Connect with us

ದಿನದ ಸುದ್ದಿ

ಪಾಂಡೋಮಟ್ಟಿಯಲ್ಲಿಂದು ಮೇಳೈಸಲಿದೆ ತರಳಬಾಳು ಜಾನಪದ ಸಿರಿ 2018ರ ಸಾಂಸ್ಕೃತಿಕ ಸ್ವರ್ಗ..!

Published

on

ಸುದ್ದಿದಿನ, ಚನ್ನಗಿರಿ: ಬಹುನಿರೀಕ್ಷೆಯ ಹೊಸ ಆಯಾಮದೊಂದಿಗೆ, ಮತ್ತೊಷ್ಟು ಬದಲಾವಣೆಗಳನ್ನು ಮೈ ತುಂಬಿಕೊಂಡು,ಸಾಂಸ್ಕೃತಿಕ ಕನ್ನಿಕೆಯ ಕುವರಿಯಂತಿರುವ “ತರಳಬಾಳು ಜಾನಪದ ಸಿರಿಸಂಭ್ರಮ” 350 ಮಕ್ಕಳು ಸಂಭ್ರಮ ಮತ್ತು ಅಪರಿಮಿತ ಉತ್ಸಾಹದಿ ಜಾನಪದ ಲೋಕಕ್ಕೆ ಸರ್ವರನ್ನು ಕರೆದೊಯ್ಯಲು ಸಜ್ಜಾಗಿದ್ದಾರೆ.

ಕಳೆದ ವರ್ಷದ ಅಭೂತಪೂರ್ವಯಶಸ್ಸಿನ ಮಜಲು ಏರಿ ರಾಜ್ಯ, ಹೊರ ರಾಜ್ಯಗಳ ಎಲ್ಲಾ ಪ್ರತಿಷ್ಠಿತ ವೇದಿಕೆಗಳಲ್ಲಿ ಸಂಭ್ರಮದ ಸ್ಮರಣೀಯ ಸ್ವರ್ಗ ಸೃಷ್ಟಿಸಿ ಎಲ್ಲರ ಜನಮಾನಸದಿ ಮೆಚ್ಚುಗೆ ಗಳಿಸಿದ ಜಾನಪದ ಸಿರಿ ಸಂಭ್ರಮ ಈ ವರ್ಷದ ಪ್ರದರ್ಶನ ನೀಡಲು ಸನ್ನದ್ದವಾಗಿದೆ.

ಇತ್ತೀಚೆಗೆ ರಾಮಗಿರಿಯಲ್ಲಿ ಈ ವರ್ಷದ ಪ್ರಥಮ ಪ್ರದರ್ಶನದ ಲೋಕಾರ್ಪಣೆಯೊಂದಿಗೆ ಜನ ಮನ್ನಣೆಗಳಿಸಿರುವ ಸಿರಿ ಸಂಭ್ರಮದ ಮುಖ್ಯ ಉದ್ದೇಶವೇ ಆಧುನಿಕತೆಯ ಭರಾಟೆಯ ನಾಗಲೋಟದ ಈ ಕಾಲದಲ್ಲಿ ನಮ್ಮ ಪೂರ್ವಜರ ಸೃಷ್ಟಿ ಮತ್ತು ಸಂಸ್ಕೃತಿಯ ಸೃಜನಶೀಲ ಸಾಂಸ್ಕೃತಿಕ ಜಾನಪದೀಯ ಕಲಾ ಪ್ರಕಾರಗಳು ನಶಿಸಿ ಹೋಗುತ್ತಾ ಇತಿಹಾಸದ ಗರ್ಭಕ್ಕೆ ದಾಖಲಾಗುವ ಅಪಾಯಕಾರಿ ಬೆಳವಣಿಗೆಯನ್ನು ತಡೆಯುವ ಸಾಂಸ್ಕೃತಿಕ ಕೈಂಕರ್ಯವಾಗಿದೆ. ಜತನಿಂದ ಜೊತೆಗಿದ್ದ ಕಲಾ ಸೊಬಗನ್ನು ನಮ್ಮ ಯುವ ಜನಾಂಗಕ್ಕೆ ಪರಿಚಯಿಸುವ ಮೂಲಕ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಹಂಚುವ ಆಶಯದಿ ಬೀಜಾಂಕುರವಾಗಿದ್ದೇ “ತರಳಬಾಳು ಜಾನಪದ ಸಿರಿ ಸಂಭ್ರಮ “.

ಕಳೆದ 6 ದಶಕಗಳಿಂದಲೂ ಶರಣ ಸಾಹಿತ್ಯ, ವಚನ ಪ್ರಸಾರ, ನಾಟಕಗಳ ರಚನೆ ಪ್ರದರ್ಶನ, ವೀರಗಾಸೆ ಸ್ಪರ್ಧೆ, ಭಜನೆ ಮೇಳಾ,ಸೋಬಾನೆ ಪದ ಸ್ಪರ್ಧೆ ಹೀಗೆ ಸಾವಿರಾರು ಕಾರ್ಯಕ್ರಮಗಳ ಮೂಲಕ ದೇಶದಾದ್ಯಂತ ಕನ್ನಡ ನಾಡಿನ ಸಾಂಸ್ಕೃತಿಕ ಸೊಬಗನ್ನು ದೇಶದಾದ್ಯಂತ ಪ್ರದರ್ಶಸಿ ಅರ್ಥಪೂರ್ಣ ಶರಣ ಸಂದೇಶ ಸಾರಿದ ಹಿರಿಮೆಯ ಹೆಗ್ಗಳಿಕೆ ತರಳಬಾಳು ಕಲಾಸಂಘಕ್ಕಿದೆ. ಪರಮ ಪೂಜನೀಯ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಸಾಂಸ್ಕೃತಿಕ ಸಂಕಲ್ಪದ ಆಶಯ ಮತ್ತು ದಿವ್ಯ ಮಾರ್ಗದರ್ಶನದಂತೆ ನವ ಮನ್ವಂತರದ ಹೊಸತನವೆಂಬಂತೆ ತರಳಬಾಳು ಕಲಾಸಂಘ ಕಳೆದ ವರ್ಷದಿಂದ ಜಾನಪದ ಸಿರಿ ಸಂಭ್ರಮದ ಹೆಸರಲ್ಲಿ ಸಂಸ್ಕೃತಿಯ ರಾಯಭಾರಿಯ ಸ್ಥಾನವನ್ನು ತುಂಬಲು ಯಶಸ್ವಿಯಾಗಿ ದಾಟಿ ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ.

ಈ ವರ್ಷದ ಮೂರನೇ ಪ್ರಯೋಗ ದಾವಣಗೆರೆ ಜಿಲ್ಲೆಯ, ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿ ಮತ್ತು ಗೊಪ್ಪೇನಹಳ್ಳಿ ಅವಳಿ ಗ್ರಾಮದ ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಇಂದು ಶನಿವಾರ ಸಂಜೆ 6:00 ಕ್ಕೆ ಸಾಂಸ್ಕೃತಿಕ ಲೋಕದ ದಿಗ್ದರ್ಶನದ ಅನಾವರಣವಾಗಲಿದೆ.

ಜಾನಪದ ಕಲಾ ಪ್ರಕಾರಗಳ ವೈವಿದ್ಯತೆಯ ಸಂತಸದ ಸ್ವರ್ಗ ಸೃಷ್ಟಿಸುವ ನಮ್ಮ 350 ಮಕ್ಕಳ ಶ್ರಮದ ಸಾಕ್ಷಾತ್ಕಾರವು 25 ನೃತ್ಯ ವೈವಿಧ್ಯಗಳಲ್ಲಿ ಅವಿರ್ಭವಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading
Advertisement

Title

ದಿನದ ಸುದ್ದಿ16 hours ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ16 hours ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
ದಿನದ ಸುದ್ದಿ16 hours ago

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್ 658 OMR ಕಾರ್ಬನ್...

ದಿನದ ಸುದ್ದಿ17 hours ago

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌! ಮಂಜುನಾಥನ...

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ ₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ದಿನದ ಸುದ್ದಿ17 hours ago

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ ನಿವೇಶನ 13...

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
ದಿನದ ಸುದ್ದಿ17 hours ago

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ...

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ!
ದಿನದ ಸುದ್ದಿ18 hours ago

ಆನ್‌ಲೈನ್‌ನಲ್ಲಿ ಮಾರಾಟವಾಗ್ತಿತ್ತು ‘ವಿಷದ ಹಣ್ಣು’! ಇ-ಕಾಮರ್ಸ್‌ ದೈತ್ಯರಿಗೆ ನೋಟಿಸ್‌

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಆನ್‌ಲೈನ್‌ನಲ್ಲಿ ‘ವಿಷದ ಹಣ್ಣು’ ಮಾರಾಟ ಅಮೆಜಾನ್‌, ಫ್ಲಿಪ್‌ಕಾರ್ಟ್‌, ಮಿನಿಟ್ಸ್‌ಗೆ ಸರ್ಕಾರದೊಂದ ನೋಟಿಸ್‌ ಈ ಹಣ್ಣು ಖರೀದಿಸಿದ್ರೆ ಅಪಾಯ,...

‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ ‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ
ದಿನದ ಸುದ್ದಿ19 hours ago

ತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

ಮಳೆ ಕೈಕೊಟ್ಟಿತು, ತುಂಗಭದ್ರಾ ಹರಿವು ಕುಸಿಯಿತು: ಹರಿಹರದ ‘ಜಲಸಿರಿ’ಗೆ ನೀರಿನ ಬಿಕ್ಕಟ್ಟಿನ ಬಿಸಿ ಜಾಕ್‌ವೆಲ್ ಬಳಿ ತಾತ್ಕಾಲಿಕ ಕಲ್ಲಿನ ತಡೆಗೋಡೆ ನಿರ್ಮಾಣ ಮಳೆ ಮತ್ತಷ್ಟು ತಡವಾದರೆ ಸಂಪೂರ್ಣ...

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ ! ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !
ದಿನದ ಸುದ್ದಿ20 hours ago

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್....

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
ದಿನದ ಸುದ್ದಿ20 hours ago

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ...

Trending