ದಿನದ ಸುದ್ದಿ
ಜಾನಪದ ಆಚರಣೆಗಳಲ್ಲಿ ವೈಜ್ಞಾನಿಕತೆ ಅಡಗಿದೆ : ಪ್ರೊ. ಮೋನಿಕಾ ರಂಜನ್
ಸುದ್ದಿದಿನ,ಬಳ್ಳಾರಿ:ಜಾನಪದ ಆಚರಣೆಯಲ್ಲಿ ವೈಜ್ಞಾನಿಕ ಅಂಶಗಳು ಅಡಗಿದ್ದು, ಜನಪದ ಕಲೆಗಳು ಮನಸಿಗೆ ಮುದ ನೀಡುತ್ತವೆ ಎಂದು ಪ್ರಾಂಶುಪಾಲರಾದ ಪ್ರೊ.ಮೋನಿಕಾ ರಂಜನ್ ತಿಳಿಸಿದರು.
ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ’ ಜಾನಪದ ಉತ್ಸವ – 2025 ‘ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮಲ್ಲಿ ವೈವಿಧ್ಯಮಯವಾದ ಜನಪದ ಕಲೆಗಳಿವೆ. ಅವುಗಳನ್ನು ಉಳಿಸಿ ಬೆಳೆಸುವ ಕೆಲಸ ಎಲ್ಲರದಾಗಬೇಕೆಂದರು.ಜಾನಪದ ಸಾಹಿತ್ಯವು ಜನಸಾಮಾನ್ಯರ ನಿತ್ಯ ಬದುಕಿನ ದರ್ಶನವಾಗಿದೆ. ಅವರ ನೋವು, ನಲಿವು,ಜೀವನ ವಿಧಾನ,ಸಂಸ್ಕೃತಿ ಎಲ್ಲವೂ ಅದರಲ್ಲಿ ಮಿಳಿತವಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಸಾಹಿತಿ ಡಾ.ದಸ್ತಗೀರಸಾಬ್ ದಿನ್ನಿ ಆಧುನಿಕ ಜಗತ್ತಿನ ಭರಾಟೆಯಲ್ಲಿ ಜಾನಪದ ಸಾಹಿತ್ಯ, ಕಲೆಗಳು ಇಂದು ನಶಿಸುತ್ತಿವೆ.ಯುವ ಮನಸ್ಸುಗಳಲ್ಲಿ ಜಾನಪದ ಸಾಹಿತ್ಯದ ಬಗೆಗೆ ಅರಿವನ್ನು, ಕಲೆಗಳ ಬಗೆಗೆ ಪ್ರೀತಿಯನ್ನು ಹುಟ್ಟಿಸುವುದು. ಮುಂದಿನ ತಲೆಮಾರಿಗಾಗಿ ಇದನ್ನು ದಾಟಿಸುವುದ ಈ ಕಾರ್ಯಕ್ರಮದ ಮೂಲ ಉದ್ದೇವಾಗಿದೆ ಎಂದರು.
ವಿಶೇಷ ಉಪನ್ಯಾಸ ನೀಡಿದ ಸಹಾಯಕ ಪ್ರಾಧ್ಯಾಪಕ ರಾಮಸ್ವಾಮಿ, ಜಾನಪದ ಸಾಹಿತ್ಯವು ಮಾನವೀಯ ಮೌಲ್ಯ, ನೀತಿ, ಆದರ್ಶ ಮುಂತಾದ ಗುಣಗಳನ್ನು ಕಟ್ಟಿಕೊಡುತ್ತದೆ. ಬಹಳ ಮುಖ್ಯವಾಗಿ ಜಾನಪದ ಆಟಗಳಿಂದ ಜನರಿಗೆ ಸಂತೋಷವಾಗುವುದರೊಂದಿಗೆ ದೈಹಿಕ ಶ್ರಮ ಕೂಡ ಆಗುತ್ತಿತ್ತು ಎಂದರು.
ವೇದಿಕೆ ಮೇಲೆ ಹಿರಿಯ ಸಹ ಪ್ರಾಧ್ಯಾಪಕ, ಜಾನಪದ ಉತ್ಸವ ಸಮಿತಿಯ ಸಂಚಾಲಕರಾದ ಡಾ. ಸಿ. ಎಚ್. ಸೋಮನಾಥ್, ಅಧ್ಯಾಪಕರಾದ ಡಾ. ಮಂಜುನಾಥ್, ಜಯಶ್ರೀ,
ಡಾ.ಪಂಚಾಕ್ಷರಿ, ಪಂಪನಗೌಡ, ಡಾ. ಗುರುಬಸಪ್ಪ, ಗ್ರಂಥಪಾಲಕ ಪ್ರಶಾಂತ, ಡಾ. ಟಿ. ದುರುಗಪ್ಪ, ಡಾ. ಕನ್ಯಾಕುಮಾರಿ, ಡಾ. ಪಲ್ಲವಿ, ಅಧೀಕ್ಷಕ ಯುವರಾಜ ನಾಯ್ಕ ಇದ್ದರು.
ಮೆರವಣಿಗೆ
ಜಾನಪದ ಮೆರವಣಿಗೆ ಕಾಲೇಜಿನಿಂದ ಆರಂಭವಾಗಿ ಸಂಗಮ್ ಚೌಕಿನವರೆಗೆ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳ ವೀರಗಾಸೆ, ಲಂಬಾಣಿ ನೃತ್ಯ,ಡೊಳ್ಳು ಕುಣಿತ,ಕಂಸಾಳೆ, ಕೋಲಾಟ, ಬಯಲಾಟ, ಮಣಿಪುರಿ ನೃತ್ಯ, ಯಕ್ಷಗಾನ ಕಲಾತಂಡದವರು ಮೆರವಣಿಗೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು. ನಂತರ ವೇದಿಕೆಯಲ್ಲಿ ವೈವಿಧ್ಯಮಯವಾದ ಕಲಾ ಪ್ರದರ್ಶನಗಳು ಗಮನ ಸೆಳೆದವು.
ದೇಸಿ ಅಡುಗೆ
ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಸಪ್ಪ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ದೇಸಿ ಅಡುಗೆ ಅಧ್ಯಾಪಕರು, ಅತಿಥಿಗಳು, ವಿದ್ಯಾರ್ಥಿಗಳ ಪಾಲಕರು, ಭೋದಕರೇತ ಸಿಬ್ಬಂದಿಗಳ ಒಡಲು ತಣಿಸಿತು.
ವಿದ್ಯಾರ್ಥಿಗಳೊಂದಿಗೆ ಅಧ್ಯಾಪಕರು ಹೆಜ್ಜೆ ಹಾಕಿ ಸಂಭ್ರಮಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ3 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ
-
ದಿನದ ಸುದ್ದಿ3 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

