ದಿನದ ಸುದ್ದಿ

ಕೊಡಗು ಜಿಲ್ಲೆಯ ಮಳೆಯ ಪೂರ್ಣ ವಿವರ ಇಲ್ಲಿದೆ ಓದಿ

Published

on

ಸುದ್ದಿದಿನ ಡೆಸ್ಕ್ | ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 103.20 ಮಿ.ಮೀ. ಕಳೆದ ವರ್ಷ ಇದೇ ದಿನ 8.71 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 3412.14 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1385.87 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 80.30 ಮಿ.ಮೀ. ಕಳೆದ ವರ್ಷ ಇದೇ ದಿನ 22.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4759.08 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1995.35 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 118.68 ಮಿ.ಮೀ. ಕಳೆದ ವರ್ಷ ಇದೇ ದಿನ 3.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2701.34 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1113.65 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 110.62 ಮಿ.ಮೀ.ಕಳೆದ ವರ್ಷ ಇದೇ ದಿನ 0.00 ಮಿ.ಮೀ ಜನವರಿಯಿಂದ ಇಲ್ಲಿಯವರೆಗಿನ ಮಳೆ 2776 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1048.62 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ

ನಾಪೋಕ್ಲು 111.20, ಭಾಗಮಂಡಲ 210, ವಿರಾಜಪೇಟೆ ಕಸಬಾ 161.80, ಹುದಿಕೇರಿ 136.50, ಶ್ರೀಮಂಗಲ 126.60 ಪೊನ್ನಂಪೇಟೆ 119.20, ಅಮ್ಮತಿ 81.50, ಬಾಳೆಲೆ 86.50, ಸೋಮವಾರಪೇಟೆ ಕಸಬಾ 127.60, ಶನಿವಾರಸಂತೆ 91, ಶಾಂತಳ್ಳಿ 200.20, ಕೊಡ್ಲಿಪೇಟೆ 68, ಕುಶಾಲನಗರ 51.40, ಸುಂಟಿಕೊಪ್ಪ 125.50 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (17-08-18) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.87 ಅಡಿಗಳು, ಕಳೆದ ವರ್ಷ ಇದೇ ದಿನ 2855.11 ಅಡಿ. ಇಂದಿನ ನೀರಿನ ಒಳಹರಿವು 77900 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 370 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 77464 ಕ್ಯುಸೆಕ್. ನಾಲೆಗೆ 1125 ಕ್ಯುಸೆಕ್.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version