Connect with us

ದಿನದ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

Published

on

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸದನದಲ್ಲಿ ಈ ಅಧಿಸೂಚನೆಗಳನ್ನು ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಗಳನ್ನಾಗಿ ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ ನಗರದ ದೊಡ್ಡಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಈಗಾಗಲೇ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಅಧಿನಿಯಮ-2025’ ಜಾರಿ ಮಾಡಲಾಗುವುದು. ರಾಜ್ಯದಲ್ಲಿ ವರ್ಷಕ್ಕೆ ಸುಮಾರು 4 ಕೋಟಿ ಸಿನಿಮಾ ಟಿಕೆಟ್‌ಗಳು ಮಾರಾಟವಾಗುತ್ತವೆ.

ಈ ಟಿಕೆಟ್‌ಗಳ ಮೇಲೆ ಸೆಸ್ ವಿಧಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆಸಲಾಗುತ್ತಿದೆ. ಇದಕ್ಕಾಗಿ ‘ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024’ ಅನ್ನು ರಚಿಸಲಾಗಿದೆ. ಇದರೊಂದಿಗೆ ಮನೆಗೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ‘ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025’ ರಚಿಸಲಾಗಿದೆ. ಈ ಎಲ್ಲಾ ಅಧಿನಿಯಮಗಳ ನಿಯಾವಳಿಗಳನ್ನು ರೂಪಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಅಧಿನಿಯಮಗಳನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗೆ 5 ವರ್ಷದಲ್ಲಿ 3 ಲಕ್ಷ ಕೋಟಿ ಖರ್ಚು

ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 56 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದೆ. ಈ ಮೊತ್ತ 5 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ತಲುಪಬಹುದು. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟೊಂದು ಮೊತ್ತದ ಹಣವನ್ನು ನೇರವಾಗಿ ಜನರ ಕಲ್ಯಾಣಕ್ಕಾಗಿ ವ್ಯಯಿಸುತ್ತಿಲ್ಲ. ರಾಜ್ಯದಲ್ಲಿ 30 ರಿಂದ 40 ಲಕ್ಷ ಅಸಂಘಟಿತ ಕಾರ್ಮಿಕರು ಇದ್ದು, ಕಾರ್ಮಿಕ ಇಲಾಖೆ 91 ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿದೆ. ಅಸಂಘಟಿತ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಜಾರಿ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 25,45,607 ಕಾರ್ಮಿಕರು, ದಾವಣಗೆರೆ ಜಿಲ್ಲೆಯಲ್ಲಿ 89,493 ಕಾರ್ಮಿಕರು ನೊಂದಣಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ, ಚಾಲಕರು, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್, ನಗದು, ಡಿಪೋ ಗುಮಾಸ್ತರು ಸೇರಿದಂತೆ, ಮೋಟಾರು ಕ್ಷೇತ್ರದಲ್ಲಿ ದುಡಿಯತ್ತಿರುವ ಎಲ್ಲಾ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.

ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶಿತ ದೃಷ್ಠಿಯಿಂದ ‘ಆಶಾದೀಪ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯಡಿ ಉದ್ಯೋಗದಾತ ಮಾಲಿಕರು ಪಾವತಿಸಿದ ಇ.ಎಸ್.ಐ ಮತ್ತು ಇ.ಪಿ.ಎಫ್ ವಂತಿಕೆ ಮರುಪಾವತಿ, ತರಬೇತಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಶಿಷ್ಯವೇತನ ಮರುಪಾವತಿ, ಹೊಸ ನೇಮಕಾತಿಗೊಂಡವರಿಗೆ ಪಾವತಿಸಿದ ವೇತನದ ಎರಡು ವರ್ಷಗಳ ಅವಧಿಗೆ ಪ್ರತಿ ಉದ್ಯೋಗಿಯ ಮಾಸಿಕ ತಲಾ 6000 ರೂ. ವೇತನವನ್ನು ಉದ್ಯೋಗದಾತರಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.

ಸರ್ಕಾರದಿಂದ ಖಾಸಗಿ ಕಂಪನಿಗಳು ನೀಡುವ ಇ.ಪಿ.ಎಫ್‌ಗಳನ್ನು ಪ್ರತ್ಯೇಕವಾಗಿ ಬ್ಯಾಂಕ್ ಖಾತೆಗಳನ್ನು ತೆರದು ನಿರ್ವಹಣೆ ಮಾಡುವಂತೆ ನಿಯಮ ರೂಪಿಸಲಾಗಿದೆ. ಉದ್ಯೋಗಿ, ಕಂಪನಿ ತೊರೆದ ಸಂದರ್ಭದಲ್ಲಿ ಈ ಹಣ ನೇರವಾಗಿ ಉದ್ಯೋಗಿಯ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಜಿಲ್ಲೆಯಲ್ಲಿ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರತಿಸಿ ಸ್ಮಾರ್ಟ್ಕಾರ್ಡ್ ವಿತರಿಸಲಾಗುತ್ತಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಯೋಜನೆ ಮತ್ತು ಸೌಲಭ್ಯಗಳನ್ನು ಸಮಪರ್ಕವಾಗಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಬಡವರ, ಕಾರ್ಮಿಕ ವರ್ಗದವರ ಕಷ್ಟಗಳ ಬಗ್ಗೆ ಅರಿತಿರುವ ಸಚಿವ ಸಂತೋಷ್ ಲಾಡ್ ಅವರು, ಅನೇಕ ಜನಕಲ್ಯಾಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾರ್ಮಿಕ ಇಲಾಖೆ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ. ಈ ಹಿಂದೆ ಕಾರ್ಮಿಕ ಇಲಾಖೆಯಲ್ಲಿ ಮಾತ್ರ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ ಸಚಿವ ಲಾಡ್ ಅವರಿಂದ ಪ್ರಸ್ತುತ ಮೇ 01ರಂದು ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತದೆ ಎಂದರು.

ವಿವಿಧ ಸೌಲಭ್ಯಗಳ ವಿತರಣೆ

ಕಾರ್ಯಕ್ರಮದಲ್ಲಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತ ಮಹಿಳೆ ಜಗಳೂರಿನ ಗೌರಮ್ಮನವರಿಗೆ ರೂ.5 ಲಕ್ಷ ಪರಿಹಾರ ಧನ, ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಮಕ್ಕಳಿಗೆ ರೂ.10,000 ಶೈಕ್ಷಣಿಕ ಧನಸಹಾಯದ ಚೆಕ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.

ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ ಸ್ವಾಗತಿಸಿದರು. ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಚೇತನ್ ಹಾಗೂ ಸಂಡಿಗರ ಕಲಾತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಹೊನ್ನಾಳಿ ಶಾಸಕ ಡಿ.ಜಿ.ಶಾಂತನೌಡ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ.ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ದಿನದ ಸುದ್ದಿ

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.

ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.

‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.

ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

Published

on

ಗಿರೀಶ್ ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.

ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.

ಸಾಧಿಕ್ ಪೊಲೀಸರಿಗೆ ಸಾಥ್

ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.

“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

Published

on

~ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ ಕಲಿಕೆ ಎನ್ನುವುದು ಶಿಕ್ಷಣ ಕ್ಷೇತ್ರದಲ್ಲಿ ಬಳಸಲಾಗುವ ಒಂದು ವ್ಯವಸ್ಥಿತ ಮತ್ತು ಪ್ರಭಾವಶಾಲಿ ಬೋಧನಾ ವಿಧಾನವಾಗಿದ್ದು, ವಿಶೇಷವಾಗಿ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – NEP ಯಲ್ಲೂ ಇದರ ಪ್ರಸ್ತಾಪವಿದೆ ಎನ್ನಲಾಗಿದೆ.

ಪಂಚಪಾಡಿ ಎಂದರೇನು?

ಪಂಚಪಾಡಿ ಎಂದರೆ ಮಗುವಿನ ಸಮಗ್ರ ವಿಕಾಸಕ್ಕಾಗಿ ಐದು ಹಂತಗಳ ಕಲಿಕಾ ಪ್ರಕ್ರಿಯೆಯನ್ನು ಬಳಸಲಾಗುತ್ತದೆ.
​ಅಂದರೆ ಜ್ಞಾನರ್ಜನೆಗೆ ಐದು ಹೆಜ್ಜೆಗಳು ಅಥವಾ ಐದು ಹಂತಗಳು ಎಂದರ್ಥ.

ಜ್ಞಾನವನ್ನು ಕೇವಲ ನೆನಪಿನಲ್ಲಿಟ್ಟುಕೊಳ್ಳುವುದರ ಬದಲಾಗಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಈ ವಿಧಾನ ಸಹಾಯ ಮಾಡುತ್ತದೆ.

ಪಂಚಪಾಡಿ ಕಲಿಕೆಯ 5 ಹಂತಗಳು

ಅದಿತಿ ( ಪರಿಚಯ / ಗ್ರಹಿಕೆ): ​ಈ ಪದ್ಧತಿಯ ಮೊದಲ ಹಂತವೇ ಅದಿತಿ. ಇಲ್ಲಿ ವಿದ್ಯಾರ್ಥಿಗೆ ಹೊಸ ವಿಷಯವನ್ನು ಪರಿಚಯಿಸಲಾಗುತ್ತದೆ. ಶಿಕ್ಷಕರು ಕಥೆ,ಚಿತ್ರ ಉದಾಹರಣೆ ಅಥವಾ ಚಟುವಟಿಕೆಗಳ ಮೂಲಕ ಹೊಸ ವಿಷಯವನ್ನು ಮಗುವಿನ ಮುಂದೆ ಪ್ರಸ್ತುತಪಡಿಸುತ್ತಾರೆ. ಮಗು ವಿಷಯವನ್ನು ಕೇಳಿ, ನೋಡಿ ಗ್ರಹಿಸಲು ಆರಂಭಿಸುತ್ತದೆ.

ಬೋಧ : (ತಿಳುವಳಿಕೆ / ಅರ್ಥೈಸಿಕೊಳ್ಳುವಿಕೆ): ಪರಿಚಯಿಸಿಕೊಂಡ ವಿಷಯವನ್ನು ಆಳವಾಗಿ ಅರ್ಥಮಾಡಿಕೊಳ್ಳುವ ಹಂತವಿದು. ಮಗು ವಿಷಯದ ಹಿಂದಿರುವ ಪರಿಕಲ್ಪನೆ ಮತ್ತು ಕಾರಣಗಳನ್ನು ಅರ್ಥಮಾಡಿಕೊಳ್ಳುತ್ತದೆ. ಪ್ರಶ್ನೆಗಳನ್ನು ಕೇಳುವ ಮೂಲಕ ಮತ್ತು ಚರ್ಚೆಗಳಲ್ಲಿ ಭಾಗವಹಿಸುವ ಮೂಲಕ ತನ್ನ ಗೊಂದಲಗಳನ್ನು ನಿವಾರಿಸಿಕೊಳ್ಳುತ್ತದೆ.

ಅಭ್ಯಾಸ : (ರೂಢಿಸಿಕೊಳ್ಳುವುದು / ತರಬೇತಿ): ಕಲಿತ ವಿಷಯ ಮನಸ್ಸಿನಲ್ಲಿ ಗಟ್ಟಿಯಾಗಲು ನಿರಂತರ ಸ್ಮರಣೆ ಅಥವಾ ಅಭ್ಯಾಸದ ಅಗತ್ಯವಿದೆ. ಮಕ್ಕಳು ಕಲಿತ ವಿಷಯವನ್ನು ಬರವಣಿಗೆ, ಗಣಿತದ ಲೆಕ್ಕಗಳು, ಪ್ರಯೋಗಗಳು ಅಥವಾ ಪುನರಾವರ್ತನೆ (Revision) ಮೂಲಕ ಅಭ್ಯಾಸ ಮಾಡುತ್ತಾರೆ. ಇದು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಕೇವಲ ಪುಸ್ತಕದಲ್ಲಿ ಕಲಿತದ್ದನ್ನು ನಿಜ ಜೀವನದಲ್ಲಿ ಅಥವಾ ಹೊಸ ಸಂದರ್ಭಗಳಲ್ಲಿ ಬಳಸಿ ನೋಡುವುದೇ ಪ್ರಯೋಗ.

​ಉದಾಹರಣೆಗೆ, ಗಣಿತದಲ್ಲಿ ‘ಲಾಭ-ನಷ್ಟ’ ಕಲಿತ ನಂತರ ಮಗು ಮಾರುಕಟ್ಟೆಗೆ ಹೋಗಿ ವ್ಯವಹಾರ ಮಾಡುವುದು, ಅಥವಾ ವಿಜ್ಞಾನದ ತತ್ವವನ್ನು ಪ್ರಾಜೆಕ್ಟ್ ಮೂಲಕ ಮಾಡಿ ನೋಡುವುದು.

ಪ್ರಸಾರ : (ಹಂಚಿಕೊಳ್ಳುವುದು) ​ಕಲಿಕೆಯ ಅತ್ಯುನ್ನತ ಹಂತವೆಂದರೆ ತಾನು ಕಲಿತ ಜ್ಞಾನವನ್ನು ಇತರರಿಗೆ ಮನವರಿಕೆ ಮಾಡಿಕೊಡುವುದು. ​ವಿದ್ಯಾರ್ಥಿ ತನಗೆ ತಿಳಿದ ವಿಷಯವನ್ನು ತನ್ನ ಸಹಪಾಠಿಗಳಿಗೆ ವಿವರಿಸುವುದು, ಭಾಷಣ ಮಾಡುವುದು ಅಥವಾ ಗುಂಪು ಚರ್ಚೆಯಲ್ಲಿ ಹಂಚಿಕೊಳ್ಳುವುದು. “ಕಲಿಸುವುದರಿಂದ ಕಲಿಕೆ ಪೂರ್ಣವಾಗುತ್ತದೆ” ಎಂಬ ತತ್ವ ಇದರ ಹಿಂದಿದೆ.

ಪಂಚಪಾಡಿ ಕಲಿಕೆಯ ಮಹತ್ವ

​”ಶುಷ್ಕ ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನವೇ ಮೇಲು.”
​ಇದು ಮಕ್ಕಳಲ್ಲಿ ಸ್ವಯಂ ಕಲಿಕೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ.

​ಕಂಠಪಾಠ ಮಾಡುವ ಪದ್ಧತಿಯನ್ನು ತಪ್ಪಿಸಿ, ವಿಷಯದ ಆಳವಾದ ತಿಳುವಳಿಕೆಗೆ ನೆರವಾಗುತ್ತದೆ.
​ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸುತ್ತದೆ.

ಶಾಲೆಯ ವೈಶಿಷ್ಟ

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.

ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.

ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..

ಜೂನ್ 2ಕ್ಕೆ ಶಾಲಾ ಪ್ರವೇಶಕ್ಕೆ ಕೊನೆದಿನ

2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ.

ಶಾಲೆಯ ವೈಶಿಷ್ಟ

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.

ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.

ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.

ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..

2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ. ಕೇವಲ ಪುಸ್ತಕ ಆಧಾರಿತ ಆಧುನಿಕ ಪದ್ಧತಿಯ ಕಲಿಕೆ ಮಾತ್ರವಲ್ಲದೆ ಹಿಂದಿನ ಗುರುಕುಲ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡಿ ಮಕ್ಕಳಿಗೆ ಉತ್ತಮ ರೀತಿಯ ವಿದ್ಯಾಭ್ಯಾಸ ನೀಡುವ ಮಹಾದಾಸೆ ಇದೆ.”

|  ವೀಣಾ ಮಂಜುನಾಥ್ ಮುಖ್ಯಸ್ಥರು

ಪ್ರವೇಶ ಪ್ರಾರಂಭ : ಸದರಿ ಶಾಲೆಯಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಮೇ 17ರಿಂದ ಆರಂಭವಾದ ಪ್ರವೇಶ ಪ್ರಕ್ರಿಯೆ ಜೂನ್ 2ಕ್ಕೆ ಕೊನೆಗೂಳ್ಳುತ್ತದೆ. ಸಂಪರ್ಕಿಸಿ : Mandara School Tyavanige 919148141665

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending