Connect with us

ದಿನದ ಸುದ್ದಿ

ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

Published

on

ಸುದ್ದಿದಿನ,ಬೆಂಗಳೂರು:ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ನಗರದ ಜಗಜೀವನರಾಮ್ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಮೆರವಣಿಗೆಯ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಘಟನೆಯ ನಂತರ, ನಿವಾಸಿಗಳು ಜೆಜೆ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ, ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಕುರಿತು ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್ ಅವರು, ಘಟನೆಗೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ಬಂಧಿಸಲಾಗಿದೆ. ಬಂಧಿತರು 15 ಮತ್ತು 16 ವರ್ಷದ ಅಪ್ರಾಪ್ತ ವಯಸ್ಸಿನವರಾಗಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಆರೋಪಿಗಳು ಅಪ್ರಾಪ್ತರಾಗಿರುವುದರಿಂದ, ಜುವೆನೈಲ್ ನಿಯಮಗಳ ಅಡಿಯಲ್ಲಿ ಪ್ರಕರಣವನ್ನು ನಿರ್ವಹಿಸಲಾಗುವುದು. ಯಾರು ಈ ಬಾಲಕರನ್ನು ಪ್ರಚೋದಿಸಿದ್ದಾರೆ ಅಥವಾ ಘಟನೆ ಹೇಗೆ ನಡೆಯಿತು ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇಂತಹ ಘಟನೆಗಳು ನಡೆದಾಗ ಬಿಜೆಪಿ ರಾಜಕೀಯ ಮಾಡಲು ಪ್ರಯತ್ನಿಸುತ್ತದೆ ಎಂಬ ಆರೋಪವನ್ನು ಮಾಡಿರುವ ಪರಮೇಶ್ವರ್, ಬಿಜೆಪಿ ಹೇಳಿಕೆ ನೀಡುವ ಮೊದಲೇ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ಕಾನೂನು ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತದೆ ಮತ್ತು ಯಾರ ಪ್ರಚೋದನೆಗೂ ಒಳಗಾಗುವುದಿಲ್ಲ ಎಂದು ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಜೆಜೆ ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.‌ ವಿಎಸ್ ಗಾರ್ಡನ್ ನಿವಾಸಿ ಶಶಿಕುಮಾರ್ ಎನ್ ಅವರ ದೂರಿನ ಆಧಾರದ ಮೇಲೆ, ಪೊಲೀಸರು ಭಾನುವಾರ ತಡರಾತ್ರಿ ಎಫ್ ಐಆರ್ ದಾಖಲಿಸಿದ್ದಾರೆ. ಶಶಿಕುಮಾರ್ ಪ್ರಕಾರ, ಭಕ್ತರು ಆ ಪ್ರದೇಶದಲ್ಲಿ ಮೆರವಣಿಗೆ ನಡೆಸುತ್ತಿದ್ದಾಗ ರಾತ್ರಿ 8.15 ರಿಂದ ರಾತ್ರಿ 9.00 ರ ನಡುವೆ ಈ ಘಟನೆ ನಡೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending