ದಿನದ ಸುದ್ದಿ
ಯೂರೋಪ್ನ ಮೂರು ದೇಶಗಳ ಪ್ರವಾಸ ; ಇಂದು ಡೆನ್ಮಾರ್ಕ್ ತಲುಪಲಿರುವ ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ ಡೆಸ್ಕ್ : ಯೂರೋಪ್ನ ಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಡೆನ್ಮಾರ್ಕ್ನ ಕೂಪನ್ ಹೇಗನ್ಗೆ ಆಗಮಿಸಲಿದ್ದಾರೆ.
ಅವರು ಡೆನ್ಮಾರ್ಕ್ ಪ್ರಧಾನಿ ಮಿಟ್ಟೆ ಫೆಡ್ರಿಕ್ಸೆನ್ ಅವರನ್ನು ಭೇಟಿ ಮಾಡಲಿದ್ದಾರೆ. ನಿಯೋಗ ಮಟ್ಟದ ಮಾತುಕತೆಯ ನಂತರ ಹಲವು ತಿಳುವಳಿಕೆ ಪತ್ರಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನಂತರ ಪ್ರಧಾನಿ ಉದ್ಯಮಿಗಳೊಂದಿಗಿನ ದುಂಡುಮೇಜಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮುದಾಯ ಕಾರ್ಯಕ್ರಮದಲ್ಲಿ ಹಾಜರಾಗಲಿರುವ ಪ್ರಧಾನಿ, ನಂತರ ಎರಡನೇ ರಾಣಿ ಮಾರ್ಗರೇಟ್ ಅವರೊಂದಿಗೆ ಭೋಜನಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರವಾಸದ ಮೊದಲನೆಯ ದಿನವಾದ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಬರ್ಲಿನ್ನಲ್ಲಿ ಜರ್ಮನ್ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗೆ ಇಂಧನ ಹಾಗೂ ಪರಿಸರ ಕ್ಷೇತ್ರಗಳ ಮಹತ್ವ ಪೂರ್ಣ ಒಪ್ಪಂದಗಳಿಗೆ ಸಹಿ ಹಾಕಿದರು. ಈ ವೇಳೆ ಉಭಯ ನಾಯಕರು ಜಂಟಿ ಹೇಳಿಕೆ ನೀಡಿ, ದ್ವಿಪಕ್ಷೀಯ ಸಂಬಂಧಗಳ ಸುಧಾರಣೆಯನ್ನು ಪ್ರತಿಪಾದಿಸಿದರು.
ಪ್ರಧಾನಿ ನರೇಂದ್ರ ಮೋದಿ, ಉಭಯ ದೇಶಗಳ ನಡುವಿನ ಬಾಂಧವ್ಯಕ್ಕೆ ಹೊಸ ದಿಕ್ಕು ದೊರೆತಿದೆ. ಪರಿಸರ, ಇಂಧನ ಕ್ಷೇತ್ರದ ಸುಧಾರಣೆಗೆ ಸಂಬಂಧಿಸಿದ ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಹಸಿರು ಇಂಧನ ವಲಯದಲ್ಲಿ, ಜರ್ಮನಿ, ಭಾರತದಲ್ಲಿ 2030ರ ವರೆಗೆ,10ಬಿಲಿಯನ್ ಯುರೋ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು.
ಕೋವಿಡೋತ್ತರದಲ್ಲಿ ಭಾರತದ ಆರ್ಥಿಕತೆ ತ್ವರಿತಗತಿಯಲ್ಲಿ ಸುಧಾರಣೆಯಾಗುತ್ತಿದೆ. ಉಕ್ರೇನ್- ರಷ್ಯಾ ಸಂಘರ್ಷ ಇತ್ಯರ್ಥಕ್ಕೆ ಮಾತುಕತೆಯೊಂದೇ ಪರಿಹಾರ. ಇಲ್ಲಿ ಗೆಲುವು ಯಾರದು ಎಂಬುದು ಮುಖ್ಯವಲ್ಲ. ನಾವು ಶಾಂತಿಯ ಪರವಾಗಿರುವವರು. ಯಾರೇ ಗೆದ್ದರೂ, ಮಾನವೀಯ ನಷ್ಟಗಳು ತಪ್ಪಿದ್ದಲ್ಲ. ಈಗಾಗಲೇ ತೈಲ ಬೆಲೆ ಗಗನಕ್ಕೇರಿವೆ. ಹಲವಾರು ಸಮಸ್ಯೆಗಳು ಎದುರಾಗಿವೆ ಎಂದರು.
ಓಲಾಫ್ ಸ್ಕೋಲ್ಜ್, ಭಾರತ, ಜರ್ಮನಿಯ ಬಹುಮುಖ್ಯ ಪಾಲುದಾರ ರಾಷ್ಟ್ರವಾಗಿದೆ. ಕೆಲವೇ ಮುಂದುವರಿದ ರಾಷ್ಟ್ರಗಳಿಂದ, ವಿಶ್ವದ ಸಮಗ್ರ ಅಭಿವೃದ್ಧಿ ಸಾಧ್ಯವಿಲ್ಲ. ಎಲ್ಲಾ ದೇಶಗಳ ಒಗ್ಗೂಡುವಿಕೆ ಮತ್ತು ಸಹಭಾಗಿತ್ವದ ಮತ್ತು ಭವಿಷ್ಯದ ಸಂಬಂಧಗಳನ್ನು ಗುಣಾತ್ಮಕ ಗುರುತಿಸುವಿಕೆಯಿಂದ ಅಭಿವೃದ್ಧಿ ಸಾಧ್ಯ ಎಂದರು.
ಏಷ್ಯಾದಲ್ಲಿ ಭಾರತ, ಚಲನಶೀಲ ಆರ್ಥಿಕತೆಯನ್ನು ಹೊಂದಿದ ರಾಷ್ಟ್ರ, ಜರ್ಮನಿಯ ಹಲವು ಕಂಪನಿಗಳು ಅಲ್ಲಿ ಕಾರ್ಯಾಚರಿಸುತ್ತಿವೆ. 7 ಸಾವಿರಕ್ಕೂ ಹೆಚ್ಚು ಭಾರತೀಯರು, ಜರ್ಮನಿಯ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಉಭಯ ದೇಶಗಳ ನಡುವೆ ಸುದೀರ್ಘವಾದ ದ್ವಿಪಕ್ಷೀಯ ಒಪ್ಪಂದಗಳಿಗೆ ಭದ್ರತೆ, ಹವಾಮಾನ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಯುಕ್ತವಾಗಿ ಕೆಲಸ ಮಾಡುತ್ತಿದ್ದೇವೆ. ಆ ಸಂಬಂಧಗಳನ್ನು ಮುಂದುವರಿಸಲು ಬಯಸುತ್ತೇವೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


