ದಿನದ ಸುದ್ದಿ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವು

Published

on

ಸುದ್ದಿದಿನ,ರಾಯಚೂರು : ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಅಸ್ವಸ್ಥಗೊಂಡು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ವಲ್ಕಂದಿನ್ನಿಯಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಲ್ಕಂದಿನ್ನಿಯ ಸರ್ಕಾರಿ ಶಾಲೆಯ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ನಿರ್ಜಲೀಕರಣ ಸಮಸ್ಯೆ ಎದುರಾಗಿದೆ. ತುಂಗಭದ್ರಾ ಡ್ಯಾಂನಿಂದ ಕಾಲುವೆಗೆ ಬಿಟ್ಟ ನೀರು ಸೇವಿಸಿ ಜನರಿಗೂ ಸಹಿತ ವಾಂತಿ-ಭೇದಿಯಾಗಿದೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೆ ರಾಯಚೂರು ನಗರದ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version