ದಿನದ ಸುದ್ದಿ
ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ಕಲಾ ಮಳಾವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿರುತ್ತದೆ. ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಿ.ಎಸ್.ಅಲಗೂರ ಅರ್ಕೇಡ್ , 2ನೇ ಮಹಡಿ, ಹದಡಿ ರಸ್ತೆ ದಾವಣಗೆರೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ: 9886791289, 9916013624 ಸಂಪರ್ಕಿಸಲು ನಿಗಮದ ಅಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮ ಸ್ಥಾಪನೆ ಹೊರಗುತ್ತಿಗೆ ನೌಕರರಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ


ದಿನದ ಸುದ್ದಿ
ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1.99 ಕೋಟಿ

ಸುದ್ದಿದಿನ,ದಾವಣಗೆರೆ:ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಚಮನ್‍ಸಾಬ್ ಅನುಮೋದನೆ ನೀಡಿದ್ದಾರೆ ಎಂದು ನಗರ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಮಂಗಳವಾರ (ಫೆ.18) ರಂದು ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಆಯವ್ಯಯ ಸಭೆಯಲ್ಲಿ ಬಜೆಟ್‍ಗೆ ಅನುಮೋದನೆ ನೀಡಲಾಯಿತು. ದೇವರಾಜ ಅರಸ್ ಬಡಾವಣೆ ಗ್ರಂಥಾಲಯದ ವಿಸ್ತರಣೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ನಿರ್ವಹಿಸಲು ಅನುಮೋದನೆ ನೀಡಿದರು. ಬಡಾವಣೆ ಪೊಲೀಸ್ ಠಾಣೆ ಎದುರಿಗಿರುವ ಸಿಲ್ವರ್ ಜ್ಯುಬಿಲಿ ಶಾಖಾ ಗ್ರಂಥಾಲಯಕ್ಕೆ ಓದುಗರ ಅನುಕೂಲಕ್ಕೆ ಬೋರ್ ವೆಲ್ ಕೊರೆಸಲು ಅನುಮೋದನೆ ನೀಡಿದ್ದಲ್ಲದೇ ಸ್ಥಳದಲ್ಲಿಯೇ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಶ್ರೀನಿವಾಸ ಎಸ್., ದ.ರಾ.ಮ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಗೋವಿಂದರಾಜು ಎಲ್, ರಾಜನಹಳ್ಳಿ ಸೀತಮ್ಮ ಬಾಲಕೀಯರ ಪ್ರೌಡಶಾಲೆಯ ಮುಖ್ಯೋಪಾದ್ಯಾಯರಾದ ಮಂಜಪ್ಪ ಎ.ಆರ್ ಹಾಗೂ ಗ್ರಂಥಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್ www.indiapostgdsonline.gov.in ನಲ್ಲಿ ಮಾರ್ಚ್ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ, ಇಂಗ್ಲೀಷ್ ಮತ್ತು ಗಣಿತದಲ್ಲಿ ಉತ್ತೀರ್ಣ ಅಂಕಗಳೊಂದಿಗೆ 10ನೇ ತರಗತಿಯಲ್ಲಿ, ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ 40 ವರ್ಷ ವಯೋಮಾನದವರಾಗಿರಬೇಕು.
ಹೆಚ್ಚಿನ ಮಾಹಿಗಾಗಿ ಸಮೀಪದ ಯಾವುದೇ ಅಂಚೆ ಕಚೇರಿಯನ್ನು ಅಥವಾ ಮೇಲೆ ತಿಳಿಸಿದ ವೆಬ್‍ಸೈಟ್ ಲಿಂಕ್‍ನ್ನು ಸಂಪರ್ಕಿಸಲು ಅಂಚೆ ಅಧೀಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
-
ದಿನದ ಸುದ್ದಿ3 days ago
ಕವಿತೆ | ನಾನೊಲಿದೆನಯ್ಯಾ
-
ದಿನದ ಸುದ್ದಿ5 days ago
ತುಂಬಿದ ಕೊಡ ತುಳುಕಿತಲೇ ಪರಾಕ್..!
-
ದಿನದ ಸುದ್ದಿ4 days ago
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ
-
ದಿನದ ಸುದ್ದಿ2 days ago
ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ
-
ದಿನದ ಸುದ್ದಿ2 days ago
ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ
-
ದಿನದ ಸುದ್ದಿ2 days ago
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
-
ದಿನದ ಸುದ್ದಿ15 hours ago
ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ