ತಿದ್ದರು. ಆದರೂ ಎಲ್ಲ ಸೇರಿಕೊಂಡು ಇಂದಿರಾ ಕೃಷ್ಣಪ್ಪನವರಿಗೆ ತಿಳಿಸಿ ಭದ್ರಾವತಿಯಲ್ಲಿ ಮದುವೆ ನಡೆಸಲಾಯಿತು. ಮದುವೆಯಾದ ನಂತರ ಹೆಣ್ಣಿನ ಕಡೆಯವರು ನನ್ನನ್ನು ಹೊಡೆಯಲು ಜಂಕ್ಷನ್ ಎಂಬಲ್ಲಿ ಕಾಯುತ್ತಿದ್ದಾರೆ, ಇಲ್ಲಿ ಕಾಯುತ್ತಿದ್ದಾರೆ ಎಂದು ಪುಕಾರು ಹಬ್ಬಿಸುತ್ತಿದ್ದರು. ಆದರೆ ದಿನಗಳೆದಂತೆ ಹುಡುಗ-ಹುಡುಗಿಯ ಮದುವೆಯನ್ನು ಈರ್ವರ ಕಡೆಯವರು ಒಪ್ಪಿ ನಂತರ ನಮ್ಮ ಕಡೆಗೆ ದೂರುವುದನ್ನು ನಿಲ್ಲಿಸಿದರು. ಈಗ ಇಬ್ಬರೂ ತಮ್ಮ ವೃತ್ತಿಯಲ್ಲಿ ಮುಂದುವರಿದು ಮಕ್ಕಳೊಂದಿಗೆ ಆರೋಗ್ಯಕರ ಜೀವನ ಸಾಗಿಸುತ್ತಿದ್ದಾರೆ.
ಹೀಗೆ ಶಿವಮೊಗ್ಗ, ಭದ್ರಾವತಿಯಲ್ಲಿ ಕೃಷ್ಣಪ್ಪನವರು ಪ್ರಾರಂಭಿಸಿದ ಒಲವಿನ ಸರಳ ಮದುವೆಗಳು ಸಾಲು ಸಾಲಾಗಿ ನಡೆಯುತ್ತಾ, ಡಿ.ಎಸ್.ಎಸ್. ಮತ್ತು ರೈತ ಸಂಘದ ಅನೇಕ ಕಾರ್ಯಕರ್ತರು ತಮ್ಮ ಕಾರ್ಯಸೂಚಿಯಲ್ಲಿ ಕಾರ್ಯಗತ ಮಾಡಬೇಕಾದ ಜವಾಬ್ದಾರಿ ಎಂಬಂತೆ ಸರಳ ಅಂತರ್‌ಜಾತಿ ಮದುವೆಗಳನ್ನು ನಡೆಸುವಂತಾಯಿತು. ಅದು ಇಂದಿಗೂ ಕರ್ನಾಟಕದಲ್ಲಿ ನಡೆದುಕೊಂಡು ಬರುತ್ತಿರುವುದು ಸಂತೋಷದ ಸಂಗತಿಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಹಾಸ್ಟೆಲ್ ಎಲ್ಲಾ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಮ್ಯಾಪ್ ಮಾಡಲು ಸೂಚನೆ : ಸಿಇಓ ಸುರೇಶ್ ಬಿ ಇಟ್ನಾಳ್
ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿನ ಎಲ್ಲಾ ಮೆಟ್ರಿಕ್ ಪೂರ್ವ ಹಾಸ್ಟೆಲ್ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಮ್ಯಾಪ್ ಮಾಡಬೇಕೆಂದು ಸಿಇಓ ಸುರೇಶ್ ಬಿ.ಇಟ್ನಾಳ್ ಸೂಚನೆ ನೀಡಿದರು.
ಅವರು (ನ 8) ರಂದು ಜಿಲ್ಲಾ ಪಂಚಾಯತ್ ನ ಎಸ್.ಎಸ್ ಮಲ್ಲಿಕಾರ್ಜುನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಾಸ್ಟೆಲ್ ವಾರ್ಡನ್‌ಗಳ ಪ್ರಗತಿ ಪರಿಶೀಲಿನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪರಿಶೀಲನೆ ಮಾಡಬೇಕು. ಹಾಗೂ ಬಿಇಓಗಳು ಸೋಮವಾರದಂದು ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಬಗೆಯ ವಿದ್ಯಾರ್ಥಿವೇತನಗಳ ಕುರಿತು ಮಾಹಿತಿ ನೀಡುವ ಆಂದೋಲನ ಕೈಗೊಳ್ಳಬೇಕು. ಸೌಲಭ್ಯಗಳು ಅರ್ಹ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಉಚಿತ ವಿದ್ಯಾರ್ಥಿವೇತನಗಳು ಸಿಗುವಂತಾಗಬೇಕು ಎಂದು ತಿಳಿಸಿದರು.
ಹಾಸ್ಟೆಲ್ ವಾರ್ಡನ್‌ಗಳು ಗುಣಮಟ್ಟದ ಆಹಾರ ನೀಡಬೇಕು. ಮತ್ತು ಹಾಸ್ಟೆಲ್ ವಾತಾವರಣವನ್ನು ಸ್ವಚ್ಛವಾಗಿ ಇರಿಸಿಕೊಳ್ಳಬೇಕು , ಒಂದು ವೇಳೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಮತ್ತು ಸ್ವಚ್ಚತೆಯಲ್ಲಿ ಲೋಪ ದೋಷ ಕಂಡುಬಂದಲ್ಲಿ ಸಂಬಂಧ ಪಟ್ಟವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣ ನಾಯಕ್ , ಸಿಪಿಓ ಮಲ್ಲನಾಯಕ್ ,ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್. ಕೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಅಲ್ಲಂ ಪ್ರಶಾಂತ ಅಂಗಲಾಚಿ ಬೇಡಿದ್ರೂ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರಾಕರಿಸಿದ ಭದ್ರತಾ ಸಿಬ್ಬಂದಿ
ಸುದ್ದಿದಿನ,ಬಳ್ಳಾರಿ:ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಹತ್ತಿರದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿ.ಎಂ ಸಿದ್ದರಾಮಯ್ಯ ಅವರ ಉಪಚುನಾವಣೆ ಅಂಗವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದ ಮುಂಚೆಯೇ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತಗೆ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರಾಕರಣೆ ಮಾಡಿದ ಕೈಗಾರಿಕಾ ಭದ್ರತಾ ಸಿಬ್ಬಂದಿಗಳು ಇಲ್ಲ, ಈ ಸಮಯದಲ್ಲಿ ಅಲ್ಲಂ ಪ್ರಶಾಂತ ಇಲ್ಲ ನಾನು ಕಾಂಗ್ರೆಸ್ ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷ, ಭದ್ರತಾ ಸಿಬ್ಬಂದಿಗಳಿಗೆ ವಿಮಾನ ನಿಲ್ದಾಣದಲ್ಲಿ ಅಂಗಲಾಚಿ ಬೇಡಿದರೂ ನಿರಾಕರಿಸಿದರು.
ಅಲ್ಲಂ ಪ್ರಶಾಂತ ಇಲ್ಲ ಸರ್ ನಾನು ಎಸ್.ಪಿ ಗೆ ಹೇಳುತ್ತೇವೆ, ಸಿಬ್ಬಂದಿ ಕೇಳಿ ಎಂದರು. ನಂತರ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಲ್ಲಂ ಪ್ರಶಾಂತ ಸರ್ ಹೇಳಿ ನಿಮ್ಮ ಸಿಬ್ಬಂದಿ ಕೇಳ್ತಾ ಇಲ್ಲ ಎಂದ ಕೂಡಲೇ, ಕೈ ಮಾಡಿದ ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ನಂದರೆಡ್ಡಿ ಅವರು ಹೇಳಿದ ಕೂಡಲೇ ವಿಮಾನ ನಿಲ್ದಾಣ ಪ್ರವೇಶ ಮಾಡಿದರು.
ಆದರೆ ಪ್ರಶಾಂತ ಪ್ರವೇಶ ದ್ವಾರದ ಮುಂದೆ ಕೇಳಿಕೊಂಡಾಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ನಂದರೆಡ್ಡಿ, ಸೈಬರ್ ಕ್ರೈಮ್ ಸಿಪಿಐ ಠಾಧೋಡ್ ಜಿಲ್ಲಾ ಅದ್ಯಕ್ಷ ಅಲ್ಲಂ ಪ್ರಶಾಂತ ಮುಂದೆ ನೋಡಿಕೊಂಡು ಹಾದು ಹೋದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಮಾಜ ಕಲ್ಯಾಣ ಇಲಾಖೆ ಕಚೇರಿ ಸ್ಥಳಾಂತರ
ಸುದ್ದಿದಿನ,ದಾವಣಗೆರೆ:ಎಂ.ಸಿ.ಸಿ. ಬ್ಲಾಕ್‍ನಲ್ಲಿ ಬಾಡಿಗೆ ಕಟ್ಟಡದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯನ್ನು #1374/19, ಎರಡನೇ ಮಹಡಿ, ಸರೂರ್ ಆರ್ಕೆಡ್ ಯು.ಬಿ.ಡಿ.ಟಿ ಇಂಜಿನಿಯರಿಂಗ್ ಲೇಡಿಸ್ ಹಾಸ್ಟೆಲ್ ಎದುರು, ನೂತನ ಕಾಲೇಜು ರಸ್ತೆ ದಾವಣಗೆರೆ, ಇಲ್ಲಿಗೆ ನವಂಬರ್ 11 ರಿಂದ ಸ್ಥಳಾಂತರಿಸಲಾಗುವುದು ಎಂದು ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾ ದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
-
ದಿನದ ಸುದ್ದಿ7 days ago
ಚನ್ನಗಿರಿ | ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ; ಬಹುಮಾನ ವಿತರಣೆ
-
ದಿನದ ಸುದ್ದಿ6 days ago
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
-
ದಿನದ ಸುದ್ದಿ5 days ago
SC-ST | ರೈತರಿಗೆ ಪಶುಸಂಗೋಪನಾ ಚಟಿವಟಿಕೆಗಳ ತರಬೇತಿ
-
ದಿನದ ಸುದ್ದಿ5 days ago
ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಕರ್ನಾಟಕ ಜಾನಪದ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರಕಟ
-
ದಿನದ ಸುದ್ದಿ4 days ago
ಹಿ.ಚಿ ಸಂಭ್ರಮದಲ್ಲಿ ನೆಲಮೂಲ ಸಂಸ್ಕೃತಿಯ ಪ್ರತಿಬಿಂಬದ ಪ್ರತಿನಿಧಿಗಳಿಗೆ ಜನಪದ ರಾಜ್ಯೋತ್ಸವ ಪ್ರಶಸ್ತಿ : ಜನಪದ ಸಿರಿಯ ಜರಗನಹಳ್ಳಿ ಕಾಂತರಾಜು
-
ದಿನದ ಸುದ್ದಿ4 days ago
ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಜಗಳೂರು ಕಾಟಮ್ಮ ; ಸಾಧನೆಯ ಹೆಗ್ಗುರುತುಗಳು