ಸಿನಿ ಸುದ್ದಿ
ವಿಜಿಗೆ ಪರಪ್ಪನ ಅಗ್ರಹಾರ ಖಾಯಂ..? : ದುನಿಯಾ ವಿಜಿ ಬಂಧನದ ಕಂಪ್ಲೀಟ್ ಡೀಟೆಲ್ಸ್
ಸುದ್ದಿದಿನ, ಬೆಂಗಳೂರು : ದುನಿಯಾ ವಿಜಿ ಹಾವಳಿ ಅತಿಯಾದ ಹಿನ್ನಲೆ ವಿಜಯ್ ಪ್ರಕರಣಗಳ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ನಗರ ಪೊಲೀಸ್ ಆಯುಕ್ತರ ಸೂಚನೆ ನೀಡಿದ್ದಾರೆ. ಡಿಸಿಪಿ ಶರಣ್ಪಗೆ ಸೂಚನೆ ನೀಡಿದ ಸುನೀಲ್ ಕುಮಾರ್ ದಕ್ಷಿಣ ವಿಭಾಗದಲ್ಲಿ ದುನಿಯಾ ವಿಜಯ್ ಮನೆಯಿದೆ ಹಾಗಾಗಿ ದಕ್ಷಿಣ ವಿಭಾಗದ ಪೊಲೀಸ್ರು ರೌಡಿಶೀಟ್ ಒಪನ್ ಮಾಡಬಹುದುಸಾರ್ವಜನಿಕ ವಲಯದಲ್ಲಿ ರೌಡಿಶೀಟ್ ಹಾಕುವ ಬಗ್ಗೆ ಮಾತುಗಳು ಕೇಳಿ ಬರುತ್ತಿರುವ ಹಿನ್ನಲೆ ಡಿಸಿಪಿಗೆ ಪ್ರಕರಣಗಳ ಮಾಹಿತಿ ಕೇಳಿದ್ದಾರೆ ಕಮೀಷನರ್.
ನಿರ್ಮಾಪಕ ಜಯಣ್ಣಗೆ ಬೆದರಿಕೆ
ದುನಿಯಾ ವಿಜಿ ಪ್ರಕರಣಕ್ಕೆ ಸಿಸಿಬಿ ಎಂಟ್ರಿ
ವೈಯಾಲಿ ಕಾವಲ್ ಠಾಣೆಗೆ ಸಿಸಿಬಿ ಇನ್ಸಪೆಕ್ಟರ್ ಪ್ರಕಾಶ್ ಆಗಮಿಸಿದರು. ಕೆಲವರಿಗೆ ಹಣದ ವಿಚಾರವಾಗಿ ಬೆದರಿಕೆ ಹಾಗೂ ಕಿಡ್ನಾಪ್ ಮಾಡುವುದಾಗಿ ಹೆದರಿಸಿರುವ ಆರೋಪ, ಹಾಗೂ ಆ ಪ್ರಕರಣಗಳಲ್ಲಿ ವಿಜಯ್ ವಿಚಾರಣೆ ಮಾಡಲಿರುವ ಸಿಸಿಬಿ. 2015ರಲ್ಲಿ ನಿರ್ಮಾಪಕ ಜಯಣ್ಣಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ವಿಜಯ್ ಸಿಸಿಬಿ ತನಿಖೆ ಎದುರಿಸಿದ್ದರು.
ನ್ಯಾಯಾಧೀಶರ ಹತ್ತಿರ ವಿಜಿಯನ್ನು ಕರೆದೊಯ್ಯುತ್ತಿರುವ ಪೋಲಿಸ್
ಇನ್ನು ಕೆಲವೇ ನಿಮಿಷಗಳಲ್ಲಿ ನ್ಯಾಯಾಧೀಶರ ಮುಂದೆ ವಿಜಿ ಹಾಗೂ ಪಟಾಲಂ ಎದುರಾಗಲಿದೆ. ಎನ್ ಜಿ ವಿ ಕೋರಮಂಗಲದ ಬಳಿ ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸಲಿದ್ದಾರೆ ಪೊಲೀಸರು. ವೈಯ್ಯಾಲಿ ಕಾವಲ್ ನಲ್ಲಿ ಸದ್ಯ ಆರೋಪಿಗಳ ವಿಚಾರಣೆ ಮಾಡುತ್ತಿರುವ ಪೊಲೀಸರು. ಇತ್ತ ವಿಜಯ ಕಡೆ ವಕೀಲರಿಂದ ಮಧ್ಯಂತರ ಜಾಮೀನು ಪಡೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಆದರೆ ಪ್ರಕರಣ ಗಂಬೀರವಾಗಿರುವುದರಿಂದ ಮಧ್ಯಂತರ ಜಾಮೀನು ಸಿಗುವುದಿಲ್ಲ. ಹಾಗಾಗಿ ವಿಜಯ್ ಅಂಡ್ ಪಟಾಲಂಗೆ ಇವತ್ತು ಪರಪ್ಪನ ಆಗ್ರಹಾರ ವಾಸ್ತವ್ಯ ಖಚಿತ.
ಕನ್ನಡ ಸಿನಿರಂಗದಿಂದ ವಿಜಿ ನಿಷೇಧ..?
ಖತಂ ಆಗಲಿದೆಯಾ ದುನಿಯಾ ಸಿನಿಮಾ ಭವಿಷ್ಯ. ಮಾಸ್ತಿಗುಡಿ ದುರಂತದಲ್ಲಿ ವಿಜಯ್ ರನ್ನ ಸಿನಿಮಾ ರಂಗದಿಂದ ನಿಷೇಧ ಹೇರಲಾಗಿತ್ತು
ಈಗ ಮತ್ತೆ ಜೈಲು ಪಾಲಾಗಲಿರುವ ದುನಿಯಾ ವಿಜಯ್ , ಈ ಹಿನ್ನಲೆ ವಿಜಯ್ ಭವಿಷ್ಯ ಡೋಲಾಯಮಾನ ಕ್ರಿಮಿನಲ್ ಬ್ಯಾಗ್ ಗ್ರೌಂಡ್ ಜಾಸ್ತಿಯಾಗುತ್ತಿರುವ ಹಿನ್ನಲೆ
ಚಿತ್ರರಂಗದಿಂದ ನಿಷೇಧ ಹೇರಲು ಚಿಂತನೆ..?
ಒಂದು ವೇಳೆ ರೌಡಿಶೀಟ್ ಒಪನ್ ಆದ್ರೆ ಚಿತ್ರರಂಗಕ್ಕೆ ಕಳಂಕ, ಈ ಹಿನ್ನಲೆ ದುನಿಯಾ ವಿಜಯ್ ನಿಷೇಧಕ್ಕೆ ಕನ್ಬಡ ಚಿತ್ರರಂಗದ ಚಿಂತನೆ..?
ಉಪಮುಖ್ಯಮಂತ್ರಿ ಪರಂ ಹೇಳಿಕೆ
ನಟ ದುನಿಯಾ ವಿಜಯ್ ಪ್ರಕರಣ ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಯಾವ ಅಧಿಕಾರಿಗೂ ನಾವು ಈ ತರಹದ ವಿಷಯದಲ್ಲಿ ಸೂಚನೆ ಬಿಡೋದಿಲ್ಲ.
ಅಲ್ಲಿನ ಗ್ರೌಂಡ್ ರಿಪೋರ್ಟ್ ನೋಡಿ ಕ್ರಮ ಕೈಗೊಳ್ಳುತ್ತಾರೆ. ಕಾನೂನನ್ನು ಯಾರು ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.
ವಿಜಿಯಿಂದ ಪ್ರತಿ ದೂರು
ನಟ ದುನಿಯಾ ವಿಜಯ್ ನಿಂದ ಪತ್ರಿದೂರು
ಹೈ ಗ್ರೌಂಡ್ ಠಾಣೆ ಮುಂದೆ ನನ್ನ ಹಾಗೂ ಮಗನ ಮೇಲೆ ಹಲ್ಲೆ ಠಾಣೆಗೆ ನಡೆದುಕೊಂಡು ಬರುತ್ತಿರುವಾಗ ಹಲ್ಲೆ ಅವ್ಯಾಚ ಶಬ್ದಗಳಿಂದ ನಿಂದನೆ ನನ್ನ ಕಾರ್ ನ್ನು ಸಹ ಡ್ಯಾಮೇಜ್ ಮಾಡಿದ್ದಾರೆ ಎಂದು ರಾತ್ರಿನೇ ದೂರು ನೀಡಿರುವ ವಿಜಿ IPC 506, 323, ಜೀವ ಬೆದರಿಕೆ , ಹಲ್ಲೆ ಅಡಿಯಲ್ಲಿ ಪ್ರಕರಣ ಹೈ ಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಬಜೀಮ್ ಟೈನರ್ ಪಾನಿ ಪುರಿ ಕಿಟ್ಟಿ ಹಾಗೂ ಇತರರ ವಿರುದ್ದ ಹೈ ಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಿ ಮಾದಕವಸ್ತು ಸೇವನೆ
ಮಾದಕ ವಸ್ತು ಸೇವನೆ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವ ಪೊಲೀಸರು. ಘಟನೆ ನಡೆದಾಗ ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ
ಈ ಹಿನ್ನಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿರುವ ವೈದ್ಯರು, ವೈದ್ಯಕೀಯ ವರದಿ ಬಂದರೆ ಎನ್ ಡಿ ಪಿ ಎಸ್ ಆಕ್ಟ್ ಕೂಡ ಸೇರ್ಪಡೆಯಾಗುತ್ತೆ. ಡ್ರಗ್ಸ್ ಸೇವನೇ ಮಾಡಿ ಈ ಕೃತ್ಯ ಎಸಗಿರುವ ವಿಜಯ್ ಎಂಬ ಅನುಮಾನದ ಹಿನ್ನಲೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿ್ದೆ.
ಎನ್ ಡಿ ಪಿ ಎಸ್ ಆಕ್ಟ್ ಮಾದಕ ವಸ್ತುಗಳ ಸೇವನೆ ಕಾಯ್ದೆ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು.
ರೌಡಿ ಶೀಟರ್ ವಿಜಯ್
ಶಾಶ್ವತವಾಗಿ ರೌಡಿಗಳ ಸಾಲಿಗೆ ಸೇರ್ತಾರಾ ದುನಿಯಾ ವಿಜಿ? ದುನಿಯಾ ವಿಜಿ ಮೇಲೆ ರೌಡಿಶೀಟರ್ ಓಫನ್ ಮಾಡೋಕೆ ಚಿಂತನೆ ನಡೆಸಿರೋ ನಗರ ಪೊಲೀಸ್ ಇಲಾಖೆ ಬೆಂಗಳೂರು ದಕ್ಷಿಣ ವಿಭಾಗದಲ್ಲಿ ರೌಡಿಶೀಟರ್ ತೆರೆಯುವ ಸಾಧ್ಯತೆ ಇದೆ. ದುನಿಯಾ ವಿಜಯ ಗಲಾಟೆಗಳಿಂದ ಬೇಸತ್ತ ನಗರ ಪೊಲೀಸ್ ಇಲಾಖೆಯು ಪದೇ-ಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ ದುನಿಯಾ ವಿಜಿ ಹೊಡೆದಾಟ, ಗಲಾಟೆ,ಧಮಕಿ,ಪೊಲೀಸರ ಕರ್ತವ್ಯಕ್ಕೆ ಅಡ್ಡಿ ನಿವೃತ್ತ ಯೋಧರ ಮೇಲೆ ಹಲ್ಲೆ ಹೀಗೆ ಹೀಗೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ದುನಿಯಾ ವಿಜಯ್ ಗೂಂಡಾ ಪ್ರವೃತ್ತಿಯಿಂದ ಬೇಸತ್ತ ಪೊಲೀಸರು
ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ರೌಡಿಶೀಟರ್ ತೆರೆಯಲು ಪೊಲೀಸ ಇಲಾಖೆ ಸಿದ್ಧತೆ ಮಾಡಿದೆ.
ವಿಜಿ ಮೇಲಿರುವ ಕೇಸ್ ಗಳು
ಈ ಮೊದಲು ದುನಿಯಾ ವಿಜಿ ಮೇಲೆ ದಾಖಲಾಗಿದ್ದ ಕೇಸ್ಗಳು. ಮೇ 31 2018. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದ ಮೇರೆಗೆ ಎಫ್ಐಆರ್.
ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲು. IPC 353 ಪೊಲೀಸ್ ಆಧಿಕಾರಿಯ ಕರ್ತವ್ಯಕ್ಕೆ ಆಡ್ಡಿ ಪಡಿಸಿದ್ದು. 255 ಕರ್ತವ್ಯ ನಿರತ ಪೊಲೀಸ್ ಜೊತೆ ವಾಗ್ವಾದಕ್ಕಿಳಿದಿದ್ದು. ಜನವರಿ 18 2013 ಪತ್ನಿ ನಾಗರತ್ನಗೆ ಜೀವ ಬೆದರಿಕೆಯೊಡ್ಡಿದ ವಿಜಿ.
ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು.
ಹಾಗೂ ವಿಜಿ ಸಂಬಂಧಿ ಶಿವಶಂಕರಗೌಡ ಎಂಬಾತನಿಗೆ ಹಲ್ಲೆಗೆ ಮುಂದಾಗಿದ್ದ. ಎರಡು ಪ್ರಕರಣ ದಾಖಲಿಸಿದ್ದ ಸಿಕೆ ಅಚ್ಚುಕಟ್ಟು ಪೊಲೀಸರು, ಬಳಿಕ ಜನವರಿ 17 2013 ರಲ್ಲಿ ಕೌಟುಂಬಿಕ ನ್ಯಾಯಲಯದಲ್ಲಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದರು ಪತ್ನಿ ನಾಗರತ್ನ.
ಆರೋಪ ಸಾಬೀತಾದರೆ ವಿಜಿ ಈ ಶಿಕ್ಷೆ
363 ಕಿಡ್ನ್ಯಾಪ್ ಸಾಬೀತಾದರೆ 7 ವರ್ಷ ಶಿಕ್ಷೆ ಜೊತೆಗೆ ದಂಡ. ಜಾಮೀನು ರಹಿತ ಅಪರಾಧ
323, ಸಾಮೂಹಿಕ ಹಲ್ಲೆಗೆ ಶಿಕ್ಷೆ ಗರಿಷ್ಟ ಒಂದು ವರ್ಷ ಶಿಕ್ಷೆ ಒಂದು ಸಾವಿರ ದಂಡ . 506 ,ಕೊಲೆ ಬೆದರಿಕೆ ಗರಿಷ್ಠ ಏಳು ವರ್ಷ ಶಿಕ್ಷೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ
~ಡಾ. ಪುಷ್ಪಲತ ಸಿ ಭದ್ರಾವತಿ
ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು
ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.
ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.
ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.
ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.
ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


