ದಿನದ ಸುದ್ದಿ
ಮಾಧ್ಯಮ ಕ್ಷೇತ್ರದ ವಿವಿಧ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಸಚಿವ ಅನುರಾಗ್ ಸಿಂಗ್ ಠಾಕೂರ್
ಸುದ್ದಿದಿನ ಡೆಸ್ಕ್ : ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವುದಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮ ಸಂಸ್ಥೆಗಳ ಸಂಪಾದಕರು ಮತ್ತು ಹಿರಿಯ ಪತ್ರಕರ್ತರೊಂದಿಗೆ ಅನೌಪಚಾರಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುದ್ರಣ ಕಾಗದದ ಬೆಲೆ ಏರಿಕೆ, ಡಿಎವಿಪಿ ಜಾಹೀರಾತು, ಯೂಟ್ಯೂಬ್ ಚಾನಲ್‌ಗಳಲ್ಲಿನ ಸುಳ್ಳು ಸುದ್ದಿಗಳ ಹಾವಳಿ ತಡೆ ಕುರಿತಂತೆ ಪತ್ರಕರ್ತರು ಸಲ್ಲಿಸಿರುವ ಬೇಡಿಕೆಗಳನ್ನು ಪರಿಶೀಲಿಸಿ, ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ, ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದರು.
ನಿನ್ನೆ ಮುಕ್ತಾಯಗೊಂಡ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರತಿನಿಧಿಗಳೊಂದಿಗೆ ನಡೆಸಿದ ಮಾತುಕತೆಯ ಬಗ್ಗೆಯೂ ಕೇಂದ್ರ ಸಚಿವರು ಪ್ರಸ್ತಾಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243