Connect with us

ದಿನದ ಸುದ್ದಿ

ರಾಜನಹಳ್ಳಿಯಲ್ಲಿ ಫೆಬ್ರವರಿ 8 ಮತ್ತು 9ರಂದು ವಾಲ್ಮೀಕಿ ಜಾತ್ರೆ, ಎಲ್ಲಾ ಸಿದ್ದತೆಯನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರುವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ ನಡೆಯಲಿರುವುದರಿಂದ ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಬಂದು ಹೋಗುತ್ತಾರೆ. ಆಗಮಿಸುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು ಮಂಗಳವಾರ ಶ್ರೀಮಠದಲ್ಲಿ ನಡೆದ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚು ಜನರು ಬರುವುದರಿಂದ ಜನರ ಆರೋಗ್ಯ ಮತ್ತು ನೈರ್ಮಲ್ಯತೆಯನ್ನು ಕಾಪಾಡುವುದು ಬಹಳ ಮುಖ್ಯವಾಗಿದೆ. ಆರೋಗ್ಯ ಇಲಾಖೆಯಿಂದ ಇಲ್ಲಿಗೆ ಮೊಬೈಲ್ ತಂಡವನ್ನು ನಿಯೋಜಿಸಲು ಮತ್ತು ಅಂಬುಲೆನ್ಸ್‍ನ್ನು ಇಲ್ಲಿಯೇ ಕಾಯ್ದಿರಿಸಲು ಸೂಚನೆ ನೀಡಿ ಅಗತ್ಯ ಔಷಧ ದಾಸ್ತಾನಿಡಲು ಸೂಚನೆ ನೀಡಿದರು.

ಕುಡಿಯುವ ನೀರು: ಹೆಚ್ಚು ಜನರು ಆಗಮಿಸುವುದರಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಹಾಗೂ ತಿಳಿಸಿ ನೈರ್ಮಲ್ಯತೆ ಕಾಪಾಡಲು ಮೊಬೈಲ್ ಶೌಚಾಲಯದ ಜೊತೆಗೆ ಇಲ್ಲಿಗೆ ಬೇಕಾದ ನೀರು ಪೂರೈಕೆ ಮಾಡಿಕೊಡಲು ಇಂಜಿನಿಯರಿಂಗ್ ವಿಭಾಗದವರಿಗೆ ತಿಳಿಸಿದರು.

ನಿರಂತರ ವಿದ್ಯುತ್ ಪೂರೈಕೆ: ಜಾತ್ರಾ ಸಂದರ್ಭದಲ್ಲಿ ಅನಿಯಮಿತ ವಿದ್ಯುತ್ ಪೂರೈಕೆಗಾಗಿ ಹೆಚ್ಚುವರಿಯಾಗಿ ಮೊಬೈಲ್ ಟಿಸಿಗಳ ದಾಸ್ತಾನಿಟ್ಟುಕೊಳ್ಳಬೇಕು. ವಿದ್ಯುತ್ ಪೂರೈಕೆಗೆ ಅಡಚಣೆಯಾಗಿರುವ ಗಿಡ, ಮರಗಳ ಕೊಂಬೆಗಳನ್ನು ಈಗಲೇ ತಂತಿ ಮೇಲೆ ಬೀಳದಂತೆ ನೋಡಿಕೊಳ್ಳಲು ನಿರಂತರ ವಿದ್ಯುತ್ ಪೂರೈಕೆಗಾಗಿ ಎಷ್ಟು ಕೆವಿ ವಿದ್ಯುತ್ ಪೂರೈಕೆಯ ಅವಶ್ಯಕತೆ ಇದೆ ಎಂದು ಅಂದಾಜಿಸಿಕೊಳ್ಳಲು ಮತ್ತು ಯಾವುದೇ ಅವಘಡಗಳು ಸಂಭವಿಸದಂತೆ ಎಲೆಕ್ಟ್ರಿಕಲ್ ಇನ್ಸ್‍ಪೆಕ್ಟರ್‍ಗಳಿಂದ ಜಾತ್ರಾ ಪೂರ್ವದಲ್ಲಿ ಪರೀಕ್ಷೆ ನಡೆಸಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಹಗಳ ನಿಲುಗಡೆ: ಜಾತ್ರೆಯ ವೇಳೆ ಬರುವ ವಾಹನಗಳನ್ನು ಎರಡು ಕಿ.ಮೀ ದೂರದಲ್ಲಿಯೇ ನಿಲುಗಡೆ ಮಾಡಲು ಸೂಚನೆ ನೀಡಲಾಗುತ್ತಿತ್ತು. ಮಠದ ಆವರಣಕ್ಕೆ ಬರಲು ಸಾಕಷ್ಟು ದೂರವಾಗುವುದರಿಂದ ಹತ್ತಿರದವರೆಗೆ ವಾಹನಗಳು ಬಂದು, ನಂತರ ಮುಂದೆ ಹೋಗಿ ನಿಲುಗಡೆ ಮಾಡಲು ಪರಿಶೀಲನೆ ನಡೆಸಲಾಗುತ್ತದೆ ಎಂದರು.

ಶಾಸಕರು ಹಾಗೂ ಜಾತ್ರಾ ಸಮಿತಿಯ ಅಧ್ಯಕ್ಷರಾದ ಬಿ.ದೇವೇಂದ್ರಪ್ಪ ಚಿಕ್ಕಮ್ಮನಹಟ್ಟಿ ರವರು ಮಾತನಾಡಿ ವಾಲ್ಮೀಕಿ ಜಾತ್ರೆಯ ಸಂಪೂರ್ಣ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿಕೊಡಲಿದೆ. ಜಾತ್ರೆ ಎಂಬುದು ಧಾರ್ಮಿಕ ಪ್ರಕ್ರಿಯೆಯಾಗಿದ್ದರೂ ಸಮುದಾಯದ ಜನರನ್ನು ಒಂದೆಡೆ ಸೇರಿಸಿ ಸಮಾಲೋಚನೆ, ಜಾಗೃತಿ ಮೂಡಿಸುವ, ಸಂಘಟನೆ ಮಾಡುವ ಉದ್ದೇಶವಿದೆ. ಭಕ್ತಾಧಿಗಳಿಗೆ ಎಲ್ಲಾ ರೀತಿ ಮೂಲಭೂತ ಸೌಕರ್ಯ ಕಲ್ಪಿಸಲು ಹಾಗೂ ಜಾತ್ರೆ ಸುಗಮವಾಗಿ ನಡೆಯಲು ಎಲ್ಲರ ಸಹಕಾರ ಪ್ರಮುಖವಾಗಿದೆ ಎಂದರು.

ನಾಡಿನಾದ್ಯಂತ ಇರುವ ಸಮುದಾಯದ ಜನರ ಸಂಘಟನೆಯೇ ಮಹರ್ಷಿ ವಾಲ್ಮೀಕಿ ಜಾತ್ರೆಯ ಮೂಲ ಉದ್ದೇಶ ಎಂದು ಸಾನಿಧ್ಯ ವಹಿಸಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ; ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಧರ್ಮದರ್ಶಿ ಶಾಂತಲಾ ರಾಜಣ್ಣ, ಮುಖಂಡರಾದ ಹೊದಿಗೆರೆ ರಮೇಶ್, ಸಂಚಾಲಕರಾದ ಶ್ರೀನಿವಾಸ ದಾಸಕರಿಯಪ್ಪ ಹಾಗೂ ಇನ್ನಿತರೆ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮ ಸ್ಥಾಪನೆ ಹೊರಗುತ್ತಿಗೆ ನೌಕರರಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ವಿವಿಧ ನಿಗಮ, ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು, ಕಾರ್ಮಿಕರಿಗೆ ವೇತನ ಪಾವತಿ ಮತ್ತು ಕಾನೂನಾತ್ಮಕವಾಗಿ ನೀಡಬೇಕಾದ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘ ನಿಗಮವನ್ನು ನೂತನವಾಗಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ.
ಈಗಾಗಲೇ ವಿವಿಧ ಸಂಸ್ಥೆಗಳ ಮೂಲಕ ಹೊರಗುತ್ತಿಗೆಯಡಿ ಟೆಂಡರ್ ಮೂಲಕ ಸೇವೆಯನ್ನು ಸಲ್ಲಿಸಲಾಗುತ್ತಿದ್ದು ಈ ಎಲ್ಲಾ ಹೊರಗುತ್ತಿಗೆ ನೌಕರರು ಇನ್ನು ಮುಂದೆ ದಾವಣಗೆರೆ ಜಿಲ್ಲಾ ಕಾರ್ಮಿಕರ ಕ್ಷೇಮಾಭಿವೃದ್ದಿ ಸಹಕಾರ ಸಂಘದಡಿಯಲ್ಲಿ ಕೆಲಸ ನಿರ್ವಹಿಸುವರು. ಈ ನೌಕರರಿಗೆ ಜಿಲ್ಲಾ ಸಂಘದಿಂದಲೇ ನೇರವಾಗಿ ವೇತನ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಹೊರಗುತ್ತಿಗೆ ನೌಕರರು ಈ ಸಹಕಾರ ಸಂಘದ ಸದಸ್ಯರಾಗಿರುವರು. ಆದ್ದರಿಂದ ಹೊರಗುತ್ತಿಗೆ ನೌಕರ ಸಿಬ್ಬಂದಿಯವರು ಸಂಘದ ಸದಸ್ಯತ್ವ ಪಡೆಯಬಹುದಾಗಿದ್ದು ತಮ್ಮ ಇಲಾಖೆ ಮುಖ್ಯಸ್ಥರುಗಳಿಂದ ಅರ್ಜಿ ಪಡೆದು ನೊಂದಣಿ ಮಾಡಿಕೊಳ್ಳಲು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
Continue Reading

ದಿನದ ಸುದ್ದಿ

ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1.99 ಕೋಟಿ

Published

on

ಸುದ್ದಿದಿನ,ದಾವಣಗೆರೆ:ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಚಮನ್‍ಸಾಬ್ ಅನುಮೋದನೆ ನೀಡಿದ್ದಾರೆ ಎಂದು ನಗರ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಮಂಗಳವಾರ (ಫೆ.18) ರಂದು ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಆಯವ್ಯಯ ಸಭೆಯಲ್ಲಿ ಬಜೆಟ್‍ಗೆ ಅನುಮೋದನೆ ನೀಡಲಾಯಿತು. ದೇವರಾಜ ಅರಸ್ ಬಡಾವಣೆ ಗ್ರಂಥಾಲಯದ ವಿಸ್ತರಣೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ನಿರ್ವಹಿಸಲು ಅನುಮೋದನೆ ನೀಡಿದರು. ಬಡಾವಣೆ ಪೊಲೀಸ್ ಠಾಣೆ ಎದುರಿಗಿರುವ ಸಿಲ್ವರ್ ಜ್ಯುಬಿಲಿ ಶಾಖಾ ಗ್ರಂಥಾಲಯಕ್ಕೆ ಓದುಗರ ಅನುಕೂಲಕ್ಕೆ ಬೋರ್ ವೆಲ್ ಕೊರೆಸಲು ಅನುಮೋದನೆ ನೀಡಿದ್ದಲ್ಲದೇ ಸ್ಥಳದಲ್ಲಿಯೇ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಶ್ರೀನಿವಾಸ ಎಸ್., ದ.ರಾ.ಮ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಗೋವಿಂದರಾಜು ಎಲ್, ರಾಜನಹಳ್ಳಿ ಸೀತಮ್ಮ ಬಾಲಕೀಯರ ಪ್ರೌಡಶಾಲೆಯ ಮುಖ್ಯೋಪಾದ್ಯಾಯರಾದ ಮಂಜಪ್ಪ ಎ.ಆರ್ ಹಾಗೂ ಗ್ರಂಥಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‍ಸೈಟ್ www.indiapostgdsonline.gov.in ನಲ್ಲಿ ಮಾರ್ಚ್ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ, ಇಂಗ್ಲೀಷ್ ಮತ್ತು ಗಣಿತದಲ್ಲಿ ಉತ್ತೀರ್ಣ ಅಂಕಗಳೊಂದಿಗೆ 10ನೇ ತರಗತಿಯಲ್ಲಿ, ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. 18 ರಿಂದ 40 ವರ್ಷ ವಯೋಮಾನದವರಾಗಿರಬೇಕು.

ಹೆಚ್ಚಿನ ಮಾಹಿಗಾಗಿ ಸಮೀಪದ ಯಾವುದೇ ಅಂಚೆ ಕಚೇರಿಯನ್ನು ಅಥವಾ ಮೇಲೆ ತಿಳಿಸಿದ ವೆಬ್‍ಸೈಟ್ ಲಿಂಕ್‍ನ್ನು ಸಂಪರ್ಕಿಸಲು ಅಂಚೆ ಅಧೀಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending