Connect with us

ದಿನದ ಸುದ್ದಿ

ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ

Published

on

~ಅನಿರೀಕ್ಷಿತ್ ನಾರಾಯಣ

ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು.

1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್ ಅನ್ನು ಬಳಸದಿದ್ದಾಗ ರೆಗ್ಯುಲೇಟರಿನಲ್ಲೇ ಆಫ್ ಮಾಡಿ ಗ್ಯಾಸ್ ಸರಬರಾಜನ್ನು ನಿಲ್ಲಿಸಬೇಕು. ಬೇಕೆಂದಾಗ ಮಾತ್ರ ಆನ್ ಮಾಡಿಕೊಳ್ಳಬೇಕು.

2. ನಿಮ್ಮ ಸ್ನಾನದ ಮನೆಯಲ್ಲಿ ಗ್ಯಾಸ್ ಗೀಸರ್ ಅನ್ನು ಅಳವಡಿಸಬೇಕೆಂದಿದ್ದರೆ ಅಲ್ಲಿ ಚೆನ್ನಾಗಿ ಗಾಳಿಯಾಡಲು ಅಗತ್ಯವಿದ್ದಷ್ಟು ಕಿಟಕಿ ಇರಲೇಬೇಕು. ಕೆಲ ಸ್ನಾನದ ಮನೆಗಳಲ್ಲಿ ಬರೀ ಬೆಳಕು ಬರಲಷ್ಟೇ ಗಾಜಿರುವ ಕಿಟಕಿ ಮಾಡಿರುತ್ತಾರೆ. ಅಂತಹ ಕಡೆಗಳಲ್ಲಿ ಗ್ಯಾಸ್ ಗೀಸರ್ ಅನ್ನು ಅಳವಡಿಸದಿರುವುದೇ ಉತ್ತಮ. ಸ್ನಾನದ ಮನೆ ಬಿಟ್ಟು ಹೊರಗೆ ಎಲ್ಲಾದರೂ ಗಾಳಿಯಾಡುವ ಕಡೆ ಗ್ಯಾಸ್ ಗೀಸರ್ ಅನ್ನು ಅಳವಡಿಸಿ ಅಲ್ಲಿಂದ ಬಿಸಿ ನೀರನ್ನು ಒಳಗೆ ತೆಗೆದುಕೊಳ್ಳುತ್ತೇನೆ ಎಂದರೆ ಕೊಂಚ inconvenience ಅನ್ನಿಸಿದರೂ ಹೆಚ್ಚು ಸುರಕ್ಷಿತ.

3. ಗ್ಯಾಸ್ ಗೀಜರ್ ಅನ್ನು ಸ್ನಾನದ ಮನೆಯೊಳಗೆ ಅಳವಡಿಸಿದರೆ, ಮೊದಲು ಬಾಗಿಲು ತೆರೆದಿಟ್ಟುಕೊಂಡೇ, ಬಿಸಿ ನೀರನ್ನು ಬಕೆಟ್ಟಿಗೆ ಬಿಟ್ಟುಕೊಂಡು ನಂತರ ಸ್ಥಾನಕ್ಕೆ ಹೋಗುವುದು ಒಳ್ಳೆಯದು. ಆಗ ಈ ಆತಂಕ ಇರುವುದಿಲ್ಲ.

4. ಈಗ ಮನೆ ಬಳಕೆಯ ಉಪಕರಣಗಳನ್ನು ಮಾರುವ ಅಂಗಡಿಗಳಲ್ಲಿ exhaust fan (ಗಾಳಿಯನ್ನು ಹೊರಹಾಕುವ fan) ದೊರಕುತ್ತದೆ. ಅದರ ಬೆಲೆ ಹೆಚ್ಚೆಂದರೆ ಒಂದು ಸಾವಿರ ರೂಪಾಯಿ ಅಷ್ಟೇ. ಬರೀ ಎರಡು ರೂಪಾಯಿಯ ಟ್ಯಾಗ್ ಬಳಸಿ ಅದನ್ನು ಎಲ್ಲಿ ಬೇಕೆಂದರಲ್ಲಿ (ಕಿಟಕಿಯ ಸರಳುಗಳಿಗೇ) ಎರಡೇ‌ ನಿಮಿಷದಲ್ಲಿ ನಾವೇ install ಮಾಡಿಕೊಳ್ಳಬಹುದು. ಗ್ಯಾಸ್ ಗೀಸರ್ ON ಮಾಡಿದಾಗೆಲ್ಲ, Exhaust Fanಅನ್ನೂ ಆನ್ ಮಾಡಿಕೊಂಡರೆ ಗ್ಯಾಸ್ ಗೀಸರ್ ಹೊರ ಸೂಸಬಹುದಾದ ಕಾರ್ಬನ್ ಮಾನಾಕ್ಸೈಡ್ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲ. ಏಕೆಂದರೆ exhaust fan ಸ್ನಾನದ ಕೊಠಡಿ ಒಳಗಿನ ಗಾಳಿಯನ್ನೆಲ್ಲ ಹೊರಹಾಕುತ್ತಲೇ ಇರುತ್ತದೆ. ಅದರ ಮೂಲಕ ಕಾರ್ಬನ್ ಮಾನಾಕ್ಸೈಡ್ ಕೂಡ ಹೊರಹೋಗುತ್ತದೆ. ಜೊತೆಗೆ ಕೊಠಡಿಯ ವಾಯುಭಾರ ಕುಸಿತವಾದಂತೆಲ್ಲ ಸ್ವಚ್ಛ ಗಾಳಿ ತನ್ನಂತಾನೇ ಒಳಬರುತ್ತದೆ.

5. Carbon monoxide detector: ಮೇಲೆ ಹೇಳಿದಂತೆ ಕಾರ್ಬನ್ ಮಾನಾಕ್ಸೈಡ್ ಸೋರಿಕೆಯಾಗುತ್ತಿದೆ ಅಂತ ಮನುಷ್ಯನ ಇಂದ್ರಿಯಗಳಿಗೆ ಗ್ರಹಿಸಲು ಸಾಧ್ಯವಿಲ್ಲ. ಆದರೆ ಇವುಗಳನ್ನು ಪತ್ತೆಹಚ್ಚಲೆಂದೆ ಕಾರ್ಬನ್ ಮಾನಾಕ್ಸೈಡ್ ಡಿಟೆಕ್ಟರ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಸಾಧ್ಯವಾದಲ್ಲಿ ಇವುಗಳನ್ನು ಅಳವಡಿಸಿಕೊಂಡರೆ ಗಾಳಿಯಲ್ಲಿ ಕಾರ್ಬನ್ ಮಾನಾಕ್ಸೈಡ್ ಪತ್ತೆಯಾದ ತಕ್ಷಣ ಇವುಗಳು alarm ಕೂಗಿ ಎಚ್ಚರಿಸುತ್ತವೆ. ಆಗ ತಕ್ಷಣ ನಾವು ಕ್ರಮ ಕೈಗೊಳ್ಳಬಹುದು.

6. ಈ ವಿಷಯಗಳನ್ನು ಮುಖ್ಯವಾಗಿ ಮನೆಯ ದೊಡ್ಡವರು ತಿಳಿದುಕೊಂಡಿರಬೇಕು. ಚಿಕ್ಕ ಮಕ್ಕಳು ಸ್ನಾನಕ್ಕೆ ಹೋಗುವಾಗ ಅವರ ಪಾಡಿಗೆ ಅವರನ್ನು ಬಿಡುವ ಬದಲಿಗೆ, ತಾವೇ ನೀರು ಬಿಟ್ಟುಕೊಟ್ಟು ನಂತರ ಅವರನ್ನು ಸ್ನಾನಕ್ಕೆ ಕಳಿಸಬೇಕು.

7. ಒಂದು ಮನೆಯಿಂದ ಇನ್ನೊಂದು ಮನೆಗೆ ಶಿಫ್ಟ್ ಆಗುವಾಗ ನೀವಾಗಿಯೇ ಗ್ಯಾಸ್ ಗೀಜರ್ ಅನ್ನು ಅಳವಡಿಸುವುದರ ಬದಲಾಗಿ ಯಾರಾದರೂ professional ವ್ಯಕ್ತಿಗಳನ್ನೇ ನೆಚ್ಚಿಕೊಂಡರೆ ಒಳ್ಳೆಯದು. ಆಗ ಅವರು ಗೀಸರನ್ನು ಅಳವಡಿಸಬಹುದಾದ ಜಾಗದ ವೆಂಟಿಲೇಶನ್ ಅನ್ನು ಗಮನಿಸಿ‌ ಅವರೇ ಸೂಕ್ತ ಸಲಹೆ ನೀಡುತ್ತಾರೆ.

8. Regular maintenance: ಗ್ಯಾಸ್ ಸಿಲೆಂಡರ್, ರೆಗ್ಯುಲೇಟರ್, ಗ್ಯಾಸ್ ಪೈಪ್ ಮತ್ತು ಗೀಸರನ್ನು ಆಗಾಗ ಗಮನಿಸುತ್ತ ಅಗತ್ಯ ಬಂದಲ್ಲಿ ಅವುಗಳನ್ನು ಬದಲಾಯಿಸಬೇಕು.

9. ಗ್ಯಾಸ್ ಗೀಸರ್ ಬಳಸುವಾಗ ಯಾವುದೇ ಅನುಮಾನ ಬಂದರೂ ಕೂಡಲೆ ಅದನ್ನು ಸರಿಪಡಿಸಿಕೊಳ್ಳುವುದು ಅಗತ್ಯ. ಆಗಲು ನಾವೇ ಏನಾದರೂ ಒಂದು ಮಾಡುವ ಬದಲು, ಅದನ್ನು ರಿಪೇರಿ ಮಾಡುವರಿಂದಲೇ ಸರಿ‌ಮಾಡಿಸುವುದು ಒಳ್ಳೆಯದು.

ಬರಹ ಕೃಪೆ : ಫೇಸ್ ಬುಕ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending