Connect with us

ಬಹಿರಂಗ

ಭಾರತವನ್ನು ಮುಳುಗಿಸಲಿದೆ ಮೋದಿ ಪಡೆ, ಎಚ್ಚರ!

Published

on

ಭಾರತೀಯ ಸಂವಿಧಾನ, ಪ್ರಜಾಸತ್ತೆ ಮತ್ತು ನಾಗರೀಕ ಸಮಾಜಗಳ ರಕ್ಷಣೆಗಾಗಿ ಸೆಪ್ಟೆಂಬರ್ 10ರಂದು ಜರುಗಿದ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿದೆ. ಪ್ರಜಾಪ್ರಭುತ್ವವು ಜಗತ್ತಿನಲ್ಲಿ ಹೊಸ ಜೀವನ ವಿಧಾನವಾಗಿ ಪ್ರಜೆಗಳ ಸಾರ್ವಭೌಮತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶ್ವದೆಲ್ಲೆಡೆ ಉಪಯುಕ್ತವಾಗಿದೆ. ಶ್ರೇಷ್ಠ ಇತಿಹಾಸಕಾರ ಅರ್ನಾಲ್ಡ್ ಟೋಯ್ನ್‍ಬಿ ‘ಬೆದರಿಕೆಯೆಂಬುದು ಮಾನವ ಇತಿಹಾಸದಲ್ಲಿ ಹೊಸದೇನಲ್ಲ. ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸಿ ನಿಂತ ಸಮಾಜ ಮತ್ತು ಸಂಸ್ಕøತಿ ಅತಿಜಯಿಸಿದೆ. ಎದುರಿಸುವಲ್ಲಿ ವಿಫಲವಾದ ಸಮಾಜ ನಾಮಾವಶೇಷವಾಗಿದೆ. ಅಂತಹ ಬೆದರಿಕೆಗಳನ್ನು ಯಶಸ್ವಿಯಾಗಿ ಎದುರಿಸುವುದರ ಹಿಂದಿರುವುದು ಆ ಸಮಾಜದ ಸೃಜನಶೀಲರಾದ ಪ್ರಬುದ್ಧ ವ್ಯಕ್ತಿಗಳಾಗಿರುತ್ತಾರೆ. ಅವರು ತಮ್ಮ ಸಹಜೀವಿಗಳನ್ನು ಸುರಕ್ಷಿತವಾಗಿ ಪ್ರಗತಿಯತ್ತ ಮುನ್ನಡೆಸಿದ್ದಾರೆ’ ಎಂದು ಹೇಳಿರುವುದು ಭಾರತದಲ್ಲಿ ಇಂದು ಸಮಕಾಲೀನ ಮಹತ್ವ ಹೊಂದಿದೆ.

ಜಗತ್ತಿನ ಎಲ್ಲ ಧರ್ಮಗಳೂ ಒಳ್ಳೆಯದನ್ನೇ ಬಯಸು-ಒಳ್ಳೆಯದನ್ನೇ ಮಾಡು ಎಂದು ಬೋಧಿಸುತ್ತವೆ. ಯುದ್ಧ ಮತ್ತು ವಿನಾಶದೆಡೆಗೆ ಸಾಗುತ್ತಿರುವ ಜಗತ್ತನ್ನು ಪಾರು ಮಾಡುವಲ್ಲಿ ಇಂದು ಸಂಕಷ್ಟ ಅನುಭವಿಸುವವರ ವಿಮೋಚನೆಗಾಗಿ ಸಕ್ರಿಯರಾದ ಪ್ರಜ್ಞಾವಂತರು ಮತ್ತು ಮಾನವೀಯತೆಗೆ ಬದ್ಧರಾದ ಒಂದು ಪಡೆ ಕಾರ್ಯಶೀಲರಾಗಬೇಕೆಂಬುದು ಕುರ್‍ಆನ್‍ನ ಕರೆಯೂ ಆಗಿದೆ. ಬುದ್ಧ, ಬಸವ, ಸೂಫಿ ಸಂತರು ಮತ್ತು ಎಲ್ಲ ಮಾನವತಾವಾದಿಗಳು ‘ನಿಮ್ಮ ಸ್ವಾರ್ಥವನ್ನು ಕೊಂದು ಸಮಾಜವನ್ನು ಉಳಿಸಿ ಮತ್ತು ಬೆಳೆಸಿ’ ಎಂಬ ಸಂದೇಶವನ್ನು ನೀಡಿದ್ದಾರೆ. ಸತ್ತ ಮೇಲೆ ದೇವರು ಮತ್ತು ಪ್ರಕೃತಿಯ ಮಡಿಲಲ್ಲಿ ಒಂದಾಗುವ ಮನುಷ್ಯರು ಬದುಕಿರುವಾಗಲೂ ಕೂಡ ಕೂಡಿ ಬಾಳಿದರೆ ಶ್ರೇಷ್ಠ ಸಂಸ್ಕøತಿ ಮತ್ತು ನಾಗರೀಕತೆಗಳು ರೂಪುಗೊಳ್ಳುತ್ತವೆ. ಅಲ್ಲಮಪ್ರಭುವಿನ ‘ನಾನು ನಾನಲ್ಲ, ದೇವರು-ಪ್ರಕೃತಿಯೇ ಎಲ್ಲ’ ಎಂಬ ಮಾತುಗಳು ಇಂದು ನಮ್ಮನ್ನು ಆಳುತ್ತಿರುವವರಿಗೆ ಸರಿಯಾಗಿ ಅರ್ಥವಾದರೆ ಸ್ವಾರ್ಥಪರತೆ, ಮೂಲಭೂತವಾದ, ಭ್ರಷ್ಟಾಚಾರ, ಬೆದರಿಕೆ ಮೊದಲಾದ ಅನಿಷ್ಟಗಳನ್ನು ಮೀರಿ ಮಾನವೀಯತೆಯೆಡೆಗೆ ಜಗತ್ತನ್ನು ಮುನ್ನಡೆಸಲು ಸಾಧ್ಯವಾಗುತ್ತದೆ. ಭಾರತೀಯ ಸಂಸ್ಕøತಿ ಹಲವಾರು ಸಂಕೀರ್ಣತೆಗಳು ಮತ್ತು ಸವಾಲುಗಳ ನಡುವೆಯೂ ತನ್ನ ನೈಜತೆ ಮತ್ತು ಶ್ರೇಷ್ಠತೆಗಳನ್ನು ಉಳಿಸಿಕೊಂಡು ಹೋಗಲು ಬುದ್ಧ, ಮಹಾವೀರ, ಬಸವ, ಫುಲೆ, ರಾಮಾನುಜ, ಕಬೀರ, ದಯಾನಂದ ಸರಸ್ವತಿ, ರಾಜಾರಾಮ ಮೋಹನ್ ರಾಯ್, ಈಶ್ವರ ಚಂದ್ರ ವಿದ್ಯಾಸಾಗರ್, ಲಾಲಾ ಲಜಪತರಾಯ್, ಬಿಪಿನ್ ಚಂದ್ರಪಾಲ್, ಬಾಲಗಂಗಾಧರ ತಿಲಕ್, ಮೋತಿಲಾಲ್ ನೆಹರು, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ಪಂಡಿತ್ ನೆಹರು, ಅಂಬೇಡ್ಕರ್, ಪೆರಿಯಾರ್, ಲೋಹಿಯಾ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಶಿಕ್ಷಣ ಸಂತ ಕುವೆಂಪು ಮೊದಲಾದ ಮಹನೀಯರು ನಡೆಸಿದ ಸಾಮಾಜಿಕ ಸುಧಾರಣೆ ಕಾರ್ಯಗಳು ಪ್ರಮುಖ ಕಾರಣವಾಗಿವೆ. ಇಂತಹ ಮಹಾ ಸಂತರು ಮತ್ತು ಸಾಧಕರು ಕಟ್ಟಿ ಬೆಳೆಸಿರುವ ಭಾರತೀಯ ಸಂಸ್ಕøತಿಯನ್ನು ನಾಶಪಡಿಸಿ ಅರಾಜಕತೆ ಸೃಷ್ಟಿ ಮಾಡುವ ಕೆಲಸವನ್ನು ಜಾಗತಿಕವಾಗಿ ಮಾರುಕಟ್ಟೆ ಶಕ್ತಿಗಳು ಮತ್ತು ಸ್ಥಳೀಯವಾಗಿ ಹಿಂದುತ್ವವಾದಿಗಳು ನಡೆಸುತ್ತಿರುವುದನ್ನು ಪ್ರಜ್ಞಾವಂತರು ತಡೆಯಲೇ ಬೇಕಿದೆ. ಮೊನ್ನೆ ನಡೆದ ಭಾರತ್ ಬಂದ್ ಕೇವಲ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಲಷ್ಟೇ ಸೀಮಿತಗೊಂಡಿಲ್ಲ. ಇದು ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆಗೆ ಬದ್ಧವಾದ ವಿಶಾಲ ಕಾರ್ಯಸೂಚಿಯನ್ನು ಆಧರಿಸಿದೆ.

ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ – 2 ಸರ್ಕಾರ ಕಾಂಗ್ರೆಸ್ ಪಕ್ಷದೊಳಗಿನ ಕುಟುಂಬ ರಾಜಕಾರಣ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಸ್ವಾರ್ಥಪರತೆಯಿಂದಾಗಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ನೀಡಲು ವಿಫಲವಾಯಿತು. ದೇಶದ ಜನರಿಗೆ ಬದಲಾವಣೆ ಅನಿವಾರ್ಯವಾಗಿತ್ತು. ಕುರುಡುಗಣ್ಣಿನವನಿಗಿಂತ ಮೆಳ್ಳಗಣ್ಣಿನವನು (ಸುಮಾರಾಗಿ ನೋಡುವವನು) ಎಷ್ಟೋ ವಾಸಿಯೆಂಬ ಅರಿವಿಗೆ ಜನರು ಶರಣಾಗಿದ್ದರು. ಇಂತಹ ಮೆಳ್ಳಗಣ್ಣಿನವರ ನಾಯಕನಾಗಿ ನರೇಂದ್ರ ಮೋದಿ 2014ರಲ್ಲಿ ಹಲವಾರು ಹುಸಿ ಭರವಸೆಗಳನ್ನು ಜನರಿಗೆ ನೀಡಿ ಅಧಿಕಾರ ಚುಕ್ಕಾಣಿಯನ್ನು ಹಿಡಿದರು. ‘ಮೋದಿಯವರು ಅಧಿಕಾರಕ್ಕೆ ಬರುವ ಮುನ್ನ ದೇಶಕ್ಕೆ ಒಳ್ಳೆಯ ದಿನಗಳು ಬರಲಿವೆ ಅನ್ನುತ್ತಿದ್ದರು. ಆದರೆ, ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷಗಳಾದರೂ ಒಳ್ಳೆಯ ದಿನಗಳು ಬರಲಿಲ್ಲ. ಬದಲಾಗಿ ದೇಶದ ಜನ ಮತ್ತಷ್ಟು ಸಂಕಷ್ಟಗಳಿಗೆ ಸಿಲುಕಿ ಒದ್ದಾಡುತ್ತಿದ್ದಾರೆ’ ಎಂಬ ಪ್ರೊ.ಕೆ.ಎಸ್.ಭಗವಾನ್‍ರವರ ಮಾತುಗಳು ಅರ್ಥಪೂರ್ಣವಾಗಿದೆ. ಪ್ರಕೃತಿ ರಕ್ಷಣೆ, ಮಾನವ ಹಕ್ಕುಗಳ ರಕ್ಷಣೆ, ಮಾನವ ಅಭಿವೃದ್ಧಿ ಸಾಧನೆ, ಸಾಮಾಜಿಕ ನ್ಯಾಯವಿತರಣೆ, ಆರ್ಥಿಕ ಸಮಾನತೆ, ಸಾಮಾಜಿಕ ಸುರಕ್ಷತೆ ಮೊದಲಾದ ವಿಷಯಗಳಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲಗೊಂಡಿದೆ. ‘ಸಬ್‍ಕಾ ಸಾಥ್ – ಸಬ್‍ಕಾ ವಿಕಾಸ್’ ಎಂದು ಬಾಯಲ್ಲಿ ಹೇಳಿ ವಾಸ್ತವವಾಗಿ ‘ಅಮೀರ್ ಕಾ ಸಾಥ್ – ಅಮೀರ್ ಕಾ ವಿಕಾಸ್’ (ಶ್ರೀಮಂತರ ಜೊತೆ – ಶ್ರೀಮಂತರ ಉದ್ಧಾರ) ಮಾಡಿರುವ ಮೋದಿಯವರ ವಿಶ್ವಾಸದ್ರೋಹವನ್ನು ಭಾರತೀಯರು ಕ್ಷಮಿಸಬಾರದು.

ಅಂದು ಪಂಡಿತ್ ಜವಾಹರಲಾಲ್ ನೆಹರು ಸಾರ್ವಜನಿಕ ಸಂಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭೂಮಿ, ಬಂಡವಾಳ, ಉದ್ಯೋಗ, ಲಾಭ ಎಲ್ಲವೂ ದೇಶದ ಸ್ವತ್ತಾಗಿ ಉಳಿಯುವಂತೆ ನೋಡಿಕೊಂಡಿದ್ದರು. ಇಂದು ಮೋದಿಜಿ ಖಾಸಗೀಕರಣವನ್ನು ಉತ್ತೇಜಿಸಿ ಶ್ರೀಮಂತರು ಮಾತ್ರ ಪ್ರಕಾಶಿಸುವಂತೆ ನೋಡಿಕೊಂಡರು. ಕೋಟ್ಯಾಂತರ ವಿದ್ಯಾವಂತ ಯುವಜನರು ಆತ್ಮಹತ್ಯೆಯೆಡೆಗೆ ಮುಖ ಮಾಡುವಂತಹ ದುಸ್ಥಿತಿಯನ್ನು ಇವರು ಸೃಷ್ಟಿಸಿದರು. ನೆಹರೂರವರ ಮಗಳು ಇಂದಿರಾಜಿ ಬ್ಯಾಂಕುಗಳ ರಾಷ್ಟ್ರೀಕರಣ, ಭೂಸುಧಾರಣೆ, 20 ಅಂಶಗಳ ಕಾರ್ಯಕ್ರಮ, ಕನಿಷ್ಟ ಅಗತ್ಯಗಳ ಪೂರೈಕೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮೊದಲಾದವುಗಳ ಮೂಲಕ ದೇಶದ ಜನರಿಗೆ ಒಳ್ಳೆಯದನ್ನು ಮಾಡಿ ‘ಗರೀಬಿ ಹಟಾವೋ’ (ಬಡತನ ನಿರ್ಮೂಲನೆ) ದಿಕ್ಕಿನಲ್ಲಿ ದಿಟ್ಟತನದಿಂದ ಸಾಗಿದರೆ ಮೋದಿಜಿ ಖಾಸಗೀಕರಣದ ಮೂಲಕ ಮೀಸಲಾತಿ ಮತ್ತು ಉದ್ಯೋಗ ಸೌಲಭ್ಯಗಳನ್ನು ಕಿತ್ತುಕೊಂಡು ‘ಗರೀಭೋಂಕೊ ಹಟಾವೋ’ (ಬಡವರ ನಿರ್ಮೂಲನೆ) ಮಾಡುತ್ತಿರುವುದು ಸರಿಯಲ್ಲ.
​ಹೆಸರಾಂತ ಇತಿಹಾಸಕಾರರಾದ ರೊಮಿಲಾ ಥಾಪರ್ ‘ಒಂದು ದೇಶದ ಅಭಿವೃದ್ಧಿ ಪ್ರಧಾನಿಯಾದವರ ವಿಶಾಲ ಎದೆ ಅಳತೆಯನ್ನು ಅವಲಂಬಿಸಿಲ್ಲ, ವಿಶಾಲ ಹೃದಯ ಮತ್ತು ಸಮಷ್ಟಿ ಪ್ರಜ್ಞೆಗಳನ್ನು ಆಧರಿಸಿದ ದೇಶ ಸೇವೆಯನ್ನು ಅವಲಂಬಿಸಿದೆ’ ಎಂದು ಹೇಳಿರುವ ಮಾತುಗಳು ಮೋದಿಯವರಿಗೆ ಆತ್ಮಾವಲೋಕನಕ್ಕೆ ಎಡೆಮಾಡಿಕೊಡಬೇಕು. ‘ನೂರು ವರ್ಷ ನರಿಯಂತೆ ಬದುಕಿ ದೇಶಕ್ಕೆ ದ್ರೋಹ ಬಗೆದು ಇತಿಹಾಸದ ಕಸದ ಬುಟ್ಟಿ ಸೇರುವ ಬದಲು ಒಂದು ವರ್ಷ ಸಿಂಹದಂತೆ ಬದುಕಿ ದೇಶದ ಸಾರ್ವಭೌಮತ್ವಕ್ಕಾಗಿ ಪ್ರಾಣ ತ್ಯಾಗಮಾಡುವುದು ಶ್ರೇಷ್ಠ’ ಎಂದು ನುಡಿದ ಮಹಾ ದೇಶ ಭಕ್ತ ಹಾಗೂ ಹುತಾತ್ಮ ಟಿಪ್ಪು ಸುಲ್ತಾನ್ ಅವರ ಮಾತುಗಳು ಇಂದು ಮೋದಿಯವರಿಗೆ ವಿಶೇಷವಾಗಿ ಅರ್ಥವಾಗಬೇಕಿದೆ. ಇತ್ತೀಚೆಗೆ ಪುಂಡ ಸಂಸದನೊಬ್ಬ ‘ಮೋದಿಯವರಿಗೆ 58 ಇಂಚು ಎದೆಯೂ ಇದೆ, ಎದೆಗಾರಿಕೆಯೂ ಇದೆ’ ಎಂದು ಹೇಳಿ ತನಗಿಂತ ಕಿರಿಯ ಚಮಚ ಮತ್ತೊಬ್ಬನಿಲ್ಲ ಎಂದು ಸಾಬೀತುಪಡಿಸಿದ್ದಾನೆ.
​ದೇಶದ ಜನರನ್ನು ಅವನತಿಯೆಡೆಗೆ ಕೊಂಡೊಯ್ಯುತ್ತಿರುವ ‘ರಾಷ್ಟ್ರೀಯ ವಿದ್ವಂಸಕರ ಕೂಟ’ ಮೋದಿ ನೇತೃತ್ವದಲ್ಲಿ ಇಂದು ವಿಜೃಂಭಿಸುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಸಂವಿಧಾನದ ಹೆಸರಿನಲ್ಲಿ ಮಂತ್ರಿಯಾದ ಮತ್ತೊಬ್ಬ ಹುಂಬ ‘ಸಂವಿಧಾನವನ್ನು ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ’ ಎಂದು ಹೇಳಿ ಜನರಿಂದ ಉಗಿಸಿಕೊಂಡಿರುವ ಸಂಗತಿ ಇನ್ನೂ ನೆನಪಿನಲ್ಲಿದೆ. ಗೋಡ್ಸೆಗಿಂತ ಮೊದಲೇ ಹುಟ್ಟಿದ್ದರೆ ನಾನೇ ಗಾಂಧಿಯನ್ನು ಕೊಲ್ಲುತ್ತಿದ್ದೆ’ ಎಂದು ಇನ್ನೊಬ್ಬ ಹಿಂದುತ್ವವಾದಿ ಪುಂಡ ಹೆಂಗಸು ಹೇಳಿರುವುದನ್ನು ಖಂಡಿಸಿ ಜೈಲಿಗೆ ಹಾಕುವುದರ ಬದಲು ಮೋದಿ ಮತ್ತು ಬಳಗ ಮೌನವಾಗಿ ರಕ್ಷಿಸುತ್ತಿರುವುದು ದೇಶದ್ರೋಹಿಗಳ ಪಡೆ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಮ್ಮನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿರುವ ಸಂಕೇತವಾಗಿದೆ.

ಮೊನ್ನೆ ನಡೆದ ಭಾರತ್ ಬಂದ್ ‘ಸರ್ಕಾರಿ ಪ್ರಾಯೋಜಿತ ಬಂದ್’ ಎಂದು ಹೇಳಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿ ಕೊಡಗಿನ ನೊಂದವರಿಗೆ ಆರ್ಥಿಕ ನೆರವು ಕೇಳಲು ಹೋದಾಗ ಬೇಕಂತಲೇ ತಪ್ಪಿಸಿಕೊಂಡ ಈ ಭಾಗದ ಸಂಸದನಿಗೆ ಹೃದಯವಂತಿಕೆಯೂ ಇಲ್ಲ, ಎದೆಗಾರಿಕೆ ಇಲ್ಲವೇ ಇಲ್ಲ ಎಂಬ ಸತ್ಯ ನಮಗೆ ಮನವರಿಕೆಯಾಗಿದೆ. ಈತನಿಗೆ ಮುಂದಿನ ಮಹಾಚುನಾವಣೆಯಲ್ಲಿ ಮತದಾರ ಬಂಧುಗಳು ಗೇಟ್ ಪಾಸ್ ನೀಡುವುದು ಅನಿವಾರ್ಯವಾಗಿದೆ. ‘ಕೋಮುವಾದಿ ಬಿಜೆಪಿಯಿಂದ ದೇಶವನ್ನು ರಕ್ಷಿಸಬೇಕೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೇಳಿರುವ ಮಾತುಗಳು ಇಂದು ಪ್ರಗತಿಪರರು ಮತ್ತು ಜಾತ್ಯಾತೀತರಿಗೆ ಅರ್ಥವಾಗಬೇಕಿದೆ. ತುರ್ತು ಪರಿಸ್ಥಿತಿ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ರಾಜನೀತಿಯನ್ನು ಉಗ್ರವಾಗಿ ವಿರೋಧಿಸಿದ ಶೋಷಿತರ ಧ್ವನಿ ದೇವನೂರು ಮಹಾದೇವ ‘ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು, ಕಮ್ಯುನಿಷ್ಟ್‍ರು, ರೈತ ಸಂಘಟನೆಗಳು, ದಲಿತ ಸಂಘಟನೆಗಳು ಮೊದಲಾದ ಬಿಜೆಪಿಯೇತರ ಬಣಗಳನ್ನು ಬೆಂಬಲಿಸುವುದು ಬಹುಸಂಸ್ಕøತಿ ಮತ್ತು ಬಹುಜನರ ರಕ್ಷಣೆಗೆ ಅನಿವಾರ್ಯ’ ಎಂದು ಹೇಳಿರುವ ಮಾತುಗಳನ್ನು ನಾವು ಒಪ್ಪಲೇಬೇಕು.
​ಇತ್ತೀಚೆಗೆ ಮೋದಿ ಬಳಗ ‘ನಯಿ ಭಾರತ್’ (ಹೊಸ ಭಾರತ) ನಿರ್ಮಿಸುವುದು ನಮ್ಮ ಗುರಿ ಎಂದು ಹೇಳುತ್ತಿದೆ. ಪ್ರಕೃತಿ ಮತ್ತು ಮಾನವೀಯತೆಗಳನ್ನು ನಿರ್ಲಕ್ಷಿಸಿದ ಫಲವಾಗಿ ಕೊಡಗು, ಕೇರಳ, ಉತ್ತರ ಭಾರತ, ಈಶಾನ್ಯ ಭಾರತ ಮೊದಲಾದೆಡೆ ಪ್ರವಾಹ ಉಂಟಾಗಿ ಭಾರತವೇ ಮುಳುಗುವ ಸ್ಥಿತಿ ನಿರ್ಮಾಣವಾಗಿದೆ. ಮೋದಿ ಬಳಗ ತನ್ನ ಸಂವಿಧಾನ ವಿರೋಧಿ, ಪ್ರಜಾಸತ್ತೆ ವಿರೋಧಿ, ಮಾನವ ವಿರೋಧಿ, ಪ್ರಕೃತಿ ವಿರೋಧಿ ಹಾಗೂ ಸಾಮಾಜಿಕ ನ್ಯಾಯ ವಿರೋಧಿ ಧೋರಣೆಗಳು ಮತ್ತು ನಡವಳಿಕೆಗಳಿಂದ ‘ನೋ ಭಾರತ್’ ದಿಕ್ಕಿನತ್ತ ದೇಶವನ್ನು ಕೊಂಡೊಯ್ಯುತ್ತಿದೆ. ಅಂದು ಗಾಂಧಿ ಬ್ರಿಟೀಷರನ್ನು ದೇಶದಿಂದ ತೊಲಗಿಸಲು ‘ಕ್ವಿಟ್ ಇಂಡಿಯಾ ಚಳುವಳಿ’ಯನ್ನು 1942ರಲ್ಲಿ ನಡೆಸಿದ ರೀತಿಯಲ್ಲೇ 2019ರಲ್ಲಿ ‘ಕ್ವಿಟ್ ಎನ್‍ಡಿಎ’ ಚಳುವಳಿಯನ್ನು ನಡೆಸಿ ಭಾರತ ಮುಳುಗುವುದನ್ನು ತಪ್ಪಿಸಬೇಕಾದ ಸಾಮಾಜಿಕ ಜವಾಬ್ದಾರಿಯನ್ನು ಪ್ರಗತಿಪರರು, ಜಾತ್ಯಾತೀತರು, ಮಾನವತಾವಾದಿಗಳು ಮತ್ತು ಪ್ರಜಾಪ್ರಭುತ್ವವಾದಿಗಳು ನಿರ್ವಹಿಸಲೇಬೇಕಿದೆ. ಇದೊಂದು ಪ್ರಜ್ಞಾವಂತಿಕೆ ಮತ್ತು ಹೃದಯವಂತಿಕೆಗಳನ್ನು ಆಧರಿಸಿದ ರಾಜಕೀಯ ವಿಶ್ಲೇಷಣೆಯೇ ಹೊರತಾಗಿ ಬೇರೆನೂ ಅಲ್ಲವೆಂಬುದನ್ನು ಮೈಸೂರು ವಿವಿಯ ಇತಿಹಾಸ ಪ್ರಜ್ಞೆಯಿಲ್ಲದ ರಾಜಣ್ಣನ ನೇತೃತ್ವದ ಅವಿವೇಕಿ ಅಧಿಕಾರಿಗಳು ಅರಿಯಲೇಬೇಕು. ರಾಜ್ಯ ಸರ್ಕಾರ ಪ್ರಶ್ನಿಸುವವರು ಮತ್ತು ಹೋರಾಟಗಾರರನ್ನು ರಕ್ಷಿಸಿದರೆ ವಿವಿ ಅಧಿಕಾರಿಗಳು ಅಮಾನತ್ತು ಮಾಡುವುದೇ ನಮ್ಮ ಗಂಡಸುತನವೆಂದು ತಪ್ಪಾಗಿ ತಿಳಿದಿದ್ದಾರೆ.

(ಡಾ.ಬಿ.ಪಿ. ಮಹೇಶ್ ಚಂದ್ರಗುರು, ಪ್ರಾಧ್ಯಾಪಕರು, ಮೈಸೂರು ವಿಶ್ವವಿದ್ಯಾನಿಲಯ,
ಸಂವಹನ ಮತ್ತು ಪತ್ರಿಕೋದ್ಯಮ ಅಧ್ಯಯನ ವಿಭಾಗ, ಮಾನಸಗಂಗೋತ್ರಿ, ಮೈಸೂರು)

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading
Advertisement

Title

ದಿನದ ಸುದ್ದಿ4 days ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ4 days ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ4 days ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ4 days ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ4 days ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ5 days ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ5 days ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ5 days ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ
ದಿನದ ಸುದ್ದಿ5 days ago

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ...

ದಿನದ ಸುದ್ದಿ5 days ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

Trending