ದಿನದ ಸುದ್ದಿ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸಿಎಂಗೆ ಅಧಿಕಾರ
ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರಿ ನೌಕರರ ಬಹು ನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ನಡೆದ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.
7ನೇ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌರರ ವೇತನವನ್ನು ಶೇಕಡ 25 ರಷ್ಟು ಹೆಚ್ಚಳ ಮಾಡುವಂತೆ ಸಂಪುಟ ಸಭೆಯಲ್ಲಿ ಕೆಲ ಸಚಿವರು ಸಲಹೆ ನೀಡಿದ್ದಾರೆ. ಅಂತಿಮವಾಗಿ ಸಂಪುಟ ಸಭೆ ಆಯೋಗ ಶಿಫಾರಸ್ಸು ಜಾರಿ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿAದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ ಸೇರಿದಂತೆ 20 ವಿಷಯಗಳ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ನಿಷ್ಕ್ರೀಯವಾಗಿದ್ದ 1 ಸಾವಿರದ 304 ಎಕರೆ ಪ್ರದೇಶದಲ್ಲಿ ಗಣಿ ಗುತ್ತಿಗೆ ಮುಂದುವರೆಸಲು ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಮ್ಮತಿಸಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯಗಳ ಅಭಿವೃದ್ಧಿಗೆ 297 ಕೋಟಿ 77 ಲಕ್ಷ ರೂಪಾಯಿ ಬಿಡುಗಡೆಗೆ ಸಂಪುಟ ಅನುಮೋದನೆ ನೀಡಿದೆ. ಶಿಕ್ಷಣ ಇಲಾಖೆಯ ಎಲ್ಲಾ ಸರ್ಕಾರಿ ಶಾಲೆ ಹಾಗೂ ಪದವಿ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಕೆಗೆ ನಿರ್ಧಾರ ಮಾಡಲಾಗಿದೆ. 29 ಕೋಟಿ 15 ಲಕ್ಷ ಅಂದಾಜು ವೆಚ್ಚದಲ್ಲಿ 46 ಸಾವಿರದ 829 ಸರ್ಕಾರಿ ಶಾಲೆ, 1 ಸಾವಿರದ 434 ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್, ಉಚಿತ ನೀರಿನ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದೆ.
ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬೆಳಗಾವಿ ಬಳಿ ಬಡಾವಣೆ ನಿರ್ಮಾಣಕ್ಕೆ 137 ಕೋಟಿ ಅಂದಾಜು ವೆಚ್ಚಕ್ಕೆ ಸಂಪುಟ ಅನುಮತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243