ಬಹಿರಂಗ
ಭಾರತವನ್ನು ಮುಳುಗಿಸಲಿದೆ ಮೋದಿ ಪಡೆ, ಎಚ್ಚರ!
ಭಾರತೀಯ ಸಂವಿಧಾನ, ಪ್ರಜಾಸತ್ತೆ ಮತ್ತು ನಾಗರೀಕ ಸಮಾಜಗಳ ರಕ್ಷಣೆಗಾಗಿ ಸೆಪ್ಟೆಂಬರ್ 10ರಂದು ಜರುಗಿದ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿದೆ. ಪ್ರಜಾಪ್ರಭುತ್ವವು ಜಗತ್ತಿನಲ್ಲಿ ಹೊಸ ಜೀವನ ವಿಧಾನವಾಗಿ ಪ್ರಜೆಗಳ ಸಾರ್ವಭೌಮತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶ್ವದೆಲ್ಲೆಡೆ ಉಪಯುಕ್ತವಾಗಿದೆ. ಶ್ರೇಷ್ಠ ಇತಿಹಾಸಕಾರ ಅರ್ನಾಲ್ಡ್ ಟೋಯ್ನ್‍ಬಿ ‘ಬೆದರಿಕೆಯೆಂಬುದು ಮಾನವ ಇತಿಹಾಸದಲ್ಲಿ ಹೊಸದೇನಲ್ಲ. ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸಿ ನಿಂತ ಸಮಾಜ ಮತ್ತು ಸಂಸ್ಕøತಿ ಅತಿಜಯಿಸಿದೆ. ಎದುರಿಸುವಲ್ಲಿ ವಿಫಲವಾದ ಸಮಾಜ ನಾಮಾವಶೇಷವಾಗಿದೆ. ಅಂತಹ ಬೆದರಿಕೆಗಳನ್ನು ಯಶಸ್ವಿಯಾಗಿ ಎದುರಿಸುವುದರ ಹಿಂದಿರುವುದು ಆ ಸಮಾಜದ ಸೃಜನಶೀಲರಾದ ಪ್ರಬುದ್ಧ ವ್ಯಕ್ತಿಗಳಾಗಿರುತ್ತಾರೆ. ಅವರು ತಮ್ಮ ಸಹಜೀವಿಗಳನ್ನು ಸುರಕ್ಷಿತವಾಗಿ ಪ್ರಗತಿಯತ್ತ ಮುನ್ನಡೆಸಿದ್ದಾರೆ’ ಎಂದು ಹೇಳಿರುವುದು ಭಾರತದಲ್ಲಿ ಇಂದು ಸಮಕಾಲೀನ ಮಹತ್ವ ಹೊಂದಿದೆ.
ಜಗತ್ತಿನ ಎಲ್ಲ ಧರ್ಮಗಳೂ ಒಳ್ಳೆಯದನ್ನೇ ಬಯಸು-ಒಳ್ಳೆಯದನ್ನೇ ಮಾಡು ಎಂದು ಬೋಧಿಸುತ್ತವೆ. ಯುದ್ಧ ಮತ್ತು ವಿನಾಶದೆಡೆಗೆ ಸಾಗುತ್ತಿರುವ ಜಗತ್ತನ್ನು ಪಾರು ಮಾಡುವಲ್ಲಿ ಇಂದು ಸಂಕಷ್ಟ ಅನುಭವಿಸುವವರ ವಿಮೋಚನೆಗಾಗಿ ಸಕ್ರಿಯರಾದ ಪ್ರಜ್ಞಾವಂತರು ಮತ್ತು ಮಾನವೀಯತೆಗೆ ಬದ್ಧರಾದ ಒಂದು ಪಡೆ ಕಾರ್ಯಶೀಲರಾಗಬೇಕೆಂಬುದು ಕುರ್‍ಆನ್‍ನ ಕರೆಯೂ ಆಗಿದೆ. ಬುದ್ಧ, ಬಸವ, ಸೂಫಿ ಸಂತರು ಮತ್ತು ಎಲ್ಲ ಮಾನವತಾವಾದಿಗಳು ‘ನಿಮ್ಮ ಸ್ವಾರ್ಥವನ್ನು ಕೊಂದು ಸಮಾಜವನ್ನು ಉಳಿಸಿ ಮತ್ತು ಬೆಳೆಸಿ’ ಎಂಬ ಸಂದೇಶವನ್ನು ನೀಡಿದ್ದಾರೆ. ಸತ್ತ ಮೇಲೆ ದೇವರು ಮತ್ತು ಪ್ರಕೃತಿಯ ಮಡಿಲಲ್ಲಿ ಒಂದಾಗುವ ಮನುಷ್ಯರು ಬದುಕಿರುವಾಗಲೂ ಕೂಡ ಕೂಡಿ ಬಾಳಿದರೆ ಶ್ರೇಷ್ಠ ಸಂಸ್ಕøತಿ ಮತ್ತು ನಾಗರೀಕತೆಗಳು ರೂಪುಗೊಳ್ಳುತ್ತವೆ. ಅಲ್ಲಮಪ್ರಭುವಿನ ‘ನಾನು ನಾನಲ್ಲ, ದೇವರು-ಪ್ರಕೃತಿಯೇ ಎಲ್ಲ’ ಎಂಬ ಮಾತುಗಳು ಇಂದು ನಮ್ಮನ್ನು ಆಳುತ್ತಿರುವವರಿಗೆ ಸರಿಯಾಗಿ ಅರ್ಥವಾದರೆ ಸ್ವಾರ್ಥಪರತೆ, ಮೂಲಭೂತವಾದ, ಭ್ರಷ್ಟಾಚಾರ, ಬೆದರಿಕೆ ಮೊದಲಾದ ಅನಿಷ್ಟಗಳನ್ನು ಮೀರಿ ಮಾನವೀಯತೆಯೆಡೆಗೆ ಜಗತ್ತನ್ನು ಮುನ್ನಡೆಸಲು ಸಾಧ್ಯವಾಗುತ್ತದೆ. ಭಾರತೀಯ ಸಂಸ್ಕøತಿ ಹಲವಾರು ಸಂಕೀರ್ಣತೆಗಳು ಮತ್ತು ಸವಾಲುಗಳ ನಡುವೆಯೂ ತನ್ನ ನೈಜತೆ ಮತ್ತು ಶ್ರೇಷ್ಠತೆಗಳನ್ನು ಉಳಿಸಿಕೊಂಡು ಹೋಗಲು ಬುದ್ಧ, ಮಹಾವೀರ, ಬಸವ, ಫುಲೆ, ರಾಮಾನುಜ, ಕಬೀರ, ದಯಾನಂದ ಸರಸ್ವತಿ, ರಾಜಾರಾಮ ಮೋಹನ್ ರಾಯ್, ಈಶ್ವರ ಚಂದ್ರ ವಿದ್ಯಾಸಾಗರ್, ಲಾಲಾ ಲಜಪತರಾಯ್, ಬಿಪಿನ್ ಚಂದ್ರಪಾಲ್, ಬಾಲಗಂಗಾಧರ ತಿಲಕ್, ಮೋತಿಲಾಲ್ ನೆಹರು, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ಪಂಡಿತ್ ನೆಹರು, ಅಂಬೇಡ್ಕರ್, ಪೆರಿಯಾರ್, ಲೋಹಿಯಾ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಶಿಕ್ಷಣ ಸಂತ ಕುವೆಂಪು ಮೊದಲಾದ ಮಹನೀಯರು ನಡೆಸಿದ ಸಾಮಾಜಿಕ ಸುಧಾರಣೆ ಕಾರ್ಯಗಳು ಪ್ರಮುಖ ಕಾರಣವಾಗಿವೆ. ಇಂತಹ ಮಹಾ ಸಂತರು ಮತ್ತು ಸಾಧಕರು ಕಟ್ಟಿ ಬೆಳೆಸಿರುವ ಭಾರತೀಯ ಸಂಸ್ಕøತಿಯನ್ನು ನಾಶಪಡಿಸಿ ಅರಾಜಕತೆ ಸೃಷ್ಟಿ ಮಾಡುವ ಕೆಲಸವನ್ನು ಜಾಗತಿಕವಾಗಿ ಮಾರುಕಟ್ಟೆ ಶಕ್ತಿಗಳು ಮತ್ತು ಸ್ಥಳೀಯವಾಗಿ ಹಿಂದುತ್ವವಾದಿಗಳು ನಡೆಸುತ್ತಿರುವುದನ್ನು ಪ್ರಜ್ಞಾವಂತರು ತಡೆಯಲೇ ಬೇಕಿದೆ. ಮೊನ್ನೆ ನಡೆದ ಭಾರತ್ ಬಂದ್ ಕೇವಲ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಲಷ್ಟೇ ಸೀಮಿತಗೊಂಡಿಲ್ಲ. ಇದು ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆಗೆ ಬದ್ಧವಾದ ವಿಶಾಲ ಕಾರ್ಯಸೂಚಿಯನ್ನು ಆಧರಿಸಿದೆ.
ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ – 2 ಸರ್ಕಾರ ಕಾಂಗ್ರೆಸ್ ಪಕ್ಷದೊಳಗಿನ ಕುಟುಂಬ ರಾಜಕಾರಣ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಸ್ವಾರ್ಥಪರತೆಯಿಂದಾಗಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ನೀಡಲು ವಿಫಲವಾಯಿತು. ದೇಶದ ಜನರಿಗೆ ಬದಲಾವಣೆ ಅನಿವಾರ್ಯವಾಗಿತ್ತು. ಕುರುಡುಗಣ್ಣಿನವನಿಗಿಂತ ಮೆಳ್ಳಗಣ್ಣಿನವನು (ಸುಮಾರಾಗಿ ನೋಡುವವನು) ಎಷ್ಟೋ ವಾಸಿಯೆಂಬ ಅರಿವಿಗೆ ಜನರು ಶರಣಾಗಿದ್ದರು. ಇಂತಹ ಮೆಳ್ಳಗಣ್ಣಿನವರ ನಾಯಕನಾಗಿ ನರೇಂದ್ರ ಮೋದಿ 2014ರಲ್ಲಿ ಹಲವಾರು ಹುಸಿ ಭರವಸೆಗಳನ್ನು ಜನರಿಗೆ ನೀಡಿ ಅಧಿಕಾರ ಚುಕ್ಕಾಣಿಯನ್ನು ಹಿಡಿದರು. ‘ಮೋದಿಯವರು ಅಧಿಕಾರಕ್ಕೆ ಬರುವ ಮುನ್ನ ದೇಶಕ್ಕೆ ಒಳ್ಳೆಯ ದಿನಗಳು ಬರಲಿವೆ ಅನ್ನುತ್ತಿದ್ದರು. ಆದರೆ, ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷಗಳಾದರೂ ಒಳ್ಳೆಯ ದಿನಗಳು ಬರಲಿಲ್ಲ. ಬದಲಾಗಿ ದೇಶದ ಜನ ಮತ್ತಷ್ಟು ಸಂಕಷ್ಟಗಳಿಗೆ ಸಿಲುಕಿ ಒದ್ದಾಡುತ್ತಿದ್ದಾರೆ’ ಎಂಬ ಪ್ರೊ.ಕೆ.ಎಸ್.ಭಗವಾನ್‍ರವರ ಮಾತುಗಳು ಅರ್ಥಪೂರ್ಣವಾಗಿದೆ. ಪ್ರಕೃತಿ ರಕ್ಷಣೆ, ಮಾನವ ಹಕ್ಕುಗಳ ರಕ್ಷಣೆ, ಮಾನವ ಅಭಿವೃದ್ಧಿ ಸಾಧನೆ, ಸಾಮಾಜಿಕ ನ್ಯಾಯವಿತರಣೆ, ಆರ್ಥಿಕ ಸಮಾನತೆ, ಸಾಮಾಜಿಕ ಸುರಕ್ಷತೆ ಮೊದಲಾದ ವಿಷಯಗಳಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲಗೊಂಡಿದೆ. ‘ಸಬ್‍ಕಾ ಸಾಥ್ – ಸಬ್‍ಕಾ ವಿಕಾಸ್’ ಎಂದು ಬಾಯಲ್ಲಿ ಹೇಳಿ ವಾಸ್ತವವಾಗಿ ‘ಅಮೀರ್ ಕಾ ಸಾಥ್ – ಅಮೀರ್ ಕಾ ವಿಕಾಸ್’ (ಶ್ರೀಮಂತರ ಜೊತೆ – ಶ್ರೀಮಂತರ ಉದ್ಧಾರ) ಮಾಡಿರುವ ಮೋದಿಯವರ ವಿಶ್ವಾಸದ್ರೋಹವನ್ನು ಭಾರತೀಯರು ಕ್ಷಮಿಸಬಾರದು.
ಅಂದು ಪಂಡಿತ್ ಜವಾಹರಲಾಲ್ ನೆಹರು ಸಾರ್ವಜನಿಕ ಸಂಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭೂಮಿ, ಬಂಡವಾಳ, ಉದ್ಯೋಗ, ಲಾಭ ಎಲ್ಲವೂ ದೇಶದ ಸ್ವತ್ತಾಗಿ ಉಳಿಯುವಂತೆ ನೋಡಿಕೊಂಡಿದ್ದರು. ಇಂದು ಮೋದಿಜಿ ಖಾಸಗೀಕರಣವನ್ನು ಉತ್ತೇಜಿಸಿ ಶ್ರೀಮಂತರು ಮಾತ್ರ ಪ್ರಕಾಶಿಸುವಂತೆ ನೋಡಿಕೊಂಡರು. ಕೋಟ್ಯಾಂತರ ವಿದ್ಯಾವಂತ ಯುವಜನರು ಆತ್ಮಹತ್ಯೆಯೆಡೆಗೆ ಮುಖ ಮಾಡುವಂತಹ ದುಸ್ಥಿತಿಯನ್ನು ಇವರು ಸೃಷ್ಟಿಸಿದರು. ನೆಹರೂರವರ ಮಗಳು ಇಂದಿರಾಜಿ ಬ್ಯಾಂಕುಗಳ ರಾಷ್ಟ್ರೀಕರಣ, ಭೂಸುಧಾರಣೆ, 20 ಅಂಶಗಳ ಕಾರ್ಯಕ್ರಮ, ಕನಿಷ್ಟ ಅಗತ್ಯಗಳ ಪೂರೈಕೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮೊದಲಾದವುಗಳ ಮೂಲಕ ದೇಶದ ಜನರಿಗೆ ಒಳ್ಳೆಯದನ್ನು ಮಾಡಿ ‘ಗರೀಬಿ ಹಟಾವೋ’ (ಬಡತನ ನಿರ್ಮೂಲನೆ) ದಿಕ್ಕಿನಲ್ಲಿ ದಿಟ್ಟತನದಿಂದ ಸಾಗಿದರೆ ಮೋದಿಜಿ ಖಾಸಗೀಕರಣದ ಮೂಲಕ ಮೀಸಲಾತಿ ಮತ್ತು ಉದ್ಯೋಗ ಸೌಲಭ್ಯಗಳನ್ನು ಕಿತ್ತುಕೊಂಡು ‘ಗರೀಭೋಂಕೊ ಹಟಾವೋ’ (ಬಡವರ ನಿರ್ಮೂಲನೆ) ಮಾಡುತ್ತಿರುವುದು ಸರಿಯಲ್ಲ.
ಹೆಸರಾಂತ ಇತಿಹಾಸಕಾರರಾದ ರೊಮಿಲಾ ಥಾಪರ್ ‘ಒಂದು ದೇಶದ ಅಭಿವೃದ್ಧಿ ಪ್ರಧಾನಿಯಾದವರ ವಿಶಾಲ ಎದೆ ಅಳತೆಯನ್ನು ಅವಲಂಬಿಸಿಲ್ಲ, ವಿಶಾಲ ಹೃದಯ ಮತ್ತು ಸಮಷ್ಟಿ ಪ್ರಜ್ಞೆಗಳನ್ನು ಆಧರಿಸಿದ ದೇಶ ಸೇವೆಯನ್ನು ಅವಲಂಬಿಸಿದೆ’ ಎಂದು ಹೇಳಿರುವ ಮಾತುಗಳು ಮೋದಿಯವರಿಗೆ ಆತ್ಮಾವಲೋಕನಕ್ಕೆ ಎಡೆಮಾಡಿಕೊಡಬೇಕು. ‘ನೂರು ವರ್ಷ ನರಿಯಂತೆ ಬದುಕಿ ದೇಶಕ್ಕೆ ದ್ರೋಹ ಬಗೆದು ಇತಿಹಾಸದ ಕಸದ ಬುಟ್ಟಿ ಸೇರುವ ಬದಲು ಒಂದು ವರ್ಷ ಸಿಂಹದಂತೆ ಬದುಕಿ ದೇಶದ ಸಾರ್ವಭೌಮತ್ವಕ್ಕಾಗಿ ಪ್ರಾಣ ತ್ಯಾಗಮಾಡುವುದು ಶ್ರೇಷ್ಠ’ ಎಂದು ನುಡಿದ ಮಹಾ ದೇಶ ಭಕ್ತ ಹಾಗೂ ಹುತಾತ್ಮ ಟಿಪ್ಪು ಸುಲ್ತಾನ್ ಅವರ ಮಾತುಗಳು ಇಂದು ಮೋದಿಯವರಿಗೆ ವಿಶೇಷವಾಗಿ ಅರ್ಥವಾಗಬೇಕಿದೆ. ಇತ್ತೀಚೆಗೆ ಪುಂಡ ಸಂಸದನೊಬ್ಬ ‘ಮೋದಿಯವರಿಗೆ 58 ಇಂಚು ಎದೆಯೂ ಇದೆ, ಎದೆಗಾರಿಕೆಯೂ ಇದೆ’ ಎಂದು ಹೇಳಿ ತನಗಿಂತ ಕಿರಿಯ ಚಮಚ ಮತ್ತೊಬ್ಬನಿಲ್ಲ ಎಂದು ಸಾಬೀತುಪಡಿಸಿದ್ದಾನೆ.
ದೇಶದ ಜನರನ್ನು ಅವನತಿಯೆಡೆಗೆ ಕೊಂಡೊಯ್ಯುತ್ತಿರುವ ‘ರಾಷ್ಟ್ರೀಯ ವಿದ್ವಂಸಕರ ಕೂಟ’ ಮೋದಿ ನೇತೃತ್ವದಲ್ಲಿ ಇಂದು ವಿಜೃಂಭಿಸುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಸಂವಿಧಾನದ ಹೆಸರಿನಲ್ಲಿ ಮಂತ್ರಿಯಾದ ಮತ್ತೊಬ್ಬ ಹುಂಬ ‘ಸಂವಿಧಾನವನ್ನು ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ’ ಎಂದು ಹೇಳಿ ಜನರಿಂದ ಉಗಿಸಿಕೊಂಡಿರುವ ಸಂಗತಿ ಇನ್ನೂ ನೆನಪಿನಲ್ಲಿದೆ. ಗೋಡ್ಸೆಗಿಂತ ಮೊದಲೇ ಹುಟ್ಟಿದ್ದರೆ ನಾನೇ ಗಾಂಧಿಯನ್ನು ಕೊಲ್ಲುತ್ತಿದ್ದೆ’ ಎಂದು ಇನ್ನೊಬ್ಬ ಹಿಂದುತ್ವವಾದಿ ಪುಂಡ ಹೆಂಗಸು ಹೇಳಿರುವುದನ್ನು ಖಂಡಿಸಿ ಜೈಲಿಗೆ ಹಾಕುವುದರ ಬದಲು ಮೋದಿ ಮತ್ತು ಬಳಗ ಮೌನವಾಗಿ ರಕ್ಷಿಸುತ್ತಿರುವುದು ದೇಶದ್ರೋಹಿಗಳ ಪಡೆ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಮ್ಮನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿರುವ ಸಂಕೇತವಾಗಿದೆ.
ಮೊನ್ನೆ ನಡೆದ ಭಾರತ್ ಬಂದ್ ‘ಸರ್ಕಾರಿ ಪ್ರಾಯೋಜಿತ ಬಂದ್’ ಎಂದು ಹೇಳಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿ ಕೊಡಗಿನ ನೊಂದವರಿಗೆ ಆರ್ಥಿಕ ನೆರವು ಕೇಳಲು ಹೋದಾಗ ಬೇಕಂತಲೇ ತಪ್ಪಿಸಿಕೊಂಡ ಈ ಭಾಗದ ಸಂಸದನಿಗೆ ಹೃದಯವಂತಿಕೆಯೂ ಇಲ್ಲ, ಎದೆಗಾರಿಕೆ ಇಲ್ಲವೇ ಇಲ್ಲ ಎಂಬ ಸತ್ಯ ನಮಗೆ ಮನವರಿಕೆಯಾಗಿದೆ. ಈತನಿಗೆ ಮುಂದಿನ ಮಹಾಚುನಾವಣೆಯಲ್ಲಿ ಮತದಾರ ಬಂಧುಗಳು ಗೇಟ್ ಪಾಸ್ ನೀಡುವುದು ಅನಿವಾರ್ಯವಾಗಿದೆ. ‘ಕೋಮುವಾದಿ ಬಿಜೆಪಿಯಿಂದ ದೇಶವನ್ನು ರಕ್ಷಿಸಬೇಕೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೇಳಿರುವ ಮಾತುಗಳು ಇಂದು ಪ್ರಗತಿಪರರು ಮತ್ತು ಜಾತ್ಯಾತೀತರಿಗೆ ಅರ್ಥವಾಗಬೇಕಿದೆ. ತುರ್ತು ಪರಿಸ್ಥಿತಿ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ರಾಜನೀತಿಯನ್ನು ಉಗ್ರವಾಗಿ ವಿರೋಧಿಸಿದ ಶೋಷಿತರ ಧ್ವನಿ ದೇವನೂರು ಮಹಾದೇವ ‘ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು, ಕಮ್ಯುನಿಷ್ಟ್‍ರು, ರೈತ ಸಂಘಟನೆಗಳು, ದಲಿತ ಸಂಘಟನೆಗಳು ಮೊದಲಾದ ಬಿಜೆಪಿಯೇತರ ಬಣಗಳನ್ನು ಬೆಂಬಲಿಸುವುದು ಬಹುಸಂಸ್ಕøತಿ ಮತ್ತು ಬಹುಜನರ ರಕ್ಷಣೆಗೆ ಅನಿವಾರ್ಯ’ ಎಂದು ಹೇಳಿರುವ ಮಾತುಗಳನ್ನು ನಾವು ಒಪ್ಪಲೇಬೇಕು.
ಇತ್ತೀಚೆಗೆ ಮೋದಿ ಬಳಗ ‘ನಯಿ ಭಾರತ್’ (ಹೊಸ ಭಾರತ) ನಿರ್ಮಿಸುವುದು ನಮ್ಮ ಗುರಿ ಎಂದು ಹೇಳುತ್ತಿದೆ. ಪ್ರಕೃತಿ ಮತ್ತು ಮಾನವೀಯತೆಗಳನ್ನು ನಿರ್ಲಕ್ಷಿಸಿದ ಫಲವಾಗಿ ಕೊಡಗು, ಕೇರಳ, ಉತ್ತರ ಭಾರತ, ಈಶಾನ್ಯ ಭಾರತ ಮೊದಲಾದೆಡೆ ಪ್ರವಾಹ ಉಂಟಾಗಿ ಭಾರತವೇ ಮುಳುಗುವ ಸ್ಥಿತಿ ನಿರ್ಮಾಣವಾಗಿದೆ. ಮೋದಿ ಬಳಗ ತನ್ನ ಸಂವಿಧಾನ ವಿರೋಧಿ, ಪ್ರಜಾಸತ್ತೆ ವಿರೋಧಿ, ಮಾನವ ವಿರೋಧಿ, ಪ್ರಕೃತಿ ವಿರೋಧಿ ಹಾಗೂ ಸಾಮಾಜಿಕ ನ್ಯಾಯ ವಿರೋಧಿ ಧೋರಣೆಗಳು ಮತ್ತು ನಡವಳಿಕೆಗಳಿಂದ ‘ನೋ ಭಾರತ್’ ದಿಕ್ಕಿನತ್ತ ದೇಶವನ್ನು ಕೊಂಡೊಯ್ಯುತ್ತಿದೆ. ಅಂದು ಗಾಂಧಿ ಬ್ರಿಟೀಷರನ್ನು ದೇಶದಿಂದ ತೊಲಗಿಸಲು ‘ಕ್ವಿಟ್ ಇಂಡಿಯಾ ಚಳುವಳಿ’ಯನ್ನು 1942ರಲ್ಲಿ ನಡೆಸಿದ ರೀತಿಯಲ್ಲೇ 2019ರಲ್ಲಿ ‘ಕ್ವಿಟ್ ಎನ್‍ಡಿಎ’ ಚಳುವಳಿಯನ್ನು ನಡೆಸಿ ಭಾರತ ಮುಳುಗುವುದನ್ನು ತಪ್ಪಿಸಬೇಕಾದ ಸಾಮಾಜಿಕ ಜವಾಬ್ದಾರಿಯನ್ನು ಪ್ರಗತಿಪರರು, ಜಾತ್ಯಾತೀತರು, ಮಾನವತಾವಾದಿಗಳು ಮತ್ತು ಪ್ರಜಾಪ್ರಭುತ್ವವಾದಿಗಳು ನಿರ್ವಹಿಸಲೇಬೇಕಿದೆ. ಇದೊಂದು ಪ್ರಜ್ಞಾವಂತಿಕೆ ಮತ್ತು ಹೃದಯವಂತಿಕೆಗಳನ್ನು ಆಧರಿಸಿದ ರಾಜಕೀಯ ವಿಶ್ಲೇಷಣೆಯೇ ಹೊರತಾಗಿ ಬೇರೆನೂ ಅಲ್ಲವೆಂಬುದನ್ನು ಮೈಸೂರು ವಿವಿಯ ಇತಿಹಾಸ ಪ್ರಜ್ಞೆಯಿಲ್ಲದ ರಾಜಣ್ಣನ ನೇತೃತ್ವದ ಅವಿವೇಕಿ ಅಧಿಕಾರಿಗಳು ಅರಿಯಲೇಬೇಕು. ರಾಜ್ಯ ಸರ್ಕಾರ ಪ್ರಶ್ನಿಸುವವರು ಮತ್ತು ಹೋರಾಟಗಾರರನ್ನು ರಕ್ಷಿಸಿದರೆ ವಿವಿ ಅಧಿಕಾರಿಗಳು ಅಮಾನತ್ತು ಮಾಡುವುದೇ ನಮ್ಮ ಗಂಡಸುತನವೆಂದು ತಪ್ಪಾಗಿ ತಿಳಿದಿದ್ದಾರೆ.
(ಡಾ.ಬಿ.ಪಿ. ಮಹೇಶ್ ಚಂದ್ರಗುರು, ಪ್ರಾಧ್ಯಾಪಕರು, ಮೈಸೂರು ವಿಶ್ವವಿದ್ಯಾನಿಲಯ,
ಸಂವಹನ ಮತ್ತು ಪತ್ರಿಕೋದ್ಯಮ ಅಧ್ಯಯನ ವಿಭಾಗ, ಮಾನಸಗಂಗೋತ್ರಿ, ಮೈಸೂರು)

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್‌ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

ದಿನದ ಸುದ್ದಿ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್
-
658 OMR ಕಾರ್ಬನ್ ಶೀಟ್‌ಗಳು FSLಗೆ
-
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ
-
₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ
-
ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
http://Visit : www.suddidina.com
329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?
ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.
ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
IAS ಅಧಿಕಾರಿಯತ್ತ ತನಿಖೆಯ ಚಿತ್ತ
ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.
ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.
ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ
ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.
ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.
KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.
ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

ದಿನದ ಸುದ್ದಿ
₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ
- 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ
ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.
http://Visit : www.suddidina.com
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:
ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.
ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.
https://x.com/BDAOfficialGok/status/2092121239175512436?s=20
ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:
ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್‌ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ
ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

-
ಅಂತರಂಗ7 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ4 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ9 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ10 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ10 hours agoಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
-
ದಿನದ ಸುದ್ದಿ10 hours agoಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !







