Connect with us

ಲೈಫ್ ಸ್ಟೈಲ್

ಕ್ಯಾನ್ಸರ್ ಕಾಯಿಲೆ ಬಗ್ಗೆ ನೀವು ತಿಳಿಯಲೇ ಬೇಕಾದದ್ದು…!

Published

on

ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ಕುರಿತು ಈ ಹಿಂದೆಯೇ ಒಂದು ಅಂಕಣದ ಮೂಲಕ ಪರಿಚಯವಾಗಿದೆ ಅಂದುಕೊಳ್ಳುತ್ತೇನೆ. ಆ ಅಸಾಂಕ್ರಾಮಿಕ ಪ್ರಮುಖ ರೋಗಗಳಲ್ಲಿ ಕ್ಯಾನ್ಸರ್ ಕೂಡ ಒಂದು. ಆದರೆ ವಿಪರ್ಯಾಸದ ಸಂಗತಿಯೆಂದರೆ, ಕ್ಯಾನ್ಸರ್, ಒಬ್ಬರಿಂದೊಬ್ಬರಿಗೆ ಹರಡದ ರೋಗವಾದರೂ ಪೀಡಿತ ವ್ಯಕ್ತಿಯ ದೇಹದೊಳಗೆಯೇ ಒಂದು ಅಂಗದಿಂದ ಇನ್ನೊಂದು ಅಂಗಕ್ಕೆ ಹರಡಬಹುದಾದ ರೋಗವಾಗಿದೆ. ಎಲ್ಲಾ ವಯಸ್ಸಿನವರನ್ನೂ ಆಕ್ರಮಣ ಮಾಡಬಲ್ಲದ ಈ ಖಾಯಿಲೆ, ಹೆಚ್ಚಾಗಿ ವಯೋವೃದ್ಧರಲ್ಲಿ ಕಾಣಸಿಗುವುದುಂಟು. ಇದರಲ್ಲಿ ಯಾವುದಾದರೂ ಒಂದು ಜೀವಕೋಶದ ಅನಿಯಂತ್ರಿತ ಬೆಳವಣಿಗೆ ಉಂಟಾಗಿ ಆ ನಿರ್ಧಿಷ್ಟ ಅಂಗದ ಕಾರ್ಯಕ್ಷಮತೆ ಕ್ಷೀಣಿಸುತ್ತದೆ.

ಕ್ಯಾನ್ಸರ್ ಗೆ ಕಾರಣಗಳು

  • ಶೇ.90-95 ರಷ್ಟು ಕ್ಯಾನ್ಸರ್‍ಗಳು ಸ್ವಾಭಾವಿಕವಾಗಿ ಅಂದರೆ ನಮ್ಮ ಜೀವನಶೈಲಿಯಿಂದ ಉಂಟಾಗುತ್ತವೆ. ಅದರಲ್ಲಿ ಧೂಮಪಾನ, ಮದ್ಯಪಾನ, ಮಾನಸಿಕ ಒತ್ತಡ, ಸ್ಥಾವರತೆ, ವಿಕಿರಣಗಳು, ಬೊಜ್ಜು ಮತ್ತು ಮಾಲಿನ್ಯಗಳು ಪ್ರಮುಖವಾದವು.
  • ಉಳಿದ ಶೇ.5-10 ರಷ್ಟು ಜೀವಕೋಶಗಳೊಳಗಿನ ಕ್ರೋಮೋಸೋಮುಗಳ ವ್ಯತ್ಯಾಸದಿಂದ ಅನುವಂಶಿಕವಾಗಿ ಉಂಟಾಗುತ್ತವೆ.
  • ಕ್ರೋಮೋಸೋಮುಗಳ ವ್ಯತ್ಯಾಸಗಳು ನಮ್ಮ ಜೀವನದ ಯಾವ ಒಂದು ಸಮಯದಲ್ಲಾದರೂ ಉಂಟಾಗಬಹುದು. ಮುಂದೆ ಅದೇ ಮುಂದಿನ ಪೀಳಿಗೆಗಳಿಗೂ ವರ್ಗಾಯಿಸಲ್ಪಡುತ್ತದೆ. ಆ ನಿರ್ಧಿಷ್ಟ ಕ್ರೋಮೋಸೋಮು ಯಾವ ಪೀಳಿಗೆಯವರೆಗೆ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳುತ್ತದೋ ಅಲ್ಲಿಯವರೆಗೆ ಆ ಕ್ಯಾನ್ಸರ್ ಕಾಣಿಸಿಕೊಳ್ಳುತ್ತದೆ.

ರೋಗದ ಲಕ್ಷಣಗಳು

  • ಯಾವ ಅಂಗ ಕ್ಯಾನ್ಸರ್‍ಪೀಡಿತವಾಗಿರುತ್ತದೋ ಆಯಾ ಅಂಗದ ಕಾರ್ಯಕ್ಷಮತೆಗಳು ವ್ಯತ್ಯಾಸಗೊಂಡು ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
  • ಸ್ಥಳೀಯ ಲಕ್ಷಣಗಳು: ಅಸಹಜ ಗೆಡ್ಡೆ, ಬಾವು, ಆ ನಿರ್ಧಿಷ್ಟ ಭಾಗದ ನೋವು ಮತ್ತು ರಕ್ತಸ್ರಾವ ಉಂಟಾಗುತ್ತದೆ.
  • ಪಸರಿಸುವಿಕೆಯ ಲಕ್ಷಣಗಳು: ಪಸರಿಸುವಿಕೆ ಅಂದರೆ, ಪೀಡಿತವಾದ ಒಂದು ಅಂಗದಿಂದ ಇನ್ನೊಂದು ಅಂಗಕ್ಕೆ ರಕ್ತ ಅಥವಾ ದುಗ್ಧರಸ( Lymphatic fluid) ದ ಮೂಲಕ ಕ್ಯಾನ್ಸರ್ ಹರಡುವುದು. ಇದರಲ್ಲೂ ಕೂಡ ಯಾವ ಅಂಗಕ್ಕೆ ರೋಗ ಹರಡಲ್ಪಡುತ್ತದೋ ಆ ಅಂಗದ ಕಾರ್ಯದಲ್ಲಿ ವ್ಯತ್ಯಾಸಗಳು ಕಂಡುಬರುತ್ತವೆ. ಆದರೆ ಈ ಲಕ್ಷಣಗಳು ತುಂಬಾ ತಡವಾಗಿ ಕಾಣಿಸಿಕೊಳ್ಳುತ್ತವೆ.

ಕ್ರಮಬದ್ಧ ಲಕ್ಷಣಗಳು

ತೂಕ ಕಡಿಮೆಯಾಗುವುದು, ರಕ್ತಹೀನತೆ, ನಿಶ್ಯಕ್ತಿ, ರಕ್ತಹೆಪ್ಪುಗಟ್ಟುವುದು, ಅತಿಯಾದ ಬೆವರುವಿಕೆ, ಹಸಿವು ಕಡಿಮೆಯಾಗುವುದು ಮುಂತಾದವು.

ರೋಗನಿರ್ಣಯ

  1. ರಕ್ತದ ಕ್ಯಾನ್ಸರ್‍ಗಳಿಗೆ ರಕ್ತದ ಮಾದರಿಯಿಂದಲೇ ರೋಗಲಕ್ಷಣಶಾಸ್ತ್ರ ವಿಭಾಗದ ವೈದ್ಯರೇ ರೋಗನಿರ್ಣಯ ಮಾಡುತ್ತಾರೆ
  2. ಹೊಟ್ಟೆಯ ಯಾವುದೇ ಭಾಗದ ಕ್ಯಾನ್ಸರ್‍ಗೆ ಅಲ್ಟ್ರಾಸೌಂಡ್, ಸಿ.ಟಿ.ಸ್ಕ್ಯಾನ್, ಎಮ್.ಆರ್.ಐ.ನಂತಹ ಸ್ಕ್ಯಾನಿಂಗ್ ಗಳು ಅವಶ್ಯಕವಾಗುತ್ತವೆ
  3. ತಲೆ ಮತ್ತು ಮಿದುಳುನೊಳಗಿನ ಕ್ಯಾನ್ಸರ್‍ಗಳಿಗೆ ಸಿ.ಟಿ. ಅಥವಾ ಎಮ್.ಆರ್.ಐ. ಸ್ಕ್ಯಾನಿಂಗ್ ಗಳು ಬೇಕಾಗುತ್ತವೆ
  4. ಇನ್ನು ಎಲುಬು ಕ್ಯಾನ್ಸರ್‍ಗೆ ಎಕ್ಸ್ ರೇ, ಎಲಬಿನ ಮಾದರಿ( Bone biopsy ), ಎಮ್.ಆರ್.ಐ. ಬೇಕಾಗುತ್ತವೆ
  5. ಚರ್ಮ , ಮಾಂಸಖಂಡಗಳು, ಥೈರಾಯ್ಡ್, ಸ್ತನ ಹಾಗೂ ಉಳಿದೆಲ್ಲಾ ಕ್ಯಾನ್ಸರ್ ಗಳಿಗೆ ಬಯಾಪ್ಸಿ, ಅಲ್ಟ್ರಾಸೌಂಡ್, ಡಾಪ್ಲರ್, ಎಮ್.ಆರ್.ಐ.ನಂತಹ ಸ್ಕ್ಯಾನಿಂಗಳು ಬೇಕಾಗುತ್ತವೆ

ಚಿಕಿತ್ಸೆ

  1. ಚಿಕಿತ್ಸೆಯ ಉದ್ದೇಶದಿಂದ ಕ್ಯಾನ್ಸರ್ ರೋಗವನ್ನು ವಿವಿಧ ಹಂತಗಳಾಗಿ ವಿಂಗಡಿಸಲಾಗುತ್ತದೆ. ಹಂತ 1(ಆರಂಭಿಕ ಹಂತ) ರಿಂದ ಶುರುವಾಗಿ ವಿವಿಧ ಕ್ಯಾನ್ಸರ್‍ಗಳು ಹಂತ 4 ಮತ್ತು 5(ಅಚಿತಿಮ ಹಂತ) ರವರೆಗೆ ವಿಂಗಡಿಸಲಾಗುತ್ತದೆ.
  2. ಹಂತ 1 ಮತ್ತು 2 ರ ಕ್ಯಾನ್ಸರ್‍ಗಳನ್ನು ಸಾಮಾನ್ಯವಾಗಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆಯಲಾಗುತ್ತದೆ. ಆದರೆ ಕೆಲವೊಮ್ಮೆ ಕೀಮೊಥೆರಪಿ ಕೂಡ ಬೇಕಾಗುತ್ತದೆ.
  3. ಹಂತ 3, 4 ಮತ್ತು 5 ರ ಕ್ಯಾನ್ಸರ್‍ಗಳು ಕೀಮೊಥೆರಪಿ ಅಥವಾ ರೇಡಿಯೊಥೆರಪಿ ಅಥವಾ ಈ ಎರಡೂ ಚಿಕಿತ್ಸೆಗಳೂ ಬೇಕಾಗುತ್ತವೆ. ಆದರೆ 3 ರ ಹಂತವು 4 ಮತ್ತು 5 ಕ್ಕಿಂತ ಉತ್ತಮ ರೋಗಚಿಕಿತ್ಸಾ ಫಲಗಳನ್ನು ಹೊಂದಿದೆ.
  4. ಕೀಮೊಥೆರಪಿಯಲ್ಲಿ ವಿವಿಧ ಧಾತುಗಳಿಂದ, ಅಥವಾ ಆಂಟಿಬಾಡೀಸ್‍ಗಳಿಂದ ತಯಾರಿಸಲ್ಪಟ್ಟ ಮಾತ್ರೆಗಳಿಂದ ಚಿಕಿತ್ಸೆ ನೀಡಲಾಗುತ್ತದೆ.
  5. ರೇಡಿಯೊಥೆರಪಿಯಲ್ಲಿ ವಿವಿಧ ಚಿಕಿತ್ಸಾ ವಿಕಿರಣಗಳನ್ನು ಬಳಸಿ, ಆ ನಿರ್ಧಿಷ್ಟ ಕ್ಯಾನ್ಸರ್‍ಗೊಳಪಟ್ಟ ಅಂಗಕ್ಕೆ ಗುರಿಯಾಗಿಸಿ ಚಿಕಿತ್ಸೆ ನೀಡಲಾಗುತ್ತದೆ.

ರೋಗನಿಯಂತ್ರಣ

  1. ಧೂಮಪಾನ, ಮದ್ಯಪಾನದಿಂದ ದೂರವಿರುವುದು.
  2. ಸರಿಯಾದ ಸಮತೋಲನ ಆಹಾರ ಕ್ರಮ
  3. ಅತಿಯಾದ ತೂಕವನ್ನು ಕಡಿಮೆ ಮಾಡಿಕೊಳ್ಳುವುದು
  4. ದಿನನಿತ್ಯ ದೈಹಿಕ ವ್ಯಾಯಾಮ
  5. ವಾಯುಮಾಲಿನ್ಯ, ಲೈಂಗಿಕ ಸೋಂಕುಗಳಿಂದ ದೂರವಿರುವುದು
  6. ಈಗಾಗಲೇ ಕ್ಯಾನ್ಸರ್‍ನ ಅಪಾಯದಲ್ಲಿರುವವರು ಕಾಲಕ್ಕೆ ಸರಿಯಾಗಿ ವೈದ್ಯರ ಸಮಾಲೋಚನೆ ಪಡೆಯುವುದು
  7. ಆಧುನಿಕವಾಗಿ ಕೀಮೊನಿರ್ಮೂಲನಾ ನಿಯಂತ್ರಣವು ಅನೇಕ ಮುನ್ಸೂಚನೆಯಲ್ಲಿರುವವರನ್ನು ಆನಿರ್ಧಿಷ್ಟ ಕ್ಯಾನ್ಸರ್ ತಗಲದಂತೆ ಮಾಡುತ್ತದೆ
  8. ಹೆಪಟಿಟಿಸ್ ಬಿ, ಹೆಚ್‍ಪಿವಿ, ನಂತಹ ಕೆಲವು ಲಸಿಕೆಗಳಿಂದ ಆ ನಿರ್ಧಿಷ್ಟ ಸೋಂಕಿನಿಂದ ಉಂಟಾಗುವ ಕ್ಯಾನ್ಸರ್‍ಗಳನ್ನು ತಡೆಯಬಹುದು.

(ಲೇಖಕರು – ಡಾ. ಕೆ. ಬಿ. ಸಂತೋಷ್
santhosh.achar15892@gmail.com)

ಡಾ.ಸಂತೋಷ್ ಕೆ.ಬಿ. ದಾವಣಗೆರೆಯಲ್ಲಿ ಎಂ.ಬಿ.ಬಿ.ಎಸ್. ಪದವಿ ಮುಗಿಸಿ ಸದ್ಯ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೈದ್ಯ ವೃತ್ತಿಯ ಜತೆಗೆ ಬರವಣಿಗೆಯಲ್ಲೂ ಆಸಕ್ತಿ ಹೊಂದಿರುವ ಇವರು, 'ಕವಲೊಡೆದ ನದಿ' ಎಂಬ ಕವನ ಸಂಕಲನ ಹೊರತಂದಿದ್ದಾರೆ. ಅದಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರಿಂದ ಪ್ರೋತ್ಸಾಹಧನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರಿಂದ ನಾ.ಕು.ದತ್ತಿ ಪ್ರಶಸ್ತಿ ಲಭಿಸಿವೆ. ಮೊ: 8971256894

ದಿನದ ಸುದ್ದಿ

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

Published

on

3 ವರ್ಷದ ನಂತರ ಬಡ್ಡಿ ನಿಲ್ಲುತ್ತದೆ ಎಂಬುದು ಹಳೆಯ ನಿಯಮ; 58 ವರ್ಷದವರೆಗೆ ಬಡ್ಡಿ ಗ್ಯಾರಂಟಿ, ಆದರೆ ಈ ತೆರಿಗೆ ನಿಯಮ ಗೊತ್ತಿರಲಿ

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.

http://Visit : www.suddidina.com

3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?

ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.

ಉದಾಹರಣೆ:

ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.

ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!

ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.

ಖಾತೆದಾರರು ಏನು ಮಾಡಬೇಕು?

1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.

2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.

3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

Continue Reading

ದಿನದ ಸುದ್ದಿ

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

Published

on

ಸೆಪ್ಟೆಂಬರ್ ಅಂತ್ಯಕ್ಕೆ ಹೊಸ ಸೇವೆ ಜಾರಿ; ಮುಂದಿನ ವಾರವೇ `ನಮ್ಮ ಬಿಎಂಟಿಸಿ 2.0' ಆ್ಯಪ್ ಲೋಕಾರ್ಪಣೆ, 200 ಹೊಸ ಮಿನಿ ಡೀಸೆಲ್ ಬಸ್ ಖರೀದಿಗೆ ಸಿದ್ಧತೆ

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್‌ಗಳಾದ ಓಲಾ, ಉಬರ್, ರ‍್ಯಾಪಿಡೋ ನಂತಹ ಆ್ಯಪ್‌ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್‌ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

http://Visit : www.suddidina.com

ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.

ನಮ್ಮ ಬಿಎಂಟಿಸಿ 2.0′ ಆ್ಯಪ್‌ನಲ್ಲಿ ಏನಿದೆ ಹೊಸತು?

ಖಾಸಗಿ ಆ್ಯಪ್‌ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್‌ನಲ್ಲಿ ಬಿಎಂಟಿಸಿ ನೆಟ್‌ವರ್ಕ್‌ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ ಒಟ್ಟು 6,938 ಬಸ್‌ಗಳಿವೆ. ಪ್ರತಿದಿನ ಸರಾಸರಿ 6,200 ಬಸ್‌ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.

ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ: 

ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

200 ಹೊಸ ಮಿನಿ ಬಸ್‌ಗಳ ಖರೀದಿ:

ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್‌ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್‌ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್‌ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್‌ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್‌ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.

ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:

ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ 200 ಮಿನಿ ಎಸಿ ಇ-ಬಸ್‌ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್‌ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

Continue Reading

ದಿನದ ಸುದ್ದಿ

EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ

Published

on

ಕರ್ನಾಟಕ – ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ

ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.

http://Visit : www.suddidina.com

ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.

ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.

ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.

ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.

ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

Continue Reading
Advertisement

Title

ದಿನದ ಸುದ್ದಿ10 hours ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ2 days ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ1 week ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ1 week ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ1 week ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ1 week ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ1 week ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ1 week ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ1 week ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ1 week ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

Trending