ರಾಜಕೀಯ
ಖಾತೆ ಬದಲಿಸದಿದ್ದರೆ ರಾಜೀನಾಮೆ ಕೊಡುವೆ : ಕಾಂಗ್ರೆಸ್ ಸಚಿವ ವೆಂಕಟರಮಣಪ್ಪ
ಸುದ್ದಿದಿನ ಡೆಸ್ಕ್ : ಸಮ್ಮಿಶ್ರ ಸರಕಾರಕ್ಕೆ ಮತ್ತೆ ರಾಜೀನಾಮೆ ಸಂಕಟ ಶುರುವಾಗಿದ್ದು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಕಾರ್ಮಿಕ ಸಚಿವ ವೆಂಕಟರಮಣಪ್ಪ.
ಇಲಾಖೆಯ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಸಹಕಾರ ಆರೋಪ ವ್ಯಕ್ತಪಡಿಸಿದ್ದು ಅನುದಾನ ಬಿಡುಗಡೆ, ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿಕೆಯಲ್ಲಿ ಅಧಿಕಾರಿಗಳ ಸಹಕಾರ ಇಲ್ಲ. ಈ ಹಿನ್ನೆಲೆಯಲ್ಲಿ ಖಾತೆಯನ್ನು ಬದಲಿಸಿಕೊಡುವಂತೆ ಮನವಿಮಾಡಿದ್ದಾರೆ. ಖಾತೆ ಬದಲಿಸಿಕೊಡದಿದ್ದರೆ ರಾಜೀನಾಮೆ ಬೆದರಿಕೆ ಒಡ್ಡಿದ್ದಾರೆ ಸಚಿವ ವೆಂಕಟರಮಣಪ್ಪ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ
ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100 ಪ್ರತಿಶತ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದಾರೆ.
ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, ಈ ದೇಶಗಳು ಯುಎಸ್ ಡಾಲರ್ ಅನ್ನು ಬದಲಿಸುವ ಕೆಲಸ ಮಾಡುವುದಿಲ್ಲ ಎಂಬ ಬದ್ಧತೆಯ ಅಗತ್ಯವಿದೆ. ಅಂತರಾಷ್ಟ್ರೀಯ ವ್ಯಾಪಾರದಲ್ಲಿ ಬ್ರಿಕ್ಸ್ ಅಮೆರಿಕಾ ಡಾಲರ್ ಅನ್ನು ಬದಲಿಸುವ ಯಾವುದೇ ಅವಕಾಶವಿಲ್ಲ, ಮತ್ತು ಇದನ್ನು ಪ್ರಯತ್ನಿಸುವ ಯಾವುದೇ ದೇಶ ಅಮೆರಿಕದೊಂದಿಗಿನ ಸಂಬಂಧಗಳಿಗೆ ವಿದಾಯ ಹೇಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ
-
ದಿನದ ಸುದ್ದಿ7 days ago
ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ
-
ದಿನದ ಸುದ್ದಿ4 days ago
ದಾವಣಗೆರೆ | 14 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಎ.ಬಿ.ರಾಮಚಂದ್ರಪ್ಪ ಆಯ್ಕೆ
-
ದಿನದ ಸುದ್ದಿ2 days ago
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ