ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಈ ತರಬೇತಿಯು ದಿನಾಂಕ 06 ಜುಲೈ 2026 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿರಬೇಕು.ಕನ್ನಡ ಭಾಷೆ ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರಬೇಕು.ಗ್ರಾಮೀಣ ಪ್ರದೇಶದ ಬಿಪಿಎಲ್ (BPL) ಕಾರ್ಡ್ ಹೊಂದಿರುವವರಿಗೆ ವಿಶೇಷ ಆದ್ಯತೆ ನೀಡಲಾಗುವುದು. ತರಬೇತಿಗೆ ಅರ್ಜಿ ಸಲ್ಲಿಸಲು 30 ಜೂನ್ 2026 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಭೇಟಿ ನೀಡಬಹುದು. ಅಥವಾ ಮೊಬೈಲ್ ಸಂಖ್ಯೆಗಳು: 9241482541, 9481506564, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿಗಳು, ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ ಅಭಿವೃದ್ಧಿ ಹಾಗೂ ನೀರಿನ ಸಮರ್ಥ ಬಳಕೆ ಸೇರಿದಂತೆ ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಜಿಲ್ಲೆಯ ರೈತ ಮತ್ತು ರೈತ ಮಹಿಳೆಯರು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಮತ್ತು ಆತ್ಮ ಯೋಜನೆಯಡಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ ಹಾಗೂ ಆಡು, ಕುರಿ, ಮೊಲ ಇತ್ಯಾದಿ ಸಾಕಣಿಕೆ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ರೈತರು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಜೂನ್ 29 ರ ಕೊನೆಯ ದಿನಾಂಕದೊಳಗೆ ಸಲ್ಲಿಸಬಹುದು.
ಪ್ರಶಸ್ತಿಗಳ ಕುರಿತು ಹೆಚ್ಚಿನ ವಿವರ ಹಾಗೂ ಅರ್ಜಿ ನಮೂನೆಗಾಗಿ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಅಥವಾ ಆಯಾ ಭಾಗದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ಜಂಟಿ ಕೃಷಿ ನಿರ್ದೇಶಕರು ಹಾಗೂ ಆತ್ಮ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ಅಂಕಣ5 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ5 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ5 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ5 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ2 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ5 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ2 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

