ದಿನದ ಸುದ್ದಿ
ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ : ಎಸ್ಪಿ ಉಮಾ ಪ್ರಶಾಂತ್

ಸುದ್ದಿದಿನ,ದಾವಣಗೆರೆ:ನಗರದ ಎಸ್.ಎಸ್.ಬಡಾವಣೆಯ ಎ ಬ್ಲಾಕಿನಲ್ಲಿ ಗಣರಾಜ್ಯೋತ್ಸವದಂದು ಎಸ್.ಎಸ್.ಬಡಾವಣೆ ಸ್ನೇಹಿತರ ಬಳಗದ ಸಂಘ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಉಮಾ ಪ್ರಶಾಂತ್ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಲಕ್ಷಾಂತರ ಹಣ ಖರ್ಚು ಮಾಡಿ ಈ ಬಡಾವಣೆ ಯಲ್ಲಿ ಮನೆಗಳನ್ನು ಕಟ್ಟಿಸಿದ್ದೀರಿ. ಆದರೆ ತಮ್ಮ ಮನೆಗಳ ರಕ್ಷಣೆ ಗೆ ಮಹತ್ವ ಕೊಡುತ್ತಿಲ್ಲ. ಇದರಿಂದ ಕಳ್ಳಕಾಕರಿಗೆ ಅನುಕೂಲವಾಗುತ್ತಿದೆ. ಸ್ನೇಹಮಯಿ ಪೋಲಿಸ್ ಇಲಾಖೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದೆ. ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯ. ಇತ್ತೀಚಿನ ದಿನಗಳಲ್ಲಿ ಆದ್ದರಿಂದ ತಮ್ಮ ಮನೆಗಳಿಗೆ ಸಿಸಿ ಟಿವಿಗಳನ್ನು ಅಳವಡಿಸಿಕೊಂಡಲ್ಲಿ ನಮ್ಮ ಇಲಾಖೆಗೆ ಸಹಕಾರಿಯಾಗುತ್ತದೆ. ನಮ್ಮ ಬಗ್ಗೆ ನಾವೂ ಸಹಾ ಎಚ್ಚರ ವಹಿಸುವುದು ಅವಶ್ಯಕವಾಗಿರುತ್ತದೆ ಎಂದರು.
ದಾವಣಗೆರೆ ತಾಲೂಕು ತಹಸಿಲ್ದಾರ್ ಡಾ.ಎಂ.ಬಿ.ಅಶ್ವಥ್ ಮಾತನಾಡಿ, ದಾವಣಗೆರೆಯ ವಿವಿಧ ಬಡಾವಣೆ ಸೇರಿದಂತೆ ವಿದ್ಯಾನಗರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಿನ ಕಳ್ಳತನ ಸುಲಿಗೆ ಹೆಚ್ಚಾಗಿದ್ದು ಪೋಲೀಸ್ ಇಲಾಖೆಯ ಸೂಚನೆಗಳನ್ನು ಪ್ರತಿಯೊಬ್ಬರೂ ಸಹಾ ಪಾಲಿಸಲು ಕರೆ ನೀಡಿದರು.
ಸಂಘದ ಅಧ್ಯಕ್ಷರಾದ ಎಂ.ಆಂಜನೇಯುಲು ಮಾತನಾಡಿ, ಸಂಘದ ಪದಾಧಿಕಾರಿಗಳು, ಬಡಾವಣೆ ಸ್ನೇಹಿತ ಬಂಧುಗಳು ತನು, ಮನ, ಧನ ನೀಡಿ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರಿಯಾಗಿದ್ದಾರೆ. ಇದೇ ರೀತಿ ಎಲ್ಲರೂ ಸಹಕಾರ ನೀಡಿದರೆ ನಾವು ದೊಡ್ಡ ಸಾಧನೆಯನ್ನೂ ಮಾಡಬಹುದು ಎಂದು ತಿಳಿಸಿದರು.
ಸಂಘದ ಕಾರ್ಯದರ್ಶಿ ಎಂ.ಎಸ್.ದೇವರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘವು ನಾಗರೀಕರಿಗೆ ಸ್ವಚ್ವತೆ, ಪರಿಸರ ರಕ್ಷಣೆ, ಮಹಿಳಾ ಮತ್ತು ಮಕ್ಕಳ ಕ್ಷೇಮಾಭಿವೃದ್ದಿ ಕಾರ್ಯಕ್ರಮ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಗಳನ್ನು ಸ್ಥಳೀಯರ ಸಹಕಾರದಿಂದ ನಡೆಸಲಾಗುವುದು ಸಂಘದ ಸದುದ್ದೇಶ ಹೊಂದಿದೆ. ಬಡಾವಣೆ ಯ ಎಲ್ಲಾ ಸ್ನೇಹಿತರು ಸಂಘದ ಸದಸ್ಯರಾಗಲು ಕೋರಿಕೊಂಡರು.
ಈ ಸಂದರ್ಭದಲ್ಲಿ ಸಾಧಕರಾದ ಪರಿಸರ ಪ್ರೇಮಿ ಪ್ರಸೂತಿ, ಸ್ತಿçÃರೋಗ ತಜ್ಞೆ ಡಾ.ಶಾಂತಾಭಟ್, ದಾವಣಗೆರೆ ಜಿಲ್ಲೆ ಕ್ಯಾನ್ಸರ್ ಅಭಿಯಾನದ ರಾಯಬಾರಿ ಆರ್.ಟಿ.ಅರುಣಕುಮಾರ್ ಗೆ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಘದ ಶಿವನಳ್ಳಿ ರಮೇಶ, ಸಂಘಟನಾ ಕಾರ್ಯದರ್ಶಿ ಟಿ.ನಾಗರಾಜ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು, ಇತರರು ಭಾಗವಹಿಸಿದ್ದರು.
ನಂತರದಲ್ಲಿ ಖ್ಯಾತ ಹಾಸ್ಯ ಭಾಷಣಕಾರರಾದ ಗಂಗಾವತಿ ಪ್ರಾಣೇಶ್, ನರಸಿಂಹ ಜೋಶಿ, ಬಸವರಾಜ್ ಮಾಮನಿ ಸಾಂಸ್ಕೃತಿಕ ಹಾಸ್ಯ ಸಂಜೆ ಕಾರ್ಯಕ್ರಮ ನಡೆಸಿಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ 25 ರಿಂದ 50ಕ್ಕೂ ಹೆಚ್ಚು ಟ್ಯಾಂಕರ್ ನೀರನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿದ್ದು, ಈ ಬಗ್ಗೆ ಜಿಲ್ಲಾ ಅಂರ್ತಜಲ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರಸ್ವತಿ ನಗರ ‘ಸಿ’ ಬ್ಲಾಕ್ನ ಎಲ್ಲಾ ನಿವಾಸಿಗಳು ಒತ್ತಾಯಿಸಿದ್ದಾರೆ.
ಸರಸ್ವತಿ ನಗರ ಬ್ಲಾಕ್ನ ನಿವಾಸಿ ತಮ್ಮ ಮನೆಯ ಬೋರ್ ವೆಲ್ ನಿಂದ ಒಂದೇ ಸಮನೆ ಸತತವಾಗಿ 4-5 ವರ್ಷಗಳಿಂದ ಸರತಿ ಸಾಲಿನಲ್ಲಿ ಟ್ಯಾಂಕರ್ಗಳ ಮೂಲಕ ದಿನಕ್ಕೆ 25 ರಿಂದ 50ಕ್ಕೂ ಹೆಚ್ಚು ಬಾರಿ ವಾಣಿಜ್ಯ ಉದ್ದೇಶಕ್ಕಾಗಿ ತಮ್ಮ ಪ್ರಾಧಿಕಾರದ ಅನುಮತಿ ಪಡೆಯದೆ ನೀರಿನ ಮಾರಾಟ ಮಾಡುತ್ತಿರುತ್ತಾರೆ. ಈ ವಿಷಯವಾಗಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಬೋರ್ ವೆಲ್ ಗಳಲ್ಲಿ ಕಛೇರಿಯ ಹಿರಿಯ ಭೂ ವಿಜ್ಞಾನಿಗಳು ಹಲವು ಬಾರಿ ನೋಟಿಸ್ ನೀಡಿದ್ದರೂ, ಅದನ್ನು ಲೆಕ್ಕಿಸದೆ ದಿನೇದಿನೇ ಹೆಚ್ಚುಹೆಚ್ಚು, ಟ್ಯಾಂಕರ್ ನೀರನ್ನು ಮಾರಾಟ ಮಾಡುತ್ತಿದ್ದಾರೆ.
ಈ ಕುರಿತು ಕಾಲೋನಿಯ ನಿವಾಸಿಗಳು ಪಾಲಿಕೆ ಸದಸ್ಯ ಕೆ.ಎಂ.ವೀರೇಶ್ ಜತೆಗೂಡಿ ಚಂದ್ರಶೇಖರಪ್ಪ ಅವರಲ್ಲಿ ಹಲವು ಬಾರಿ ವಿನಂತಿಸಿದರೂ, ಲೆಕ್ಕಿಸದೆ ತಮ್ಮ ನೀರಿನ ಮಾರಾಟದ ಅರ್ಭಟವನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಕಾಲೋನಿಯ ವಸತಿ ಪ್ರದೇಶದಿಂದ ಕೈಗಾರಿಕಾ ಪ್ರದೇಶವಾಗಿ ಮಾರ್ಪಟ್ಟಿದ್ದು, ಇಲ್ಲಿನ ಮಕ್ಕಳು ವೃದ್ಧರು ರಸ್ತೆಗಳಲ್ಲಿ ಓಡಾಡುವುದು ತುಂಬಾ ಕಷ್ಟವಾಗಿರುತ್ತದೆ, ಇದಲ್ಲದೇ ನಮ್ಮ ಕಾಲೋನಿಯ ಬೋರ್ ವೆಲ್ ಗಳಲ್ಲಿ ನೀರಿನ ಮಟ್ಟ ದಿನೇ-ದಿನೇ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಲಿದೆ ಎಂದು ಸ್ಥಳೀಯ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ರೀತಿ ದಾವಣಗೆರೆಯ ಬಹಳ ಕಾಲೋನಿಗಳಲ್ಲಿ ಮನೆ ಬೋರ್ ವೆಲ್ ಗಳಿಂದ ನೀರಿನ ಮಾರಾಟ ಹಲವು ವರ್ಷಗಳಿಂದ ನಡೆಯುತ್ತಿದೆ. ಆಯಾ ಕಾಲೋನಿಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಾಧಿಕಾರದ ಅನುಮತಿ ಪಡೆಯದೆ ವಾಣಿಜ್ಯ ಉದ್ದೇಶಕ್ಕಾಗಿ ನೀರು ಮಾರಾಟ ಮಾಡುತ್ತಿರುವ ಚಂದ್ರಶೇಖರಪ್ಪರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಬೇಕೆಂದು ಸರಸ್ವತಿ ನಗರ ‘ಸಿ’ ಬ್ಲಾಕಿನ ಎಲ್ಲಾ ನಿವಾಸಿಗಳು ಮನವಿ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆಯಾಗುತ್ತಿದ್ದಂತೆ, ಸಭೆ ಕರೆದು ತಕರಾರು ಪರಿಹರಿಸುವುದಾಗಿ, ತಿಳಿಸಿದರು.
ರಾಜ್ಯ ಸರ್ಕಾರ, ಪಂಚ ಖಾತ್ರಿ ಯೋಜನೆಗಳ ಅನುಷ್ಠಾನಕ್ಕಾಗಿ, ಸಮಿತಿ ರಚಿಸಿ, ರಾಜ್ಯದ ತೆರಿಗೆದಾರರ ಹಣವನ್ನು, ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ, ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಶಾಸಕರು, ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ, ಪ್ರತಿಭಟನೆ ನಡೆಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಮೇಲ್ವಿಚಾರಣಾ ಸಮಿತಿ ರದ್ದು ಪಡಿಸುವಂತೆ, ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ದೂರು ನೀಡಿದರು.
ಖಾತ್ರಿ ಯೋಜನೆಗಳ ಅನುಷ್ಟಾನಕ್ಕೆ ರಚಿಸಲಾಗಿರುವ, ಕಾಂಗ್ರೆಸ್ ಕಾರ್ಯಕರ್ತರ ಸಮಿತಿಗಳನ್ನು ರದ್ದು ಪಡಿಸಿ, ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವಂತೆ, ಪ್ರತಿಪಕ್ಷ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಸದಸ್ಯರು ವಿಧಾನಸಭೆಯಲ್ಲಿ ಧರಣಿ ಮುಂದುವರೆಸಿದ್ದರಿAದ, ಸದನ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿತ್ತು.
ಇಂಧನ ಬೆಲೆ ಏರಿಕೆ, ಸಿಬ್ಬಂದಿ ವೇತನ ಹಾಗೂ ವಾಹನ ಬಿಡಿ ಭಾಗಗಳ ಬೆಲೆ ಹೆಚ್ಚಳದಿಂದ ಉಂಟಾದ, ಆರ್ಥಿಕ ಹೊರೆ ತಗ್ಗಿಸಲು, ಕಳೆದ ಜನವರಿಯಲ್ಲಿ ಬಸ್ ಪ್ರಯಾಣ ದರವನ್ನು, ಶೇಕಡ 15ರಷ್ಟು ಹೆಚ್ಚಿಸಲಾಗಿದೆ ಎಂದು, ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ, ಬಿಜೆಪಿ ಶಾಸಕ ಕೇಶವಪ್ರಸಾದ್ ಅವರ ಪ್ರಶ್ನೆಗೆ ಸಚಿವರು, ಉತ್ತರಿಸಿದರು.
ರಾಜ್ಯ ಸಾರಿಗೆ ಸಂಸ್ಥೆ ಅಧೀನದ, ನಾಲ್ಕು ಸಾರಿಗೆ ನಿಗಮಗಳು, 5ಸಾವಿರದ 200 ಕೋಟಿ ರೂಪಾಯಿ ನಷ್ಟದಲ್ಲಿವೆ. ನಿಗಮಗಳ ಪುನಃಶ್ವೇತನಕ್ಕೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು, ಸಮರ್ಥಿಸಿಕೊಂಡರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ, ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.
ತರಬೇತಿ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿ ವಸತಿಯುತವಾಗಿದ್ದು, ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಗೆ ಸಂಪರ್ಕಿಸಬಹುದು ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ; ಇಲ್ಲಿವೆ ಪ್ರಮುಖಾಂಶಗಳು
-
ದಿನದ ಸುದ್ದಿ5 days ago
ಮುಂದಿನ ನಾಯಕರಾಗಿ ತಯಾರಾಗಿ : ಪ್ರೊ ಇಗ್ನಿಸಿಯಸ್
-
ದಿನದ ಸುದ್ದಿ3 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ3 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ2 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ17 hours ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ16 hours ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ16 hours ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’