ದಿನದ ಸುದ್ದಿ

ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಕುರಿತಂತೆ ಚರ್ಚೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್.ಡಿ ಕುಮಾರಸ್ವಾಮಿ ಇಂದು ಬೆಂಗಳೂರಿನಲ್ಲಿ ಉದ್ಯಮಿ ಮೋಹನ್‌ದಾಸ್ ಪೈ ಅವರನ್ನು ಭೇಟಿಯಾದರು.

ಈ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಬರೆದುಕೊಂಡಿರುವ ಹೆಚ್.ಡಿ ಕುಮಾರಸ್ವಾಮಿ ಉದ್ಯಮಿಗಳಾದ ಮೋಹನ್‌ದಾಸ್ ಪೈ, ಅಭಯ್ ಜೈನ್ ಮತ್ತು ಉಮಾಕಾಂತ್ ಸೋನಿ ಅವರನ್ನು ಭೇಟಿಯಾಗಿ ಹಲವು ವಿಚಾರಗಳನ್ನು ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ರೊಬೊಟಿಕ್ಸ್ ಮತ್ತು ಉತ್ಪಾದನೆಯ ಕುರಿತು ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಮುಂಬರುವ ದಿನಗಳಲ್ಲಿ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಹೇಗೆ ಸೃಷ್ಟಿಸಬಹುದು ಎಂಬುದರ ಕುರಿತಾಗಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version