ದಿನದ ಸುದ್ದಿ
ಪ್ರಜಾ ಪರಿವರ್ತನಾ ವೇದಿಕೆ | ಸೆ.24 ರಂದು ‘ಸಂವಿಧಾನ ಯಾರ ಹೊಣೆ..? ಸಮ್ಮೇಳನ : ಎ.ಡಿ. ಈಶ್ವರಪ್ಪ
ಸುದ್ದಿದಿನ, ದಾವಣಗೆರೆ : ಪ್ರಜಾ ಪರಿವರ್ತನಾ ವೇದಿಕೆಯಿಂದ ‘ಸಂವಿಧಾನ ರಕ್ಷಣೆ ಯಾರ ಹೊಣೆ?’ ಎಂಬ ವಿಷಯದ ಮೇಲೆ ಒಂದು ದಿನದ ರಾಜ್ಯ ಮಟ್ಟದ ಸಮ್ಮೇಳನವನ್ನು ಸೆ.24ರಂದು ಬೆಂಗಳೂರಿನ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ. ಈಶ್ವರಪ್ಪ ತಿಳಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಹುಸಂಖ್ಯಾತ ಜಾತಿ ಗಳು, ಹತ್ತಾರು ಧರ್ಮ ದವರು ವಾಸ ಮಾಡುತ್ತಿರುವ ನಮ್ಮ ದೇಶಕ್ಕೆ ಉತ್ತಮ ವಾದ ಜಗತ್ತಿನ ಎಲ್ಲ ದೇಶಗಳು ಹೊಗಳುವ ಲಿಖಿತ ಸಂವಿಧಾನ ವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರವರು ರಚಿಸಿ ದೇಶಕ್ಕೆ ಸಮರ್ಪಿಸಿದ್ದಾರೆ. ಭಾರತೀಯರಾದ ನಾವೆಲ್ಲರೂ ಇಂದು ಅನುಭವಿಸುತ್ತಿರುವ ಸ್ವಾತಂತ್ರ್ಯ. ಸಮಾನತೆ, ರಕ್ಷಣೆ, ಉದ್ಯೋಗ ಮತ್ತು ಶಿಕ್ಷಣ ದ ಮೀಸಲಾತಿ ಇವೆಲ್ಲವೂ ಬಾಬಾ ಸಾಹೇಬರ ಸಂವಿಧಾನದ ಕೊಡುಗೆ ಯಾಗಿದೆ ಎಂದು ನುಡಿದರು.
ಇತ್ತೀಚೆಗೆ ಸಂವಿಧಾನ ಬದಲಾವಣೆ ಮಾಡಬೇಕು, ಎಸ್ ಸಿ ಎಸ್ ಟಿ ಮೀಸಲಾತಿ ರದ್ದು ಮಾಡಬೇಕು ಎಂದು ದೇಶದಾದ್ಯಂತ ಮನುವಾದಿ ಸಂಘಟನೆ ಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿವೆ. ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳುವವರಿಗೆ ಸಂವಿಧಾನದ ಬಗ್ಗೆ ಪೂರ್ಣ ಮಾಹಿತಿ ಇದೆ. ಆದರೆ ಸಂವಿಧಾನದ ನೇರ ಫಲಾನುಭವಿಗಳಾದ, ಎಸ್ ಸಿ ಮತ್ತು ಎಸ್ ಟಿ, ಒಬಿಸಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸಂವಿಧಾನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲದಿರುವುದು ದುರಂತ. ಈ ಕೊರತೆಯನ್ನು ನೀಗಿಸಲು ತಾವು ತಮ್ಮ ಕುಟುಂಬದ ಸದಸ್ಯರು ಮತ್ತು ಸ್ನೇಹಿತರು, ಹಾಗೂ ಬಂಧುಗಳೊಂದಿಗೆ ಈ ಸಮ್ಮೇಳನದಲ್ಲಿ ಭಾಗವಹಿಸಲು ಕೋರಿದರು.
ಸುದ್ದಿ ಗೋಷ್ಟಿಯಲ್ಲಿ ಪ್ರಜಾ ಪರಿವರ್ತನಾ ವೇದಿಕೆಯ ಹೆಚ್,ಕೆ, ಕೃಷ್ಣಅರಕೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಕೆ.ಓ. ಹನುಮಂತಪ್ಪ, ಸುನಿಲ್ ಯರಗನಾಳ್, ಜಿಲ್ಲಾ ವಿದ್ಯಾರ್ಥಿಮುಖಂಡ ಸಿದ್ದಪ್ಪಸಿಂಗಟಗೆರೆ, ನಾಗರಾಜ್ ಮಾದೇನಹಳ್ಳಿ ಅಣ್ಣಪ್ಪ ಚಿಕ್ಕಹಾಲಿವಾಣ,ಮಮತಾ ಕುರುವ, ಹೊನ್ನಾಳಿ ತಾಲೂಕ್ ಮಹಿಳಾ ಅಧ್ಯಕ್ಷೆ, ಸರಸ್ವತಿ ಬೇಲಿಮಲ್ಲೂರು, ಹೊನ್ನಾಳಿ ತಾಲೂಕ್ ಮಹಿಳಾ ಪ್ರಧಾನ ಕಾರ್ಯದರ್ಶಿ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


