Connect with us

ದಿನದ ಸುದ್ದಿ

ಶಾಸಕರ ಹಿಡಿತ ತಪ್ಪಿದ ‘ಕೈ’ ಕಾರ್ಯಕರ್ತರಲ್ಲಿ ಶಂಕೆ

Published

on

    • ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸಮುದಾಯದ ಭದ್ರ ಕೋಟೆಯಲ್ಲಿ ಬಹುದಿನದ ಕನಸು ನನಸಾಗಲಿಲ್ಲ

ಸಮುದಾಯಕ್ಕೆ ಸರ್ಮಪಣೆ ‘ಕೈ’ ಸಾಧನಾ ಸಮಾವೇಶ

ಸುದ್ದಿದಿನಡೆಸ್ಕ್:ಎರಡು ವರ್ಷ ಕಳೆದರೂ ರೈತರ ಜೀವನಾಡಿಯಾದ ವಿಜಯನಗರ ಜಿಲ್ಲೆಯ ಸಕ್ಕರೆ ಕಾರ್ಖಾನೆ ನಿರ್ಮಾಣ ಆಗದೇ ಇರೋದು ಜೊತೆಗೆ ತುಂಗಭದ್ರಾ ಜಲಾಶಯದ ಹೂಳು ಎತ್ತದೆ ಇರೋದು ದೊಡ್ಡ ದುರಂತವಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಕ್ಕರೆ ಕಾರ್ಖಾನೆ ಆರಂಭವಾಗಿಲ್ಲ ಎಂದು ಸಾರ್ವಜನಿಕರ ವಲಯದಲ್ಲಿ ವಿಜಯನಗರ ಜಿಲ್ಲೆಗೆ ಬಹಳ‌ ಅನಾಯ್ಯವಾಗಿದೆ ಅನುದಾನ ಬಿಡುಗಡೆಯಲ್ಲಿ ಮತ್ತು ಸ್ವಪಕ್ಷದ ಮೇಲೆ ಅಸಮಾಧಾನ ವ್ಯಕ್ತ ಪಡಿಸಿದ ಶಾಸಕ ಗವಿಯಪ್ಪ
ಯಾವುದೇ ಅಭಿವೃದ್ಧಿ ಗಳನ್ನು ಕೈಗೊಳ್ಳದೇ, ಯೋಜನೆಗಳಿಗೆ ಶಿಲಾನ್ಯಾಸ ಮಾಡದೇ ವಿಜಯನಗರದ ಜಿಲ್ಲೆಯಲ್ಲಿ ಎರಡು ವರ್ಷದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ ಮಾಡುತ್ತಿದ್ದಾರೆ ಎನ್ನುವುದು ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.

ಸ್ವಪಕ್ಷದ ವಿರುದ್ಧವೇ ಮುನಿಸಿಕೊಂಡ ಶಾಸಕ ಗವಿಯಪ್ಪ ಅವರು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಭಾಗಿನ ಕಾರ್ಯಕ್ರಮದಲ್ಲಿ ಮುನಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗದೇ ವಾಪಾಸು ಹೋಗಿದ್ದರು. ಅವರ ಕಛೇರಿಯವರೆಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಕರೆಯಲು ಹೋದರೂ ಸಹ ಬರಲಿಲ್ಲ. ಇದರಿಂದ ಸಹ ಶಾಸಕರು ಸಿಎಂ ಮೇಲೆ ಮುನಿಸಿಕೊಂಡರು.

ಜಿಲ್ಲೆಯ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಪತ್ರಿಕಾಗೋಷ್ಟಿಯಲ್ಲಿ ಶಾಸಕ ಗವಿಯಪ್ಪ ವಿರುದ್ಧ ಇವರು ಕ್ಷೇತ್ರಕ್ಕೆ ‘ಶಾಪ’ ಎಂದು ಹೇಳಿ, ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಕಾರ್ಯಕರ್ತರ ನಡುವೆ ಅಸಮಾಧಾನಗಳ ನಡುವೆ ಸ್ವಪಕ್ಷಗಳಿಂದ ಶಿರಾಜ್ ಶೇಖ್ ಮತ್ತು ಮಾಜಿ ಶಾಸಕ ಭೀಮಾನಾಯ್ಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಇವರಿಬ್ಬರ ನಡುವಿನ ಜಗಳ ಸಮಾಧಾನ ಮಾಡಲು ಕೆ.ಪಿ.ಸಿ.ಸಿ ಮಧ್ಯೆ ಪ್ರವೇಶ ಮಾಡಿ ಸಂಧಾನ ಮಾಡುವಲ್ಲಿ ವಿಫಲವಾಯಿತು.
ಸಾಧನೆ ಮತ್ತು ಸಮರ್ಪಣೆ ಇವುಗಳಲ್ಲಿ ಯಾವುದನ್ನು ಮಾಡುತ್ತಾರೋ ಅವರಲ್ಲಿಯೇ ಗೊಂದಲ ಇದೆ. ಯಾವುದು ಸಮರ್ಪಣೆ ?, ಯಾವುದು ಸಾಧನೆ‌ ? ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಿ ಅವಳಿ ಜಿಲ್ಲೆಗೆ ಸಚಿವರನ್ನು ನೇಮಕ ಮಾಡದೇ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎನ್ನುವುದು ಸಾರ್ವಜನಿಕರಲ್ಲಿ, ರಾಜಕೀಯದಲ್ಲಿ ಗೊಂದಲ ನಿರ್ಮಾಣ ಮಾಡಿದೆ.

ಜಿಲ್ಲೆಯಲ್ಲಿ ಶಾಸಕಾಂಗ ಮತ್ತು ಆಡಳಿತದಲ್ಲಿ ಒಂದೇ ಸಮುದಾಯದವರು ಇರೋದರಿಂದ ಅಭಿವೃದ್ಧಿ ಆಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ಭದ್ರ ಕೋಟೆ ಎನ್ನುವ ಮಾಹಿತಿಯನ್ನು ಈ ಕ್ಷೇತ್ರದ ಜನರಿಗೆ ತಿಳಿಸಲು ಈ ಸಮರ್ಪಣೆ ಕಾರ್ಯಕ್ರಮ ಮಾಡುತ್ತಿದ್ದಾರೆ.

ದಿವಂಗತ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧೀ ಕಟ್ಟೆಯನ್ನು ನಾಲ್ಕು ದಿನಗಳಲ್ಲಿ ಅಭಿವೃದ್ಧಿ ಪಡಿಸಿರುವುದು ವಿಜಯನಗರ ಕ್ಷೇತ್ರದ ಜನರಿಗೆ ಹಾಗು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಗವಿಯಪ್ಪ ನೀಡುತ್ತಿರುವುದು ಬಹು ದೊಡ್ಡ ಕೊಡುಗೆ ಆಗಿದೆ.
ಇನ್ನು ಈ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಸಮರ್ಪಣೆ, ಸಾಧನ ಸಮಾವೇಶ ಮಾಡಿದರೆ ಶಾಸಕ ಗವಿಯಪ್ಪ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎನ್ನುವ ಹಿಂಬಾಲಕರ ನಿರೀಕ್ಷೆ ಸಹ ಇದೆ.

2025 ಮೇ 20 ರಂದು ನಡೆಯುವ ಜಿಲ್ಲೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ಸಾಧನ ಸಮಾವೇಶದಲ್ಲಿ ಎಷ್ಟೆಲ್ಲಾ ಗೊಂದಲದ ನಡುವೆ ಯಶಸ್ವಿಯಾಗುವುದೇ ಎಂದು ಸಾರ್ವಜನಿಕರ ವಲಯದಲ್ಲಿ ಚರ್ಚೆ ಆಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending