ದಿನದ ಸುದ್ದಿ
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ : ಸಿಎಂ ಸಿದ್ದರಾಮಯ್ಯ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2024/06/siddaramaiah_Tweet_suddidina.jpg&description=ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ : ಸಿಎಂ ಸಿದ್ದರಾಮಯ್ಯ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2024/06/siddaramaiah_Tweet_suddidina.jpg&description=ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ : ಸಿಎಂ ಸಿದ್ದರಾಮಯ್ಯ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಬೆಂಗಳೂರು:ಕಾವೇರಿ ನಿವಾಸದಲ್ಲಿ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ನಿಯೋಗದವರು ಸೊಮವಾರ ನನ್ನನ್ನು ಭೇಟಿಯಾಗಿ, ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ, ಮನವಿಪತ್ರ ನೀಡಿದರು. ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯವಿರುವವುಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಸಿಎಂ ತಮ್ಮ ಸೋಶಿಲ್ ಮೇಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮ ಸರ್ಕಾರ. ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ ಎಂದು ಕಿಡಿಕಾರಿದ್ದಾರೆ.
ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೆ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು, ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ.
ಗೋರುಚ ಅವರ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪವು ಮೊದಲ ಪ್ರಜಾಪ್ರಭುತ್ವದ ವೇದಿಕೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ7 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ5 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

