ದಿನದ ಸುದ್ದಿ
ಖಂಡ್ರೆ ಸೂತ್ರಕ್ಕೆ ಮಣಿದ ಬೆಳಗಾವಿ ಲಕ್ಷ್ಮೀ; ಪಿಎಲ್ಡಿ ಬ್ಯಾಂಕ್ ಸೀಟ್ ಹಂಚಿಕೆ ಫೈನಲ್
ಸುದ್ದಿದಿನ ಡೆಸ್ಕ್: ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಬೆಳಗಾವಿ ರಾಜಕೀಯ ವಲಯದಲ್ಲಿ ಎದ್ದಿದ್ದ ಭಿನ್ನಮತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಧ್ಯಸ್ಥಿಕೆಯಿಂದ ಶಮನವಾಗಿದ್ದು, ಪಿಎಲ್‌ಡಿ ಬ್ಯಾಂಕ್ ಚುನಾವಣೆ ಪ್ರಕ್ರಿಯೆ ನಡೆಸದೇ ಅವಿರೋಧ ಆಯ್ಕೆ ಮಾಡುವ ಸೂತ್ರಕ್ಕೆ ಮಣಿ ಹಾಕಿದ್ದಾರೆ ಎನ್ನಲಾಗಿದೆ. ಮರಾಠಾ ಸಮಾಜಕ್ಕೆ ಅಧ್ಯಕ್ಷಗಿರಿ ಮತ್ತು ಲಿಂಗಾಯತ ಸಮುದಾಯಕ್ಕೆ ಉಪಾಧ್ಯಕ್ಷ ಸ್ಥಾನ ಚಿಂತನೆ ನಡೆಸಿದ್ದಾರೆ.
ಪಿಎಲ್‌ಡಿ ಬ್ಯಾಂಕ್‌ನ ಒಂಭತ್ತು ನಿರ್ದೇಶಕರ ಜತೆ ಲಕ್ಷ್ಮೀ ಹೆಬ್ಬಾಳ್ಕರ ನಿರಂತರ ಸರದಿ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಚುನಾವಣೆ ಸಮಯಕ್ಕೆ ಸರಿಯಾಗಿ ಬ್ಯಾಂಕ್‌ಗೆ ಹೋಗಲಿರುವ ನಿರ್ದೇಶಕರು ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಅನೇಕ ಕಾಂಗ್ರೆಸ್ ಮುಖಂಡರು ಹೆಬ್ಬಾಳ್ಕರ್‌ಗೆ ನಿರಂತರ ಫೋನ್ ಕರೆ ಮಾಡಿ ಬಂಡಾಯ ಶಮನಗೊಳಿಸುವ ಕಸರತ್ತ ಮುಂದುವರಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಚರ್ಚಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ರಾಜಿ ಸೂತ್ರ ಹೆಣೆದಿದ್ದು, ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳಕರ ಇಬ್ಬರ ವರ್ಚಸ್ಸಿಗೂ ಧಕ್ಕೆಯಾಗದಂತೆ ಕಾಂಗ್ರೆಸ್ ಹೈಕಮಾಂಡ್ ಸಂಧಾನದ ಸೂತ್ರ ಬಳಸಲಾಗುತ್ತಿದೆ. ಇಬ್ಬರೂ ಸೂಚಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡದೇ ಪರ್ಯಾಯ ಅಭ್ಯರ್ಥಿಗಳನ್ನು ಅವಿರೋಧ ಆಯ್ಕೆ ಮಾಡುವ ತಂತ್ರಗಾರಿಕೆಯನ್ನು ಹೈಕಮಾಂಡ್ ಹೆಣೆದಿದ್ದು, ಹೆಬ್ಬಾಳಕರ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಕಲಹಕ್ಕೆ ಬ್ರೇಕ್ ಹಾಕಲಿದೆ.
ಮರಾಠಾ ಸಮಾಜಕ್ಕೆ ಅಧ್ಯಕ್ಷ ಸ್ಥಾನ ಮತ್ತು ಲಿಂಗಾಯತ ಸಮಾಜಕ್ಕೆ ಉಪಾಧ್ಯಕ್ಷ ಸ್ಥಾನ ನೀಡುವ ಸೂತ್ರಕ್ಕೆ ಬ್ಯಾಂಕಿನ 14 ನಿರ್ದೇಶಕರು ಒಪ್ಪಿಕೊಂಡಿದ್ದಾರೆ. 14 ಜನ ನಿರ್ದೇಶಕರು ಒಟ್ಟಿಗೆ ಬ್ಯಾಂಕಿಗೆ ಬಂದು ಒಗ್ಗಟ್ಟು ಪ್ರದರ್ಶನ ಮಾಡುವ ಸಾಧ್ಯತೆ ಇದೆ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


