ದಿನದ ಸುದ್ದಿ
ರಾಜ್ಯಾದ್ಯಂತ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ : ಜಾಗೃತಿ ಜಾಥಾ
ಸುದ್ದಿದಿನ ಡೆಸ್ಕ್ : ನಾಡಿನಾದ್ಯಂತ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ವಿವಿಧ ಜಿಲ್ಲೆಗಳಲ್ಲಿ ಕಾರ್ಯಕ್ರಮ ಜರುಗಿದ ವರದಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಮಿಕರ ಇಲಾಖೆ ಜಂಟಿ ಸಹಯೋಗದಲ್ಲಿ ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆಯಿತು. ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೀರಾದಾರ ದೇವಿಂದ್ರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ, ಮಕ್ಕಳನ್ನು ದುಡಿಮೆಗೆ ತಳ್ಳದೆ ಉತ್ತಮ ಶಿಕ್ಷಣ ನೀಡಬೇಕೆಂದು ಕರೆ ನೀಡಿದರು.
ಮಂಡ್ಯ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಉಪವಿಭಾಗ ಅಧಿಕಾರಿ ಆರ್. ಐಶ್ವರ್ಯ ಮನವಿ ಮಾಡಿದ್ದಾರೆ. ಬಾಲ ಕಾರ್ಮಿಕ ಪದ್ಧತಿ ಕೊನೆಗೊಳಿಸಲು ಸಾರ್ವತ್ರಿಕ, ಸಾಮಾಜಿಕ ರಕ್ಷಣೆ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಯಿತು. ಬಾಲ ಕಾರ್ಮಿಕರಿಗೆ ಸಂಬಂಧಿಸಿದ ದೂರುಗಳನ್ನು 1097 ಸಹಾಯವಾಣಿಗೆ ಕರೆ ಮಾಡಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ಉತ್ತರಕನ್ನಡ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಕಾರವಾರದಲ್ಲಿಂದು ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾ ಬಾಲ ಕಾರ್ಮಿಕ ವಿರೋಧಿ ಅಧಿಕಾರಿ ಅಕ್ಬರ್ ಹಬೀಬಸಾಬ್ ಮುಲ್ಲಾ ಮಾತನಾಡಿ 14 ವರ್ಷ ವಯೋಮಿತಿಯ ಕೆಳಗಿನ ಮಕ್ಕಳು ಕಡ್ಡಾಯ, ಉಚಿತ ಶಿಕ್ಷಣ ಪಡೆಯಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಯಾದಗಿರಿ ಜಿಲ್ಲಾಡಳಿತ ಭವನದಲ್ಲಿ ನಡೆದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಸಾಹಿಲ್ ಅಹ್ಮದ್ ಕುನ್ನಿಬಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಆರ್ಥಿಕ ಸಂಕಷ್ಟದಿಂದ ಬಡ ಕುಟುಂಬದ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವಂತಹ ಪರಿಸ್ಥಿತಿ ಇದೆ.
ಇಂತಹ ಬಡ ಕುಟುಂಬಗಳ ಬಾಲ ಕಾರ್ಮಿಕ ಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸಂಬಂಧ ಪಟ್ಟ ಇಲಾಖೆಯವರು ಗುರುತಿಸಿ ತಕ್ಷಣ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತರಬೇಕೆಂದು ಸಲಹೆ ಮಾಡಿದರು.
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ಗಿರೀಶ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಯಾವುದೇ ಅಪಾಯಕಾರಿ ಸಂಸ್ಥೆಗಳಲ್ಲಿ 14 ವರ್ಷದ ಮಕ್ಕಳನ್ನು ದುಡಿಮೆಗೆ ನೇಮಕ ಮಾಡಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ವತಿಯಿಂದ ದೇಶದ 75 ಸ್ಥಳಗಳಲ್ಲಿ ಇಂದಿನಿಂದ ಬಾಲ ಕಾರ್ಮಿಕ ನಿರ್ಮೂಲನಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ3 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ
-
ದಿನದ ಸುದ್ದಿ3 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

