Connect with us

ದಿನದ ಸುದ್ದಿ

ಸಂಚಾರಿ ನಿಯಮಗಳ ಪಾಲನೆ ಕಡ್ಡಾಯ, ಏಕಮುಖ ರಸ್ತೆ ವಿರುದ್ದ ದಿಕ್ಕಿನಲ್ಲಿ ಸಂಚಾರ ಅಪಘಾತಗಳಿಗೆ ಆಹ್ವಾನ, ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ ಮಾಲಿಕರಿಗೆ ಭಾರಿ ದಂಡ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ರಸ್ತೆ ಅಪಘಾತಗಳು ಸಂಭವಿಸಬಾರದು, ಇದಕ್ಕಾಗಿ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆಕಸ್ಮಿಕ ಅಪಘಾತಗಳಿಂದ ಜೀವಹಾನಿ ಜೊತೆಗೆ ಜೀವನಪೂರ್ತಿ ಗಾಯಾಳುಗಳಾಗಿ ಕಾಲ ಕಳೆಯಬೇಕಾಗುತ್ತದೆ. ಆದರೆ ಕ್ಷಣ ಮಾತ್ರದ ಅಪಘಾತಗಳನ್ನು ತಪ್ಪಿಸಲು ಎಲ್ಲರೂ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರಸ್ವಾಮಿ ಜಿ.ಎಂ ತಿಳಿಸಿದ್ದಾರೆ.

ಅನೇಕ ರಸ್ತೆ ಅಪಘಾತಗಳು ಕುಟುಂಬದ ಆಸರೆಯೇ ಇಲ್ಲದಂತಹ ಸ್ಥಿತಿಗಳಿಗೆ ತಳ್ಳುತ್ತವೆ. ಎಲ್ಲರ ಜೀವಗಳು ಅಮೂಲ್ಯವಾದದ್ದು ಬೇರೊಬ್ಬರ ಜೀವ ಉಳಿಸಲು ವಾಹನ ಸಾವರ ಸೇರಿದಂತೆ ಪಾದಚಾರಿಗಳು ಸಹ ರಸ್ತೆ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕಾಗುತ್ತದೆ. ಆದರೆ ದಾವಣಗೆರೆ ನಗರದ ಅನೇಕ ವೃತ್ತ, ರಸ್ತೆಗಳಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ಸಿಗ್ನಲ್ ಜಂಪ್ ಮಾಡುವುದು, ಏಕಮುಖ ಸಂಚಾರದ ರಸ್ತೆಯಲ್ಲಿ ವಿರುದ್ದ ದಿಕ್ಕಿನಲ್ಲಿ ಸಂಚರಿಸುವುದು ಸರ್ವೆ ಸಾಮಾನ್ಯವಾಗಿದೆ. ಜೊತೆಗೆ ಶಾಲಾ, ಕಾಲೇಜು ವಿದ್ಯಾರ್ಥಿಗಳು ದ್ವಿ ಚಕ್ರದಲ್ಲಿ ನೊಂದಣಿ ಸಂಖ್ಯೆಯ ಫಲಕವನ್ನು ತೆಗೆದಿಟ್ಟು ವಾಹನ ಚಾಲನೆ ಮಾಡುವುದು, ತ್ರಿಬಲ್ ರೈಡಿಂಗ್, ಹೆಲ್ಮೆಟ್ ಧರಿಸದೇ ಇರುವುದನ್ನು ಗಮನಿಸಲಾಗಿದೆ. ಜೊತೆಗೆ ಅಪ್ರಾಪ್ತ ಮಕ್ಕಳು ವಾಹನವನ್ನು ಚಾಲನೆ ಮಾಡುವುದು ಕಂಡು ಬಂದಿರುತ್ತದೆ.

ಅಪ್ರಾಪ್ತರಿಂದ ವಾಹನ ಚಾಲನೆ

ದಾವಣಗೆರೆ ನಗರದಲ್ಲಿ ಆಗಸ್ಟ್ 8 ರಂದು ವಿವಿಧ ರಸ್ತೆಗಳಲ್ಲಿ ಅಪ್ರಾಪ್ತರು ತ್ರಿಬಲ್ ರೈಡಿಂಗ್‌ನಲ್ಲಿ ವಾಹನ ಚಾಲನೆ ಮಾಡುವುದನ್ನು ಜಿಲ್ಲಾಧಿಕಾರಿಗಳು ಗಮನಿಸಿ ಸ್ಥಳದಲ್ಲಿಯೇ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲು ಸಂಚಾರಿ ಪೊಲೀಸ್ ಠಾಣೆಗೆ ಸೂಚನೆ ನೀಡಿದರು.

ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡಿದಲ್ಲಿ ವಾಹನ ನೀಡಿದ ಮಾಲಿಕರಿಗೆ ರೂ.25000 ಗಳ ವರೆಗೆ ದಂಡದ ಜೊತೆಗೆ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಬಹುದು. ವಾಹನ ಮಾಲಿಕರೆ ತಮ್ಮ ಮಕ್ಕಳಿಗೆ ವಾಹನ ನೀಡುವುದಕ್ಕಿಂತ ಮೊದಲು ಯೋಚಿಸಿ.

ವಿರುದ್ದ ದಿಕ್ಕಿನಲ್ಲಿನ ಸಾಗುವ ಸವಾರರು

ವಿವಿಧ ವೃತ್ತಗಳಲ್ಲಿ ಸಿಗ್ನಲ್ ಅಳವಡಿಸಲಾಗಿದ್ದರೂ ಕೆಲವರು ಸಿಗ್ನಲ್ ಜಂಪ್ ಮಾಡುವುದು ಮತ್ತು ಸಿಗ್ನಲ್‌ನಲ್ಲಿ ವಿರುದ್ದ ದಿಕ್ಕಿನಲ್ಲಿ ವಾಹನ ಚಲಾಯಿಸಿಕೊಂಡು ಹೋಗುತ್ತಾರೆ. ಆದರೆ ಸಿಗ್ನಲ್ ಬಿದ್ದತಕ್ಷಣ ಸಂಚರಿಸುವ ವಾಹನ ಸವಾರರು ಹೆಚ್ಚಿನ ವೇಗದಲ್ಲಿಯೇ ಇರುತ್ತಾರೆ. ಇಂತಹ ಸಂದರ್ಭದಲ್ಲಿ ವಿರುದ್ದ ದಿಕ್ಕಿನಲ್ಲಿ ವಾಹನ ಸಂಚರಿಸಿದಲ್ಲಿ ವೇಗವಾಗಿ ಸಂಚರಿಸುವ ವಾಹನಗಳಿಗೆ ಅಡ್ಡಲಾಗಿ ಬರುವುದರಿಂದ ಅನೇಕ ಅಪಘಾತಗಳು ಸಂಭವಿಸಿ ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ. ಏಕಮುಖ ರಸ್ತೆಯಲ್ಲಿ ವಿರುದ್ದ ದಿಕ್ಕಿನಲ್ಲಿ ಸಂಚರಿಸಿದಲ್ಲಿ ಅಂತಹ ಸವಾರರಿಗೆ ಭಾರಿ ದಂಡ ಹಾಕಲಾಗುತ್ತದೆ ಎಂದು ಅನೇಕ ವಾಹನ ಸವಾರರನ್ನು ನಿಲ್ಲಿಸಿ ಜಿಲ್ಲಾಧಿಕಾರಿ ಅವರು ಶುಕ್ರವಾರ ವಿವಿಧ ವೃತ್ತಗಳಲ್ಲಿ ಮನವರಿಕೆ ಮಾಡಿಕೊಟ್ಟರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending