ಕ್ರೀಡೆ
ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ್ದ ಹುಡುಗಿಗೆ ಸಿಗಲಿವೆ ವಿಶೇಷ ಶೂ !

ಸುದ್ದಿದಿನ ಡೆಸ್ಕ್: ಇಂಡೋನೇಷಿಯಾದಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಓಟಗಾರ್ತಿ ಸ್ವಪ್ನ ಬರ್ಮನ್ ಅವರಿಗೆ ವಿಶೇಷ ಶೂಗಳು ಸಿಗಲಿವೆ !
ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟ ಓಟಗಾರ್ತಿ ಸ್ವಪ್ನ ಬರ್ಮನ್ ಅವರಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ಅಡಿಡಾಸ್ ಶೂ ನೀಡಲು ಭಾರತೀಯ ಕ್ರೀಡಾ ಪ್ರಾಧಿಕಾರ ಒಪ್ಪಿಕೊಂಡಿದೆ.
ಸ್ವಪ್ನ ತಮ್ಮ ಎರಡೂ ಕಾಲುಗಳಲ್ಲಿ ಆರು ಬೆರಳುಗಳನ್ನು ಹೊಂದಿದ್ದು, ಅವರಿಗಾಗಿಯೇ ವಿಶೇಷ ಶೂ ನಿರ್ಮಿಸಲು ಅಡಿಡಾಸ್ ಒಪ್ಪಿಕೊಂಡಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರದ ಪ್ರಧಾನ ನಿರ್ದೇಶಕಿ ನೀಲಮ್ ಕಪೂರ್ ಹೇಳಿದ್ದಾರೆ.
ಕ್ರೀಡೆ
ಫೆ. 5 ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ : ಕೋವಿಡ್ ಮಾರ್ಗಸೂಚಿ ಅನುಸರಿಸಿ ಸ್ಪರ್ಧೆಗಳ ಆಯೋಜನೆ : ಮಹಾಂತೇಶ್ ಬೀಳಗಿ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೌಕರರ ಸಂಘದ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಫೆ. 5 ರಿಂದ ಮೂರು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ಬಾರಿ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆ. 5, 6 ಮತ್ತು 7 ರಂದು ಮೂರು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಅನುಸರಿಸಿ, ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಗಿದೆ.
ಕ್ರೀಡಾಕೂಟ ಆಯೋಜನೆ ಸ್ಥಳಗಳಲ್ಲಿ ಕಡ್ಡಾಯವಾಗಿ ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು. ಅಧಿಕಾರಿಗಳು ಹಾಗೂ ನೌಕರರ ಸಂಘದವರು ಸರ್ಕಾರದ ಶಿಷ್ಠಾಚಾರದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳನ್ನು ಸಮಾರಂಭಕ್ಕೆ ಆಹ್ವಾನಿಸಬೇಕು.
ನೌಕರರ ಸಂಘದ ತಾಲ್ಲೂಕು ಘಟಕಗಳು ಆಯಾ ತಾಲ್ಲೂಕಿನಲ್ಲಿ ಸಭೆ ನಡೆಸಿ, ಕ್ರೀಡಾಕೂಟ ಆಯೋಜನೆ ಬಗ್ಗೆ ಮಾಹಿತಿ ದೊರೆಯುವಂತೆ ಮಾಡಿ, ಎಲ್ಲ ನೌಕರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಬೇಕು. ಕ್ರೀಡಾಕೂಟದ ಯಶಸ್ವಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅಗತ್ಯ ಸಹಕಾರ, ನೆರವು ನೀಡಲಿದೆ. ಒಟ್ಟಾರೆ ಕ್ರೀಡಾಕೂಟದಲ್ಲಿ ನೌಕರರು ಸಂತಸ, ಸಂಭ್ರಮದಿಂದ ಪಾಲ್ಗೊಳ್ಳುವಂತಾಗಬೇಕು.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ವ್ಯವಸ್ಥಿತ ರೀತಿಯಲ್ಲಿ ಊಟೋಪಹಾರ, ಟೀಶರ್ಟ್ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ತಾವೂ ಸಹ ಷಟಲ್ ಬ್ಯಾಡ್ಮಿಂಟನ್ ಆಟಗಾರನಾಗಿದ್ದು, ಖುದ್ದು ಸ್ಪರ್ಧೆಯಲ್ಲಿ ಪಾಲ್ಗೊಂಡು ನೌಕರರಿಗೆ ಪ್ರೋತ್ಸಾಹಿಸುತ್ತೇನೆ ಎಂದು ಹೇಳಿದರು.
ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮಾತನಾಡಿ, ಕ್ರೀಡಾಕೂಟ ಆಯೋಜನೆಗೆ ಸರ್ಕಾರದಿಂದ 1.5 ಲಕ್ಷ ರೂ. ಹಾಗೂ ಜಿಲ್ಲಾ ಪಂಚಾಯತ್ನಿಂದ 3 ಲಕ್ಷ ಸೇರಿದಂತೆ 4.5 ಲಕ್ಷ ರೂ. ಅನುದಾನದ ಲಭ್ಯತೆಯಾಗಲಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಬಯಸುವ ನೌಕರರು ತಮ್ಮ ಹೆಸರು ಹಾಗೂ ವಿವರದೊಂದಿಗೆ ನೊಂದಣಿ ಮಾಡಿಸಲು ಜ. 28 ಕೊನೆಯ ದಿನವಾಗಿದೆ. ನಿಗದಿತ ಅವಧಿಯೊಳಗೆ ನೊಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಕೊನೆಯ ಹಂತದಲ್ಲಿ ಸ್ಪರ್ಧೆಗಳಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶವಿಲ್ಲ ಎಂದರು.
ಈ ಬಾರಿಯ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆ ಅಂಗವಾಗಿ, ನೌಕರರ ಸಮುದಾಯ ಭವನದಲ್ಲಿ ಸ್ಪರ್ಧೆಗಳ ಆಯೋಜನೆ ಬಳಿಕ ಸಂಜೆ ವೇಳೆ ಖ್ಯಾತ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಏಪ್ರಿಲ್ 21 ರ ದಿನವನ್ನು ರಾಜ್ಯ ಸರ್ಕಾರಿ ನೌಕರರ ದಿನವನ್ನಾಗಿ ಆಚರಿಸಲು ಸರ್ಕಾರ ಆದೇಶಿಸಿದ್ದು, ಅದರಂತೆ ಅತ್ಯುತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಗಣರಾಜ್ಯೋತ್ಸವ ಸಮಾರಂಭದ ಬದಲಿಗೆ ಏ. 21 ರಂದು ಜರುಗುವ ನೌಕರರ ದಿನಾಚರಣೆಯಂದು ಪ್ರದಾನ ಮಾಡುವಂತೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಮನವಿ ಮಾಡಿದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಅವರು ಮಾತನಾಡಿ, ನೌಕರರ ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆಗಳು ವಯೋಮಿತಿ ಆಧಾರದಲ್ಲಿ ಜರುಗಲಿವೆ. ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್, ಫುಟ್ಬಾಲ್, ಹಾಕಿ, ಕ್ರಿಕೆಟ್, ಬ್ಯಾಸ್ಕೇಟ್ಬಾಲ್ ಮತ್ತಿತರೆ ಕ್ರೀಡೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿ, ಕುಸ್ತಿ- ಆಂಜನೇಯ ಬಡಾವಣೆಯ ಕುಸ್ತಿ ಒಳಾಂಗಣ ಕ್ರೀಡಾಂಗಣ, ಚೆಸ್, ಕೇರಂ, ಷಟಲ್ ಬ್ಯಾಡ್ಮಿಂಟನ್- ಎಸ್ಎಸ್ ಬಡಾವಣೆಯ ನೇತಾಜಿ ಸುಭಾಷ್ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅಲ್ಲದೆ ಸಾಂಸ್ಕøತಿಕ ಸ್ಪರ್ಧೆಗಳನ್ನು ರಿಂಗ್ ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸಿದ್ದಲಿಂಗಸ್ವಾಮಿ, ಖಜಾಂಚಿ ಕಲ್ಲೇಶ್ವರಪ್ಪ, ಸಂಘಟನಾ ಕಾರ್ಯದರ್ಶಿ ಮಂಜಮ್ಮ, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಜಗಳೂರು- ಎನ್.ಸಿ. ಅಜ್ಜಯ್ಯ, ಹೊನ್ನಾಳಿ-ಚಂದ್ರಶೇಖರ್, ಹರಿಹರ-ರೇವಣಸಿದ್ದಪ್ಪ, ನ್ಯಾಮತಿ-ನಾಗರಾಜ್ ಹಾಗೂ ಚನ್ನಗಿರಿ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ ಮುಂತಾದವರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಕ್ರಿಕೆಟಿಗ ಸುರೇಶ್ ರೈನಾ ಬಂಧನ ; ಬಿಡುಗಡೆ : ಕಾರಣ..!?

ಸುದ್ದಿದಿನ,ಮುಂಬೈ: ಮುಂಬೈನ ವಿಮಾನ ನಿಲ್ದಾಣದ ಹತ್ತಿರ ಡ್ರಾಗನ್ ಫ್ಲೈ ಕ್ಲಬ್ ಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವ ಅವರನ್ನು ಬಂಧಿಸಿದರು.
ಕೋವಿಡ್ -19 ನಿಯಾಮಾವಳಿಗಳ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗುರು ರಾಂಧವ ಸೇರಿದಂತೆ 34 ಜನರನ್ನು ಪೊಲೀಸರು ಬಂಧಿಸಿದ್ದು, ಇವರಲ್ಲಿ ಏಳು ಮಂದಿ ಕ್ಲಬ್ ನ ಉದ್ಯೋಗಿಗಳಿದ್ದಾರೆ.
ಬಂಧಿತರ ಮೇಲೆ ಮೇಲೆ ಐಪಿಸಿ ಸೆಕ್ಷನ್ 188, 269, 34 ಅಡಿಯಲ್ಲಿ ಕೇಸು ದಾಖಲು ಮಾಡಿದ್ದು, ಸದ್ಯ ಬಂಧಿತ ಆರೋಪಿಗಳನ್ನು ಜಾಮೀನಿ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಂದ ಸಂಗೀತ ನೃತ್ಯ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಜಗಳೂರು | ಮ್ಯಾಸ ನಾಯಕ ಬುಡಕಟ್ಟು ಜನಾಂಗದ ಸಮಿತಿಯಿಂದ ದೇವರ ಎತ್ತುಗಳಿಗೆ ಮೇವು ಸಂಗ್ರಹಣೆ
-
ದಿನದ ಸುದ್ದಿ6 days ago
ಹುಬ್ಬಳ್ಳಿ- ಧಾರವಾಡ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ನಿತೇಶ ಪಾಟೀಲ
-
ದಿನದ ಸುದ್ದಿ6 days ago
ಸಂತೇಬೆನ್ನೂರು | ರಾಷ್ಟ್ರಪತಿ ಪದಕ ಪ್ರಶಸ್ತಿ ವಿಜೇತ ನಿವೃತ್ತ ಎ.ಸಿ.ಪಿ ರುದ್ರಪ್ಪ ಎಮ್ ಎನ್. ಅವರಿಗೆ ಗ್ಯಾಲಕ್ಸಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಭಿನಂದನಾ ಕಾರ್ಯಕ್ರಮ
-
ದಿನದ ಸುದ್ದಿ5 days ago
ದಾವಣಗೆರೆ | 120 ಕೋಟಿ ವೆಚ್ಚದಲ್ಲಿ ನೂತನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣ : ಸಂಸದ ಜಿ.ಎಂ.ಸಿದ್ದೇಶ್ವರ
-
ದಿನದ ಸುದ್ದಿ5 days ago
ಕೆಎಸ್ಆರ್ಟಿಸಿ ನೌಕರರು ಆತಂಕಕ್ಕೆ ಒಳಗಾಗುವುದು ಬೇಡ : ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ
-
ದಿನದ ಸುದ್ದಿ6 days ago
ಮಹಾಜನ್ ವರದಿಯೇ ಅಂತಿಮ ; ಉದ್ಭವ್ ಠಾಕ್ರೆ ಉದ್ಧಟ ನುಡಿಗೆ ಯಡಿಯೂರಪ್ಪ ತಿರುಗೇಟು
-
ದಿನದ ಸುದ್ದಿ6 days ago
ಈ ಶೈಕ್ಷಣಿಕ ವರ್ಷದಿಂದ ಹೊಸ ಕೇಂದ್ರೀಯ ವಿದ್ಯಾಲಯ ಆರಂಭಕ್ಕೆ ಕ್ರಮ : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ