Connect with us

ದಿನದ ಸುದ್ದಿ

ಕರ್ನಾಟಕ ಜಾನಪದ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರಕಟ

Published

on

ಸುದ್ದಿದಿನಡೆಸ್ಕ್: ಕರ್ನಾಟಕ ಜಾನಪದ ಅಕಾಡೆಮಿಯು 2023 ನೇ ಸಾಲಿನ ರಾಜ್ಯದ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ ನೀಡಿ ಸನ್ಮಾಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

1980 ರಿಂದ 2022 ರ ಸಾಲಿನ ವರೆಗೆ 1044 ಜಾನಪದ ಕಲಾವಿದರು, 111 ವಿದ್ವಾಂಸರು ಸೇರಿದಂತೆ ಅಕಾಡೆಮಿಯು ಒಟ್ಟಾರೆ 1155 ಗೌರವ ಪ್ರಶಸ್ತಿಗಳನ್ನು ನೀಡಿದೆ.

ಪ್ರಶಸ್ತಿ ಪುರಸ್ಕೃತರು

1980 ರಿಂದ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜಾನಪದ ಅಕಾಡೆಮಿಯ ಯೋಜನೆಗಳಲ್ಲಿ ಜಾನಪದ ಕಲೆಗಳಿಗೆ ತನ್ನನ್ನು ತಾನು ಅರ್ಪಿಸಿಕೊಂಡಿರುವ ಜಾನಪದ ಕಲಾವಿದರಿಗೆ, ಜಾನಪದ ಕ್ಷೇತ್ರ ತಜ್ಞರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸುವುದು ಬಹು ಮುಖ್ಯ ಭಾಗ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

2023 ನೇ ಸಾಲಿನಲ್ಲಿ ರಾಜ್ಯದ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರು ಜಾನಪದ ತಜ್ಞರಿಗೆ ತಜ್ಞ ಪ್ರಶಸ್ತಿ, 2022 ನೇ ಸಾಲಿನ 03 ಮಂದಿಗೆ ಪುಸ್ತಕ ಬಹುಮಾನ ಹಾಗೂ 2023 ನೇ ಸಾಲಿನ 02 ಮಂದಿಗೆ ಪುಸ್ತಕ ಬಹುಮಾನವನ್ನು ನೀಡಲಾಗುವುದು.

ಕಲಾವಿದರಿಗೆ ನೀಡುವ ಗೌರವ ಪ್ರಶಸ್ತಿಯ ಮೊತ್ತ ರೂ.25,000/- ಇಬ್ಬರು ಕ್ಷೇತ್ರ ತಜ್ಞರಿಗೆ ತಲಾ ರೂ.50,000/-ಗಳು ಹಾಗೂ ಪುಸ್ತಕ ಬಹುಮಾನಿತರಿಗೆ ತಲಾ ರೂ.25,000/- ಗಳ ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುವುದು.

ದಿನಾಂಕ:24-06-2024 ರಂದು ಬೆಂಗಳೂರಿನಲ್ಲಿ ನಡೆದ ಸರ್ವಸದಸ್ಯರ ಸಭೆಯ ತೀರ್ಮಾನದಂತೆ ಈ ಕೆಳಕಂಡ ಜಾನಪದ ಕಲಾವಿದರು ಮತ್ತು ತಜ್ಞರನ್ನು 2023 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬಾಹಿರವಾಗಿ ಮಕ್ಕಳ ಮಾರಾಟ ಕುರಿತು ಅರಿವು ಜಾಥ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ಮಕ್ಕಳ ಪಾಲನಾ ಕೇಂದ್ರಗಳು ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ನವಂಬರ್ 13 ರಂದು ನಗರದ ಜಯದೇವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬಾಹಿರವಾಗಿ ಮಕ್ಕಳ ಮಾರಾಟ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಜಾಥಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ್ ಮಾ.ಕರೆಣ್ಣವರ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಜಾಥವು ಜಯದೇವ ವೃತ್ತದಿಂದ ಪ್ರಾರಂಭಗೊಂಡು ಡಾ.ಬಿ.ಆರ್ ಅಂಬೆಡ್ಕರ್ ರಸ್ತೆ ಹಾಗೂ ವಿದ್ಯಾರ್ಥಿ ಭವನ ರಸ್ತೆ ಮೂಲಕ ಸಾಗಿ ಗುಂಡಿಮಹಾದೇವಪ್ಪ ವೃತ್ತದಲ್ಲಿ ಮುಕ್ತಾಯವಾಯಿತು.

ಜಾಥದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯ್ ಕುಮಾರ್ ಎಂ.ಸಂತೋಷ್, ಉಪವಿಭಾಗಧಿಕಾರಿ ಸಂತೋಷ್ ಪಾಟೀಲ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ರಾಜನಾಯ್ಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತ ಟಿ.ಎನ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ 1 ಮೊರಾರ್ಜಿ ದೇಸಾಯಿ ಶಾಲೆ ಹಾಗೂ 3 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ ಮಾಧ್ಯಮದಲ್ಲಿ ಭೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ನವಂಬರ್ 16 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದು.

ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕನ್ನಡ ಶಿಕ್ಷಕರು, ವಿದ್ಯಾರ್ಹತೆ ಬಿ.ಎ, ಬಿ.ಇಡಿ, ಹುದ್ದೆ ಸಂಖ್ಯೆ-4, ದಾವಣಗೆರೆಯ ವಿನೋಬನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಇಂಗ್ಲೀಷ್ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು ವಿದ್ಯಾರ್ಹತೆ ಬಿ.ಎ, ಬಿ.ಇಡಿ, ಹುದ್ದೆ ಸಂ: 4, ಕೆ.ಟಿ.ಜೆ ನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಗಣಿತ ಶಿಕ್ಷಕರು, ಸಾಮಾನ್ಯ ವಿಜ್ಞಾನ ಶಿಕ್ಷಕರು ವಿದ್ಯಾರ್ಹತೆ ಬಿ.ಎಸ್ಸಿ, ಬಿ.ಇಡಿ ಹುದ್ದೆ ಸಂ: 4, ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗೆ ಉರ್ದು ಶಿಕ್ಷಕರು ವಿದ್ಯಾರ್ಹತೆ ಬಿ. ಎ, ಬಿ.ಇಡಿ, ಹುದ್ದೆ ಸಂ:4 ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022 ನ್ನು ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು https://ssp.postmatric.karnataka.gov.in/ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:080-22261789 ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಜಗಳೂರು ದೂ.ಸಂ: 08192-277029 ನ್ನು ಸಂಪರ್ಕಿಸಬಹುದೆಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending