Connect with us

ದಿನದ ಸುದ್ದಿ

ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ ; ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ : ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ ಜುಲೈ/ಆಗಸ್ಟ್-2024 ಮಾಹೆಯಲ್ಲಿ ಜರುಗಲಿದೆ.

ರೆಗ್ಯೂಲರ್‍ನ ಮಾರ್ಚ್-2023ರ ಸ್ನಾತಕ/ಸ್ನಾತಕೋತ್ತರ, ಸೆಪ್ಟಂಬರ್-2023ರ ಸ್ನಾತಕೋತ್ತರ (ಯು.ಯು.ಸಿ.ಎಂ.ಎಸ್.), ಜನವರಿ-2024ರ ಬಿ.ಇಡಿ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಪದವಿಧರರು ಹಾಗೂ ದೂರಶಿಕ್ಷಣದ ಮೂಲಕ ನವೆಂಬರ್-2022 ರ ಸ್ನಾತಕೋತ್ತರ, ಅಕ್ಟೋಬರ್-203ರ ಸ್ನಾತಕ/ಸ್ನಾತಕೋತ್ತರ, ಮಾರ್ಚ್-2024ರ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಮತ್ತು ಪಿಹೆಚ್.ಡಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ, ರ್ಯಾಂಕ್/ನಗದು ಬಹುಮಾನ, ಪ್ರಮಾಣ ಪತ್ರ ಪ್ರದಾನ ಮಾಡಲಾಗುವುದು.

ಅರ್ಜಿಯನ್ನು ನೇರವಾಗಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.kuvempu.ac.in ಮೂಲಕ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ನಿಗದಿತ ಅರ್ಜಿ ಶುಲ್ಕ ಮತ್ತು ಇತರೆ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್ www.kuvempu.ac.in ನಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.

ಸ್ನಾತಕ ಪದವಿ (ರೆಗ್ಯೂಲರ್)-7022254997, ಸ್ನಾತಕೋತ್ತರ ಪದವಿ/ವೃತ್ತಿಪರ ಕೋರ್ಸ್ (ರೆಗ್ಯೂಲರ್)-7022254993, ದೂರಶಿಕ್ಷಣ-7022255891, ಕಂಪ್ಯೂಟರ್ ವಿಭಾಗ- 8904712601, ತಾಂತ್ರಿಕ ಸಹಾಯಕ್ಕಾಗಿ 7022255745/ 8183098136 /8183098138 ಅಥವಾ ಈ ಮೇಲ್ ವಿಳಾಸ kusconvo@gmail.com ಮೂಲಕ ಸಂಪರ್ಕಿಸುವಂತೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ನೈತಿಕತೆ ಇಲ್ಲ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಚ್ಚಾ ತೈಲದ ಬೆಲೆಯ ಮೇಲೆ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರಲ್ ಕಚ್ಚಾತೈಲಕ್ಕೆ 120 ಡಾಲರ್ ಇತ್ತು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇತ್ತು, ಇಂದು 800 ರೂ. ಮೀರಿದೆ. ಪೆಟ್ರೋಲ್ – ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ.

ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪ ಅವರಿಗೇ ನಾಚಿಕೆಗೇಡಿನದು. ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಮ್ಮ ಅವಧಿಯಲ್ಲಿ ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಾಗಿದೆ. ಇದು ಸರ್ಕಾರವೊಂದರ ಆರ್ಥಿಕ ದಿವಾಳಿತನವೇ? ಎಂದು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ?

ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಸರ್ಕಾರವಾಗಿ ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆದಿಲ್ಲ, ಹಲವು ಸಂದರ್ಭಗಳಲ್ಲಿ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ ಅನಿವಾರ್ಯತೆಯಿತ್ತು.

ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿ ಆರೋಪ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರದಿಂದ ಕೂಡಿದೆ. ಸಮೀಕ್ಷೆಯನ್ನು ಶೇ. 95 ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ.

ಒಳಮೀಸಲಾತಿ ಜಾರಿಗೆ ತರಲು ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿ ಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ.

ನಮ್ಮ ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಅದೇ ರೀತಿ ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಾಣ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮುಂದಿನ 5 ದಿನ ಗುಡುಗು ಸಹಿತ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

Published

on

ಸುದ್ದಿದಿನಡೆಸ್ಕ್:ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಇಂದು ಧಾರವಾಡ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ ಇದೇ 16ರವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ದಾವಣಗೆರೆ | ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು : ನೀಲಾನಹಳ್ಳಿಯಲ್ಲಿ ಎನ್.ಎಸ್.ಎಸ್ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ನಗರದ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ಮತ್ತು ನೀಲಾನಹಳ್ಳಿ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಎರಡನೇ ದಿನದ ಎನ್.ಎಸ್.ಎಸ್.ಶಿಬಿರದ ಕಾರ್ಯಕ್ರಮ ಗುರುವಾರ (ಏ.10)ರಂದು ಜರುಗಿತು.

2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಪ್ರೊ. ಮಂಜುನಾಥ ಜಿ. ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳು, ಬಾಬಾಸಾಹೇಬ್ ಅಂಬೇಡ್ಕರ್ ಶತಮಾನೋತ್ಸವ ಪದವಿ ಕಾಲೇಜ್ ಹರಿಹರ, ಇವರು
“ಸಂವಹನ ಕೌಶಲ್ಯ ಹಾಗೂ ಎನ್. ಎಸ್. ಎಸ್. ಮತ್ತು ಯುವಜನತೆ” ಕುರಿತು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಧುಶ್ರೀನಿವಾಸ ಟಿ., ಕೆ.ಸಿ.ಎಸ್. ಸಹಕಾರ ಸಂಘಗಳ ಉಪ ನಿಬಂಧಕರು, ದಾವಣಗೆರೆ ಜಿಲ್ಲೆ, ಸಹಕಾರ ಸಂಘಗಳ ಮಹತ್ವ ಬಗ್ಗೆ ತಿಳಿಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳ ತಿಳಿಸಿದರು.

ಪ್ರೊ. ಮಾರುತಿ ಶಾಲೆಮನೆ, ಕಿರುಚಿತ್ರ ನಿರ್ದೇಶಕರು ಮತ್ತು ಕನ್ನಡ ಉಪನ್ಯಾಸಕರ ವಿಷಯ : ‘ಮಾನವೀಯತೆಯ ಮಹಾವೀರ’ ಕುರಿತು ಮಾತನಾಡಿದರು.

ನಂತರ ಉಪನ್ಯಾಸದ ಕಾರ್ಯಕ್ರಮವನ್ನು ಪ್ರೊ. ಸೌಮ್ಯ ಬಿ., ಎನ್.ಎಸ್.ಎಸ್ ಅಧಿಕಾರಿಗಳು, ಉಪನ್ಯಾಸಕರು, ಎಸ್.ಬಿ.ಸಿ. ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ದಾವಣಗೆರೆ. ಇವರು
ವಿಷಯ : ‘ಮಹಿಳೆ ಮತ್ತು ಸ್ವಾವಲಂಬನೆ’ ಕುರಿತು ಮಾತನಾಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರೇಖಾ ಹೆಚ್.ಜಿ., ವಿಭಾಗದ ಮುಖ್ಯಸ್ಥರು ವಾಣಿಜ್ಯ ಮತ್ತು ನಿರ್ವಹಣ ಶಾಸ್ತ್ರ ವಿಭಾಗ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಡಿ.ಆರ್.ವಿಶ್ವನಾಥ ಉಪನ್ಯಾಸಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಹೊನ್ನಾಳಿ.
ನೀಲಾನಹಳ್ಳಿ ಗ್ರಾಮದ ಮುಖಂಡರಾದ ಸುಭಾಷ್ ಜೆ, ವಿರುಪಾಕ್ಷಪ್ಪ. ಕೆ. ಎನ್. ಡಿ.ರಾಜಪ್ಪ ಉಪಸ್ಥಿತರಿದ್ದರು.

ಈ ಕಾರ್ಯಕ್ರಮ ವನ್ನು ಶಿಬಿರಾರ್ಥಿಗಳಾದ ಶ್ರೇಯಾ ಪ್ರಾರ್ಥಿಸಿದರು, ನಿರೂಪಣೆಯನ್ನು ನೇಹ, ಸ್ವಾಗತವನ್ನು ಸುಚಿತ್ರ ಹಾಗೂ ವಂದನಾರ್ಪಣೆಯನ್ನು ಆಕಾಶ್ ಮಾಡಿದರು.

ಎನ್.ಎಸ್ ಎಸ್. ಕಾರ್ಯಕ್ರಮದ ಅಧಿಕಾರಿಗಳಾದ ಪ್ರೊಫೆಸರ್ ಅಣ್ಣೇಶ್. ಪಿ ಮತ್ತು ಶ್ರೀಮತಿ ಅನುಷಾ. ಎಸ್. ಹೆಚ್. ಕಾರ್ಯಕ್ರಮವನ್ನು ನಿರ್ವಹಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending