ಸಿನಿ ಸುದ್ದಿ
ನೆರೆ ಸಂತ್ರಸ್ತರಿಗೆ ಹಾಡಿನ ಮೂಲಕ ಧೈರ್ಯ ತುಂಬಿದ ರೆಹಮಾನ್ !
ಸುದ್ದಿದಿನ ಡೆಸ್ಕ್: ಮಹಾಮಳೆಗೆ ಸಂತ್ರಸ್ತರಾದ ಕೇರಳದ ಜನರಿಗೆ ಸಾಂತ್ವನದ ಮಾತುಗಳು ಜಗತ್ತಿನ ವಿವಿಧ ಭಾಗಗಳಿಂದ ಕೇಳಿ ಬರುತ್ತಿವೆ. ಕೆಲವರು ಧನ ಸಹಾಯ ಮಾಡುತ್ತಿದ್ದರೆ ಮತ್ತೆ ಕೆಲವರು ವಸ್ತುಗಳನ್ನು ನೀಡಿ ಸಹಕಾರ ತೋರುತ್ತಿದ್ದಾರೆ. ಇನ್ನು ಏರ್ ವೇಸ್ ವಿಮಾನ ಕಂಪನಿ ಉಚಿತ ಟಿಕೆಟ್ ನೀಡಿತ್ತು.
ಸದ್ಯ ನೆರೆ ಸಂತ್ರಸ್ತರಿಗೆ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಕೂಡ ಮಿಡಿದಿದ್ದು, ವಿಶಿಷ್ಟ ಸಹಾಯ ನೀಡಿದ್ದಾರೆ. ಹೌದು, ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ತಮ್ಮದೇ ಶೈಲಿಯಲ್ಲಿ ಕೇರಳಿಗರಿಗೆ ಧೈರ್ಯ ತುಂಬುವ ಕಾರ್ಯ ಮಾಡಿದ್ದಾರೆ. ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಒಂದು ಸಂಗೀತ ಕಾರ್ಯಕ್ರಮದಲ್ಲಿ ‘ಮುಸ್ತಫಾ-ಮುಸ್ತಫಾ’ ಹಾಡು ಹಾಡುವಾಗ ಮಧ್ಯದಲ್ಲಿ ರೆಹಮಾನ್ ‘ಡೋಂಟ್ ವರಿ ಕೇರಳ’ ಎಂದು ಹಾಡಿದರು. ಇದಕ್ಕೆ ನೆರೆದ ಪ್ರೇಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
web title: A R Rahman dedicates one of his iconic songs to Kerala flood victims
ದಿನದ ಸುದ್ದಿ
ನಟ ದರ್ಶನ್ಗೆ ರಾಜಾತಿಥ್ಯ ; ಏಳು ಮಂದಿ ಜೈಲು ಅಧಿಕಾರಿ, ಸಿಬ್ಬಂದಿ ಅಮಾನತು
ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲ್ ಹೆಡ್ ವಾರ್ಡರ್ಗಳಾದ ವೆಂಕಪ್ಪ, ಸಂಪತ್, ವಾರ್ಡರ್ಗಳಾದ ಬಸಪ್ಪ, ಪ್ರಭು, ಶ್ರೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಘಟನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಸಹ ತನಿಖೆ ನಡೆಯುತ್ತಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಇನ್ನೊಂದೆಡೆ, ಜೈಲಿನಲ್ಲಿ ನಟ ದರ್ಶನ್ ಹಾಗೂ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ..!
ಸುದ್ದಿದಿನ,ಬೆಂಗಳೂರು: ನಟಿ ಹಾಗೂ ಖ್ಯಾತ ನಿರೂಪಕಿ ಅಪರ್ಣ (57) ನಿಧನರಾಗಿದ್ದಾರೆ.ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಪರ್ಣ ಅವರು ಇಂದು ಸಂಜೆ ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.
ಹಲವು ಸಿನೆಮಾಗಳಲ್ಲಿ ನಟಿಸಿದ್ದ ಅವರು ಮಜಾಟಾಕೀಸ್ ಮೂಲಕ ಮನೆಮಾತಾಗಿದ್ದರು. ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!
- ಚೇತನ್ ನಾಡಿಗೇರ್
ಮಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್ಗೋಪಾಲ್ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.
ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.
ಶಂಕರ್ ಚಿತ್ರಗಳೆಂದರೆ ಅದ್ಧೂರಿತನ, ಹಿಟ್ ಹಾಡುಗಳು, ದೊಡ್ಡ ಕ್ಯಾನ್ವಾಸ್, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.
ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್’, ‘ಮುದಲ್ವನ್’, ‘ಅನ್ನಿಯನ್’, ‘ಶಿವಾಜಿ: ದಿ ಬಾಸ್’ ಮತ್ತು ‘ಇಂಡಿಯನ್ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.
ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.
ಇಷ್ಟಕ್ಕೂ ಶಂಕರ್ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.
ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್ಗೆ ಅನ್ನಿಯನ್ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್ಗಿಂತ ಮ್ಯಾಜಿಕ್ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.
ಈಗೆಲ್ಲಾ Cinematic Universeಗಳ ಕಾಲ. ಯಶ್ರಾಜ್ ಸ್ಪೈ ಯೂನಿವರ್ಸ್, ಲೋಕೇಶ್ ಕನಕರಾಜ್ ಯೂನಿವರ್ಸ್, ರೋಹಿತ್ ಶೆಟ್ಟಿ ಪೊಲೀಸ್ ಯೂನಿವರ್ಸ್ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್’ನ ಸೇತುಪತಿ, ‘ಶಿವಾಜಿ: ದಿ ಬಾಸ್’ನ ಶಿವಾಜಿ ಮತ್ತು ‘ಮುದಲ್ವನ್’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.
ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್.
Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್ ಚೇಂಜರ್’ ಎಂಬ ರಾಮ್ಚರಣ್ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್ಬುಕ್ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ನಕಲಿ ವೈದ್ಯರಿಗೆ ದಂಡ ; ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ
-
ದಿನದ ಸುದ್ದಿ4 days ago
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
-
ದಿನದ ಸುದ್ದಿ17 hours ago
ಸಂತೇಬೆನ್ನೂರು | ಈಶ್ವರೀ ವಿ ವಿ ಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ
-
ದಿನದ ಸುದ್ದಿ4 days ago
ಆರಗದಲ್ಲಿ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆ
-
ದಿನದ ಸುದ್ದಿ3 days ago
ದಾವಣಗೆರೆ | ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ
-
ದಿನದ ಸುದ್ದಿ2 days ago
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ2 days ago
HAL | ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್