Connect with us

ದಿನದ ಸುದ್ದಿ

ಮೊದಲ ಬಾರಿಗೆ ಗೋನೂರು ಕೆರೆಗೆ ಹರಿದು ಬಂದ ಭದ್ರೆ – ರೈತರ ಸಂಭ್ರಮಾಚರಣೆ

Published

on

ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಭದ್ರಾ ನೀರು ಆಗಮನ; ಸಂಸದ ಗೋವಿಂದ ಕಾರಜೋಳರಿಂದ ಬಾಗಿನ ಸಮರ್ಪಣೆ, ಹೋರಾಟಕ್ಕೆ ಸಿಕ್ಕ ಜಯ

ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಮೊದಲ ಬಾರಿಗೆ ಗೋನೂರು ಕೆರೆಗೆ ಆಗಮಿಸಿದ ಭದ್ರೆಗೆ ಬುಧವಾರ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು.

 

http://Visit : www.suddidina.com

ಗೋನೂರು ಸಮೀಪದ 111 ಕಿಮೀ ಕಾಲುವೆ ಬಳಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ ಭದ್ರೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಿಸಿದರು. ಬಸವಕೇಂದ್ರ ಮುರುಘಾಮಠದ ಡಾ.ಬಸವಕುಮಾರ ಸ್ವಾಮೀಜಿ, ಯಾದವ ಗುರುಪೀಠದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಮುರುಗೇಂದ್ರ ಸ್ವಾಮೀಜಿ ಸೇರಿದಂತೆ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು.

ಕಾಲುವೆಯಲ್ಲಿ ಭದ್ರೆ ಹರಿದಿರುವುದ ಕಂಡು ಸಂತಸ ವ್ಯಕ್ತಪಡಿಸಿದ ಮಹಿಳೆಯರು, ರೈತಾಪು ಸಮಾದಾಯ ಭದ್ರೆ ಮೈಮೇಲೆ ಎರಚಿಕೊಂಡು ಧನ್ಯತಾ ಭಾವ ಪ್ರದರ್ಶಿಸಿದ್ದು ವಿಶೇಷವಾಗಿತ್ತು.,

ಬಾಗಿನ ಸಮರ್ಪಣೆ ನಂತರ ಮಾತನಾಡಿದ ಸಂಸದ ಗೋವಿಂದ ಕಾರಜೋಳ, ಚಿತ್ರದುರ್ಗ ನೆಲಕ್ಕೆ ಭದ್ರೆ ತರುವಲ್ಲಿ ಮೂರು ದಶಕಗಳಷ್ಟು ಸುದೀರ್ಘ ಹೋರಾಟವಿದೆ. ಇದರಲ್ಲಿ ಪತ್ರಕರ್ತಕರ್ತರು, ಸಂಘ ಸಂಸ್ಥೆಗಳು, ಮಠಾಧಿಪತಿಗಳು, ಜನ ಪ್ರತಿನಿಧಿಗಳ ಸಹಕಾರವಿದೆ. ಸಮೀಕ್ಷೆ ಕಾರ್ಯಕ್ಕೆ ಐವತ್ತು ಕೋಟಿ ರೂಪಾಯಿ ಬಜೆಟ್ ನಲ್ಲಿ ಕಾಯ್ದಿರಿಸುವುದರ ಮೂಲಕ ಆರಂಭಗೊಂಡ ಭದ್ರಾ ಮೇಲ್ದಂಡೆ ಯೋಜನೆ ಕನಸು ಗೋನೂರು ಕೆರೆವರೆಗೆ ನೀರು ಹರಿಯುವ ತನಕ ಸಾಕಾರಗೊಂಡಿದೆ ಎಂದರು.

ಕಾಮಗಾರಿ ಕುಂಟುತ್ತ ಸಾಗಿದ ವೇಳೆ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 6300 ಕೋಟಿಯಷ್ಟು ಅನುದಾನ ಒದಗಿಸುವುದರ ಮೂಲಕ ವೇಗ ನೀಡಲಾಗಿತ್ತು. ಎಲ್ಲ ಸರ್ಕಾರಗಳು ಯೋಜನೆ ಕಾರ್ಯಗತಕ್ಕೆ ಅದರದ್ದೇ ಆದ ಕೊಡುಗೆ ನೀಡಿವೆ. ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 13 ಸಾವಿರ ಕೋಟಿ ರೂಪಾಯಿ ಅಗತ್ಯವಿದ್ದು ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ತನ್ನ ಪಾಲಿನ ಹಣ ನೀಡಲಿದೆ ಎಂದರು.

ಬಸವಕೇಂದ್ರ ಮುರುಘಾಮಠದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಇಂತಹದ್ದೊಂದು ಗಳಿಗೆಗಾಗಿ ಮೂರು ದಶಕಗಳು ಕಾಯಬೇಕಾಯಿತು. ಚಿತ್ರದುರ್ಗ ಜನರ ದಾಹ ಇಂಗಿಸಲು ಭದ್ರೆ 164 ಕಿಮೀ ಸಾಗಿ ಬಂದಿದ್ದಾಳೆ.ಇದೊಂದು ಸಮಗ್ರ ಜನ ಸಮುದಾಯದ ಹೋರಾಟ, ರಾಜಕಾರಣಿಗಳು, ಮಠಾಧೀಶರು, ಭೂಮಿ ಕೊಟ್ಟ ರೈತರು ಎಲ್ಲರ ಪಾತ್ರ ಇದೆ.ಎಲ್ಲರನ್ನೂ ಜಾಗೃತಗೊಳಿಸುವ ಹೋರಾಟವಾಗಿದೆ. ಇದರಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ದಶಕಗಳ ಕಾಲ ಈ ವಿಚಾರದ ಬೆನ್ನು ಹತ್ತಿ ಬರೆದಿದ್ದಾರೆ.ಅನೇಕರು ಟೀಕೆ, ಟಿಪ್ಪಣಿ ಮಾಡಿದಾಗಲೂ ಪತ್ರಕರ್ತರು ಎಚ್ಚರಿಸಿದ್ದಾರೆ. ಮುರುಘಾ ಮಠದ ಮಹಾಸ್ವಾಮಿಗಳು ಸೇರಿದಂತೆ ಅನೇಕ ಮಠಾಧೀಶರು ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಹೋರಾಟಗಾರರಲ್ಲಿ ಸಾಮ್ರಾಜ್ಯವನ್ನೇ ಗೆದ್ದಂತಹ ಭಾವನೆ ಬಂದಿದೆ ಎಂದರು.

ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ, ಭದ್ರೆ ಬಂದಿರುವುದು ರೈತಾಪಿ ಸಮುದಾಯದಲ್ಲಿ ಆಶಾಕಿರಣ ಬಂದಂತಾಗಿದೆ. ಇಂಥದ್ದೊಂದು ಕಾರ್ಯಕ್ರಮ ಕನಸೋ, ನನಸೋ ಎಂದು ಗೊತ್ತಾಗುತ್ತಿಲ್ಲ. ಆರು ಸಾವಿರ ಕೋಟಿ ವೆಚ್ಚದಿಂದ ಆರಂಭಗೊಂಡ ಯೋಜನೆ ಇಂದು 23 ಸಾವಿರ ಕೋಟಿಗೆ ಬಂದು ನಿಂತಿದೆ ಸರ್ಕಾರಗಳು ಇಚ್ಚಾಶಕ್ತಿ ಪ್ರದರ್ಶಿಸಿದ್ದರೆ ಹದಿನೆಂಟು ಸಾವಿರ ಕೋಟಿ ಉಳಿಯುತ್ತಿತ್ತು ಎಂದರು.
97 ರಲ್ಲಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಹೋರಾಟದ ಮೊದಲ ಸಮಾವೇಶ ನಡೆದಿತ್ತು . ‌ ಖಾಸಗಿ ಬಸ್ ಮಾಲೀಕರ ಸಂಘದವರು ಅಂದು ಸಮಾವೇಶಕ್ಕೆ ಬರುವವರಿಗೆ ಬಸ್ ಗಳ ಸೌಲಭ್ಯ ಕಲ್ಪಿಸುವುದರ ಮೂಲಕ ದನಿಗೂಡಿಸಿತ್ತು. ಅಂದಿನಿಂದ ಇಂದಿನವರೆಗೂ ಬೆಂಬಲ ನೀಡಲಾಗುತ್ತಿದೆ. ವಿವಿ ಸಾಗರಕ್ಕೆ ಭದ್ರೆ ನೀರು ಬಂದಿದ್ದು ನೋಡಿ ರೈತರು ಅಡಿಕೆ ಕಟ್ಟಿದರು.‌ ನೀರಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಲಿಂಗಾರೆಡ್ಡಿ ಕಳವಳ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ರವಿಶಂಕರ್ ಮಾತನಾಡಿ, ಪ್ರಾಯೋಗಿಕವಾಗಿ ಮೂರು ಟಿಎಂಸಿ ನೀರು ನಿಗಧಿಯಾಗಿದೆ. ‌ಬರ ಪರಿಸ್ಥಿತಿ ಕಾರಣಕ್ಕೆ ಜಲಾಶಯದಲ್ಲಿನ ನೀರನ್ನು ಕುಡಿಯುವ ನೀರಿಗೆ ಮಾತ್ರ ಬಳಸಬೇಕು ಎಂದು ಸರ್ಕಾರ ಆದೇಶ ಮಾಡಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷಾರ್ಥ ನೀರು ಹಾಯಸಲಾಗಿದೆ ಎಂದರು.
ಭದ್ರಾ ಜಲಾಶಯಕ್ಕೆ ಹೆಚ್ಚು ನೀರು ಬರಲಿಲ್ಲ. ಅಲ್ಲಿ 186 ಅಡಿಗೆ 175 ಸಂಗ್ರಹವಾಗಿದೆ. ಅಚ್ಚುಕಟ್ಟು ಪ್ರದೇಶದ ರೈತರು ಆಕ್ಚೇಪ ಎತ್ತಿದರೂ ಸರ್ಕಾರ ಪ್ರಾಯೋಗಿಕವಾಗಿ ಹರಿಸಲು ತಿಳಿಸಿದೆ.ಹಳೆಯ ಕಾಲುವೆಯಾದ ಕಾರಣಕ್ಕೆ 700 ಕ್ಯೂಸೆಕ್ ಡ್ರಾ ಮಾಡುತ್ತಿದ್ದು ಇದರ ಪ್ರಕಾರ 25 ದಿನ ಹರಿಸಲು ತೊಂದರೆ ಇಲ್ಲ. ಇನ್ನೂ ಹೆಚ್ಚು ಮಾಡುವುದಾದರೆ 2 ನೇ ಮೋಟಾರ್ ಆನ್ ಮಾಡಿದರೆ ದಿನಗಳ ಸಂಖ್ಯೆ ಕಡಿಮೆ ಆಗಬಹುದು ಎಂದರು.

ನೀರಾವರಿ ಅನುಷ್ಠಾನ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ್,ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಸಿಪಿಐ ಕಾರ್ಯದರ್ಶಿ ಸುರೇಶ್ ಬಾಬು,ನಗರಸಭೆ ಮಾಜಿ ಅಧ್ಯಕ್ಷರುಗಳಾದ ಬಿ.ಕಾಂತರಾಜ್, ಸಿ.ಟಿ.ಕೃಷ್ಣಮೂರ್ತಿ, ಕಾರ್ಯನಿರತರ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿನಾಯಕ ತೊಡರನಾಳ್,ಶಿಮುಲ್ ನಿರ್ದೇಶಕ ಜಿ.ಬಿ.ಶೇಖರ್, ಜಿಪಂ ಮಾಜಿ ಅಧ್ಯಕ್ಷ ರವಿಕುಮಾರ್, ಬಿಜೆಪಿ ಮುಖಂಡ ಹನುಮಂತೇ ಗೌಡ ಉಪಸ್ಥಿತರಿದ್ದರು. ಸಮಿತಿ ಪ್ರಧಾನ ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ ಪ್ರಾಸ್ತಾವಿಕ ಮಾತನಾಡಿದರು.

ನೀರಾವರಿ ಹೋರಾಟದ ಹಾದಿಯಲ್ಲಿ ಅಗಲಿದ ನಾಯಕರುಗಳಾದ ಹೆಚ್.ಹನುಮಂತಪ್ಪ, ಎಂ.ಜಯಣ್ಣ, ಮುರುಘರಾಜೇಂದ್ರ ಒಡೆಯರ್, ಟಿ.ನುಲೇನೂರು ಎಂ.ಶಂಕರಪ್ಪ ಅವರಿಗೆ ಇದೇ ಸಂದರ್ಭದಲ್ಲಿ ಮೌನಾಚರಣೆ ಮೂಲಕ ಸ್ಮರಿಸಲಾಯಿತು. ಹೋರಾಟವ ಮುನ್ನಡೆಸಿದ ಪಿ.ಕೋದಂಡರಾಮಯ್ಯ ಹಾಗೂ ಡಾ.ಬಂಜಗೆರೆ ಜಯಪ್ರಕಾಶ್ ಅವರನ್ನು ನೆನಪು ಮಾಡಿಕೊಳ್ಳಲಾಯಿತು. ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣದಲ್ಲಿ ಶ್ರಮಿಸಿದ ತಾಂತ್ರಿಕ ವರ್ಗವ ಅಭಿನಂದಿಸುವ ಸಲುವಾಗಿ ಐದು ಮಂದಿ ಇಂಜಿನಿಯರ್ ಗಳಿಗೆ ಕಾರ್ಯಕ್ರಮದಲ್ಲಿ ಹಸಿರು ಶಾಲು ಹೊದಿಸಿ ಗೌರವಿಸಲಾಯಿತು.

ಪ್ರೀತಿ ಟಿ ಎಸ್ ಇವರು ಸುದ್ದಿದಿನ ಡಿಜಿಟಲ್‌ ವಿಭಾಗದಲ್ಲಿ ಸುದ್ದಿ ವಿಭಾಗದ ವರದಿಗಾರರಾಗಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ಕಳೆದ 10 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ (PRO) ಹಾಗೂ ರಾಜ್ಯದ ಪ್ರಮುಖ ದಿನಪತ್ರಿಕೆಯಲ್ಲಿ ಜಿಲ್ಲಾ ವರದಿಗಾರಿಕೆ, ರಾಜಕೀಯ ವರದಿಗಾರಿಕೆಯನ್ನು ಮಾಡಿದ ಅನುಭವ ಹೊಂದಿರುತ್ತಾರೆ. ಜನಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆಗಳು, ಪ್ರಮುಖ ವಿದ್ಯಮಾನಗಳ ಕುರಿತಾದ ಗ್ರೌಂಡ್ ಝೀರೋ ವರದಿಗಾರಿಕೆ ಹಾಗೂ ಪ್ರಮುಖ ರಾಜಕಾರಣಿಗಳ ಸಂದರ್ಶನ, ಪ್ರಚಲಿತ ವಿದ್ಯಮಾನಗಳ ಕುರಿತಾದ ವಿಶ್ಲೇಷಣಾ ವರದಿಗಳನ್ನು ಮಾಡುವ ಮೂಲಕ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದಾರೆ. ಸಂಕೀರ್ಣ ಸಾಮಾಜಿಕ ವಿಷಯಗಳ ಕುರಿತಾಗಿಯೂ ಹಲವು ಲೇಖನಗಳನ್ನು ಬರೆದಿರುತ್ತಾರೆ. ವೃತ್ತಿಜೀವನದ ಹಾದಿ : ನಗರವಾಣಿ ದಿನಪತ್ರಿಕೆಯಲ್ಲಿ ಜಿಲ್ಲಾ ವರದಿಗಾರರಾಗಿ ಇವರ ವೃತ್ತಿ ಜೀವನ ಆರಂಭಗೊಂಡಿದೆ. ನಂತರದಲ್ಲಿ ವಿಜಯಕರ್ನಾಟಕ ವೆಬ್‌ಸೈಟ್‌‌ನ ಸುದ್ದಿ ವಿಭಾಗದ ವರದಿಗಾರರಾಗಿ ಕೆಲಸ ಮಾಡಿರುತ್ತಾರೆ. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುವ ಇವರು ವಾರ್ತಾ ಇಲಾಖೆಯಲ್ಲಿ ಕೋವಿಡ್ ಸಂದರ್ಭದಲ್ಲಿ ನೇರವಾಗಿ ಆಯ್ಕೆಯಾಗುವ ಮೂಲಕ ಎರಡು ವರ್ಷಗಳು ಕಾರ್ಯನಿರ್ವಯಿಸಿದ್ದಾರೆ. ನಂತರ ಆರೋಗ್ಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಇಲಾಖೆ, ನೀರು ಮತ್ತು ನೈರ್ಮಲ್ಯ ಇಲಾಖೆಗಳಲ್ಲಿ ಮಾಧ್ಯಮ ವರದಿಗಾರರಾಗಿ ಕೆಲಸ ಮಾಡಿದ ಇವರು ಕಳೆದ ಐದು ವರ್ಷಗಳಿಂದ ಇಂಧನ ಇಲಾಖೆಯಲ್ಲಿ ಮೀಡಿಯಾ ಕನ್ಸಲ್ಟೆಂಟ್ ಮತ್ತು ಪಿಸಿಕೆಎಲ್ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರೊಂದಿಗೆ, ಕಳೆದ ಹನ್ನೊಂದು ವರ್ಷಗಳಿಂದ ಆ್ಯಂಕರ್, ವಾಯ್ಸ್‌ಓವರ್ ಸೇರಿದಂತೆ ಸಾಕಷ್ಟು ಕವನಗಳು, ಅಂಕಣಗಳನ್ನು ಬರೆಯುವ ಮೂಲಕ ಜನಪ್ರಸಿದ್ಧಿಯಾಗಿದ್ದಾರೆ.

ದಿನದ ಸುದ್ದಿ

ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ: ‘ಸಕಾಲ’ ಸೇವೆಗೆ ಭೌತಿಕ ಆರ್‌ಟಿಐ ಅರ್ಜಿಗಳ ಸೇರ್ಪಡೆ, ಗ್ರಾಮ ಒನ್‌ನಲ್ಲೂ ಲಭ್ಯ

Published

on

ಸುದ್ದಿದಿನ,​ಬೆಂಗಳೂರು: ನಾಗರಿಕರಿಗೆ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಎರಡು ಪ್ರಮುಖ ಹಾಗೂ ನೂತನ ನಿರ್ಧಾರಗಳನ್ನು ಕೈಗೊಂಡಿದೆ.

ಭೌತಿಕ ಆರ್‌ಟಿಐ ಅರ್ಜಿಗಳ ದಾಖಲಾತಿ ಈಗ ‘ಸಕಾಲ’ ಸೇವೆ

​ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ (ಕಾಗದದ ರೂಪದ) ಆರ್‌ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್‌ಟಿಐ ಆನ್‌ಲೈನ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು.

​ಇದನ್ನು ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ರ ಅಡಿಯಲ್ಲಿ ಖಾತ್ರಿ ಸೇವೆಯಾಗಿ ಅಧಿಸೂಚಿಸಲಾಗಿದೆ. ​ಇದರಿಂದ ಪ್ರತಿಯೊಬ್ಬ ಅರ್ಜಿದಾರರಿಗೂ ಆನ್‌ಲೈನ್ ನೋಂದಣಿ ಸಂಖ್ಯೆ ದೊರೆಯಲಿದ್ದು, ಅರ್ಜಿಯ ಸ್ಥಿತಿಗತಿಯನ್ನು (Status) ಯಾವಾಗ ಬೇಕಾದರೂ ಪರಿಶೀಲಿಸಬಹುದು.

​ಅರ್ಜಿಗಳು ಕಳೆದುಹೋಗುವ ಅಥವಾ ನಿರ್ಲಕ್ಷ್ಯಕ್ಕೆ ಒಳಗಾಗುವ ಸಾಧ್ಯತೆ ಇರುವುದಿಲ್ಲ. ನಿಯಮಿತ ۲ ದಿನಗಳಲ್ಲಿ ಪೋರ್ಟಲ್‌ನಲ್ಲಿ ದಾಖಲಿಸದಿದ್ದರೆ ನಾಗರಿಕರು ಸಕಾಲ ಕಾಯ್ದೆಯಡಿ ಪರಿಹಾರ ವೆಚ್ಚ ಪಡೆಯಲು ಅರ್ಹರಾಗಿರುತ್ತಾರೆ ಹಾಗೂ ಸಂಬಂಧಪಟ್ಟ ಅಧಿಕಾರಿಯೇ ಇದಕ್ಕೆ ಹೊಣೆಗಾರರಾಗುತ್ತಾರೆ.

ಎಲ್ಲಾ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಆರ್‌ಟಿಐ ಸೇವೆ ಲಭ್ಯ

​ಇಂಟರ್ನೆಟ್ ಅಥವಾ ಕಂಪ್ಯೂಟರ್ ಬಳಕೆ ತಿಳಿಯದ ಸಾರ್ವಜನಿಕರನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದ ಎಲ್ಲಾ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಆರ್‌ಟಿಐ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ.

​ನಾಗರಿಕರು ತಮ್ಮ ಸಮೀಪದ ಕೇಂದ್ರಕ್ಕೆ ತೆರಳಿ ಸಿಬ್ಬಂದಿಯ ನೆರವಿನಿಂದ ಅರ್ಜಿ ಸಲ್ಲಿಸಬಹುದು.
​ನಿಗದಿತ ಆರ್‌ಟಿಐ ಶುಲ್ಕ ಮತ್ತು ಕೇಂದ್ರದ ನಾಮಮಾತ್ರ ಸೇವಾ ಶುಲ್ಕವನ್ನು ಪಾವತಿಸಿ, ಸ್ಥಳದಲ್ಲೇ ಆನ್‌ಲೈನ್ ಸ್ವೀಕೃತಿ (Acknowledgement) ಪಡೆಯಬಹುದು.

​ಗ್ರಾಮ ಪಂಚಾಯಿತಿ ಮಟ್ಟದ ‘ಗ್ರಾಮ ಒನ್’ ಕೇಂದ್ರಗಳ ಮೂಲಕ ಈಗ ಹಳ್ಳಿಯ ಪ್ರತಿಯೊಬ್ಬ ನಾಗರಿಕರಿಗೂ ಆನ್‌ಲೈನ್ ಆರ್‌ಟಿಐ ಸೌಲಭ್ಯ ತಲುಪಿದೆ.

ಪ್ರಮುಖ ಪ್ರಯೋಜನಗಳು

​ಏಕರೂಪದ ವೇದಿಕೆ: ಭೌತಿಕ, ಆನ್‌ಲೈನ್ ಅಥವಾ ಸೇವಾ ಕೇಂದ್ರಗಳ ಮೂಲಕ ಬರುವ ಎಲ್ಲಾ ಅರ್ಜಿಗಳು ಒಂದೇ ವೇದಿಕೆಯಡಿ ಬರಲಿವೆ. ​ಪಾರದರ್ಶಕತೆ: ಆರ್‌ಟಿಐ ಕಾಯ್ದೆ 2005ರ ಕಾಲಮಿತಿಗಳ ಪಾಲನೆಯನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು.

ಇದರಿಂದ ಮಾಹಿತಿ ಅಧಿಕಾರಿಗಳಿಂದಾಗುವ ವಿಳಂಬವನ್ನು ಶೀಘ್ರವಾಗಿ ಗುರುತಿಸಬಹುದು.
ನಾಗರಿಕರಿಗೆ ತಮ್ಮ ಅರ್ಜಿಗಳ ವಿಶ್ವಾಸಾರ್ಹ ದಾಖಲೆ ಲಭ್ಯವಾಗುತ್ತದೆ.

​ಸಾರ್ವಜನಿಕರು ನೇರವಾಗಿ ಆನ್‌ಲೈನ್‌ನಲ್ಲಾಗಲಿ ಅಥವಾ ತಮ್ಮ ಸಮೀಪದ ಸೇವಾ ಕೇಂದ್ರಗಳ (ಬೆಂಗಳೂರು ಒನ್/ಕರ್ನಾಟಕ ಒನ್/ಗ್ರಾಮ ಒನ್) ಮೂಲಕವಾಗಲಿ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ​ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಮಾಯಕೊಂಡ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.

ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.

ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 week ago

ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ: ‘ಸಕಾಲ’ ಸೇವೆಗೆ ಭೌತಿಕ ಆರ್‌ಟಿಐ ಅರ್ಜಿಗಳ ಸೇರ್ಪಡೆ, ಗ್ರಾಮ ಒನ್‌ನಲ್ಲೂ ಲಭ್ಯ

ಸುದ್ದಿದಿನ,​ಬೆಂಗಳೂರು: ನಾಗರಿಕರಿಗೆ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಎರಡು...

ದಿನದ ಸುದ್ದಿ1 week ago

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ...

ದಿನದ ಸುದ್ದಿ1 week ago

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ...

ಅಂತರಂಗ3 weeks ago

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು...

ದಿನದ ಸುದ್ದಿ3 weeks ago

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌...

ದಿನದ ಸುದ್ದಿ1 month ago

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ...

ದಿನದ ಸುದ್ದಿ1 month ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ1 month ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ2 months ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ2 months ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

Trending