ದಿನದ ಸುದ್ದಿ
ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ
ಸುದ್ದಿದಿನಡೆಸ್ಕ್:ವಕ್ಫ್ ತಿದ್ದುಪಡಿ ಕಾಯ್ದೆ- 2025 ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪಟ್ಟಿಯ ಪ್ರಕಾರ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ.ವಿಶ್ವನಾಥನ್ ಅವರೊನ್ನೊಳಗೊಂಡ ನ್ಯಾಯಪೀಠ, ಇಂದು ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಿದ್ದಾರೆ ಎಂದು ಐಎಎನ್‌ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ. 1995ರ ವಕ್ಫ್ ಕಾಯ್ದೆಯಲ್ಲಿ ಇತ್ತೀಚೆಗೆ ಪರಿಚಯಿಸಲಾದ ತಿದ್ದುಪಡಿಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ಗೆ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ.
ಸಂಸತ್ತು ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯ್ದೆಯ ಕುರಿತು ಪಾಕಿಸ್ತಾನ ಮಾಡಿದ ಪ್ರೇರಿತ ಮತ್ತು ಆಧಾರರಹಿತ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ವಕ್ಫ್ ಮಸೂದೆಯ ಕುರಿತು ಪಾಕಿಸ್ತಾನ ಹೊರ ಹಾಕಿರುವ ಅಭಿಪ್ರಾಯಗಳ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಆಂತರಿಕ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಅರ್ಹತೆ ಇಲ್ಲ. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ಪಾಕಿಸ್ತಾನವು ಇತರರಿಗೆ ಉಪದೇಶಿಸುವ ಬದಲು ತನ್ನ ಪ್ರದೇಶದ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸುವುದು ಉತ್ತಮ ಎಂದು ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


