Connect with us

ದಿನದ ಸುದ್ದಿ

ವಿದ್ಯುತ್ ಅವಘಡದಿಂದ ಸಾವು : ಕುಟುಂಬ ಸದಸ್ಯರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸಾಂತ್ವನ

Published

on

ಸುದ್ದಿದಿನ,ದಾವಣಗೆರೆ:ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದಲ್ಲಿ ಬುಧವಾರ ವಿದ್ಯುತ್ ಅವಘಡದಿಂದ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಅಣಬೇರು ಗ್ರಾಮದ ಇಬ್ಬರು ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಕೆ.ಎಸ್.ಬಸವಂತಪ್ಪ ದಾವಣಗೆರೆ ಬಾಪೂಜಿ ಆಸ್ಪತ್ರೆಯ ಶವಾಗಾರದ ಬಳಿ ತೆರಳಿ ಘಟನೆ ಬಗ್ಗೆ ಮೃತಪಟ್ಟ ಕುಟುಂಬದವರಿಂದ ಮಾಹಿತಿ ಪಡೆದರು.

ಬುಧವಾರ ಬೆಳಗ್ಗೆಯಿಂದ ಕ್ಷೇತ್ರದ ಪ್ರವಾಸದಲ್ಲಿದ್ದ ಶಾಸಕರು, ವಿದ್ಯುತ್ ಅವಘಡದಿಂದ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ದಾವಣಗೆರೆಗೆ ಧಾವಿಸಿದರು. ಬಾಪೂಜಿ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹಗಳನ್ನು ಇಟ್ಟಿದ್ದು, ಮೃತದೇಹಗಳ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಸಂಬಂಧಿಕರಿಗೆ ಹಸ್ತಾಂತರ ಮಾಡುವಂತೆ ಆಸ್ಪತ್ರೆಯ ಮುಖ್ಯಸ್ಥರಿಗೆ ಸೂಚಿಸಿದರು. ಬಳಿಕ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending