Connect with us

ದಿನದ ಸುದ್ದಿ

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಚುನಾವಣಾಧಿಕಾರಿ ಸಂತೋಷ್‌ ಕುಮಾರ್‌ ತಿಳಿಸಿದರು.

ಅವರು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಸಂಬಂಧ ಮಹಾನಗರ ಪಾಲಿಕೆ ಕಚೇರಿಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷಿಯಲ್ಲಿ ಮಾಧ್ಯಮದವರನ್ನು ಕುರಿತು ಮಾತನಾಡಿದರು.

ನಂ-107 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 1,13,399 ಪುರುಷರು , 1,17,690 ಮಹಿಳೆಯರು ಹಾಗೂ 43 ಇತರರು ಒಟ್ಟು 2,31,072 ಸಾಮಾನ್ಯ ಮತದಾರಿದ್ದಾರೆ, ಇವರಲ್ಲಿ 1,494-ಪುರುಷರು, 1,376-ಮಹಿಳೆಯರು ಒಟ್ಟು 2,870 ಯುವ ಮತದಾರರು, 1,375 ಪುರುಷರು , 1,137-ಮಹಿಳೆಯರು ಒಟ್ಟು 2,512 ವಿಕಲಚೇತನ (PWD) ಮತದಾರರು , 891 ಪುರುಷರು 1,083-ಮಹಿಳೆಯರು ಒಟ್ಟು 1974 ಮತದಾರರು 85+ ವರ್ಷ ಮೇಲ್ಪಟ್ಟವರು , 8 ಪುರುಷರು , 20-ಮಹಿಳೆಯರು ಒಟ್ಟು 28 ಮತದಾರರು 100+ ವರ್ಷ ಮೇಲ್ಪಟ್ಟವರು ಮತ್ತು 34-ಪುರುಷರು , 1–ಮಹಿಳೆಯರು ಒಟ್ಟು 35 ಸೇವಾ ಮತದಾರರು ಇದ್ದಾರೆ. ಎಲ್ಲರಿಗೂ ಮತದಾನದ ಹಕ್ಕನ್ನು ಚಲಾಯಿಸಲು ಅನುಕೂಲ ಮಾಡಿಕೊಡಲಾಗಿದೆ ಎಂದರು.

ಕ್ಷೇತ್ರದಲ್ಲಿ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ನಗರ ವ್ಯಾಪ್ತಿಯಲ್ಲಿ 234 ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ 50 ಮತಗಟ್ಟೆಗಳು ಸೇರಿವೆ. ಪ್ರತಿಯೊಂದು ಮತಗಟ್ಟೆಯಲ್ಲಿ ಕಾಯ್ದಿರಿಸಿದ ಕೊಠಡಿ, ಕುಡಿಯುವ ನೀರು, ರ‍್ಯಾಂಪ್ ವ್ಯವಸ್ಥೆ, ಶೌಚಾಲಯ, ನೆರಳು ಮತ್ತು ಕ್ಯೂ ಮ್ಯಾನೇಜ್‌ಮೆಂಟ್ ಫಿಡಿಂಗ್‌ ಕೊಠಡಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ 229 ಮಂದಿ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಅಂಚೆ ಪತ್ರದ ಮೂಲಕ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ತಿಳಿಸಿದರು.

ಪಾರದರ್ಶಕ ಮತದಾನಕ್ಕೆ ತಂತ್ರಜ್ಞಾನದ ಬಳಕೆ

ಚುನಾವಣಾ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಲು 284 ಮತಗಟ್ಟೆಗಳಲ್ಲೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಮತದಾನದ ದಿನದಂದು ನೇರ ಪ್ರಸಾರ ಇರಲಿದೆ. ಸ್ಟ್ರಾಂಗ್ ರೂಮ್‌ಗಳಲ್ಲಿ ಇವಿಎಂ, ಕಂಟ್ರೋಲ್ ಯೂನಿಟ್ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಕಮಿಷನಿಂಗ್ ಮಾಡಿ ಸಜ್ಜುಗೊಳಿಸಲಾಗಿದೆ. ತಾಂತ್ರಿಕ ತೊಂದರೆ ಎದುರಾದರೆ ತಕ್ಷಣ ಬದಲಿಸಲು ‘ರಿಸರ್ವ್ ಯಂತ್ರಗಳನ್ನು’ ಸೆಕ್ಟರ್ ಅಧಿಕಾರಿಗಳ ಬಳಿ ಇರಿಸಲಾಗಿದೆ ಎಂದರು.

ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಕಣ್ಗಾವಲು

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಭದ್ರತೆ ನಿಯೋಜಿಸಲಾಗಿದೆ. ಸುಮಾರು 1,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಇದರಲ್ಲಿ ಸಿಎಪಿಎಫ್ (CAPF), ಎಎಸ್ಐ, ಎಚ್‌ಸಿ ಮತ್ತು ಪಿಸಿ ಸಿಬ್ಬಂದಿಗಳು ಸೇರಿದ್ದಾರೆ.

ಸೂಕ್ಷ್ಮ ಮತಗಟ್ಟೆಗಳು: 76 ಮತಗಟ್ಟೆಗಳನ್ನು ‘ಸೂಕ್ಷ್ಮ’ (Critical) ಎಂದು ಗುರುತಿಸಲಾಗಿದ್ದು, ಅಲ್ಲಿ ಹೆಚ್ಚುವರಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಮುಂದಿನ 48 ಗಂಟೆಗಳ ಕಾಲ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಫ್ಲೈಯಿಂಗ್ ಸ್ಕ್ವಾಡ್ (SST), ಅಕೌಂಟಿಂಗ್ ಟೀಮ್ ಮತ್ತು ಸೆಕ್ಟರ್ ಅಧಿಕಾರಿಗಳು ಹಗಲಿರುಳು ಕಾರ್ಯನಿರ್ವಹಿಸಲಿದ್ದಾರೆ.

ಇವಿಎಂ ವಿವರ: BU: 568, CU: 284, VVPAT: 284. ಮೀಸಲು (Reserve): BU: 169, CU: 70, VVPAT: 100.

ಸಾರಿಗೆ ಮತ್ತು ವಿತರಣಾ ಕೇಂದ್ರ

ಮತದಾನದ ಸಾಮಗ್ರಿಗಳನ್ನು ವಿತರಿಸಲು ಮತ್ತು ಸ್ವೀಕರಿಸಲು ಡಿ.ಆರ್.ಆರ್ (DRR) ಸಂಸ್ಥೆಯ ಶಾಲೆಯನ್ನು ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರವನ್ನಾಗಿ ಮಾಡಲಾಗಿದೆ. ಮತದಾನದ ನಂತರ ಇವಿಎಂಗಳನ್ನು ಇದೇ ಕೇಂದ್ರದ ಸ್ಟ್ರಾಂಗ್ ರೂಮ್‌ನಲ್ಲಿ ಇರಿಸಲಾಗುವುದು. ಚುನಾವಣಾ ಸಿಬ್ಬಂದಿ ಮತ್ತು ಸಾಮಗ್ರಿಗಳ ಸಾಗಾಟಕ್ಕಾಗಿ 28 ಕೆಎಸ್ಆರ್‌ಟಿಸಿ ಬಸ್‌ಗಳು, 39 ಮಿನಿ ಬಸ್‌ಗಳು ಹಾಗೂ 5 ಜೀಪ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.

ಮೇ 4ರಂದು ಡಿ.ಆರ್.ಆರ್ ಶಾಲೆಯಲ್ಲಿಯೇ ಮತ ಎಣಿಕೆ ಕಾರ್ಯ ನಡೆಯಲಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡುತ್ತದೆ ಎಂದರು.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ: ಪೊಲೀಸರಿಂದ ಬಿಗಿ ಕ್ರಮ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತವಾಗಿ ನಡೆಸಲು ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ.

ಬಹಿರಂಗ ಪ್ರಚಾರಕ್ಕೆ ತೆರೆ: ಹೊರಗಿನವರಿಗೆ ನಿರ್ಬಂಧ

ಇಂದು ಸಂಜೆ 5:30ಕ್ಕೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಪ್ರಚಾರಕ್ಕಾಗಿ ಬಂದಿರುವ ಹೊರಗಿನ ವ್ಯಕ್ತಿಗಳು ತಕ್ಷಣವೇ ಕ್ಷೇತ್ರವನ್ನು ತೊರೆಯಬೇಕು. ಇದಕ್ಕಾಗಿ ಪೊಲೀಸರು ಹೋಟೆಲ್‌ಗಳು, ರೆಸಾರ್ಟ್‌ಗಳು, ಕಲ್ಯಾಣ ಮಂಟಪಗಳು ಮತ್ತು ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಲಿದ್ದಾರೆ, ಯಾವುದೇ ರಾಜಕೀಯ ಪಕ್ಷ ಅಥವಾ ಧಾರ್ಮಿಕ ಸಂಸ್ಥೆಗಳು ಮುಂದಿನ 48 ಗಂಟೆಗಳ ಕಾಲ ಮೆರವಣಿಗೆ ಅಥವಾ ಪ್ರತಿಭಟನೆ ನಡೆಸುವಂತಿಲ್ಲ.

ನೈತಿಕ ಸಂಹಿತೆ ಉಲ್ಲಂಘನೆ: ಕಟ್ಟುನಿಟ್ಟಿನ ನಿಗಾ

ಶಸ್ತ್ರಾಸ್ತ್ರ ನಿಷೇಧ: ಮಾರಕಾಸ್ತ್ರಗಳು, ಕತ್ತಿ, ಈಟಿ ಅಥವಾ ದೈಹಿಕ ಹಿಂಸೆಗೆ ಪ್ರಚೋದಿಸುವ ಯಾವುದೇ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ಚೆಕ್ ಪೋಸ್ಟ್ ತಪಾಸಣೆ: ನಗರದ ವಿವಿಧ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಚುರುಕುಗೊಳಿಸಲಾಗಿದ್ದು, ಈಗಾಗಲೇ 15.37 ಲಕ್ಷ ರೂಪಾಯಿ ನಗದು ಮತ್ತು 233.49 ಲೀಟರ್‌ ಅಂದರೆ ರೂ. 133849/- ಗಳಷ್ಟು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ತಂಡಗಳ ನಿಯೋಜನೆ: ಮತದಾರರಿಗೆ ಆಮಿಷ ಒಡ್ಡಲು ಕುಕ್ಕರ್, ಸೀರೆ ಮುಂತಾದ ವಸ್ತುಗಳನ್ನು ಹಂಚುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಫ್ಲೈಯಿಂಗ್ ಸ್ಕ್ವಾಡ್‌ಗಳು ತಕ್ಷಣವೇ ಕ್ರಮ ಕೈಗೊಳ್ಳುತ್ತಿವೆ. ಹಲವೆಡೆ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ ಎಂದರು.

ಸೋಷಿಯಲ್ ಮೀಡಿಯಾ ಮೇಲೆ ಹದ್ದಿನ ಕಣ್ಣು

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಐಡಿ ಸೃಷ್ಟಿಸಿ ಅಭ್ಯರ್ಥಿಗಳ ಪರ ಅಥವಾ ವಿರುದ್ಧ ಅಪಪ್ರಚಾರ ನಡೆಸುವವರ ಮೇಲೆ ಸೈಬರ್ ಪೊಲೀಸ್ ತಂಡ ನಿಗಾ ಇರಿಸಿದೆ. ಎಂ.ಸಿ.ಸಿ (ಮಾದರಿ ನೀತಿ ಸಂಹಿತೆ) ಉಲ್ಲಂಘಿಸುವ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ ಎಂದರು.

ಮತದಾನದ ಸಮಯ: ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಟೋಕನ್ ವ್ಯವಸ್ಥೆ: ಸಂಜೆ 6 ಗಂಟೆಯ ಒಳಗೆ ಮತಗಟ್ಟೆಗೆ ಬಂದು ಸಾಲಿನಲ್ಲಿ ನಿಂತಿರುವ ಮತದಾರರಿಗೆ ಟೋಕನ್ ನೀಡಲಾಗುವುದು. ಟೋಕನ್ ಪಡೆದ ಪ್ರತಿಯೊಬ್ಬರಿಗೂ ಮತದಾನಕ್ಕೆ ಅವಕಾಶವಿರುತ್ತದೆ.

ಮಾಕ್ ಪೋಲ್: ಮತದಾನದ ದಿನ ಬೆಳಿಗ್ಗೆ 5:30 ರಿಂದ 7 ಗಂಟೆಯವರಿಗೆ ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ‘ಮಾಕ್ ಪೋಲ್’ ನಡೆಯಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಸಿಬ್ಬಂದಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending