ದಿನದ ಸುದ್ದಿ
ಹಣಕಾಸು ನಿರ್ವಹಣೆ ಪ್ರಗತಿಗೆ ದಾರಿ : ತರಳಬಾಳು ಶ್ರೀ
ಸುದ್ದಿದಿನ,ಸಿರಿಗೆರೆ: ಒಂದು ಸಂಸ್ಥೆಯ ಆಡಳಿತದಲ್ಲಿ ಹಣಕಾಸು ನಿರ್ವಹಣೆ ಪ್ರಮುಖವಾಗಿರುತ್ತದೆ. ಲೆಕ್ಕ ನಿರ್ವಹಣೆ ಸರಿಯಿದ್ದರೆ ಸಂಸ್ಥೆಯ ಹಣಕಾಸು ನಿರ್ವಹಣೆಯೂ ಸುಗಮವಾಗಿರುತ್ತದೆ ಎಂದು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಗುರುಶಾಂತೇಶ್ವರ ದಾಸೋಹ ಭವನದಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ 2017-18ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾಸಂಸ್ಥೆಗಳ ಲೆಕ್ಕಿಗರು ಲೆಕ್ಕ ನಿರ್ವಹಣೆಯಲ್ಲಿ ತಪ್ಪಾಗದಂತೆ ನೋಡಿಕೊಳ್ಳಬೇಕು. ಆಯವ್ಯಯ ಯೋಜನೆ ಮಂದಗತಿಯಲ್ಲಿ ಸಾಗಿದರೆ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ. ಲೆಕ್ಕ ನಿರ್ವಹಣೆಗೆ ಕಂಪ್ಯೂಟರ್ ಬಳಸಿದರೆ ಶ್ರಮ, ಸಮಯ ಉಳಿಯುತ್ತದೆ ಎಂದರು.
ಸೇವಾವಧಿಯಲ್ಲಿ ಮೃತಪಟ್ಟ 9 ನೌಕರರ ಕುಟುಂಬಗಳಿಗೆ 11,40,625 ರೂ.ಗಳ ಅನುಕಂಪ ನಿಧಿ ವಿತರಿಸಿ ಸಂತಾಪ ಸೂಚಿಸಲಾಗಿದೆ ಎಂದರು.
ಸೇವಾವಧಿಯಲ್ಲಿ ಮೃತಪಟ್ಟ 9 ನೌಕರರ ಕುಟುಂಬಗಳಿಗೆ 11,40,625 ರೂ.ಗಳ ಅನುಕಂಪ ನಿಧಿ ವಿತರಿಸಿ ಸಂತಾಪ ಸೂಚಿಸಲಾಗಿದೆ ಎಂದರು. 23ರಂದು ನಡೆಯುವ ಹಿರಿಯ ವಿದ್ಯಾರ್ಥಿಗಳ ಸಮಾವೇಶಕ್ಕೆ ಐದು ಸಾವಿರ ಮಂದಿ ಭಾಗವಹಿಸಲಿದ್ದಾರೆ. ಶ್ರದ್ಧಾಂಜಲಿ ಕಾರ್ಯಕ್ರಮದ ವೇಳೆ ಮೂರು ಸ್ಥಳಗಳಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಾಣೇಹಳ್ಳಿಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸಿದ್ದಯ್ಯ, ಸದಸ್ಯರಾದ ಕೆ.ಆರ್. ಜಯದೇವಪ್ಪ, ಪ್ರೊ. ಎಸ್.ಬಿ. ರಂಗನಾಥ್, ಸಿ. ಸಿದ್ದಪ್ಪ, ಎಸ್.ಎಸ್. ಪಾಟೀಲ್, ಎಸ್.ವಿ. ಬಸವರಾಜು, ಜಿ.ಟಿ. ಬಸವರಾಜು ಇತರರಿದ್ದರು. ಕೆ.ಜಿ. ಶಿವಮೂರ್ತಿ ವರದಿ ವಾಚಿಸಿದರು. ಎಂ.ಎಚ್. ಶಿವಕುಮಾರ್ ಆಯವ್ಯಯ ಪತ್ರ ಅಂಗೀಕಾರ ಪಡೆದರು. ಡಾ.ಟಿ.ಎನ್. ದೇವರಾಜು ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

-
ದಿನದ ಸುದ್ದಿ7 days agoದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days agoಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
-
ದಿನದ ಸುದ್ದಿ7 days agoಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
-
ದಿನದ ಸುದ್ದಿ7 days agoಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ9 minutes agoಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

