ದಿನದ ಸುದ್ದಿ
ರಾಜ ರಾಜೇಶ್ವರಿ ಶಾಲೆಗೆ ಎ ಗ್ರೇಡ್ ; ಅಭಿನಂದನಾ ಪತ್ರ ಹಸ್ತಾಂತರ
ಸುದ್ದಿದಿನ ಡೆಸ್ಕ್ : 2021 – 22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿರುವ ಮಲೇಬೆನ್ನೂರು ಜಿಗಳಿ ರಸ್ತೆಯ ಒಡೆಯರ್ ಬಸಾಪುರ ಗ್ರಾಪಂ ವ್ಯಾಪ್ತಿಯ ಪಟೇಲ್ ಬಸಪ್ಪ ಎಜುಕೇಶನ್ ಅಸೋಸಿಯೇಶನ್ ನ ರಾಜ ರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನೀಡಲಾದ ಎ – ಗ್ರೇಡ್ ಅಭಿನಂದನಾ ಪತ್ರವನ್ನು ಗುರುವಾರ ಸಮಾರಂಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶಶಿಧರ ಎಸ್ ಅವರು ಸಂಸ್ಥೆಯ ಕಾರ್ಯದರ್ಶಿ ಜಿ.ಬಿ ಶಿವಾನಂದಪ್ಪ ಅವರಿಗೆ ಹಸ್ತಾಂತರಿಸಿದರು.
ಪ್ರಾಂಶುಪಾಲರಾದ ಶ್ರೀಮತಿ ಸುಜಾತ ಶಿವಾನಂದಪ್ಪ ಮಾತನಾಡಿ, ಶಾಲೆಯ ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿದ ಎಲ್ಲಾ ಶಿಕ್ಷಕರ ಶ್ರಮ ಹಾಗೂ ಆಡಳಿತ ಮಂಡಳಿಯ ಸಹಕಾರವನ್ನು ಸ್ಮರಿಸುವ ಜೊತೆ ತಮ್ಮ ಶಾಲೆಗೆ ಸಿಕ್ಕಿರುವ ಶ್ರೇಣಿಯನ್ನು ಕಾಪಾಡಿಕೊಂಡು ಹೋಗೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ರವೀಂದ್ರ, ಆಸೀಫುಲ್ಲಾ, ಶಿಕ್ಷಕಿಯರಾದ ಕವಿತಾ ಕೊಮಾರನಹಳ್ಳಿ, ಪ್ರತಿಭಾ, ನಗೀನಾ, ಶಾಂತಾ, ಭಾಗ್ಯ, ಅನುಷಾ, ಚಂದನ, ಶೋಭಾ, ಭಾನುಮತಿ ಸೇರಿದಂತೆ ಇತರರು, ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ: ‘ಸಕಾಲ’ ಸೇವೆಗೆ ಭೌತಿಕ ಆರ್ಟಿಐ ಅರ್ಜಿಗಳ ಸೇರ್ಪಡೆ, ಗ್ರಾಮ ಒನ್ನಲ್ಲೂ ಲಭ್ಯ
ಸುದ್ದಿದಿನ,ಬೆಂಗಳೂರು: ನಾಗರಿಕರಿಗೆ ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಎರಡು ಪ್ರಮುಖ ಹಾಗೂ ನೂತನ ನಿರ್ಧಾರಗಳನ್ನು ಕೈಗೊಂಡಿದೆ.
ಭೌತಿಕ ಆರ್ಟಿಐ ಅರ್ಜಿಗಳ ದಾಖಲಾತಿ ಈಗ ‘ಸಕಾಲ’ ಸೇವೆ
ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ (ಕಾಗದದ ರೂಪದ) ಆರ್ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್ಟಿಐ ಆನ್ಲೈನ್ ಪೋರ್ಟಲ್ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು.
ಇದನ್ನು ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ರ ಅಡಿಯಲ್ಲಿ ಖಾತ್ರಿ ಸೇವೆಯಾಗಿ ಅಧಿಸೂಚಿಸಲಾಗಿದೆ. ಇದರಿಂದ ಪ್ರತಿಯೊಬ್ಬ ಅರ್ಜಿದಾರರಿಗೂ ಆನ್ಲೈನ್ ನೋಂದಣಿ ಸಂಖ್ಯೆ ದೊರೆಯಲಿದ್ದು, ಅರ್ಜಿಯ ಸ್ಥಿತಿಗತಿಯನ್ನು (Status) ಯಾವಾಗ ಬೇಕಾದರೂ ಪರಿಶೀಲಿಸಬಹುದು.
ಅರ್ಜಿಗಳು ಕಳೆದುಹೋಗುವ ಅಥವಾ ನಿರ್ಲಕ್ಷ್ಯಕ್ಕೆ ಒಳಗಾಗುವ ಸಾಧ್ಯತೆ ಇರುವುದಿಲ್ಲ. ನಿಯಮಿತ ۲ ದಿನಗಳಲ್ಲಿ ಪೋರ್ಟಲ್ನಲ್ಲಿ ದಾಖಲಿಸದಿದ್ದರೆ ನಾಗರಿಕರು ಸಕಾಲ ಕಾಯ್ದೆಯಡಿ ಪರಿಹಾರ ವೆಚ್ಚ ಪಡೆಯಲು ಅರ್ಹರಾಗಿರುತ್ತಾರೆ ಹಾಗೂ ಸಂಬಂಧಪಟ್ಟ ಅಧಿಕಾರಿಯೇ ಇದಕ್ಕೆ ಹೊಣೆಗಾರರಾಗುತ್ತಾರೆ.
ಎಲ್ಲಾ ಒನ್ ಕೇಂದ್ರಗಳಲ್ಲಿ ಆನ್ಲೈನ್ ಆರ್ಟಿಐ ಸೇವೆ ಲಭ್ಯ
ಇಂಟರ್ನೆಟ್ ಅಥವಾ ಕಂಪ್ಯೂಟರ್ ಬಳಕೆ ತಿಳಿಯದ ಸಾರ್ವಜನಿಕರನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದ ಎಲ್ಲಾ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್ಲೈನ್ ಆರ್ಟಿಐ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ.
ನಾಗರಿಕರು ತಮ್ಮ ಸಮೀಪದ ಕೇಂದ್ರಕ್ಕೆ ತೆರಳಿ ಸಿಬ್ಬಂದಿಯ ನೆರವಿನಿಂದ ಅರ್ಜಿ ಸಲ್ಲಿಸಬಹುದು.
ನಿಗದಿತ ಆರ್ಟಿಐ ಶುಲ್ಕ ಮತ್ತು ಕೇಂದ್ರದ ನಾಮಮಾತ್ರ ಸೇವಾ ಶುಲ್ಕವನ್ನು ಪಾವತಿಸಿ, ಸ್ಥಳದಲ್ಲೇ ಆನ್ಲೈನ್ ಸ್ವೀಕೃತಿ (Acknowledgement) ಪಡೆಯಬಹುದು.
ಗ್ರಾಮ ಪಂಚಾಯಿತಿ ಮಟ್ಟದ ‘ಗ್ರಾಮ ಒನ್’ ಕೇಂದ್ರಗಳ ಮೂಲಕ ಈಗ ಹಳ್ಳಿಯ ಪ್ರತಿಯೊಬ್ಬ ನಾಗರಿಕರಿಗೂ ಆನ್ಲೈನ್ ಆರ್ಟಿಐ ಸೌಲಭ್ಯ ತಲುಪಿದೆ.
ಪ್ರಮುಖ ಪ್ರಯೋಜನಗಳು
ಏಕರೂಪದ ವೇದಿಕೆ: ಭೌತಿಕ, ಆನ್ಲೈನ್ ಅಥವಾ ಸೇವಾ ಕೇಂದ್ರಗಳ ಮೂಲಕ ಬರುವ ಎಲ್ಲಾ ಅರ್ಜಿಗಳು ಒಂದೇ ವೇದಿಕೆಯಡಿ ಬರಲಿವೆ. ಪಾರದರ್ಶಕತೆ: ಆರ್ಟಿಐ ಕಾಯ್ದೆ 2005ರ ಕಾಲಮಿತಿಗಳ ಪಾಲನೆಯನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು.
ಇದರಿಂದ ಮಾಹಿತಿ ಅಧಿಕಾರಿಗಳಿಂದಾಗುವ ವಿಳಂಬವನ್ನು ಶೀಘ್ರವಾಗಿ ಗುರುತಿಸಬಹುದು.
ನಾಗರಿಕರಿಗೆ ತಮ್ಮ ಅರ್ಜಿಗಳ ವಿಶ್ವಾಸಾರ್ಹ ದಾಖಲೆ ಲಭ್ಯವಾಗುತ್ತದೆ.
ಸಾರ್ವಜನಿಕರು ನೇರವಾಗಿ ಆನ್ಲೈನ್ನಲ್ಲಾಗಲಿ ಅಥವಾ ತಮ್ಮ ಸಮೀಪದ ಸೇವಾ ಕೇಂದ್ರಗಳ (ಬೆಂಗಳೂರು ಒನ್/ಕರ್ನಾಟಕ ಒನ್/ಗ್ರಾಮ ಒನ್) ಮೂಲಕವಾಗಲಿ ಅರ್ಜಿ ಸಲ್ಲಿಸಿ ಈ ಸೌಲಭ್ಯದ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆಆರ್.ಐ.ಡಿ.ಎಲ್ ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್ಲೈನ್ ಕೌನ್ಸಿಲಿಂಗ್ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.
ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.
ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು
-
ದಿನದ ಸುದ್ದಿ2 hours agoಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ: ‘ಸಕಾಲ’ ಸೇವೆಗೆ ಭೌತಿಕ ಆರ್ಟಿಐ ಅರ್ಜಿಗಳ ಸೇರ್ಪಡೆ, ಗ್ರಾಮ ಒನ್ನಲ್ಲೂ ಲಭ್ಯ

