Connect with us

ರಾಜಕೀಯ

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ : ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುತ್ತೆದೆ‌ ಎಂದು ನಿನ್ನೆ ಹೊಳೆ‌ನರಸೀಪುರದಲ್ಲಿ ನೀಡಿದ್ದ ಹೇಳಿಕೆಗೆ ಮಾಜಿ‌ ಸಿಎಂ ಸಿದ್ದರಾಮಯ್ಯ ಸಮರ್ಥನೆ ಕೊಟ್ಟಿದ್ದಾರೆ. ಹಾಗೇ ಜನರು ಮತ್ತೆ ಮುಖ್ಯಮಂತ್ರಿ ಆಗಬೇಕು ಅಂತಾ ಹೇಳಿದರು, ಅದಕ್ಕೆ ನಾನು ಹಾಗೆ ಹೇಳಿರುವೆ ಎಂದು ತಮ್ಮ ಮನದಿಂಗಿತ ಹೊರಹಾಕಿದರು.

ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೊಡಗು ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡಿದ್ದು ಶೀಘ್ರವೆರ ಪರಿಹಾರ ಘೋಷಿಸಬೇಕು. ನಿನ್ನೆ ರಕ್ಷಣಾ ಸಚಿವೆ ನಿರ್ಮಲಾ‌ ಸೀತಾರಾಮನ್‌ ಕೇಂದ್ರದ ಪ್ರತಿನಿಧಿಯಾಗಿ ಬಂದಿದ್ದರು.ಬರುವ ಮುನ್ನ ಪ್ರಧಾನಿ ಜೊತೆ ಪರಿಹಾರ ಸಂಬಂಧ ಚರ್ಚಿಸಿ ಬರಬೇಕಾಗಿತ್ತು.ಅವರು ಪರಿಹಾರ ಘೋಷಿಸದೆ ಹೋದದ್ದು ಸರಿಯಲ್ಲ.ಸಂಸದ ಪ್ರತಾಪಸಿಂಹ ಕೇವಲ ಭಾಷಣ ಮಾಡಲು ಲಾಯಕ್ಕು ಅವರು
ಕೇಂದ್ರದ ಮೇಲೆ ಒತ್ತಡ ಹಾಕುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.

ನೆರೆ ಪರಿಹಾರಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳ ಸ್ಪಂದನೆಗೆ ನಾನು ಧನ್ಯವಾದ ಹೇಳುವೆ. ಸೆಪ್ಟೆಂಬರ್ 3ರಂದು ಲಂಡನ್ ಪ್ರವಾಸ ಕೈಗೊಂಡಿರುವೆ. ಸಿಎಂ ಆಗಿದ್ದಾಗಿನಿಂದಲೂ ಅಲ್ಲಿರುವ ನನ್ನ ಸ್ನೇಹಿತ ಕರೆಯುತ್ತಿದ್ದ, ಈಗ ಬಿಡುವಿನಲ್ಲಿ ಹೋಗಿ ಬರಲು ನಿರ್ಧಾರಮಾಡಿದ್ದು, ನಾನು ನನ್ನ ಪುತ್ರ ಯತೀಂದ್ರ, ಸಚಿವರಾದ ಆರ್.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

Published

on

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ ಖಾತೆ ಆಂದೋಲನವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

Published

on

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ.

ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮನವಿ ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಇದೇ ತಿಂಗಳ 9 ಕ್ಕೆ ಮುಂದೂಡಿದೆ.

ಇದೇ ವೇಳೆ ಮಧ್ಯಂತರ ಆದೇಶವನ್ನು ನ್ಯಾಯಾಲಯ ವಿಸ್ತರಿಸಿದೆ. ಇದೇ 9 ರಂದು ಎ.ಜೆ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದು, ಇದೇ 12 ರಂದು ಮುಖ್ಯಮಂತ್ರಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ, ಸೆಪ್ಟೆಂಬರ್ 12ರಂದು ಸಂಪೂರ್ಣ ವಿಚಾರಣೆ ಮುಗಿಸೋಣ ಎಂದು ಹೇಳಿ ನ್ಯಾಯಾಲಯದ ಕಲಾಪ ಮುಂದೂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending